Oppo K9 Pro 5G: 64MP ಕ್ಯಾಮೆರಾ, 60W ಫ್ಲ್ಯಾಶ್ ಚಾರ್ಜ್: ಒಪ್ಪೋ K9 ಪ್ರೊ ಹೊಸ ಸ್ಮಾರ್ಟ್‌ಫೋನ್ ಬಿಡುಗಡೆ
ಒಪ್ಪೋ K9 ಪ್ರೊ ಸ್ಮಾರ್ಟ್‌ಫೋನಿನ ಹಿಂಭಾಗದಲ್ಲಿ ತ್ರಿವಳಿ ಕ್ಯಾಮೆರಾ ಸೆಟ್‌ಅಪ್ ನೀಡಲಾಗಿದೆ. 4,500mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದೆ. ಇದಕ್ಕೆ ಜೊತೆಯಾಗಿ ಬರೋಬ್ಬರಿ 60W ಫ್ಲ್ಯಾಶ್ ಚಾರ್ಜ್ ಸೌಲಭ್ಯ ಹೊಂದಿದೆ.
ಭಾರತದಲ್ಲಿ ತನ್ನ ಮಾರುಕಟ್ಟೆಯನ್ನು ಕಳೆದುಕೊಂಡರೂ ವಿದೇಶದಲ್ಲಿ ಉತ್ತಮ ಸ್ಥಿತಿಯಲ್ಲಿರುವ ಜನಪ್ರಿಯ ಮೊಬೈಲ್ ತಯಾರಿಕಾ ಸಂಸ್ಥೆ ಒಪ್ಪೋ (Oppo) ಹೊಸದಾಗಿ ಒಪ್ಪೋ K9 ಪ್ರೊ 5G (Oppo K9 Pro 5G) ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಇದು ಟ್ರಿಪಲ್ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 64 ಮೆಗಾ ಪಿಕ್ಸಲ್ಸ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಜೊತೆಗೆ ಮೀಡಿಯಾ ಟೆಕ್ Dimnesity 1200 SoC ಪ್ರೊಸೆಸರ್ ಪವರ್ ಅನ್ನು ಪಡೆದುಕೊಂಡಿದೆ. ಸಾಕಷ್ಟು ವಿಶೇಷತೆಗಳಿಂದ ಕೂಡಿರುವ ಈ ಸ್ಮಾರ್ಟ್‌ಫೋನ್ ಸದ್ಯಕ್ಕೆ ಚೀನೀ ಮಾರುಕಟ್ಟೆಯಲ್ಲಿ ರಿಲೀಸ್ ಆಗಿದ್ದು, ಮುಂದಿನ ತಿಂಗಳು ಭಾರತಕ್ಕೂ ಕಾಲಿಡುವ ಸಂಭವವಿದೆ.
ಒಪ್ಪೋ K9 ಪ್ರೊ ಸ್ಮಾರ್ಟ್‌ಫೋನ್ ಒಟ್ಟು ಎರಡು ಮಾದರಿಯಲ್ಲಿದೆ. 8GB RAM ಮತ್ತು 128GB ಸ್ಟೋರೇಜ್ ವೇರಿಯಂಟ್ ದರವು ಚೀನಾದಲ್ಲಿ CNY 2,199 ಅಂದರೆ ಭಾರತದಲ್ಲಿ ಇದರ ಬೆಲೆ ಅಂದಾಜು 25,100 ರೂ. ಎನ್ನಬಹುದು. ಹಾಗೆಯೇ 12GB RAM ಮತ್ತು 256GB ಸ್ಟೋರೇಜ್‌ನ ವೇರಿಯಂಟ್ ಬೆಲೆಯು CNY 2,699 (ಭಾರತದಲ್ಲಿ ಅಂದಾಜು 30,800ರೂ. ಆಗಿದೆ).
ಒಪ್ಪೋ K9 ಪ್ರೊ ಸ್ಮಾರ್ಟ್‌ಫೋನ್ 1,080×2,400 ಪಿಕ್ಸಲ್ ರೆಸಲ್ಯೂಶನ್ ಜೊತೆಗೆ 6.43 ಇಂಚಿನ HD + ಗುಣಮಟ್ಟದ ಮಾದರಿಯ ಡಿಸ್‌ಪ್ಲೇಯನ್ನು ಹೊಂದಿದೆ. ಮೀಡಿಯಾ ಟೆಕ್ Dimnesity 1200 SoC ಪ್ರೊಸೆಸರ್ ಅನ್ನು ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಓಎಸ್ ಸಪೋರ್ಟ್ ಅನ್ನು ಪಡೆದಿದೆ.
ಈ ಸ್ಮಾರ್ಟ್‌ಫೋನಿನ ಹಿಂಭಾಗದಲ್ಲಿ ತ್ರಿವಳಿ ಕ್ಯಾಮೆರಾ ಸೆಟ್‌ಅಪ್ ನೀಡಲಾಗಿದೆ. ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸಲ್ ಸೆನ್ಸಾರ್ ಹೊಂದಿದೆ. ಸೆಕೆಂಡರಿ ಕ್ಯಾಮೆರಾ 8 ಮೆಗಾ ಪಿಕ್ಸಲ್ ಸೆನ್ಸಾರ್ ಹೊಂದಿದ್ದು, ಇನ್ನು ತೃತೀಯ ಕ್ಯಾಮೆರಾವು ಸಹ ಮೆಗಾ 2 ಪಿಕ್ಸಲ್ ಸೆನ್ಸಾರ್‌ನಲ್ಲಿದೆ. ಇದರೊಂದಿಗೆ ಮುಂಭಾಗದಲ್ಲಿ 16 ಮೆಗಾ ಪಿಕ್ಸಲ್ ಕ್ಯಾಮೆರಾವನ್ನು ಅಳವಡಿಸಲಾಗಿದೆ.
4,500mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದೆ. ಇದಕ್ಕೆ ಜೊತೆಯಾಗಿ ಬರೋಬ್ಬರಿ 60W ಫ್ಲ್ಯಾಶ್ ಚಾರ್ಜ್ ಸೌಲಭ್ಯ ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಯುಎಸ್‌ಬಿ ಟೈಪ್-ಸಿ ಪೋರ್ಟ್, ಬ್ಲೂಟೂತ್ v5.2, ವೈ-ಫೈ 802.11 ಎಸಿ, 5 ಜಿ ಬೆಂಬಲ, ಎನ್‌ಎಫ್‌ಸಿ ಸೇರಿದಂತೆ ಇತರೆ ಅಗತ್ಯ ಫೀಚರ್ಸ್‌ಗಳು ಸೇರಿವೆ.
IQOO Z5: ಶವೋಮಿಗೆ ಬಿಗ್ ಶಾಕ್: ವಿದೇಶದಲ್ಲಿ ಧೂಳೆಬ್ಬಿಸಿದ ಐಕ್ಯೂ Z5 5G ಸ್ಮಾರ್ಟ್‌ಫೋನ್ ಭಾರತದಲ್ಲಿ ಬಿಡುಗಡೆ
WhatsApp: ಈ ಆಂಡ್ರಾಯ್ಡ್, ಐಫೋನ್ಗಳಲ್ಲಿ ನ. 1ರ ಬಳಿಕ ವಾಟ್ಸ್ಆ್ಯಪ್ ಸ್ಥಗಿತ: ನಿಮ್ಮ ಫೋನ್ ಇದೆಯೇ?, ಇಲ್ಲಿ ನೋಡಿ
(Oppo K9 Pro 5G Oppo has launched another MediaTek Dimensity 1200-powered smartphone)
Published On - 3:30 pm, Mon, 27 September 21