Oppo K10: ಭಾರತದಲ್ಲಿ ಧೂಳೆಬ್ಬಿಸಲು ಬಂತು ಬಜೆಟ್ ಬೆಲೆಯ ಒಪ್ಪೋ K10 ಸ್ಮಾರ್ಟ್‌ಫೋನ್‌

| Updated By: Vinay Bhat

Updated on: Mar 24, 2022 | 3:11 PM

ಅಚ್ಚರಿ ಎಂಬಂತೆ ಪ್ಪೋ ತನ್ನ K-ಸರಣಿಯಲ್ಲಿ ಹೊಸ ಒಪ್ಪೋ ಕೆ10 (Oppo K10) ಸ್ಮಾರ್ಟ್‌ಫೋನ್‌ ಅನ್ನು ಲಾಂಚ್‌ ಮಾಡಿದೆ. 50 ಮೆಗಾಪಿಕ್ಸೆಲ್ ಸೆನ್ಸಾರ್‌ ಪ್ರೈಮರಿ ಕ್ಯಾಮೆರಾವನ್ನು ಹೊಂದಿರುವ ಈ ಫೋನ್​ಗೆ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್‌ ಬಲವನ್ನು ನೀಡಲಾಗಿದೆ.

Oppo K10: ಭಾರತದಲ್ಲಿ ಧೂಳೆಬ್ಬಿಸಲು ಬಂತು ಬಜೆಟ್ ಬೆಲೆಯ ಒಪ್ಪೋ K10 ಸ್ಮಾರ್ಟ್‌ಫೋನ್‌
Oppo K10
Follow us on

ಭಾರತದಲ್ಲಿ ಅತ್ಯುತ್ತಮ ಕ್ಯಾಮೆರಾ ಫೋನ್​ಗಳ (Best Camera Phone) ಮೂಲಕ ಸಾಕಷ್ಟು ಬಳಕೆದಾರರನ್ನು ಹೊಂದಿರುವ ಚೀನಾ ಮೂಲದ ಪ್ರಸಿದ್ಧ ಒಪ್ಪೋ (Oppo) ಕಂಪನಿ ಎರಡು ದಿನಗಳ ಹಿಂದೆಯಷ್ಟೆಒಪ್ಪೋ A96 ಮತ್ತು ಒಪ್ಪೋ A76 ಫೋನನ್ನು ಬಿಡುಗಡೆ ಮಾಡಿ ಸುದ್ದಿ ಮಾಡಿತ್ತು. ಇದೀಗ ಅಚ್ಚರಿ ಎಂಬಂತೆ ತನ್ನ K-ಸರಣಿಯಲ್ಲಿ ಹೊಸ ಒಪ್ಪೋ ಕೆ10 (Oppo K10) ಸ್ಮಾರ್ಟ್‌ಫೋನ್‌ ಅನ್ನು ಲಾಂಚ್‌ ಮಾಡಿದೆ. 50 ಮೆಗಾಪಿಕ್ಸೆಲ್ ಸೆನ್ಸಾರ್‌ ಪ್ರೈಮರಿ ಕ್ಯಾಮೆರಾವನ್ನು ಹೊಂದಿರುವ ಈ ಫೋನ್​ಗೆ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್‌ ಬಲವನ್ನು ನೀಡಲಾಗಿದೆ. ದೀರ್ಘ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಅಳವಡಿಸಲಾಗಿದೆ. ಹಾಗಿದ್ರೆ ಈ ಫೋನಿನ ಬೆಲೆ ಎಷ್ಟು?, ಏನು ವಿಶೇಷತೆ ಎಂಬುದನ್ನು ನೋಡೋಣ.

ಬೆಲೆ ಎಷ್ಟು?:

ಭಾರತದಲ್ಲಿ ಒಪ್ಪೋ K10 ಸ್ಮಾರ್ಟ್‌ಫೋನ್‌ ಒಟ್ಟು ಎರಡು ಮಾದರಿಯಲ್ಲಿ ಬಿಡುಗಡೆ ಆಗಿದೆ. ಇದರ 6GB RAM ಮತ್ತು 128GB ಸ್ಟೋರೇಜ್ ಮಾದರಿಗೆ 14,990 ರೂ. ನಿಗದಿ ಮಾಡಲಾಗಿದೆ. 8GB RAM ಮತ್ತು 128GB ಸ್ಟೋರೇಜ್ ರೂಪಾಂತರದ ಆಯ್ಕೆಗೆ 16,990 ರೂ. ಇದೆ. ಇನ್ನು ಈ ಸ್ಮಾರ್ಟ್‌ಫೋನ್ ಬ್ಲ್ಯಾಕ್ ಕಾರ್ಬನ್ ಮತ್ತು ಬ್ಲೂ ಫ್ಲೇಮ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿರುತ್ತದೆ. ಮಾರ್ಚ್ 29 ರಿಂದ ಫ್ಲಿಪ್‌ಕಾರ್ಟ್ ಮತ್ತು ಒಪ್ಪೋ ಕಂಪನಿಯ ಆನ್‌ಲೈನ್ ಸ್ಟೋರ್‌ನಲ್ಲಿ ಖರೀದಿಗೆ ಲಭ್ಯವಿರುತ್ತದೆ. ಜೊತೆಗೆ ಆಕರ್ಷಕ ಆಫರ್​ಗಳನ್ನು ಸಹ ನೀಡಲಾಗಿದೆ.

ಏನು ವಿಶೇಷತೆ?:

ಒಪ್ಪೋ K10 ಸ್ಮಾರ್ಟ್‌ಫೋನ್ 1,080×2,412 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.59 ಇಂಚಿನ ಫುಲ್‌ HD+ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಅನ್ನು ಒಳಗೊಂಡಿದೆ. ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್‌ ಹೊಂದಿದ್ದು, ಕಲರ್‌ ಒಎಸ್‌ 11.1 ಸ್ಕಿನ್‌ನೊಂದಿಗೆ ಆಂಡ್ರಾಯ್ಡ್ 11 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಹೊಂದಿದೆ. ಇದಲ್ಲದೆ ಸ್ಮಾರ್ಟ್‌ಫೋನ್‌ನಲ್ಲಿ ಬಳಕೆಯಾಗದ ಸ್ಟೋರೇಜ್‌ ಸ್ಪೇಸ್‌ ಬಳಸಿಕೊಂಡು ಹೆಚ್ಚುವರಿ 5G ಮೂಲಕ ಡೈನಾಮಿಕ್ RAM ವಿಸ್ತರಣೆಯನ್ನು ಬೆಂಬಲಿಸುತ್ತದೆ.

ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಬೊಕೆ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಅನ್ನು ಒಳಗೊಂಡಿದೆ. ಹಾಗೆಯೇ ಲೋ ಲೈಟ್‌ ಫೋಟೋಗ್ರಫಿಗಾಗಿ ನೈಟ್‌ಸ್ಕೇಪ್ ಮೋಡ್ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ. ಇನ್ನು 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಅಳವಡಿಸಲಾಗಿದೆ. ಇದು 33W ವೇಗದ ಚಾರ್ಜಿಂಗ್‌ ಬೆಂಬಲಿಸಲಿದೆ.

Realme GT Neo 3: 5 ನಿಮಿಷದಲ್ಲಿ 50% ಚಾರ್ಜ್: 150W ಫಾಸ್ಟ್ ಚಾರ್ಜರ್​​ನ ಹೊಸ ರಿಯಲ್ ಮಿ ಫೋನ್ ಬಿಡುಗಡೆ

Redmi 10: ಇದೀಗ 10,999 ರೂಪಾಯಿಯ ರೆಡ್ಮಿ 10 ಖರೀದಿಗೆ ಲಭ್ಯ: ಆಫರ್​​ನಲ್ಲಿ ಸಿಗಲಿದೆ ಮತ್ತಷ್ಟು ಡಿಸ್ಕೌಂಟ್

Published On - 3:10 pm, Thu, 24 March 22