Oppo K9s: ಬರೋಬ್ಬರಿ 64MP ಕ್ಯಾಮೆರಾ, ಬಲಿಷ್ಠ ಪ್ರೊಸೆಸರ್, ಬ್ಯಾಟರಿ: ಒಪ್ಪೋ K9s ಸ್ಮಾರ್ಟ್​ಫೋನ್ ಬಿಡುಗಡೆ

ಒಪ್ಪೋ K9s ಸ್ಮಾರ್ಟ್‌ಫೋನ್‌ ಎರಡು ಮಾದರಿಯಲ್ಲಿ ಬಿಡುಗಡೆ ಆಗಿದೆ. 6GB RAM ಮತ್ತು 128GB ಸ್ಟೋರೇಜ್ ಆಯ್ಕೆಗೆ ಚೀನಾದಲ್ಲಿ CNY 1,499 ಅಂದರೆ ಭಾರತದಲ್ಲಿ ಇದರ ಬೆಲೆ ಅಂದಾಜು 17,500 ರೂ. ಎನ್ನಬಹುದು.

Oppo K9s: ಬರೋಬ್ಬರಿ 64MP ಕ್ಯಾಮೆರಾ, ಬಲಿಷ್ಠ ಪ್ರೊಸೆಸರ್, ಬ್ಯಾಟರಿ: ಒಪ್ಪೋ K9s ಸ್ಮಾರ್ಟ್​ಫೋನ್ ಬಿಡುಗಡೆ
Oppo K9s
Follow us
| Updated By: Vinay Bhat

Updated on: Oct 21, 2021 | 1:24 PM

ಭಾರತದಲ್ಲಿ ಒಪ್ಪೋ (Oppo) ಕಂಪನಿಯ ಸ್ಮಾರ್ಟ್​ಫೋನ್​ಗಳಿಗೆ (Smartphone) ಈಗೀಗ ಬೇಡಿಕೆ ಕಡಿಮೆ ಇದ್ದರೂ ವಿದೇಶದಲ್ಲಿ ಹೆಚ್ಚು ಮಾರಾಟ ಕಾಣುತ್ತಿದೆ. ಅದಕ್ಕಾಗಿಯೆ ಭಾರತದಿಂದ ಆಚೆಗೆ ಹೊಸ ಹೊಸ ಸ್ಮಾರ್ಟ್​ಫೋನ್​​​ಗಳನ್ನು ಬಿಡುಗಡೆ ಮಾಡುತ್ತಿವೆ. ಅದರಂತೆ ಇದೀಗ ಹೊಸ ಒಪ್ಪೋ ಕೆ9ಎಸ್ (Oppo K9s) ಸ್ಮಾರ್ಟ್‌ಫೋನ್ ಚೀನಾದಲ್ಲಿ ಅನಾವರಣ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್‌, ಅತ್ಯುತ್ತಮ ಕ್ಯಾಮೆರಾ, ಬಲಿಷ್ಠ ಬ್ಯಾಟರಿ ಸೇರಿದಂತೆ ಆಕರ್ಷಕ ಫೀಚರ್​ಗಳನ್ನು ಒಳಗೊಂಡಿದೆ.

ಒಪ್ಪೋ K9s ಸ್ಮಾರ್ಟ್‌ಫೋನ್‌ ಎರಡು ಮಾದರಿಯಲ್ಲಿ ಬಿಡುಗಡೆ ಆಗಿದೆ. 6GB RAM ಮತ್ತು 128GB ಸ್ಟೋರೇಜ್ ಆಯ್ಕೆಗೆ ಚೀನಾದಲ್ಲಿ CNY 1,499 ಅಂದರೆ ಭಾರತದಲ್ಲಿ ಇದರ ಬೆಲೆ ಅಂದಾಜು 17,500 ರೂ. ಎನ್ನಬಹುದು. ಇನ್ನು 8GB RAM ಮತ್ತು 128GB ಸ್ಟೋರೇಜ್ ಮಾಡೆಲ್‌ಗೆ CNY 1,699 (ಅಂದಾಜು 19,900ರೂ) ಬೆಲೆ ನಿಗಧಿ ಪಡಿಸಲಾಗಿದೆ. ಇದು ನವೆಂಬರ್ 1 ರಂದು ಮಾರಾಟಕ್ಕೆ ಬರುತ್ತದೆ. ಸದ್ಯದಲ್ಲೇ ಭಾರತದಲ್ಲೂ ಈ ಸ್ಮಾರ್ಟ್​ಫೋನ್ ಬಿಡುಗಡೆ ಆಗಲಿದೆ.

ಈ ಸ್ಮಾರ್ಟ್‌ಫೋನ್‌ 1,080×2,412 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.59 ಇಂಚಿನ ಫುಲ್ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G ಆಕ್ಟಾ-ಕೋರ್ SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 11. ಆಧಾರಿತ ಕಲರ್ಓಎಸ್ 11.2 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ.

ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64-ಮೆಗಾಪಿಕ್ಸೆಲ್ ಸೆನ್ಸಾರ್‌ f/1.7 ಅಪರ್ಚರ್ ಮತ್ತು 81-ಡಿಗ್ರಿ ಫೀಲ್ಡ್ ವ್ಯೂ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಮತ್ತು 120-ಡಿಗ್ರಿ ಫೀಲ್ಡ್ ವೀಕ್ಷಣೆಯನ್ನು ಹೊಂದಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ.

ಇನ್ನು 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 30W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಜಿಪಿಎಸ್, ಯುಎಸ್‌ಬಿ ಟೈಪ್-ಸಿ ಪೋರ್ಟ್, 3.5 ಎಂಎಂ ಆಡಿಯೋ ಜ್ಯಾಕ್, ವೈ-ಫೈ 6, ಬ್ಲೂಟೂತ್ ವಿ 5.2 ಬೆಂಬಲಿಸಲಿದೆ. ಈ ಫೋನ್‌ನಲ್ಲಿ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಕೂಡ ಅಳವಡಿಸಲಾಗಿದೆ.

Amazon Prime: ಪ್ರೈಮ್ ಸದಸ್ಯರಿಗೆ ಬಿಗ್ ಶಾಕ್ ನೀಡಿದ ಅಮೆಜಾನ್: ವಾರ್ಷಿಕ ಯೋಜನೆಯಲ್ಲಿ ದೊಡ್ಡ ಬದಲಾವಣೆ

Online Bill Payment: ಆನ್​ಲೈನ್ ಮೂಲಕ ವಿದ್ಯುತ್ ಬಿಲ್ ಪಾವತಿಸುವುದು ಈಗ ಮತ್ತಷ್ಟು ಸುಲಭ: ಜಸ್ಟ್ ಹೀಗೆ ಮಾಡಿ

(Oppo K9s smartphone was launched as the latest entrant in the Oppo K series in China)

Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!