ಬಜೆಟ್ ಬೆಲೆಯ ಸ್ಮಾರ್ಟ್ಫೋನ್ಗೂ (Smartphone) ಸೈ ಮಿಡ್ ರೇಂಜ್ ಮೊಬೈಲ್ಗೂ ರೆಡಿ ಎಂಬಂತೆ ಆಕರ್ಷಕ ಫೋನ್ಗಳನ್ನು ಮಾರುಕಟ್ಟೆಗೆ ಪರಿಚಯಿಸಿ ವಿಶೇಷ ಸ್ಥಾನ ಸಂಪಾದಿಸಿರುವ ಒಪ್ಪೋ (Oppo) ಸಂಸ್ಥೆ ಇತ್ತೀಚೆಗಷ್ಟೆ ರೆನೋ ಸರಣಿಯಲ್ಲಿ ಒಪ್ಪೋ ರೆನೋ 7 ಪ್ರೊ ಮತ್ತು ರೆನೋ 7 ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿ ಭರ್ಜರಿ ಸುದ್ದಿ ಮಾಡಿತ್ತು. ಇದೀಗ ಮತ್ತೊಂದು ಹೊಸ ಒಪ್ಪೋ ಎA76 (Oppo A76) ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡಿದೆ. ಸಾಕಷ್ಟು ವಿಶೇಷತೆಗಳಿಂದ ಕೂಡಿರುವ ಈ ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, 5,000mAh ಸಾಮರ್ಥ್ಯದ ಬ್ಯಾಟರಿ, ಆಕರ್ಷಕ ಕ್ಯಾಮೆರಾದಿಂದ ಆವೃತ್ತವಾಗಿದೆ. ಇದು ಬೆಜೆಟ್ ಬೆಲೆಗೆ ಲಭ್ಯವಿದೆ ಎಂಬುದು ಮತ್ತೊಂದು ವಿಶೇಷ.
ಒಪ್ಪೋ A76 ಸ್ಮಾರ್ಟ್‌ಫೋನ್ 720×1,612 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.56 ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಹಾಗೂ 600 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಹೊಂದಿದೆ. ಇದಲ್ಲದೆ 180Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಒಳಗೊಂಡಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 11 ಆಧಾರಿತ ಕಲರ್‌ಒಎಸ್ 11.1 ಔಟ್-ಆಫ್-ದಿ-ಬಾಕ್ಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ.
ಡ್ಯುಯೆಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ f/2.2 ಲೆನ್ಸ್ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಜೊತೆಗೆ f/2.4 ಲೆನ್ಸ್ ಹೊಂದಿದೆ. ಇದಲ್ಲದೆ ಸೆಲ್ಫಿಗಳು ಮತ್ತು ವೀಡಿಯೊ ಕರೆಗಳಿಗಾಗಿ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.
ಒಪ್ಪೋ A76 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W SuperVOOC ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, 802.11a/b/g/n/ac ಜೊತೆಗೆ ಡ್ಯುಯಲ್-ಬ್ಯಾಂಡ್ Wi-Fi, ಬ್ಲೂಟೂತ್ v5, USB ಟೈಪ್-C, USB OTG, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಬೆಂಬಲಿಸಲಿದೆ. ಇದಲ್ಲದೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ರೀಡರ್, ಫೆಸ್ ಡಿಟೆಕ್ಷನ್, ಜಿಯೋ ಮ್ಯಾಗ್ನೆಟಿಕ್ ಸೆನ್ಸಾರ್, ಪ್ರಾಕ್ಸಿಮಿಟಿ ಸೆನ್ಸಾರ್, ಆಂಬಿಯೆಂಟ್ ಸೆನ್ಸಾರ್, ವರ್ಚುವಲ್ ಗೈರೊಸ್ಕೋಪ್ ಅನ್ನು ಒಳಗೊಂಡಿದೆ.
ಒಪ್ಪೋ A76 ಸ್ಮಾರ್ಟ್‌ಫೋನ್ ಸದ್ಯಕ್ಕೆ ಮಲೇಷ್ಯಾದಲ್ಲಿ 6GB RAM ಮತ್ತು 128GB ಸ್ಟೋರೇಜ್ ರೂಪಾಂತರಕ್ಕೆ MYR 899, ಅಂದರೆ ಇದರ ಬೆಲೆ ಭಾರತದಲ್ಲಿ ಅಂದಾಜು 16,000 ರೂ. ಭಾರತದಲ್ಲಿ ಈ ಸ್ಮಾರ್ಟ್‌ಫೋನ್ ಬಿಡುಗಡೆ ಆಗಲಿದ್ದು ಯಾವಾಗ ಎಂಬ ಬಗ್ಗೆ ಕಂಪನಿ ಅಧಿಕೃತ ಮಾಹಿತಿ ಹೊರಹಾಕಿಲ್ಲ.
Best Smartphone: ಇಲ್ಲಿದೆ ನೋಡಿ ಫೆಬ್ರವರಿಯಲ್ಲಿ ಖರೀದಿಸಬಹುದಾದ ಬೆಸ್ಟ್ ಸ್ಮಾರ್ಟ್ಫೋನ್ಗಳು