Oppo K10 5G: 48MP ಕ್ಯಾಮೆರಾ, 5000mAh ಬ್ಯಾಟರಿ: ಕೇವಲ 17,499 ರೂ. ಗೆ ಒಪ್ಪೋ K10 5G ರಿಲೀಸ್
ಒಪ್ಪೋ (Oppo) ಕಂಪನಿ ಕಳೆದ ಕೆಲವು ತಿಂಗಳುಗಳಿಂದ ಒಂದರ ಹಿಂದೆ ಒಂದರಂತೆ ಆಕರ್ಷಕ ಮೊಬೈಲ್ಗಳನ್ನು ಬಿಡುಗಡೆ ಮಾಡುತ್ತಿದೆ. ಇದೀಗ ತನ್ನ K-ಸರಣಿಯಲ್ಲಿ ಹೊಸ ಒಪ್ಪೋ ಕೆ10 5ಜಿ (Oppo K10 5G) ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಲಾಂಚ್ ಮಾಡಿದೆ.
ಭಾರತದಲ್ಲಿ ಅತ್ಯುತ್ತಮ ಕ್ಯಾಮೆರಾ ಫೋನ್ಗಳ (Best Camera Phone) ಮೂಲಕ ಸಾಕಷ್ಟು ಬಳಕೆದಾರರನ್ನು ಹೊಂದಿರುವ ಚೀನಾ ಮೂಲದ ಪ್ರಸಿದ್ಧ ಒಪ್ಪೋ (Oppo) ಕಂಪನಿ ಕಳೆದ ಕೆಲವು ತಿಂಗಳುಗಳಿಂದ ಒಂದರ ಹಿಂದೆ ಒಂದರಂತೆ ಆಕರ್ಷಕ ಮೊಬೈಲ್ಗಳನ್ನು ಬಿಡುಗಡೆ ಮಾಡುತ್ತಿದೆ. ಇದೀಗ ತನ್ನ K-ಸರಣಿಯಲ್ಲಿ ಹೊಸ ಒಪ್ಪೋ ಕೆ10 5ಜಿ (Oppo K10 5G) ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಲಾಂಚ್ ಮಾಡಿದೆ. 48 ಮೆಗಾಪಿಕ್ಸೆಲ್ ಸೆನ್ಸಾರ್ ಪ್ರೈಮರಿ ಕ್ಯಾಮೆರಾವನ್ನು ಹೊಂದಿರುವ ಈ ಫೋನ್ಗೆ 33W ವೇಗದ ಚಾರ್ಜಿಂಗ್ ಬೆಂಬಲಿಸುವ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ನೀಡಲಾಗಿದೆ. ಹಾಗಾದ್ರೆ ಈ ಫೋನಿನ ವಿಶೇಷತೆಗಳು ಏನೇನು?, ಬೆಲೆ ಎಷ್ಟು ಎಂಬುದನ್ನು ನೋಡೋಣ.
- ಭಾರತದಲ್ಲಿ ಒಪ್ಪೋ K10 5G ಸದ್ಯಕ್ಕೆ ಕೇವಲ ಒಂದು ಮಾದರಿಯಲ್ಲಷ್ಟೆ ಅನಾವರಣಗೊಂಡಿದೆ. ಇದರ 8GB RAM ಮತ್ತು 128GB ಸ್ಟೋರೆಜ್ ಆಯ್ಕೆಯ ಬೆಲೆ ಕೇವಲ 17,499 ರೂ. ಆಗಿದೆ.
- ಈ ಫೋನ್ ಇದೇ ಜೂನ್ 15 ರಿಂದ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್‌ಕಾರ್ಟ್ ತಾಣದ ಮೂಲಕ ಖರೀದಿಗೆ ಲಭ್ಯವಿರುತ್ತದೆ. ಒಪ್ಪೋ K10 5G ಮಿಡ್ನೈಟ್ ಬ್ಲ್ಯಾಕ್ ಮತ್ತು ಓಷನ್ ಬ್ಲೂ ಬಣ್ಣದ ಆಯ್ಕೆಗಳಲ್ಲಿ ಬರುತ್ತದೆ.
- ಒಪ್ಪೋ K10 5G ಸ್ಮಾರ್ಟ್‌ಫೋನ್ 1,080 x 1920 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ ಫುಲ್ ಹೆಚ್‌ಡಿ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಒಳಗೊಂಡಿದೆ.
- ಮೀಡಿಯಾ ಟೆಕ್ ಡೈಮೆನ್ಸಿಟಿ 810 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ನಲ್ಲಿ ಜೊತೆಗೆ ಕಲರ್‌ಓಎಸ್ 12.1 ಕಾರ್ಯ ನಿರ್ವಹಿಸುತ್ತದೆ.
- ಈ ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್ ಹೊಂದಿದೆ. ಇದರೊಂದಿಗೆ 8 ಮೆಗಾ ಪಿಕ್ಸೆಲ್ AI ಸೆಲ್ಫಿ ಕ್ಯಾಮೆರಾ ವನ್ನು ಸಹ ಒಳಗೊಂಡಿದೆ.
- ಒಪ್ಪೋ K10 5G ಸ್ಮಾರ್ಟ್‌ಫೋನ್ 33W ವೇಗದ ಚಾರ್ಜಿಂಗ್‌ಗೆ ಬೆಂಬಲಿಸುವ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದಲ್ಲದೆ ಬಯೋಮೆಟ್ರಿಕ್ ದೃಢೀಕರಣಕ್ಕಾಗಿ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಅಳವಡಿಸಲಾಗಿದೆ.
ಇದನ್ನೂ ಓದಿ
ತಂತ್ರಜ್ಞಾನ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ