ಎರಡು ತಿಂಗಳ ಹಿಂದೆ ವಿದೇಶದಲ್ಲಿ ಬಿಡುಗಡೆ ಆಗಿ ಈಗಲೂ ಧೂಳೆಬ್ಬಿಸುತ್ತಿರುವ ಒಪ್ಪೋ ರೆನೊ 8 ಸರಣಿಯ (Oppo Reno 8 Series) ಸ್ಮಾರ್ಟ್‌ಫೋನ್ ಇದೀಗ ಕೊನೆಗೂ ಭಾರತೀಯ ಮಾರುಕಟ್ಟೆಗೆ ಅಪ್ಪಳಿಸಿದೆ. ಇದರಲ್ಲಿ ಆಕರ್ಷಕ ಕ್ಯಾಮೆರಾ ನೀಡಲಾಗಿದ್ದು ಟೆಕ್ ಪ್ರಿಯರಂತು ಫುಲ್ ಫಿದಾ ಆಗಿದ್ದಾರೆ. ಈ ಸರಣಿ ಅಡಿಯಲ್ಲಿ ಒಟ್ಟು ಎರಡು ಫೋನ್ಗಳು ದೇಶದಲ್ಲಿ ಅನಾವರಣಗೊಂಡಿದೆ. ಅದು ಒಪ್ಪೋ ರೆನೋ 8, ರೆನೋ 8 ಪ್ರೊ (Oppo Reno 8, Oppo Reno 8 Pro) ಆಗಿದೆ. ಇದರ ಜೊತೆಗೆ ಒಪ್ಪೋ ಪ್ಯಾಡ್ ಏರ್ (Oppo Pad Air) ಮತ್ತು ಒಪ್ಪೋ ಎನ್ಕೋ X2 ಟ್ರೂಲಿ ವಾಯರ್‌ಲೆಸ್ಟ್ ಸ್ಟಿರಿಯೊ ಇಯರ್‌ಫೋನ್‌ಗಳು ಬಿಡುಗಡೆ ಆಗಿದೆ. ಹಾಗಾದ್ರೆ ಈ ಫೋನಿನ ಬೆಲೆ ಎಷ್ಟು?, ಏನೆಲ್ಲ ವಿಶೇಷತೆಗಳಿವೆ?, ಯಾವಾಗ ಖರೀದಿಗೆ ಲಭ್ಯ? ಎಂಬ ವಿಚಾರವನ್ನು ನೋಡೋಣ.
ಒಪ್ಪೋ ರೆನೋ 8:
ಇನ್ನು ಒಪ್ಪೋ ರೆನೋ 8 ಸ್ಮಾರ್ಟ್‌ಫೋನ್ 6.43 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1,080×2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಅನ್ನು ಒಳಗೊಂಡಿದೆ. ಆಕ್ಟಾ–ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 1300 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 12 ಕಲರ್ ಒಎಸ್ 12.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.
ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾ ಮತ್ತು ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಕ್ಯಾಮೆರಾವನ್ನು ಒಳಗೊಂಡಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ.
ಒಪ್ಪೋ ರೆನೋ 8 ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 80W ಸೂಪರ್ ಫ್ಲ್ಯಾಶ್ ಚಾರ್ಜ್ ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.3, GPS/ A-GPS, NFC, ಮತ್ತು USB ಟೈಪ್-C ಪೋರ್ಟ್ ಬೆಂಬಲಿಸಲಿದೆ. ಇದರಲ್ಲಿ ಕೂಡ ಫಿಂಗರ್ಪ್ರಿಂಟ್ ಅನ್ನು ಡಿಸ್‌ಪ್ಲೇಯಲ್ಲೇ ನೀಡಲಾಗಿದೆ. ಇನ್ನು ಒಪ್ಪೋ ರೆನೋ 8 ಸ್ಮಾರ್ಟ್‌ಫೋನ್ ಆರಂಭಿಕ ಬೆಲೆ 8GB RAM + 128GB ಸ್ಟೋರೇಜ್ ಆಯ್ಕೆಗೆ 29,999ರೂ. ಆಗಿದೆ.
ಒಪ್ಪೋ ರೆನೋ 8 ಪ್ರೊ:
ಒಪ್ಪೋ ರೆನೋ 8 ಪ್ರೊ ಸ್ಮಾರ್ಟ್‌ಫೋನ್ 6.7 ಇಂಚಿನ ಫುಲ್ ಹೆಚ್‌ಡಿ+ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,080×2,412 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇದಲ್ಲದೆ ಈ ಡಿಸ್‌ಪ್ಲೇ HDR10+ ಬೆಂಬಲ, SGS ಲೋ ಮೋಷನ್ ಬ್ಲರ್, SGS ಲೋ ಬ್ಲೂ ಲೈಟ್, ಅಮೆಜಾನ್ HDR ಪ್ರಮಾಣೀಕರಣ ಮತ್ತು ನೆಟ್‌ಫ್ಲಿಕ್ಸ್ HD ಪ್ರಮಾಣೀಕರಣವನ್ನು ಹೊಂದಿದೆ.
ಆಕ್ಟಾ–ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 8100-ಮ್ಯಾಕ್ಸ್ SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 12 ಆಧಾರಿತ ಕಲರ್‌ಒಎಸ್ 12.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದರ ಪ್ರಮುಖ ಹೈಲೇಟ್ ಕ್ಯಾಮೆರಾ ಆಗಿದ್ದು, ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX766 ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌ನಲ್ಲಿದೆ. ಇದರಲ್ಲಿ ಮೂರನೇ ಕ್ಯಾಮೆರಾ ಕೂಡ ನೀಡಲಾಗಿದ್ದು ಇದು 2 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾ ಆಗಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.
ಒಪ್ಪೋ ರೆನೋ 8 ಪ್ರೊ ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 80W ಸೂಪರ್ ಫ್ಲ್ಯಾಶ್ ಚಾರ್ಜ್ ವೇಗದ ಚಾರ್ಜಿಂಗ್ ಬೆಂಬಲಿಸುತ್ತದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.3, GPS/ A-GPS, NFC, ಮತ್ತು USB ಟೈಪ್-C ಪೋರ್ಟ್ ಸೇರಿವೆ. ಇದರಲ್ಲಿ ಫಿಂಗರ್ಪ್ರಿಂಟ್ ಅನ್ನು ಡಿಸ್‌ಪ್ಲೇಯಲ್ಲೇ ನೀಡಲಾಗಿದೆ. ಭಾರತದಲ್ಲಿ ಒಪ್ಪೋ ರೆನೋ 8 ಪ್ರೊ ಸ್ಮಾರ್ಟ್‌ಫೋನ್ ಬೆಲೆ 12GB RAM + 256GB ಸ್ಟೋರೇಜ್ ರೂಪಾಂತರದ ಆಯ್ಕೆಗೆ 45,999ರೂ. ಆಗಿದೆ.
ಲಾಂಚ್ ಆಫರ್‌ನಲ್ಲಿ ಗ್ರಾಹಕರು ICICI ಬ್ಯಾಂಕ್, SBI ಕಾರ್ಡ್‌ಗಳು, ಕೋಟಕ್ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ ಕ್ರೆಡಿಟ್ ಕಾರ್ಡ್‌ಗಳು ಮತ್ತು ಡೆಬಿಟ್ ಕಾರ್ಡ್ ವಹಿವಾಟುಗಳ ಮೂಲಕ 10% ಕ್ಯಾಶ್‌ಬ್ಯಾಕ್ ಅನ್ನು ಪಡೆದುಕೊಳ್ಳಬಹುದು. ಈ ಎರಡು ಸ್ಮಾರ್ಟ್‌ಫೋನ್‌ಗಳು ಕ್ರಮವಾಗಿ ಜುಲೈ 25 ಮತ್ತು ಜುಲೈ 19 ರಿಂದ ಫ್ಲಿಪ್‌ಕಾರ್ಟ್, ಒಪ್ಪೋ ಸ್ಟೋರ್ ಮತ್ತು ಮುಖ್ಯ ರಿಟೇಲ್ ಔಟ್‌ಲೆಟ್‌ಗಳ ಮೂಲಕ ಖರೀದಿಸಬಹುದು.
Published On - 8:44 am, Tue, 19 July 22