Oppo A36: 5000mAh ಬ್ಯಾಟರಿ, ಬಲಿಷ್ಠ ಪ್ರೊಸೆಸರ್: ಬಜೆಟ್ ಬೆಲೆಗೆ ಒಪ್ಪೋ A36 ಸ್ಮಾರ್ಟ್​ಫೋನ್ ಬಿಡುಗಡೆ

ಒಪ್ಪೋ A36 ಸ್ಮಾರ್ಟ್‌ಫೋನ್‌ ಬಜೆಟ್ ಸ್ನೇಹಿ ಆಗಿದ್ದು, 5000mAh ಸಾಮರ್ಥ್ಯದ ಬ್ಯಾಟರಿ, ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಪ್‌, ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಇನ್ನಷ್ಟು ಆಕರ್ಷಕ ಫೀಚರ್​ಗಳಿಂದ ಕೂಡಿದೆ.

Oppo A36: 5000mAh ಬ್ಯಾಟರಿ, ಬಲಿಷ್ಠ ಪ್ರೊಸೆಸರ್: ಬಜೆಟ್ ಬೆಲೆಗೆ ಒಪ್ಪೋ A36 ಸ್ಮಾರ್ಟ್​ಫೋನ್ ಬಿಡುಗಡೆ
Oppo A36
Follow us
| Updated By: Vinay Bhat

Updated on: Jan 14, 2022 | 1:29 PM

ಬಜೆಟ್ ಬೆಲೆಯ ಸ್ಮಾರ್ಟ್​ಫೋನ್​ಗೂ (Smartphone) ಸೈ ಮಿಡ್ ರೇಂಜ್ ಮೊಬೈಲ್​ಗೂ ರೆಡಿ ಎಂಬಂತೆ ಆಕರ್ಷಕ ಫೋನ್​ಗಳನ್ನು ಮಾರುಕಟ್ಟೆಗೆ ಪರಿಚಯಿಸಿ ವಿಶೇಷ ಸ್ಥಾನ ಸಂಪಾದಿಸಿರುವ ಒಪ್ಪೋ (Oppo) ಸಂಸ್ಥೆಗೆ A ಸರಣಿಯ ಫೋನ್‌ಗಳು ಹೆಚ್ಚಿನ ಹೆಸರು ತಂದುಕೊಟ್ಟಿದೆ. ಈಗ ಇದೇ ಸರಣಿಯಲ್ಲಿ ಒಪ್ಪೋ ಎ 36 (Oppo A36) ಸ್ಮಾರ್ಟ್​​ಫೋನ್‌ ಅನ್ನು ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಬಜೆಟ್ ಸ್ನೇಹಿ ಆಗಿದ್ದು, 5000mAh ಸಾಮರ್ಥ್ಯದ ಬ್ಯಾಟರಿ, ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಪ್‌, ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಇನ್ನಷ್ಟು ಆಕರ್ಷಕ ಫೀಚರ್​ಗಳಿಂದ ಕೂಡಿದೆ. ಸದ್ಯಕ್ಕೆ ಚೀನಾದಲ್ಲಿ ಅನಾವರಣಗೊಂಡಿರುವ ಈ ಫೋನ್ ಮುಂದಿನ ದಿನಗಳಲ್ಲಿ ಭಾರತಕ್ಕೂ ಕಾಲಿಡಲಿದೆಯಂತೆ.

ಒಪ್ಪೋ A36 ಸ್ಮಾರ್ಟ್‌ಫೋನ್ ಚೀನಾದಲ್ಲಿ CNY 1,599, ಅಂದರೆ ಭಾರತದಲ್ಲಿ ಇದರ ಬೆಲೆ ಅಂದಾಜು 18,500 ರೂ. ಎನ್ನಬಹುದು. ಇದು ಒಪ್ಪೋ ಆನ್‌ಲೈನ್‌ನಲ್ಲಿ ಮುಂಗಡ ಬುಕಿಂಗ್‌ಗೆ ಲಭ್ಯವಿದ್ದು, ಜನವರಿ 14 ರಿಂದ ಮಾರಾಟವಾಗಲಿದೆ. ಈ ಫೋನ್‌ ನೀಲಿ ಮತ್ತು ಕಪ್ಪು ಎಂಬ ಎರಡು ಬಣ್ಣಗಳ ಆಯ್ಕೆಯಲ್ಲಿ ಬರುತ್ತದೆ.

ಒಪ್ಪೋ ಹೊಸ A36 ಸ್ಮಾರ್ಟ್‌ಫೋನ್‌ 1,600 x 720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.52 ಇಂಚಿನ LCD HD+ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಮತ್ತು 180Hz ಟಚ್‌ ಸ್ಯಾಂಪಲ್‌ ರೇಟ್​ನಿಂದ ಕೂಡಿದೆ. ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 11 ಆಧಾರಿತ ಕಲರ್‌ ಒಎಸ್‌ 11.1 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್‌ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಇನ್ನು ಈ ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ f/2.2 ಲೆನ್ಸ್‌ ಅನ್ನು ಹೊಂದಿದೆ. ಇನ್ನು ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಪೋರ್ಟ್ರೇಟ್ ಸೆನ್ಸಾರ್‌ ಅನ್ನು ಹೊಂದಿದೆ. ಜೊತೆಗೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ಬಲಿಷ್ಠವಾದ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 10W ಚಾರ್ಜಿಂಗ್ ಬೆಂಬಲಿಸಲಿದೆ. 20,000 USB ಪ್ಲಗ್‌ಗಳು ಮತ್ತು ಅನ್‌ಪ್ಲಗ್‌ಗಳು, 150,000 ವಾಲ್ಯೂಮ್ ರಾಕರ್ ಕ್ಲಿಕ್‌ಗಳು ಮತ್ತು 500,000 ಪವರ್ ಬಟನ್ ಕ್ಲಿಕ್‌ಗಳನ್ನು ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌ ಅನ್ನು ಬೆಂಬಲಿಸುತ್ತದೆ.

ಖರೀದಿಗೆ ಅವಸರಿಸಬೇಡಿ, ಅಮೆಜಾನ್ ಗ್ರೇಟ್ ರಿಪಬ್ಲಿಕ್ ಡೇ ಸೇಲ್ ಸೋಮವಾರದಿಂದ ಆರಂಭವಾಗಲಿದೆ!