Oppo F21 Pro: ಒಪ್ಪೋ F21 ಪ್ರೊ ಸ್ಮಾರ್ಟ್​ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ: ಇದು ಕ್ಯಾಮೆರಾ ಪ್ರಿಯರ ನೆಚ್ಚಿನ ಫೋನ್

Oppo F21 Pro Price Cut: ಕ್ಯಾಮೆರಾ ಪ್ರಿಯರಿಗೆ ಹೆಚ್ಚು ಇಷ್ಟವಾಗುವ ಒಪ್ಪೋ ಕಳೆದ ಏಪ್ರಿಲ್​ನಲ್ಲಿ ಒಪ್ಪೋ ಎಫ್​​21 ಪ್ರೊ (Oppo F21 Pro) ಎಂಬ ಸ್ಮಾರ್ಟ್​​ಫೋನ್​ ಅನ್ನು ಬಿಡುಗಡೆ ಮಾಡಿತ್ತು. ಇದೀಗ ಈ ಸ್ಮಾರ್ಟ್​ಫೋನ್ ಬೆಲೆಯಲ್ಲಿ ದಿಢೀರ್ ಇಳಿಕೆಯಾಗಿದೆ.

Oppo F21 Pro: ಒಪ್ಪೋ F21 ಪ್ರೊ ಸ್ಮಾರ್ಟ್​ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ: ಇದು ಕ್ಯಾಮೆರಾ ಪ್ರಿಯರ ನೆಚ್ಚಿನ ಫೋನ್
Oppo F21 Pro
Follow us
TV9 Web
| Updated By: Vinay Bhat

Updated on:Oct 16, 2022 | 1:20 PM

ಕಡಿಮೆ ಬೆಲೆಗೆ ಆಕರ್ಷಕ ಫೀಚರ್​ಗಳ ಸ್ಮಾರ್ಟ್​ಫೋನ್ ಬಿಡುಗಡೆ ಮಾಡುವ ಸಾಲಿನಲ್ಲಿ ಒಪ್ಪೋ (Oppo) ಸಂಸ್ಥೆ ಕೂಡ ಮುಂಚೂಣಿಯಲ್ಲಿದೆ. ಮುಖ್ಯವಾಗಿ ಕ್ಯಾಮೆರಾ ಪ್ರಿಯರಿಗೆ ಹೆಚ್ಚು ಇಷ್ಟವಾಗುವ ಒಪ್ಪೋ ಕಳೆದ ಏಪ್ರಿಲ್​ನಲ್ಲಿ ಒಪ್ಪೋ ಎಫ್​​21 ಪ್ರೊ (Oppo F21 Pro) ಎಂಬ ಸ್ಮಾರ್ಟ್​​ಫೋನ್​ ಅನ್ನು ಬಿಡುಗಡೆ ಮಾಡಿತ್ತು. ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿರುವ ಈ ಫೋನಿನ ಹಿಂಭಾಗದಲ್ಲಿ ಆರ್ಬಿಟ್ ಲೈಟ್ ಒಳಗೊಂಡಿದೆ. ಆಕರ್ಷಕ ಡಿಸೈನ್ ಕೂಡ ಈ ಫೋನಿನ ಪ್ರಮುಖ ಹೈಲೇಟ್. ಜೊತೆಗೆ ಡಿಸ್ ಪ್ಲೇ, ಬಲಿಷ್ಠ ಪ್ರೊಸೆಸರ್ 33W SuperVOOC ವೇಗದ ಚಾರ್ಜಿಂಗ್ ಅನ್ನು ನೀಡಲಾಗಿದೆ. ಹೀಗೆ ಅತ್ಯುತ್ತಮ ಫೀಚರ್​ಗಳಿಂದ ಕೂಡಿರುವ ಒಪ್ಪೋ F21 ಪ್ರೊ ಸ್ಮಾರ್ಟ್​ಫೋನ್ (Smartphone) ಬೆಲೆಯಲ್ಲಿ ಇದೀಗ ದಿಢೀರ್ ಇಳಿಕೆಯಾಗಿದೆ.

ಭಾರತದಲ್ಲಿ ಒಪ್ಪೋ F21 ಪ್ರೊ ಸ್ಮಾರ್ಟ್‌ಫೋನ್‌ 8GB RAM ಮತ್ತು 128GB ಸ್ಟೋರೇಜ್ ರೂಪಾಂತರದಲ್ಲಿ ಬಿಡುಗಡೆ ಆಗಿತ್ತು. ಇದಕ್ಕೆ 22,999 ರೂ. ನಿಗದಿ ಮಾಡಲಾಗಿತ್ತು. ಆದರೀಗ ಈ ಫೋನಿನ ಮೇಲೆ 1,000 ರೂ. ಗಳ ಕಡಿತ ಮಾಡಲಾಗಿದೆ. ಇದೀಗ ಒಪ್ಪೋ F21 ಪ್ರೊ 21,999 ರೂ. ಗೆ ಸೇಲ್ ಆಗುತ್ತಿದೆ. ಈ ಫೋನ್ ಕಾಸ್ಮಿಕ್ ಬ್ಲ್ಯಾಕ್ ಮತ್ತು ಸನ್‌ಸೆಟ್ ಆರೆಂಜ್ ಬಣ್ಣಗಳಲ್ಲಿ ಬರುತ್ತದೆ. ಪ್ರಸಿದ್ದ ಇ ಕಾಮರ್ಸ್​ ತಾಣವಾದ ಅಮೆಜಾನ್ ಮೂಲಕ ಖರೀದಿ ಮಾಡಬಹುದು. ಜೊತೆಗೆ ಒಪ್ಪೋ ಕಂಪನಿಯ ಅಧಿಕೃತ ವೆಬ್​ಸೈಟ್ ಮೂಲಕವೂ ನಿಮ್ಮದಾಗಿಸಬಹುದು.

ಒಪ್ಪೋ F21 ಪ್ರೊ ಸ್ಮಾರ್ಟ್‌ಫೋನ್‌ 1,080×2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.43 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಮತ್ತು 180Hz ಟಚ್ ಸ್ಯಾಂಪ್ಲಿಂಗ್ ರೇಟ್​​ನಿಂದ ಕೂಡಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 680 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 12 ನಲ್ಲಿ ಕಲರ್‌ OS 12.1 ಜೊತೆಗೆ ರನ್ ಆಗುತ್ತದೆ.

ಇದನ್ನೂ ಓದಿ
Image
Moto E22s: ನಾಳೆ ಭಾರತದಲ್ಲಿ ಬಹುನಿರೀಕ್ಷಿತ ಮೋಟೋ E22s ಸ್ಮಾರ್ಟ್​ಫೋನ್ ಬಿಡುಗಡೆ: ಏನೆಲ್ಲ ಫೀಚರ್ಸ್ ಇದೆ ನೋಡಿ
Image
WhatsApp: ವಾಟ್ಸ್​ಆ್ಯಪ್​ನಲ್ಲಿ ಬರುತ್ತಿದೆ ಅಚ್ಚರಿ ಆಯ್ಕೆ: ಸೆಂಡ್ ಮಾಡಿದ ಮೆಸೇಜ್ ಎಡಿಟ್ ಮಾಡಬಹುದು
Image
iPhone 13: ಐಫೋನ್ ಖರೀದಿಗೆ ಇದಕ್ಕಿಂತ ಬೆಸ್ಟ್ ಟೈಮ್ ಬರಲ್ಲ: ಐಫೋನ್ 13 ಈಗ ಅತಿ ಕಡಿಮೆ ಬೆಲೆಗೆ ಲಭ್ಯ
Image
WhatsApp Tricks: ವಾಟ್ಸ್​ಆ್ಯಪ್​ನಲ್ಲಿ ಪರ್ಸನಲ್ ಚಾಟ್ ಡಿಲೀಟ್ ಮಾಡದೆ ಹೈಡ್ ಮಾಡುವುದು ಹೇಗೆ?: ಇಲ್ಲಿದೆ ಟ್ರಿಕ್

ಈ ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ Sony IMX709 ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು,33W SuperVOOC ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi, ಬ್ಲೂಟೂತ್, GPS- AGPS ಮತ್ತು USB ಟೈಪ್-C ಪೋರ್ಟ್ ಸೇರಿವೆ.

ಇದರ ಜೊತೆಗೆ ಬಿಡುಗಡೆ ಆದ ಒಪ್ಪೋ F21 ಪ್ರೊ 5G ಆವೃತ್ತಿಯ ಸ್ಮಾರ್ಟ್‌ಫೋನ್‌ 6.4-ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 695 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್‌ 12 ನಲ್ಲಿ ಕಲರ್‌OS 12.1 ನಲ್ಲಿ ಕಾರ್ಯನಿರ್ವಹಿಸಲಿದೆ.

ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಒಳಗೊಂಡಿದೆ. ಹಿಂಭಾಗದಲ್ಲಿ ಡ್ಯುಯಲ್ ಆರ್ಬಿಟ್ ಲೈಟ್‌ಗಳನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಒಳಗೊಂಡಿದೆ. 4,500mAh ಬ್ಯಾಟರಿ ಹೊಂದಿದ್ದು, 33W SuperVOOC ಚಾರ್ಜಿಂಗ್ ಬೆಂಬಲಿಸಲಿದೆ. ಇದರ ಬೆಲೆ 24,990 ರೂ. ಆಗಿದೆ.

Published On - 1:20 pm, Sun, 16 October 22

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್