POCO C55: ಕೇವಲ 9,499 ರೂ. ಗೆ ಹೊಸ ಸ್ಮಾರ್ಟ್‌ಫೋನ್ ರಿಲೀಸ್ ಮಾಡಿದ ಪೋಕೋ: ಖರೀದಿಗೆ ಕ್ಯೂ ಗ್ಯಾರಂಟಿ
ಸಮಯ ತೆಗೆದುಕೊಂಡು ಅಪರೂಪಕ್ಕೆ ಸ್ಮಾರ್ಟ್ಫೋನ್ಗಳನ್ನು ಪರಿಚಯಿಸುತ್ತಿರುವ ಪೋಕೋ ಇದೀಗ ದೇಶೀಯ ಮಾರುಕಟ್ಟೆಯಲ್ಲಿ ಹೊಸ ಪೋಕೋ ಸಿ55 (POCO C55) ಫೋನನ್ನು ರಿಲೀಸ್ ಮಾಡಿದೆ.
ಭಾರತದಲ್ಲಿ ಬಜೆಟ್ ಬೆಲೆಯ ಫೋನ್ಗಳ (Budget Phone) ಬಿಡುಗಡೆ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸ್ಯಾಮ್ಸಂಗ್, ರಿಯಲ್ ಮಿ, ಶವೋಮಿ (Xiaomi) ಸಂಸ್ಥೆ ಈ ಸಾಲಿನಲ್ಲಿ ಮುಂದಿದೆ. ಇದೀಗ ಪೋಕೋ ಸಂಸ್ಥೆ ಕೂಡ ಭಾರತೀಯ ಮಾರುಕಟ್ಟೆಗೆ ಕಡಿಮೆ ಬೆಲೆಯ ಆಕರ್ಷಕ ಮೊಬೈಲ್ ಅನ್ನು ಅನಾವರಣ ಮಾಡಿದೆ. ಸಮಯ ತೆಗೆದುಕೊಂಡು ಅಪರೂಪಕ್ಕೆ ಸ್ಮಾರ್ಟ್ಫೋನ್ಗಳನ್ನು ಪರಿಚಯಿಸುತ್ತಿರುವ ಪೋಕೋ ಇದೀಗ ದೇಶೀಯ ಮಾರುಕಟ್ಟೆಯಲ್ಲಿ ಹೊಸ ಪೋಕೋ ಸಿ55 (POCO C55) ಫೋನನ್ನು ರಿಲೀಸ್ ಮಾಡಿದೆ. ಇದೊಂದು ಬಜೆಟ್ ಬೆಲೆಯ ಫೋನಾಗಿದ್ದರೂ ಆಕರ್ಷಕ ಫೀಚರ್ಗಳ ಮೂಲಕ ಗ್ರಾಹಕರ ಗಮನ ಸೆಳೆಯುತ್ತಿದೆ. ಹಾಗಾದ್ರೆ ಪೋಕೋ C55 ಫೋನಿನ ಬೆಲೆ ಎಷ್ಟು?, ಏನೆಲ್ಲ ವಿಶೇಷತೆ ಇದೆ? ಎಂಬುದನ್ನು ನೋಡೋಣ.
ಬೆಲೆ ಎಷ್ಟು?:
ಪೋಕೋ C55 ಸ್ಮಾರ್ಟ್‌ಫೋನ್ ಭಾರತದಲ್ಲಿ ಎರಡು ಸ್ಟೋರೇಜ್ ಆಯ್ಕೆಯಲ್ಲಿ ಅನಾವರಣಗೊಂಡಿದೆ. ಇದರ 4GB RAM + 64GB ಸ್ಟೋರೇಜ್ ಸಾಮರ್ಥ್ಯಕ್ಕೆ ಕೇವಲ 9,499 ರೂ. ನಿಗದಿ ಮಾಡಲಾಗಿದೆ. ಅಂತೆಯೆ 6GB RAM + 128GB ಸ್ಟೋರೇಜ್ ಆಯ್ಕೆಗೆ 10,999 ರೂ. ಇದೆ. ಈ ಫೋನ್ ನೀಲಿ, ಹಸಿರು ಮತ್ತು ಕಪ್ಪು ಬಣ್ಣಗಳಲ್ಲಿ ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ. ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್ಕಾರ್ಟ್ ಮೂಲಕ ಫೆಬ್ರವರಿ 28 ರಿಂದ ಖರೀದಿಗೆ ಲಭ್ಯವಿದೆ. ಮೊದಲ ಸೇಲ್ ದಿನ 1,000 ರೂ. ಗಳ ಡಿಸ್ಕೌಂಟ್ ಸಿಗಲಿದೆ.
Pick your #POCOC55 @ an introductory price of ₹8,499* on 28th Feb @ 12 Noon on @Flipkart.
Ready to experience #SwagAndSpeed? pic.twitter.com/dC8mrWSqGL
— POCO India (@IndiaPOCO) February 21, 2023
Tech Tips: 68GB, 128GB ಸ್ಟೊರೇಜ್ ಸಾಮರ್ಥ್ಯವೂ ಸಾಕಾಗ್ತಿಲ್ವಾ?: ಈ ಟ್ರಿಕ್ ಫಾಲೋ ಮಾಡಿ ಮೆಮೋರಿ ಹೆಚ್ಚಿಸಿ
ಏನು ಫೀಚರ್ಸ್?:
ಈ ಸ್ಮಾರ್ಟ್‌ಫೋನ್ 720*1650 ಪಿಕ್ಸೆಲ್ಸ್ ರೆಸಲೂಷನ್ ಸಾಮರ್ಥ್ಯದ 6.71 ಇಂಚಿನ ಹೆಚ್‌ಡಿ ಪ್ಲಸ್ ರೆಸಲೂಷನ್ನ ಎಲ್ಸಿಡಿ ಡಿಸ್ ಪ್ಲೇ ಹೊಂದಿದೆ. ಇದು 60Hz ರಿಫ್ರೆಶ್ ರೇಟ್ ಅನ್ನು ಹೊಂದಿದೆ. ಈ ಫೋನಿನ ಡಿಸೈನ್ ಅದ್ಭುತವಾಗಿದ್ದು ಗ್ರಾಹಕರು ಫಿದಾ ಆಗುವುದು ಗ್ಯಾರೆಂಟಿ. ಅಂತೆಯೆ ಮೀಡಿಯಾಟೆಕ್ ಹೀಲಿಯೊ G85 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು ಆಂಡ್ರಾಯ್ಡ್ 12 ನ MIUI 13 ನಲ್ಲಿ ಕಾರ್ಯನಿರ್ವಹಿಸಲಿದೆ. ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕವೂ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದು.
ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ ಪೋಕೋ C55 ಸ್ಮಾರ್ಟ್‌ಫೋನ್ ಡ್ಯುಯೆಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ f/1.8 ಅಪಾರ್ಚರ್ ಲೆನ್ಸ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ. ಈ ಕ್ಯಾಮೆರಾ ಪೊರ್ಟ್ರೈಟ್ ಮೋಡ್, ನೈಡ್ ಮೋಡ್, ಹೆಚ್ಡಿಆರ್ ಸಪೋರ್ಟ್ ಪಡೆದಿದೆ.
ಈ ಸ್ಮಾರ್ಟ್‌ಫೋನ್ ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 10W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಬಹುದು. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G ಬೆಂಬಲ ಪಡೆದುಕೊಂಡಿರುವುದು ಅನುಮಾನ. 4G LTE, Wi-Fi, ಬ್ಲೂಟೂತ್ v5.1, GPS/ A-GPS, ಇನ್‌ಫ್ರಾರೆಡ್ (IR) ಬ್ಲಾಸ್ಟರ್, USB ಟೈಪ್-C, ಮತ್ತು ಫಿಂಗರ್ಪ್ರಿಂಟ್ ಸ್ಕ್ಯಾನರ್ ಇದೆ.
ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ