Kannada News Technology Oppo Reno 8 series Reno 8 and Reno 8 Pro 5G India pricing details have leaked
Oppo Reno 8: ಬಿಡುಗಡೆಗೆ ಒಂದು ದಿನ ಇರುವಾಗ ಸೋರಿಕೆ ಆಯ್ತು ಒಪ್ಪೋ ರೆನೊ 8 ಸರಣಿ ಸ್ಮಾರ್ಟ್‌ಫೋನ್ ಬೆಲೆ
Oppo Reno 8 Pro: ಒಪ್ಪೋ ರೆನೊ 8 ಸರಣಿಯ (Oppo Reno 8 Series) ಸ್ಮಾರ್ಟ್‌ಫೋನ್ ಭಾರತೀಯ ಮಾರುಕಟ್ಟೆಗೆ ನಾಳೆ (ಜುಲೈ 17) ಅಪ್ಪಳಿಸಲಿದೆ. ಇದರಲ್ಲಿ ಆಕರ್ಷಕ ಕ್ಯಾಮೆರಾ ನೀಡಲಾಗಿದ್ದು ಟೆಕ್ ಪ್ರಿಯರಂತು ಫುಲ್ ಫಿದಾ ಆಗಿದ್ದಾರೆ
Oppo Reno 8 series
Follow us on
ಎರಡು ತಿಂಗಳ ಹಿಂದೆ ವಿದೇಶದಲ್ಲಿ ಬಿಡುಗಡೆ ಆಗಿ ಈಗಲೂ ಧೂಳೆಬ್ಬಿಸುತ್ತಿರುವ ಒಪ್ಪೋ ರೆನೊ 8 ಸರಣಿಯ (Oppo Reno 8 Series) ಸ್ಮಾರ್ಟ್‌ಫೋನ್ ಭಾರತೀಯ ಮಾರುಕಟ್ಟೆಗೆ ನಾಳೆ (ಜುಲೈ 17) ಅಪ್ಪಳಿಸಲಿದೆ. ಇದರಲ್ಲಿ ಆಕರ್ಷಕ ಕ್ಯಾಮೆರಾ ನೀಡಲಾಗಿದ್ದು ಟೆಕ್ ಪ್ರಿಯರಂತು ಫುಲ್ ಫಿದಾ ಆಗಿದ್ದಾರೆ. ಈ ಸರಣಿ ಅಡಿಯಲ್ಲಿ ಒಟ್ಟು ಎರಡು ಫೋನ್ಗಳು ದೇಶದಲ್ಲಿ ಅನಾವರಣಗೊಳ್ಳಲಿದೆ. ಅದು ಒಪ್ಪೋ ರೆನೋ 8, ರೆನೋ 8 ಪ್ರೊ (Oppo Reno 8, Oppo Reno 8 Pro) ಆಗಿದೆ. ಈ ಸ್ಮಾರ್ಟ್‌ಫೋನ್ ಸುಧಾರಿತ ವಿನ್ಯಾಸ, ಅಪ್‌ಡೇಟ್ ಚಾರ್ಜಿಂಗ್ ಸೌಲಭ್ಯಗಳೊಂದಿಗೆ ಕಾಣಿಸಿಕೊಂಡಿವೆ. ವಿಶೇಷ ಎಂದರೆ ಒಪ್ಪೋ ರೆನೋ 8 ಪ್ರೊ ಅತ್ಯಂತ ಬಲಿಷ್ಠವಾದ ಸ್ನ್ಯಾಪ್‌ಡ್ರಾಗನ್ 7 ಜೆನ್ 1 SoC ಹೊಂದಿರುವ ವಿಶ್ವದ ಮೊದಲ ಫೋನ್ ಆಗಿದೆ. ಇದೀಗ ಈ ಫೋನಿನ ಬೆಲೆ ಸೋರಿಕೆಯಾಗಿದೆ.
ಈ ಎರಡೂ ಸ್ಮಾರ್ಟ್ಫೋನ್ಗಳ ಬೆಲೆ ಇದೀಗ ಆನ್ಲೈನ್ನಲ್ಲಿ ಲೀಕ್ ಆಗಿದೆ. ಟಿಪ್‌ಸ್ಟರ್ ಹೇಳಿರುವ ಪ್ರಕಾರ, ಒಪ್ಪೋ ರೆನೋ 8 ಆರಂಭಿಕ ಬೆಲೆ 29,990 ರೂ. ಹಾಗೂ ಒಪ್ಪೋ ರೆನೋ 8 ಪ್ರೊ ಆರಂಭಿಕ ಬೆಲೆ 44,990 ರೂ. ಇರಲಿದೆಯಂತೆ.
ಒಪ್ಪೋ ರೆನೋ 8 ಸ್ಮಾರ್ಟ್‌ಫೋನ್ 6.43 ಇಂಚಿನ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ.
ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 1300 SoC ಪ್ರೊಸೆಸರ್ ಹೊಂದಿರಲಿದ್ದು, ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ ಎಂದು ಹೇಳಲಾಗಿದೆ.
ಟ್ರಿಪಲ್ ರಿಯರ್ ಕ್ಯಾಮೆರಾ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಅನ್ನು ನೀಡಲಾಗಿದೆ.
ಇದನ್ನೂ ಓದಿ
ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ.
ಒಪ್ಪೋ ರೆನೋ 8 ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿರಲಿದೆ. ಇದು 80W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.
ಇನ್ನು ಒಪ್ಪೋ ರೆನೋ 8 ಪ್ರೊ ಸ್ಮಾರ್ಟ್‌ಫೋನ್ 6.62-ಇಂಚಿನ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಈ ಡಿಸ್‌ಪ್ಲೇ HDR10+ ಬೆಂಬಲಿಸುವುದು ವಿಶೇಷ.
ಇದು ಬಲಿಷ್ಠವಾದ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7 Gen 1 SoC ಪ್ರೊಸೆಸರ್ ಹೊಂದಿರಲಿದೆ. ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ ಎಂದು ಹೇಳಲಾಗಿದೆ.
ಇದುಕೂಡ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಅಲ್ಟ್ರಾವೈಡ್ ಲೆನ್ಸ್ ಇರಲಿದೆ.
ಅಂತೆಯೆ ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಹೊಂದಿರುವ ಸಾಧ್ಯತೆಯಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿರಲಿದೆ.
ಒಪ್ಪೋ ರೆನೋ 8 ಪ್ರೊ ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದೆ. ಇದು 80W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.