Oppo Reno 8T 5G: ಇಂದಿನಿಂದ 108MP ಕ್ಯಾಮೆರಾದ ಒಪ್ಪೋ ರೆನೋ 8T 5G ಸ್ಮಾರ್ಟ್‌ಫೋನ್ ಮಾರಾಟ ಆರಂಭ: ಬೆಲೆ ಎಷ್ಟು?
ಒಪ್ಪೋ ರೆನೋ 8ಟಿ 5ಜಿ (Oppo Reno 8T 5G) ಸ್ಮಾರ್ಟ್ಫೋನ್ನಲ್ಲಿ ಬೆರಗುಗೊಳಿಸುವ 108 ಮೆಗಾಫಿಕ್ಸೆಲ್ನ ಆಕರ್ಷಕ ಕ್ಯಾಮೆರಾ ನೀಡಲಾಗಿದ್ದು ಟೆಕ್ ಪ್ರಿಯರಂತು ಫುಲ್ ಫಿದಾ ಆಗಿದ್ದಾರೆ. ಇದೀಗ ಈ ಫೋನ್ ಇಂದಿನಿಂದ ಖರೀದಿಗೆ ಸಿಗುತ್ತಿದೆ.
ಕಳೆದ ವರ್ಷ ಬಿಡುಗಡೆ ಆದ ಒಪ್ಪೋ ರೆನೊ 8 ಸರಣಿಯ (Oppo Reno 8 Series) ಸ್ಮಾರ್ಟ್ಫೋನ್ಗಳು ಭಾರತದಲ್ಲಿ ಈಗಲೂ ಧೂಳೆಬ್ಬಿಸುತ್ತಿದೆ. ಈ ಸರಣಿಯಡಿಯಲ್ಲಿ ಒಪ್ಪೋ ರೆನೋ 8 ಮತ್ತು ರೆನೋ 8 ಪ್ರೊ (Oppo Reno 8, Oppo Reno 8 Pro) ಲಾಂಚ್ ಆಗಿದ್ದವು. ಬಳಿಕ ಕಳೆದ ವಾರ ಒಪ್ಪೋ ಕಂಪನಿ ದೇಶದಲ್ಲಿ ಇದೇ ಸರಣಿಯ ಮುಂದುವರೆಗ ಭಾಗವಾಗಿ ಒಪ್ಪೋ ರೆನೋ 8ಟಿ 5ಜಿ (Oppo Reno 8T 5G) ಫೋನನ್ನು ಅಂತಿಮವಾಗಿ ರಿಲೀಸ್ ಮಾಡಿತ್ತು. ಇದರಲ್ಲಿ ಬೆರಗುಗೊಳಿಸುವ 108 ಮೆಗಾಫಿಕ್ಸೆಲ್ನ ಆಕರ್ಷಕ ಕ್ಯಾಮೆರಾ ನೀಡಲಾಗಿದ್ದು ಟೆಕ್ ಪ್ರಿಯರಂತು ಫುಲ್ ಫಿದಾ ಆಗಿದ್ದಾರೆ. ಇದೀಗ ಈ ಫೋನ್ ಇಂದಿನಿಂದ ಖರೀದಿಗೆ ಸಿಗುತ್ತಿದೆ. ಹಾಗಾದ್ರೆ ಈ ಫೋನಿನ ಬೆಲೆ ಎಷ್ಟು?, ಏನೆಲ್ಲ ವಿಶೇಷತೆಗಳಿವೆ? ಎಂಬ ವಿಚಾರವನ್ನು ನೋಡೋಣ.
ಬೆಲೆ ಎಷ್ಟು?:
ಒಪ್ಪೋ ರೆನೋ 8T 5G ಸ್ಮಾರ್ಟ್‌ಫೋನ್ ಭಾರತದಲ್ಲಿ ಒಂದು ಮಾದರಿಯಲ್ಲಷ್ಟೆ ಬಿಡುಗಡೆ ಆಗಿದೆ. ಇದರ 8GB RAM ಮತ್ತು 128GB ಸ್ಟೋರೇಜ್ ರೂಪಾಂತರಕ್ಕೆ 29,999ರೂ. ನಿಗದಿ ಮಾಡಲಾಗಿದೆ. ಈ ಫೋನ್ ಇಂದಿನಿಂದ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್‌ಕಾರ್ಟ್, ಒಪ್ಪೋ ಸ್ಟೋರ್ ಮತ್ತು ಇತರ ರಿಟೇಲ್ ಸ್ಟೋರ್‌ಗಳ ಮೂಲಕ ಸೇಲ್ ಕಾಣಲಿದೆ. ಮೊದಲ ಸೇಲ್ ಪ್ರಯುಕ್ತ ಆಫರ್ ನೀಡಲಾಗಿದ್ದು ಕೋಟಕ್ ಬ್ಯಾಂಕ್, ಎಚ್‌ಡಿಎಫ್‌ಸಿ, ಯೆಸ್ ಬ್ಯಾಂಕ್ ಮತ್ತು ಎಸ್‌ಬಿಐ ಕಾರ್ಡ್‌ಗಳ ಮೂಲಕ ಖರೀದಿಸುವ ಗ್ರಾಹಕರು ಶೇ. 10 ರಷ್ಟು ತ್ವರಿತ ರಿಯಾಯಿತಿಯನ್ನು ಪಡೆದುಕೊಳ್ಳಬಹುದು.
Server Down: ಏಕಕಾಲದಲ್ಲಿ ಫೇಸ್ಬುಕ್, ಯೂಟ್ಯೂಬ್, ಟ್ವಿಟ್ಟರ್, ಇನ್ಸ್ಟಾಗ್ರಾಮ್ ಡೌನ್
ಏನು ಫೀಚರ್ಸ್:
ಒಪ್ಪೋ ರೆನೋ 8T 5G ಸ್ಮಾರ್ಟ್‌ಫೋನ್ 6.7 ಇಂಚಿನ ಮೈಕ್ರೋ-ಕರ್ವ್ಡ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. 120Hz ರಿಫ್ರೆಶ್ ರೇಟ್ನಿಂದ ಕೂಡಿದ್ದು ಡ್ರ್ಯಾಗನ್‌ಟ್ರೈಲ್-ಸ್ಟಾರ್2 ಪ್ರೊಟೆಕ್ಷನ್ ಕೂಡ ನೀಡಲಾಗಿದೆ. ಬಲಿಷ್ಠವಾದ ಕ್ವಾಲ್‌ಕಾಮ್ ಸ್ನಾಪ್‌ಡ್ರಾಗನ್ 695 5G SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ಆಧಾರಿತ ColorOS 13 ನಲ್ಲಿ ಕಾರ್ಯನಿರ್ವಹಿಸಲಿದೆ.
ಈ ಫೋನಿನ ಮುಖ್ಯ ಹೈಲೇಟ್ ಕ್ಯಾಮೆರಾ ಆಗಿದ್ದು, ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್ನಲ್ಲಿದೆ. ಇದು ಫೋಟೋಗ್ರಫಿಗೆ ಅತ್ಯುತ್ತಮವಾಗಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ. ಈ ಕ್ಯಾಮೆರಾದಲ್ಲಿ HDR, ಬೊಕೆ ಫ್ಲೇರ್ ಪೋರ್ಟ್ರೇಟ್ ಮತ್ತು ಡ್ಯುಯಲ್-ವ್ಯೂ ವಿಡಿಯೋದಂತಹ ಫೀಚರ್ಸ್‌ಗಳನ್ನು ನೀಡಲಾಗಿದೆ.
ಒಪ್ಪೋ ರೆನೋ 8T 5G ಸ್ಮಾರ್ಟ್‌ಫೋನ್ 4,800mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದಕ್ಕೆ ತಕ್ಕಂತೆ 67W ಸೂಪರ್‌ವೂಕ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಕಂಪನಿ ಹೇಳುವ ಪ್ರಕಾರ ಈ ಫೋನ್ ಅನ್ನು ನೀವು ಕೇವಲ 45 ನಿಮಿಷಗಳಲ್ಲಿ 0 ರಿಂದ 100% ಬ್ಯಾಟರಿ ಚಾರ್ಜ್ ಮಾಡಬಹುದಾಗಿದಂತೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5ಜಿ ಬೆಂಬಕ ಪಡೆದುಕೊಂಡಿದೆ. ಉಳಿದಂತೆ ವೈ-ಫೈ 5 ಮತ್ತು ಬ್ಲೂಟೂತ್ 5.1 ವಾಯರ್‌ಲೆಸ್ ಸಂಪರ್ಕವನ್ನು ಪಡೆದುಕೊಂಡಿದೆ.
ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ