Oppo Reno 7 series: 2022ರ ಬಹುನಿರೀಕ್ಷಿತ ಒಪ್ಪೋ ರೆನೋ 7 ಸರಣಿ ಬಿಡುಗಡೆ: ಕ್ಯಾಮೆರಾಕ್ಕೆ ಫಿದಾ ಆಗೋದು ಗ್ಯಾರಂಟಿ
ಒಪ್ಪೋ ಭಾರತದಲ್ಲಿ ರೆನೋ ಸರಣಿಯ ಅಡಿಯಲ್ಲಿ ಎರಡು ಹೊಸ ಒಪ್ಪೋ ರೆನೋ 7 ಪ್ರೊ ಮತ್ತು ರೆನೋ 7 ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಒಪ್ಪೋ ರೆನೋ 7 ಪ್ರೊ ಮತ್ತು ಒಪ್ಪೋ ರೆನೋ 7 (Oppo Reno 7 Pro 5G and Oppo Reno 7 5G) ಸ್ಮಾರ್ಟ್‌ಫೋನ್ 5G ನೆಟ್‌ವರ್ಕ್ ಅನ್ನು ಬೆಂಬಲಿಸುತ್ತದೆ.
ಬಜೆಟ್ ಬೆಲೆಯ ಸ್ಮಾರ್ಟ್ಫೋನ್ಗೂ (Smartphone) ಸೈ ಮಿಡ್ ರೇಂಜ್ ಮೊಬೈಲ್ಗೂ ರೆಡಿ ಎಂಬಂತೆ ಆಕರ್ಷಕ ಫೋನ್ಗಳನ್ನು ಮಾರುಕಟ್ಟೆಗೆ ಪರಿಚಯಿಸಿ ವಿಶೇಷ ಸ್ಥಾನ ಸಂಪಾದಿಸಿರುವ ಒಪ್ಪೋ (Oppo) ಸಂಸ್ಥೆಗೆ ರೆನೋ ಸರಣಿಯ ಫೋನ್‌ಗಳು ಹೆಚ್ಚಿನ ಹೆಸರು ತಂದುಕೊಟ್ಟಿದೆ. ಇದೀಗ ಒಪ್ಪೋ ಭಾರತದಲ್ಲಿ ರೆನೋ ಸರಣಿಯ ಅಡಿಯಲ್ಲಿ ಎರಡು ಹೊಸ ಒಪ್ಪೋ ರೆನೋ 7 ಪ್ರೊ ಮತ್ತು ರೆನೋ 7 ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಒಪ್ಪೋ ರೆನೋ 7 ಪ್ರೊ ಮತ್ತು ಒಪ್ಪೋ ರೆನೋ 7 (Oppo Reno 7 Pro 5G and Oppo Reno 7 5G) ಸ್ಮಾರ್ಟ್‌ಫೋನ್ 5G ನೆಟ್‌ವರ್ಕ್ ಅನ್ನು ಬೆಂಬಲಿಸುತ್ತದೆ. ರೆನೋ 7ಪ್ರೊ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 1200 SoC ಮ್ಯಾಕ್ಸ್ ಪ್ರೊಸೆಸರ್ ಬಲವನ್ನು ಹೊಂದಿದೆ. ಒಪ್ಪೋ ರೆನೋ 7 ಮೀಡಿಯಾಟೆಕ್ ಡೈಮೆನ್ಸಿಟಿ 900SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ.
ಒಪ್ಪೋ ರೆನೋ 7 ಸ್ಮಾರ್ಟ್‌ಫೋನ್ 6.4 ಇಂಚಿನ ಫುಲ್ ಹೆಚ್‌ಡಿ ಹೆಚ್‌ಡಿ + ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 180Hz ಟಚ್ ರೆಸ್ಪಾನ್ಸ್ ರೇಟ್ ಹಾಗೂ 90Hz ರಿಫ್ರೆಶ್ ರೇಟ್ ಅನ್ನು ಹೊಂದಿದೆ. 8GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದಲ್ಲದೆ RAM ಸಾಮರ್ಥ್ಯವನ್ನು ನೀವು ಹೆಚ್ಚು ಅಗತ್ಯವಿರುವಾಗ ವಿಸ್ತರಿಸಬಹುದಾಗಿದೆ.
ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮರಾ ಹೊಂದಿದೆ. ಜೊತೆಗೆ 4500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 65W ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.
ಒಪ್ಪೋ ರೆನೋ 7ಪ್ರೊ ಸ್ಮಾರ್ಟ್‌ಫೋನ್ 6.55 ಇಂಚಿನ ಫುಲ್ ಹೆಚ್‌ಡಿ + ಸೂಪರ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 90hz ರಿಫ್ರೆಶ್ ರೇಟ್ ಮತ್ತು 180Hz ಟಚ್ ರೆಸ್ಪಾನ್ಸ್ ರೇಟ್ ಅನ್ನು ಹೊಂದಿದೆ. ಈ ಡಿಸ್‌ಪ್ಲೇ ಗೋರಿಲ್ಲಾ ಗ್ಲಾಸ್ 5ಪ್ರೊಟೆಕ್ಷನ್ ಅನ್ನು ಹೊಂದಿದೆ. ಮೀಡಿಯಾಟೆಕ್ ಡೈಮೆನ್ಸಿಟಿ 1200 SoC ಮ್ಯಾಕ್ಸ್ ಪ್ರೊಸೆಸರ್ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್ 1 ಆಧಾರಿತ ಕಲರ್ ಒಎಸ್ 12ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM + 256GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ.
ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ imx766 ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೋನಿ imx709 ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 4500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 65W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.
ಒಪ್ಪೋ ರೆನೋ 7 ಪ್ರೊ ಸ್ಮಾರ್ಟ್‌ಫೋನ್ 12GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು 39,999ರೂ. ಬೆಲೆಯನ್ನು ಹೊಂದಿದೆ. ಇನ್ನು ಈ ಫೋನ್ ಸ್ಟಾರ್ಟ್ರೈಲ್ಸ್ ಬ್ಲೂ ಮತ್ತು ಸ್ಟಾರ್ಲೈಟ್ ಬ್ಲ್ಯಾಕ್ ಕಲರ್ ಆಯ್ಕೆಯಲ್ಲಿ ಬರುತ್ತದೆ. ಒಪ್ಪೋ ರೆನೋ 7 ಸ್ಮಾರ್ಟ್‌ಫೋನ್ 28,999ರೂ. ಬೆಲೆಯನ್ನು ಹೊಂದಿದೆ. ಇದು ಫ್ಲಿಪ್‌ಕಾರ್ಟ್, ಒಪ್ಪೋ ಆನ್‌ಲೈನ್ ಸ್ಟೋರ್, ಮತ್ತು ರಿಟೇಲ್ ಸ್ಟೋರ್ ನಲ್ಲಿ ಫೆಬ್ರವರಿ 17ರಿಂದ ಖರೀದಿಗೆ ಲಭ್ಯವಾಗಲಿದೆ.
Moto G Stylus 2022: ಭಯಂಕರ ಸ್ಟೈಲಿಶ್ ಆಗಿದೆ ಮೋಟೋ ಜಿ ಸ್ಟೈಲಸ್ 2022 ಸ್ಮಾರ್ಟ್‌ಫೋನ್: ಬೆಲೆ ಎಷ್ಟು?
Power Bank: ಇಲ್ಲಿದೆ ನೋಡಿ 27,000,000mAh ಸಾಮರ್ಥ್ಯದ ವಿಶ್ವದ ಅತಿ ದೊಡ್ಡ ಪವರ್ ಬ್ಯಾಂಕ್: ಬೆಲೆ ಎಷ್ಟು?