65W ಸೂಪರ್ ಫಾಸ್ಟ್ ಚಾರ್ಜಿಂಗ್ ಬೆಂಬಲವಿರುವ Oppo Reno 6, 6 Pro ಇಂದು ಭಾರತದಲ್ಲಿ ಲಾಂಚ್

ಒಪ್ಪೋ ಲಾಂಚ್ ಮಾಡಲಿರುವ ಹೊಸ ಫೋನಿನ ಹೆಸರು ಒಪ್ಪೋ ರೆನೋ 6 ಮತ್ತು ಒಪ್ಪೋ ರೆನೋ 6 ಪ್ರೊ ಆಗಿದೆ.

65W ಸೂಪರ್ ಫಾಸ್ಟ್ ಚಾರ್ಜಿಂಗ್ ಬೆಂಬಲವಿರುವ Oppo Reno 6, 6 Pro ಇಂದು ಭಾರತದಲ್ಲಿ ಲಾಂಚ್
Oppo Reno 6
Follow us
TV9 Web
| Updated By: Vinay Bhat

Updated on: Jul 14, 2021 | 10:30 AM

ಸ್ಮಾರ್ಟ್ ಫೋನ್ ಮಾರುಕಟ್ಟೆಯಲ್ಲಿ ಶವೋಮಿ, ಸ್ಯಾಮ್​ಸಂಗ್, ರಿಯಲ್ ಮಿ ಬ್ರ್ಯಾಂಡ್​ಗಳ ನಡುವೆ ತನ್ನದೆ ಆದ ವಿಶೇಷ ಸ್ಥಾನ ಪಡೆದುಕೊಂಡಿರುವ ಒಪ್ಪೋ (Oppo) ಕಂಪೆನಿ ಹಲವು ಮೊಬೈಲ್ ಗಳ ಮೂಲಕ ಬಳಕೆದಾರರನ್ನು ಸೆಳೆಯುವಲ್ಲಿ ಯಶಸ್ವಿಯಾಗುತ್ತಿದೆ. ಸದ್ಯ ಕಂಪೆನಿ ಭಾರತದಲ್ಲಿಂದು ರೆನೋ 6 (Oppo Reno 6) ಸರಣಿಯಲ್ಲಿ ಎರಡು ಹೊಸ ಸ್ಮಾರ್ಟ್ ಫೋನುಗಳನ್ನು ಅನಾವರಣ ಮಾಡಲು ಮುಂದಾಗಿದೆ.

ಒಪ್ಪೋ ಲಾಂಚ್ ಮಾಡಲಿರುವ ಹೊಸ ಫೋನಿನ ಹೆಸರು ಒಪ್ಪೋ ರೆನೋ 6 ಮತ್ತು ಒಪ್ಪೋ ರೆನೋ 6 ಪ್ರೊ ಆಗಿದೆ. ಪ್ರಮುಖವಾಗಿ ಈ ಎರಡೂ ಸ್ಮಾರ್ಟ್​ಫೋನ್ 65W ವೇಗದ ಚಾರ್ಜಿಂಗ್ ಬೆಂಬಲ ಪಡೆದುಕೊಂಡಿದ್ದು, ಇಂದು ಮಧ್ಯಾಹ್ನ 3 ಗಂಟೆಗೆ ಭಾರತದಲ್ಲಿ ಲಾಂಚ್ ಆಗಲಿದೆ. ಒಪ್ಪೋ ಕಂಪೆನಿಯ ಅಧಿಕೃತ ಯೂಟ್ಯೂಬ್ ಚಾನೆಲ್​ನಲ್ಲಿ ಲೈವ್ ವೀಕ್ಷಿಸಬಹುದು.

ಒಪ್ಪೋ ರೆನೋ 6:

ಒಪ್ಪೋ ರೆನೋ 6 ಸ್ಮಾರ್ಟ್‌ಫೋನ್‌ 6.43-ಇಂಚಿನ ಫುಲ್‌-ಹೆಚ್‌ಡಿ +ಡಿಸ್‌ಪ್ಲೇಯನ್ನು ಹೊಂದಿರಲಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್‌ ಅನ್ನು ಒಳಗೊಂಡಿದ್ದು, ಆಂಡ್ರಾಯ್ಡ್ 11 ಆಧಾರಿತ ಕಲರ್ ಓಎಸ್ 11 ನಲ್ಲಿ ಕಾರ್ಯನಿರ್ವಹಿಸುತ್ತದೆ. ಇನ್ನೂ ವಿಶೇಷವಾಗಿ ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇದು 4,300mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 65W ಫಾಸ್ಟ್ ಚಾರ್ಜಿಂಗ್‌ ಅನ್ನು ಒಳಗೊಂಡಿದೆ.

ಒಪ್ಪೋ ರೆನೋ 6 ಪ್ರೊ:

ಒಪ್ಪೋ ರೆನೋ 6 ಪ್ರೊ ಸ್ಮಾರ್ಟ್‌ಫೋನ್‌ 6.55-ಇಂಚಿನ ದೊಡ್ಡ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 1200 SoC ಪ್ರೊಸೆಸರ್‌ ಅನ್ನು ಒಳಗೊಂಡಿದೆ. ಇದು 12GB RAM ವರೆಗೆ ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದು ಕೂಡ 32 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಹೊಂದಿದೆ. ಈ ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, ಇದು 65W ಫಾಸ್ಟ್ ಚಾರ್ಜಿಂಗ್‌ ಬೆಂಬಲಿಸಲಿದೆ.

ಬೆಲೆ?:

ಈ ಎರಡೂ ಸ್ಮಾರ್ಟ್​ಫೋನ್​ನ ಬೆಲೆಯನ್ನು ಕಂಪೆನಿ ಇನ್ನೂ ಬಿಡುಗಡೆ ಮಾಡಿಲ್ಲ. ಮೂಲಗಳ ಪ್ರಕಾರ ರೆನೋ 6 ಬೆಲೆ ಸುಮಾರು 32,000 ರೂ. ಇರಬಹುದು ಎಂದು ಅಂದಾಜಿಸಲಾಗಿದೆ. ಅಂತೆಯೆ ರೆನೋ 6 ಪ್ರೊ ಫೋನಿನ ಬೆಲೆ 40,000 ರೂ. ಇರುವ ಸಾಧ್ಯತೆ ಇದೆ.

How To: ಗೂಗಲ್ ಮೀಟ್​​ನಲ್ಲಿ ಸರಾಗ ಸಂವಹನಕ್ಕೆ ಇಲ್ಲಿದೆ 5 ಟಿಪ್ಸ್

ನಿಮ್ಮ ಹಳೆಯ ಸ್ಮಾರ್ಟ್​ಫೋನನ್ನು ಸೇಲ್ ಮಾಡುವ ಮುನ್ನ ತಪ್ಪದೆ ಈ ಕೆಲಸ ಮಾಡಿ

(Oppo Reno 6 Pro Reno 6 India launch today at 3PM check expected price specifications)

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ