Oppo Reno 7 Pro: ಟೆಕ್ ಪ್ರಿಯರು ಫಿದಾ ಆಗಿರುವ ಒಪ್ಪೋ ರೆನೋ 7 ಪ್ರೊ ಈಗ ಖರೀದಿಗೆ ಲಭ್ಯ: ಆಫರ್ ಏನಿದೆ?

ಒಪ್ಪೋ ರೆನೋ 7 ಪ್ರೊ ಸ್ಮಾರ್ಟ್‌ಫೋನ್‌ ಸದ್ಯಕ್ಕೆ ಒಂದು ಮಾದರಿಯಲ್ಲಷ್ಟೆ ಖರೀದಿಗೆ ಸಿಗುತ್ತಿದೆ. ಇದರ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯಕ್ಕೆ 39,999ರೂ. ಬೆಲೆ ನಿಗದಿ ಮಾಡಲಾಗಿದೆ.

Oppo Reno 7 Pro: ಟೆಕ್ ಪ್ರಿಯರು ಫಿದಾ ಆಗಿರುವ ಒಪ್ಪೋ ರೆನೋ 7 ಪ್ರೊ ಈಗ ಖರೀದಿಗೆ ಲಭ್ಯ: ಆಫರ್ ಏನಿದೆ?
Oppo Reno 7 Pro 5G
Follow us
TV9 Web
| Updated By: Vinay Bhat

Updated on: Feb 08, 2022 | 1:47 PM

ಭಾರತದಲ್ಲಿ ಮೊನ್ನೆಯಷ್ಟೆ ಒಪ್ಪೋ ಕಂಪನಿ ತನ್ನ ರೆನೋ ಸರಣಿಯ ಅಡಿಯಲ್ಲಿ ಎರಡು ಹೊಸ ಒಪ್ಪೋ ರೆನೋ 7 ಪ್ರೊ ಮತ್ತು ರೆನೋ 7 ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಒಪ್ಪೋ ರೆನೋ 7 ಪ್ರೊ ಮತ್ತು ಒಪ್ಪೋ ರೆನೋ 7 (Oppo Reno 7 Pro 5G and Oppo Reno 7 5G) ಸ್ಮಾರ್ಟ್‌ಫೋನ್‌ 5G ನೆಟ್‌ವರ್ಕ್‌ ಅನ್ನು ಬೆಂಬಲಿಸುತ್ತದೆ. ಇದರಲ್ಲಿ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 1200 SoC ಮ್ಯಾಕ್ಸ್ ಪ್ರೊಸೆಸರ್‌ ಬಲವನ್ನು ಹೊಂದಿರುವ ರೆನೋ 7ಪ್ರೊ ಸ್ಮಾರ್ಟ್‌ಫೋನ್‌ (Smartphone) ಇದೀಗ ಖರೀದಿಗೆ ಸಿಗುತ್ತಿದೆ. ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್​ನಲ್ಲಿ (Flipkart) ಸೇಲ್ ಲೈವ್ ಆಗಿದೆ. ಹಾಗಾದ್ರೆ ಒಪ್ಪೋ ರೆನೋ 7 ಪ್ರೊ ಫೋನಿನ ವಿಶೇಷತೆ ಏನು?, ಎಷ್ಟು ಬೆಲೆ?, ಆಫರ್​ಗಳು ಏನೇನಿವೆ ಎಂಬುದನ್ನು ನೋಡುವುದಾದರೆ…

ಏನು ವಿಶೇಷತೆ?:

ಒಪ್ಪೋ ರೆನೋ 7ಪ್ರೊ ಸ್ಮಾರ್ಟ್‌ಫೋನ್‌ 6.55 ಇಂಚಿನ ಫುಲ್‌ ಹೆಚ್‌ಡಿ + ಸೂಪರ್ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 90hz ರಿಫ್ರೆಶ್ ರೇಟ್‌ ಮತ್ತು 180Hz ಟಚ್ ರೆಸ್ಪಾನ್ಸ್‌ ರೇಟ್‌ ಅನ್ನು ಹೊಂದಿದೆ. ಈ ಡಿಸ್‌ಪ್ಲೇ ಗೋರಿಲ್ಲಾ ಗ್ಲಾಸ್ 5ಪ್ರೊಟೆಕ್ಷನ್‌ ಅನ್ನು ಹೊಂದಿದೆ. ಮೀಡಿಯಾಟೆಕ್‌ ಡೈಮೆನ್ಸಿಟಿ 1200 SoC ಮ್ಯಾಕ್ಸ್ ಪ್ರೊಸೆಸರ್‌ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್ 1 ಆಧಾರಿತ ಕಲರ್‌ ಒಎಸ್‌ 12ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM + 256GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ.

ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ imx766 ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೋನಿ imx709 ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 4500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 65W ಫಾಸ್ಟ್ ಚಾರ್ಜಿಂಗ್‌ ಅನ್ನು ಬೆಂಬಲಿಸುತ್ತದೆ.

ಬೆಲೆ – ಆಫರ್:

ಒಪ್ಪೋ ರೆನೋ 7 ಪ್ರೊ ಸ್ಮಾರ್ಟ್‌ಫೋನ್‌ ಸದ್ಯಕ್ಕೆ ಒಂದು ಮಾದರಿಯಲ್ಲಷ್ಟೆ ಖರೀದಿಗೆ ಸಿಗುತ್ತಿದೆ. ಇದರ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯಕ್ಕೆ 39,999ರೂ. ಬೆಲೆ ನಿಗದಿ ಮಾಡಲಾಗಿದೆ. ಇನ್ನು ಈ ಫೋನ್ ಸ್ಟಾರ್ಟ್ರೈಲ್ಸ್ ಬ್ಲೂ ಮತ್ತು ಸ್ಟಾರ್ಲೈಟ್ ಬ್ಲ್ಯಾಕ್‌ ಕಲರ್‌ ಆಯ್ಕೆಯಲ್ಲಿ ಬರುತ್ತದೆ. ನೋ ಕಾಸ್ಟ್ ಇಎಮ್​ಐ ಆಯ್ಕೆಯಲ್ಲಿ ಈ ಫೋನನ್ನ ನೀವು 6,667 ರೂ. ಗೆ ಖರೀದಿಸಬಹುದು. ಅಂತೆಯೆ ಶೇ. 10 ರಷ್ಟು ಆಯ್ದ ಬ್ಯಾಂಕ್​ಗಳಿಗೆ ಡಿಸ್ಕೌಂಟ್ ಕೂಡ ಇದೆ.

ಇದರ ಜೊತೆ ಬಿಡುಗಡೆ ಆದ ಒಪ್ಪೋ ರೆನೋ 7 ಸ್ಮಾರ್ಟ್‌ಫೋನ್‌ 28,999ರೂ. ಬೆಲೆಯನ್ನು ಹೊಂದಿದೆ. ಇದು ಫ್ಲಿಪ್‌ಕಾರ್ಟ್, ಒಪ್ಪೋ ಆನ್‌ಲೈನ್ ​​ಸ್ಟೋರ್, ಮತ್ತು ರಿಟೇಲ್‌ ಸ್ಟೋರ್‌ ನಲ್ಲಿ ಫೆಬ್ರವರಿ 17ರಿಂದ ಖರೀದಿಗೆ ಲಭ್ಯವಾಗಲಿದೆ. ಇದು 6.4 ಇಂಚಿನ ಫುಲ್‌ ಹೆಚ್‌ಡಿ ಹೆಚ್‌ಡಿ + ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 180Hz ಟಚ್‌ ರೆಸ್ಪಾನ್ಸ್‌ ರೇಟ್‌ ಹಾಗೂ 90Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದಲ್ಲದೆ RAM ಸಾಮರ್ಥ್ಯವನ್ನು ನೀವು ಹೆಚ್ಚು ಅಗತ್ಯವಿರುವಾಗ ವಿಸ್ತರಿಸಬಹುದಾಗಿದೆ.

ಇನ್ನು ಈ ಸ್ಮಾರ್ಟ್​ಫೋನ್ ಟ್ರಿಪಲ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್‌-ಆಂಗಲ್‌ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸೆಲ್ಫಿ ಕ್ಯಾಮರಾ ಹೊಂದಿದೆ. ಜೊತೆಗೆ 4500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 65W ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

Safer Internet Day 2022: ಇಂದು ವಿಶ್ವ ಸುರಕ್ಷಿತ ಅಂತರ್ಜಾಲ ದಿನ: ಮಕ್ಕಳನ್ನು ಆನ್‌ಲೈನ್‌ನಲ್ಲಿ ಸುರಕ್ಷಿತವಾಗಿಡಲು ಇಲ್ಲಿದೆ ಟಿಪ್ಸ್

WhatsApp: ವಾಟ್ಸ್​ಆ್ಯಪ್​ನಲ್ಲಿ ದೊಡ್ಡ ಗಾತ್ರದ MB, GB ಫೈಲ್​ಗಳನ್ನು ಕ್ಷಣಾರ್ಧದಲ್ಲಿ ಸೆಂಡ್ ಮಾಡುವ ಟ್ರಿಕ್ ಗೊತ್ತಾ?

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್