POCO C51: ಇಂದಿನಿಂದ ಪೋಕೋ C51 ಸ್ಮಾರ್ಟ್​ಫೋನ್ ಮಾರಾಟ ಆರಂಭ: ಕೇವಲ 7,999 ರೂ. ಗೆ ಖರೀದಿಸಿ

ಕಳೆದ ವಾರ ಭಾರತೀಯ ಮಾರುಕಟ್ಟೆಯಲ್ಲಿ ಪೋಕೋ ಸಿ51 (POCO C51) ಫೋನನ್ನು ರಿಲೀಸ್ ಆಗಿತ್ತು. ಇದೊಂದು ಬಜೆಟ್ ಬೆಲೆಯ ಫೋನಾಗಿದ್ದರೂ ಆಕರ್ಷಕ ಫೀಚರ್​ಗಳ ಮೂಲಕ ಗ್ರಾಹಕರ ಗಮನ ಸೆಳೆಯುತ್ತಿದೆ. ಈ ಫೋನ್ ಇಂದಿನಿಂದ ಖರೀದಿಗೆ ಸಿಗುತ್ತಿದೆ.

POCO C51: ಇಂದಿನಿಂದ ಪೋಕೋ C51 ಸ್ಮಾರ್ಟ್​ಫೋನ್ ಮಾರಾಟ ಆರಂಭ: ಕೇವಲ 7,999 ರೂ. ಗೆ ಖರೀದಿಸಿ
Poco C51
Follow us
|

Updated on: Apr 10, 2023 | 6:55 AM

ಪೋಕೋ (Poco) ಸಂಸ್ಥೆ 2023 ರ ಕಳೆದ ಮೂರೂವರೆ ತಿಂಗಳಲ್ಲಿ ಬಿಡುಗಡೆ ಮಾಡಿರುವುದು ಅತಿ ಕಡಿಮೆ ಮೊಬೈಲ್​ಗಳನ್ನು. ಅಪರೂಪಕ್ಕೆ ಒಂದೊಂದು ಸ್ಮಾರ್ಟ್​ಫೋನ್​ಗಳನ್ನಷ್ಟೆ ಅನಾವರಣ ಮಾಡುತ್ತಿದೆಯಷ್ಟೆ. ಹೀಗಿರುವಾಗ ಕಳೆದ ವಾರ ಪೋಕೋ ಭಾರತೀಯ ಮಾರುಕಟ್ಟೆಯಲ್ಲಿ ದಿಢೀರ್ ಆಗಿ ಹೊಸ ಪೋಕೋ ಸಿ51 (POCO C51) ಫೋನನ್ನು ರಿಲೀಸ್ ಮಾಡಿತ್ತು. ಇದೊಂದು ಬಜೆಟ್ ಬೆಲೆಯ ಫೋನಾಗಿದ್ದರೂ ಆಕರ್ಷಕ ಫೀಚರ್​ಗಳ ಮೂಲಕ ಗ್ರಾಹಕರ ಗಮನ ಸೆಳೆಯುತ್ತಿದೆ. ಈ ಫೋನ್ ಇಂದಿನಿಂದ ಖರೀದಿಗೆ ಸಿಗುತ್ತಿದೆ. ಹಾಗಾದ್ರೆ ಪೋಕೋ C51 ಫೋನಿನ ಬೆಲೆ ಎಷ್ಟು?, ಏನೆಲ್ಲ ವಿಶೇಷತೆ ಇದೆ?, ಆಫರ್ ಏನಿದೆ? ಎಂಬುದನ್ನು ನೋಡೋಣ.

ಬೆಲೆ ಎಷ್ಟು?:

ಪೋಕೋ C51 ಸ್ಮಾರ್ಟ್​ಫೋನ್ ಭಾರತದಲ್ಲಿ ಒಂದು ಸ್ಟೋರೇಜ್ ಆಯ್ಕೆಯಲ್ಲಷ್ಟೆ ಅನಾವರಣಗೊಂಡಿದೆ. ಇದರ 4GB RAM + 64GB ಸ್ಟೋರೇಜ್ ಸಾಮರ್ಥ್ಯಕ್ಕೆ ಕೇವಲ 8,499 ರೂ. ನಿಗದಿ ಮಾಡಲಾಗಿದೆ. ಈ ಫೋನ್ ರಾಯಲ್ ಬ್ಲೂ ಮತ್ತು ಪವರ್ ಬ್ಲಾಕ್ ಬಣ್ಣಗಳಲ್ಲಿ ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ. ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್ ಮೂಲಕ ಇಂದಿನಿಂದ ಖರೀದಿಗೆ ಲಭ್ಯವಿದೆ. ಮೊದಲ ಸೇಲ್ ಪ್ರಯುಕ್ತ ಆಫರ್ ಘೋಷಣೆ ಮಾಡಲಾಗಿದ್ದು 7,999 ರೂ. ಗೆ ನಿಮ್ಮದಾಗಿಸಬಹುದು. ಜೊತೆಗೆ ಫ್ಲಿಪ್​ಕಾರ್ಟ್ ಆ್ಯಕ್ಸಿಸ್ ಬ್ಯಾಂಕ್ ಕಾರ್ಡ್ ಮೂಲಕ ಖರೀದಿಸಿದರೆ ಶೇ. 5 ರಷ್ಟು ಡಿಸ್ಕೌಂಟ್ ಸಿಗಲಿದೆ.

ಇದನ್ನೂ ಓದಿ
Image
Vivo T2 5G: ಭಾರತದಲ್ಲಿ ರಿಲೀಸ್​ಗೆ ರೆಡಿಯಾದ ವಿವೋ ಕಂಪನಿಯ ಎರಡು 5G ಸ್ಮಾರ್ಟ್​ಫೋನ್ಸ್​: ಯಾವುದು?, ಬೆಲೆ ಎಷ್ಟು?
Image
Flipkart Mobile Bonanza Sale: ಫ್ಲಿಪ್​ಕಾರ್ಟ್​ನಲ್ಲಿ ಮೊಬೈಲ್ಸ್ ಬೊನಾನ್ಜಾ ಸೇಲ್: ಈ ಸ್ಮಾರ್ಟ್​ಫೋನ್ಸ್​ಗೆ ಬಂಪರ್ ಡಿಸ್ಕೌಂಟ್
Image
Moto G Power 5G: ಗ್ಯಾಜೆಟ್ ಮಾರುಕಟ್ಟೆಗೆ ಮೋಟೊರೊಲಾ ಪ್ರೀಮಿಯಂ ಸ್ಮಾರ್ಟ್​ಫೋನ್
Image
Tecno Spark 10C: ಕಡಿಮೆ ದರಕ್ಕೆ ವೈವಿಧ್ಯಮಯ ಫೀಚರ್ಸ್ ನೀಡುವ ಟೆಕ್ನೋ ಫೋನ್

WhatsApp New Feature: ಫೇಸ್​ಬುಕ್ ಪ್ರಿಯರು ಫುಲ್ ಖುಷ್: ವಾಟ್ಸ್​ಆ್ಯಪ್​ನಲ್ಲಿ ಬರುತ್ತಿದೆ ಅಚ್ಚರಿಯ ಫೀಚರ್

ಏನು ಫೀಚರ್ಸ್?:

ಈ ಸ್ಮಾರ್ಟ್​ಫೋನ್ 720*1600 ಪಿಕ್ಸೆಲ್ಸ್ ರೆಸಲೂಷನ್ ಸಾಮರ್ಥ್ಯದ 6.52 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ ಪ್ಲೇ ಹೊಂದಿದೆ. ಇದು 120Hz ರಿಫ್ರೆಶ್ ರೇಟ್ ಅನ್ನು ಒಳಗೊಂಡಿದೆ. ಈ ಫೋನಿನ ಡಿಸೈನ್ ಅದ್ಭುತವಾಗಿದ್ದು ಗ್ರಾಹಕರು ಫಿದಾ ಆಗುವುದು ಗ್ಯಾರೆಂಟಿ. ಅಂತೆಯೆ ಮೀಡಿಯಾಟೆಕ್ ಹೀಲಿಯೊ G36 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು ಆಂಡ್ರಾಯ್ಡ್‌ 13 ಕಾರ್ಯನಿರ್ವಹಿಸಲಿದೆ. ಮೈಕ್ರೋ ಎಸ್‌ಡಿ ಕಾರ್ಡ್‌ ಮೂಲಕವೂ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದು.

ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ ಪೋಕೋ C55 ಸ್ಮಾರ್ಟ್​ಫೋನ್ ಡ್ಯುಯೆಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಪ್ರೈಮರಿ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ. ಈ ಕ್ಯಾಮೆರಾ ಕೆಲವು ಬೇಸಿಕ್ ಫೀಚರ್​ಗಳನ್ನು ಒಳಗೊಂಡಿದೆ.

ಈ ಸ್ಮಾರ್ಟ್‌ಫೋನ್‌ ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 10W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಬಹುದು. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G ಬೆಂಬಲ ಪಡೆದುಕೊಂಡಿಲ್ಲ. 4G LTE, Wi-Fi, ಬ್ಲೂಟೂತ್, GPS/ A-GPS, USB ಟೈಪ್-C, 3.55mm ಆಡಿಯೋ ಜ್ಯಾಕ್ ಮತ್ತು ಫಿಂಗರ್​ಪ್ರಿಂಟ್ ಸ್ಕ್ಯಾನರ್ ಇದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ