Oppo Reno 7 5G: ಒಪ್ಪೋ ರೆನೋ 7 ಸರಣಿ ಲಾಂಚ್: ಸದ್ಯದಲ್ಲೇ ಭಾರತದಲ್ಲೂ ರಿಲೀಸ್: ಇದರ ಫೀಚರ್ಸ್ ನೋಡಿ

| Updated By: Vinay Bhat

Updated on: Nov 27, 2021 | 3:17 PM

Oppo Reno 7 5G, Reno 7 Pro 5G, Reno 7 SE 5G launched: ಒಪ್ಪೋ ರೆನೋ 7 5G, ರೆನೋ 7ಪ್ರೊ ಮತ್ತು ರೆನೋ 7 SE 5G ಸ್ಮಾರ್ಟ್‌ಫೋನ್‌ಗಳು ಬಲಿಷ್ಠ ಪ್ರೊಸೆಸರ್, ಆಕರ್ಷಕ ಕ್ಯಾಮೆರಾ, ಅತ್ಯುತ್ತಮ ಬ್ಯಾಟರಿಗಳಿಂದ ಈ ಸ್ಮಾರ್ಟ್​ಫೋನ್ ಕೂಡಿದ್ದು, ಸದ್ಯದಲ್ಲೇ ಭಾರತಕ್ಕೂ ಕಾಲಿಡಲಿದೆ.

Oppo Reno 7 5G: ಒಪ್ಪೋ ರೆನೋ 7 ಸರಣಿ ಲಾಂಚ್: ಸದ್ಯದಲ್ಲೇ ಭಾರತದಲ್ಲೂ ರಿಲೀಸ್: ಇದರ ಫೀಚರ್ಸ್ ನೋಡಿ
Oppo Reno 7 Series
Follow us on

ಒಪ್ಪೋ (Oppo) ಕಂಪನಿಯು ತನ್ನ ರೆನೋ ಸರಣಿಯಲ್ಲಿ ಬಿಡುಗಡೆ ಮಾಡುವ ಸ್ಮಾರ್ಟ್​ಫೋನ್​ಗಳಿಗೆ (Smartphone) ಬೇಡಿಕೆ ಹೆಚ್ಚಾಗಿದೆ. ಇದನ್ನೇ ಗಮನದಲ್ಲಿಟ್ಟುಕೊಂಡು ಇದೀಗ ಒಪ್ಪೋ ಸಂಸ್ಥೆ ರೆನೋ 7 ಸರಣಿಯಲ್ಲಿ (Oppo Reno 7 Series) ಹೊಸದಾಗಿ ಮೂರು ಫೋನ್​ಗಳನ್ನು ಲಾಂಚ್ ಮಾಡಿದೆ. ಇದರಲ್ಲಿ ಒಪ್ಪೋ ರೆನೋ 7 5G, ರೆನೋ 7ಪ್ರೊ ಮತ್ತು ರೆನೋ 7 SE 5G (Oppo Reno 7 5G, Reno 7 Pro 5G, Reno 7 SE 5G)ಸ್ಮಾರ್ಟ್‌ಫೋನ್‌ಗಳು ಸೇರಿವೆ. ಬಲಿಷ್ಠ ಪ್ರೊಸೆಸರ್, ಆಕರ್ಷಕ ಕ್ಯಾಮೆರಾ, ಅತ್ಯುತ್ತಮ ಬ್ಯಾಟರಿಗಳಿಂದ ಈ ಸ್ಮಾರ್ಟ್​ಫೋನ್ ಕೂಡಿದ್ದು, ಸದ್ಯದಲ್ಲೇ ಭಾರತಕ್ಕೂ ಕಾಲಿಡಲಿದೆ. ಹಾಗಾದ್ರೆ ಇದರ ಫೀಚರ್​​ಗಳು ಹೇಗಿವೆ ಎಂಬುದನ್ನು ನೋಡೋಣ.

ಒಪ್ಪೋ ರೆನೋ 7 5G ಸ್ಮಾರ್ಟ್‌ಫೋನ್‌ 6.43-ಇಂಚಿನ ಫುಲ್‌ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್‌ ಬಲವನ್ನು ಪಡೆದಿದ್ದು, 11 ColorOS 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ವೈಡ್ ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೋನಿ IMX709 ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ಈ ಫೋನ್ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 60W ಫ್ಲ್ಯಾಶ್ ಚಾರ್ಜ್ ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.

ಇನ್ನು ಒಪ್ಪೋ ರೆನೋ 7 ಪ್ರೊ 5G ಸ್ಮಾರ್ಟ್‌ಫೋನ್‌ 6.55-ಇಂಚಿನ FHD+AMOLED ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 1200-ಮ್ಯಾಕ್ಸ್ SoC ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್‌ 11 ColorOS 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಫೋನ್ ಕೂಡ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8-ಮೆಗಾಪಿಕ್ಸೆಲ್ ವೈಡ್-ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೋನಿ IMX709 ಸೆಲ್ಪಿ ಕ್ಯಾಮೆರಾ ಹೊಂದಿದೆ. ಈ ಫೋನ್‌ 4,500mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದ್ದು, 65W ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ ಬರುತ್ತದೆ.

ಒಪ್ಪೋ ರೆನೋ 7 SE 5G ಸ್ಮಾರ್ಟ್‌ಫೊನ್‌ 6.43 ಇಂಚಿನ FHD+ AMOLED ಡಿಸ್ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 9000 SoC ಪ್ರೊಸೆಸರ್‌ ಬಲವನ್ನು ಹೊಂದಿದೆ. ಹಾಗೆಯೇ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಫೋನ್‌ ಟ್ರಿಪಲ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೋನಿ IMX581 ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇನ್ನು 16 ಮೆಗಾಪಿಕ್ಸೆಲ್ Sony IMX471 ಸೆಲ್ಫಿ ಕ್ಯಾಮೆರಾವನ್ನು ಕೂಡ ಒಳಗೊಂಡಿದೆ. ಇದಲ್ಲದೆ ಈ ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W ವೇಗದ ಚಾರ್ಜಿಂಗ್​ನೊಂದಿಗೆ ಬರುತ್ತಿದೆ.

ಬೆಲೆ ಎಷ್ಟು?:

ಒಪ್ಪೋ ರೆನೋ 7 ಸ್ಮಾರ್ಟ್‌ಫೋನ್‌ 8GB RAM ಮತ್ತು 128GB ಸ್ಟೋರೇಜ್ ರೂಪಾಂತರಕ್ಕೆ CNY 2,699 (ಸುಮಾರು 31,500 ರೂ.). 8GB RAM ಮತ್ತು 256GB ಸ್ಟೋರೇಜ್ ಆವೃತ್ತಿಗೆ CNY 2,999 (ಸುಮಾರು 35,000 ರೂ.) ಬೆಲೆ ನಿಗದಿ ಪಡಿಸಲಾಗಿದೆ.

ಒಪ್ಪೋ ರೆನೋ 7 ಪ್ರೊ ಸ್ಮಾರ್ಟ್‌ಫೋನ್‌ ಬೇಸ್‌ ಮಾಡೆಲ್‌ 8GB ಮತ್ತು 256GB ಸ್ಟೋರೇಜ್ ಮಾದರಿಯು CNY 3,699 (ಸುಮಾರು 43,200 ರೂ.)ಬೆಲೆ ಹೊಂದಿದೆ. ಆದರೆ 12GB ಮತ್ತು 256GB ಸ್ಟೋರೇಜ್ ಹೊಂದಿರುವ ಟಾಪ್-ಆಫ್-ಲೈನ್ ಮಾದರಿಯು CNY 3,999 (ಸುಮಾರು 46,700ರೂ.) ಬೆಲೆಯನ್ನು ಹೊಂದಿದೆ. ಒಪ್ಪೋ ರೆನೊ 7 SE ಫೋನ್‌ 8GB ಮತ್ತು 256GB ಸ್ಟೋರೇಜ್ ಆವೃತ್ತಿಗೆ CNY 2,399 (ಸುಮಾರು 28,000ರೂ)ಬೆಲೆ ಹೊಂದಿದೆ.

Truecaller: ಟ್ರೂ ಕಾಲರ್​ನಲ್ಲಿ​ ಭಯಾನಕವಾದ ಘೋಸ್ಟ್ ಕಾಲ್ ಫೀಚರ್: ಬಳಕೆದಾರರು ತಪ್ಪದೇ ಇದನ್ನು ಓದಿ

WhatsApp: ವಾಟ್ಸ್​ಆ್ಯಪ್​ನಲ್ಲಿ ಬರುತ್ತದೆ ಒಂದಲ್ಲ ಎರಡಲ್ಲ ಬರೋಬ್ಬರಿ 8 ಹೊಸ ಫೀಚರ್ಸ್: ಯಾವುವು?

(Oppo has launched its Reno 7 series Reno 7 5G Oppo Reno 7 Pro 5G and the Reno 7 SE 5G)