Oppo Reno 8: ಬಿಡುಗಡೆಗೆ ಒಂದು ದಿನ ಇರುವಾಗ ಸೋರಿಕೆ ಆಯ್ತು ಒಪ್ಪೋ ರೆನೊ 8 ಸರಣಿ ಸ್ಮಾರ್ಟ್‌ಫೋನ್ ಬೆಲೆ
Oppo Reno 8 Pro: ಒಪ್ಪೋ ರೆನೊ 8 ಸರಣಿಯ (Oppo Reno 8 Series) ಸ್ಮಾರ್ಟ್‌ಫೋನ್ ಭಾರತೀಯ ಮಾರುಕಟ್ಟೆಗೆ ನಾಳೆ (ಜುಲೈ 17) ಅಪ್ಪಳಿಸಲಿದೆ. ಇದರಲ್ಲಿ ಆಕರ್ಷಕ ಕ್ಯಾಮೆರಾ ನೀಡಲಾಗಿದ್ದು ಟೆಕ್ ಪ್ರಿಯರಂತು ಫುಲ್ ಫಿದಾ ಆಗಿದ್ದಾರೆ
ಎರಡು ತಿಂಗಳ ಹಿಂದೆ ವಿದೇಶದಲ್ಲಿ ಬಿಡುಗಡೆ ಆಗಿ ಈಗಲೂ ಧೂಳೆಬ್ಬಿಸುತ್ತಿರುವ ಒಪ್ಪೋ ರೆನೊ 8 ಸರಣಿಯ (Oppo Reno 8 Series) ಸ್ಮಾರ್ಟ್‌ಫೋನ್ ಭಾರತೀಯ ಮಾರುಕಟ್ಟೆಗೆ ನಾಳೆ (ಜುಲೈ 17) ಅಪ್ಪಳಿಸಲಿದೆ. ಇದರಲ್ಲಿ ಆಕರ್ಷಕ ಕ್ಯಾಮೆರಾ ನೀಡಲಾಗಿದ್ದು ಟೆಕ್ ಪ್ರಿಯರಂತು ಫುಲ್ ಫಿದಾ ಆಗಿದ್ದಾರೆ. ಈ ಸರಣಿ ಅಡಿಯಲ್ಲಿ ಒಟ್ಟು ಎರಡು ಫೋನ್ಗಳು ದೇಶದಲ್ಲಿ ಅನಾವರಣಗೊಳ್ಳಲಿದೆ. ಅದು ಒಪ್ಪೋ ರೆನೋ 8, ರೆನೋ 8 ಪ್ರೊ (Oppo Reno 8, Oppo Reno 8 Pro) ಆಗಿದೆ. ಈ ಸ್ಮಾರ್ಟ್‌ಫೋನ್ ಸುಧಾರಿತ ವಿನ್ಯಾಸ, ಅಪ್‌ಡೇಟ್ ಚಾರ್ಜಿಂಗ್ ಸೌಲಭ್ಯಗಳೊಂದಿಗೆ ಕಾಣಿಸಿಕೊಂಡಿವೆ. ವಿಶೇಷ ಎಂದರೆ ಒಪ್ಪೋ ರೆನೋ 8 ಪ್ರೊ ಅತ್ಯಂತ ಬಲಿಷ್ಠವಾದ ಸ್ನ್ಯಾಪ್‌ಡ್ರಾಗನ್ 7 ಜೆನ್ 1 SoC ಹೊಂದಿರುವ ವಿಶ್ವದ ಮೊದಲ ಫೋನ್ ಆಗಿದೆ. ಇದೀಗ ಈ ಫೋನಿನ ಬೆಲೆ ಸೋರಿಕೆಯಾಗಿದೆ.
- ಈ ಎರಡೂ ಸ್ಮಾರ್ಟ್ಫೋನ್ಗಳ ಬೆಲೆ ಇದೀಗ ಆನ್ಲೈನ್ನಲ್ಲಿ ಲೀಕ್ ಆಗಿದೆ. ಟಿಪ್‌ಸ್ಟರ್ ಹೇಳಿರುವ ಪ್ರಕಾರ, ಒಪ್ಪೋ ರೆನೋ 8 ಆರಂಭಿಕ ಬೆಲೆ 29,990 ರೂ. ಹಾಗೂ ಒಪ್ಪೋ ರೆನೋ 8 ಪ್ರೊ ಆರಂಭಿಕ ಬೆಲೆ 44,990 ರೂ. ಇರಲಿದೆಯಂತೆ.
- ಒಪ್ಪೋ ರೆನೋ 8 ಸ್ಮಾರ್ಟ್‌ಫೋನ್ 6.43 ಇಂಚಿನ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ.
- ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 1300 SoC ಪ್ರೊಸೆಸರ್ ಹೊಂದಿರಲಿದ್ದು, ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ ಎಂದು ಹೇಳಲಾಗಿದೆ.
- ಟ್ರಿಪಲ್ ರಿಯರ್ ಕ್ಯಾಮೆರಾ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಅನ್ನು ನೀಡಲಾಗಿದೆ.
- ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ.
- ಒಪ್ಪೋ ರೆನೋ 8 ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿರಲಿದೆ. ಇದು 80W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.
- ಇನ್ನು ಒಪ್ಪೋ ರೆನೋ 8 ಪ್ರೊ ಸ್ಮಾರ್ಟ್‌ಫೋನ್ 6.62-ಇಂಚಿನ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಈ ಡಿಸ್‌ಪ್ಲೇ HDR10+ ಬೆಂಬಲಿಸುವುದು ವಿಶೇಷ.
- ಇದು ಬಲಿಷ್ಠವಾದ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7 Gen 1 SoC ಪ್ರೊಸೆಸರ್ ಹೊಂದಿರಲಿದೆ. ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ ಎಂದು ಹೇಳಲಾಗಿದೆ.
- ಇದುಕೂಡ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಅಲ್ಟ್ರಾವೈಡ್ ಲೆನ್ಸ್ ಇರಲಿದೆ.
- ಅಂತೆಯೆ ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಹೊಂದಿರುವ ಸಾಧ್ಯತೆಯಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿರಲಿದೆ.
- ಒಪ್ಪೋ ರೆನೋ 8 ಪ್ರೊ ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದೆ. ಇದು 80W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.
ಇದನ್ನೂ ಓದಿ