Oppo K11 5G: ಬಿಡುಗಡೆಗೆ ಸಿದ್ದವಾದ ಒಪ್ಪೋ K11 5G ಸ್ಮಾರ್ಟ್​ಫೋನ್: ಆಕರ್ಷಕ ಕ್ಯಾಮೆರಾ, ಬಲಿಷ್ಠ ಪ್ರೊಸೆಸರ್

ಜುಲೈ 25 ರಂದು ಒಪ್ಪೋ ಕೆ11 5ಜಿ (Oppo K11 5G) ಫೋನ್ ರಿಲೀಸ್ ಆಗಲಿದೆ. ಕೆಲವು ದಿನಗಳ ಬಳಿಕ ಇದು ಭಾರತಕ್ಕೂ ಲಗ್ಗೆಯಿಡಲಿದೆ. ಬಲಿಷ್ಠವಾದ ಪ್ರೊಸೆಸರ್ ಈ ಫೋನ್​ನಲ್ಲಿ ನೀಡಲಾಗಿದ್ದು, ಕ್ಯಾಮೆರಾ ಕೂಡ ಆಕರ್ಷಕವಾಗಿದೆ.

Oppo K11 5G: ಬಿಡುಗಡೆಗೆ ಸಿದ್ದವಾದ ಒಪ್ಪೋ K11 5G ಸ್ಮಾರ್ಟ್​ಫೋನ್: ಆಕರ್ಷಕ ಕ್ಯಾಮೆರಾ, ಬಲಿಷ್ಠ ಪ್ರೊಸೆಸರ್
oppo k11 5g
Follow us
Vinay Bhat
|

Updated on: Jul 22, 2023 | 12:09 PM

ಒಪ್ಪೋ (Oppo) ಕಂಪನಿಯ ಸ್ಮಾರ್ಟ್​ಫೋನ್​ಗಳಿಗೆ ವಿಶ್ವದಲ್ಲಿ ಭರ್ಜರಿ ಬೇಡಿಕೆ ಇದೆ. ಬಜೆಟ್ ಬೆಲೆಯಿಂದ ಹಿಡಿದು ಮಧ್ಯಮ ಬೆಲೆಯ ವರೆಗೆ ಆಕರ್ಷಕ ಮೊಬೈಲ್​ಗಳನ್ನು ಬಿಡುಗಡೆ ಮಾಡುತ್ತಿದೆ. ಇತ್ತೀಚೆಗಷ್ಟೆ ತನ್ನ ರೆನೋ ಸರಣಿಯಲ್ಲಿ ಬೊಂಬಾಟ್ ಫೋನನ್ನು ಅನಾವರಣ ಮಾಡಿತ್ತು. ಇದೀಗ ಮತ್ತೊಂದು ನೂತನ ಸ್ಮಾರ್ಟ್​ಫೋನ್​ನೊಂದಿಗೆ (Smartphone) ಕಂಪನಿ ಬಂದಿದೆ. ಜುಲೈ 25 ರಂದು ಚೀನಾ ಮಾರುಕಟ್ಟೆಯಲ್ಲಿ ಒಪ್ಪೋ ಕೆ11 5ಜಿ (Oppo K11 5G) ಫೋನ್ ರಿಲೀಸ್ ಆಗಲಿದೆ. ಕೆಲವು ದಿನಗಳ ಬಳಿಕ ಇದು ಭಾರತಕ್ಕೂ ಲಗ್ಗೆಯಿಡಲಿದೆ. ಬಲಿಷ್ಠವಾದ ಪ್ರೊಸೆಸರ್ ಈ ಫೋನ್​ನಲ್ಲಿ ನೀಡಲಾಗಿದ್ದು, ಕ್ಯಾಮೆರಾ ಕೂಡ ಆಕರ್ಷಕವಾಗಿದೆ.

ಒಪ್ಪೋ K11 5G ಸ್ಮಾರ್ಟ್​ಫೋನ್ 12GB RAM ಮತ್ತು 512GB ಆನ್‌ಬೋರ್ಡ್ ಸಂಗ್ರಹಣೆಯೊಂದಿಗೆ ಲಭ್ಯವಿದೆ ಎಂದು ಕಂಪನಿ ದೃಢಪಡಿಸಿದೆ. 8GB ವರ್ಚುವಲ್ RAM ಬೆಂಬಲದೊಂದಿಗೆ ಆನ್‌ಬೋರ್ಡ್ ಮೆಮೊರಿಯನ್ನು 20GB ವರೆಗೆ ವಿಸ್ತರಿಸಬಹುದು. ಇದರ ನಿಖರ ಬೆಲೆ ಬಹಿರಂಗಗೊಂಡಿಲ್ಲ. ಆದರೆ, ಮೂಲಗಳ ಪ್ರಕಾರ ಸುಮಾರು CNY 2,000, ಅಂದರೆ ಭಾರತದಲ್ಲಿ 22,900 ರೂ. ಇರಬಹುದು ಎಂದು ಅಂದಾಜಿಸಲಾಗಿದೆ.

Best Camera Phones: ಮಾರುಕಟ್ಟೆಯಲ್ಲಿರುವ ಟ್ರೆಂಡಿಂಗ್ ಕ್ಯಾಮೆರಾ ಸ್ಮಾರ್ಟ್​ಫೋನ್​ಗಳು ಇಲ್ಲಿದೆ ನೋಡಿ

ಇದನ್ನೂ ಓದಿ
Image
Realme Pad 2: ಆಕರ್ಷಕ ವಿನ್ಯಾಸ, ಸೂಪರ್ ಸ್ಪೀಡ್ ರಿಯಲ್​ಮಿ ಪ್ಯಾಡ್ 2
Image
OnePlus Keyboard 81 Pro: ಒನ್​ಪ್ಲಸ್ ಸ್ಟೈಲಿಶ್ ಕೀಬೋರ್ಡ್ ಈಗ ಭಾರತದಲ್ಲೂ ಲಭ್ಯ, ಬೆಲೆ ಎಷ್ಟು ಗೊತ್ತಾ?
Image
WhatsApp Update: ವಾಟ್ಸ್​ಆ್ಯಪ್​ನಲ್ಲಿ ಅಪರಿಚಿತ ಸಂಖ್ಯೆಗೆ ಮೆಸೇಜ್ ಮಾಡಲು ಸುಲಭ ಟ್ರಿಕ್ಸ್
Image
Vivo Y27: ಭಾರತದಲ್ಲಿ ಅತಿ ಕಡಿಮೆ ಬೆಲೆಗೆ ಬಿಡುಗಡೆ ಆಯಿತು ವಿವೋ Y27 ಸ್ಮಾರ್ಟ್​ಫೋನ್: ಎಷ್ಟು ರೂ. ನೋಡಿ

ಫೀಚರ್ಸ್ ಏನಿದೆ?:

ಒಪ್ಪೋ K11 5G ಸ್ಮಾರ್ಟ್‌ಫೋನ್‌ 1080 x 2412 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇಯ ರಿಫ್ರೆಶ್ ರೇಟ್ ಬಹಿರಂಗಗೊಂಡಿಲ್ಲ. ಆದರೆ, 93.4% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿರಲಿದೆ. ಬಲಿಷ್ಠವಾದ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 782G SoC ನಲ್ಲಿ ಕಾರ್ಯನಿರ್ವಹಿಸಲಿದೆ. ಆಂಡ್ರಾಯ್ಡ್‌ 13 ಒಎಸ್ ನೀಡಲಾಗಿದೆ. ಇದು ಗ್ಲೇಸಿಯರ್ ಬ್ಲೂ ಮತ್ತು ಮೂನ್ ಶ್ಯಾಡೋ ಗ್ರೇ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಸಿಗಲಿದೆ.

ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ, ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಇರಲಿದೆ. ಜೊತೆಗೆ ಮುಂಭಾಗ ಸೆಲ್ಫೀ ಮತ್ತು ವಿಡಿಯೋ ಕರೆಗಳಿಗಾಗಿ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಅಳವಡಿಸಲಾಗಿದೆ. ಕ್ಯಾಮೆರಾದಲ್ಲಿ ಅನೇಕ ಆಯ್ಕೆಗಳನ್ನು ನೀಡಲಾಗಿದ್ದು, ಫೇಸ್‌ ಡಿಟೆಕ್ಷನ್‌, ಡಿಜಿಟಲ್‌ ಜೂಮ್‌, ಟಚ್‌ ದಿ ಪೋಕಸ್‌, ಆಟೋ ಫ್ಲ್ಯಾಶ್‌ ಸೇರಿದಂತೆ ಪ್ರಮುಖ ಫೀಚರ್ಸ್ ಇದೆ.

ಒಪ್ಪೋ K11 5G ಸ್ಮಾರ್ಟ್‌ಫೋನ್‌ ದೀರ್ಘ ಸಮಯ ಬಾಳಿಕೆ ಬರುವ 5000mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಬರುತ್ತದೆ. ಇದು 80W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ ಎಂದು ಹೇಳಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5ಜಿ ನೆಟ್​ವರ್ಕ್ ಸಪೋರ್ಟ್ ಮಾಡುತ್ತದೆ. ಹಾಟ್‌ಸ್ಪಾಟ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಆಯ್ಕೆ ನೀಡಲಾಗಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ