POCO C55: ಕೇವಲ 9,499 ರೂ. ಗೆ ಹೊಸ ಸ್ಮಾರ್ಟ್​ಫೋನ್ ರಿಲೀಸ್ ಮಾಡಿದ ಪೋಕೋ: ಖರೀದಿಗೆ ಕ್ಯೂ ಗ್ಯಾರಂಟಿ

|

Updated on: Feb 21, 2023 | 1:09 PM

ಸಮಯ ತೆಗೆದುಕೊಂಡು ಅಪರೂಪಕ್ಕೆ ಸ್ಮಾರ್ಟ್​ಫೋನ್​ಗಳನ್ನು ಪರಿಚಯಿಸುತ್ತಿರುವ ಪೋಕೋ ಇದೀಗ ದೇಶೀಯ ಮಾರುಕಟ್ಟೆಯಲ್ಲಿ ಹೊಸ ಪೋಕೋ ಸಿ55 (POCO C55) ಫೋನನ್ನು ರಿಲೀಸ್ ಮಾಡಿದೆ.

POCO C55: ಕೇವಲ 9,499 ರೂ. ಗೆ ಹೊಸ ಸ್ಮಾರ್ಟ್​ಫೋನ್ ರಿಲೀಸ್ ಮಾಡಿದ ಪೋಕೋ: ಖರೀದಿಗೆ ಕ್ಯೂ ಗ್ಯಾರಂಟಿ
POCO C55
Follow us on

ಭಾರತದಲ್ಲಿ ಬಜೆಟ್ ಬೆಲೆಯ ಫೋನ್​ಗಳ (Budget Phone) ಬಿಡುಗಡೆ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸ್ಯಾಮ್​ಸಂಗ್, ರಿಯಲ್ ಮಿ, ಶವೋಮಿ (Xiaomi) ಸಂಸ್ಥೆ ಈ ಸಾಲಿನಲ್ಲಿ ಮುಂದಿದೆ. ಇದೀಗ ಪೋಕೋ ಸಂಸ್ಥೆ ಕೂಡ ಭಾರತೀಯ ಮಾರುಕಟ್ಟೆಗೆ ಕಡಿಮೆ ಬೆಲೆಯ ಆಕರ್ಷಕ ಮೊಬೈಲ್ ಅನ್ನು ಅನಾವರಣ ಮಾಡಿದೆ. ಸಮಯ ತೆಗೆದುಕೊಂಡು ಅಪರೂಪಕ್ಕೆ ಸ್ಮಾರ್ಟ್​ಫೋನ್​ಗಳನ್ನು ಪರಿಚಯಿಸುತ್ತಿರುವ ಪೋಕೋ ಇದೀಗ ದೇಶೀಯ ಮಾರುಕಟ್ಟೆಯಲ್ಲಿ ಹೊಸ ಪೋಕೋ ಸಿ55 (POCO C55) ಫೋನನ್ನು ರಿಲೀಸ್ ಮಾಡಿದೆ. ಇದೊಂದು ಬಜೆಟ್ ಬೆಲೆಯ ಫೋನಾಗಿದ್ದರೂ ಆಕರ್ಷಕ ಫೀಚರ್​ಗಳ ಮೂಲಕ ಗ್ರಾಹಕರ ಗಮನ ಸೆಳೆಯುತ್ತಿದೆ. ಹಾಗಾದ್ರೆ ಪೋಕೋ C55 ಫೋನಿನ ಬೆಲೆ ಎಷ್ಟು?, ಏನೆಲ್ಲ ವಿಶೇಷತೆ ಇದೆ? ಎಂಬುದನ್ನು ನೋಡೋಣ.

ಬೆಲೆ ಎಷ್ಟು?:

ಇದನ್ನೂ ಓದಿ
Google Contacts: ಕಾಂಟಾಕ್ಟ್​ ಸೇವ್ ಮಾಡುವುದು ಮತ್ತಷ್ಟು ಸುಲಭ: ಗೂಗಲ್ ಕಾಂಟಾಕ್ಟ್​ನಿಂದ ಹೊಸ ಫೀಚರ್ ಬಿಡುಗಡೆ
Tech Tips: ಕಿರಿಕಿರಿ ನೀಡುವ ಸ್ಪ್ಯಾಮ್ ಕರೆ​ಗಳನ್ನು ಬ್ಲಾಕ್ ಮಾಡುವುದು ಹೇಗೆ?: ಇಲ್ಲಿದೆ ಟ್ರಿಕ್
Tech Tips: ವಾಟ್ಸ್​ಆ್ಯಪ್​ನಲ್ಲಿ ನೀವು ಆನ್​ಲೈನ್ ಇದ್ದರೂ ಆಫ್​ಲೈನ್ ತೋರಿಸುವಂತೆ ಮಾಡಬೇಕಾ?: ಇಲ್ಲಿದೆ ಟ್ರಿಕ್
POCO C55: ಪೋಕೋ C55 ಬಿಡುಗಡೆಗೆ ಒಂದೇ ದಿನ ಬಾಕಿ: ಇದು ಬಜೆಟ್ ಬೆಲೆಯ ಬಂಪರ್ ಸ್ಮಾರ್ಟ್​ಫೋನ್

ಪೋಕೋ C55 ಸ್ಮಾರ್ಟ್​ಫೋನ್ ಭಾರತದಲ್ಲಿ ಎರಡು ಸ್ಟೋರೇಜ್ ಆಯ್ಕೆಯಲ್ಲಿ ಅನಾವರಣಗೊಂಡಿದೆ. ಇದರ 4GB RAM + 64GB ಸ್ಟೋರೇಜ್ ಸಾಮರ್ಥ್ಯಕ್ಕೆ ಕೇವಲ 9,499 ರೂ. ನಿಗದಿ ಮಾಡಲಾಗಿದೆ. ಅಂತೆಯೆ 6GB RAM + 128GB ಸ್ಟೋರೇಜ್ ಆಯ್ಕೆಗೆ 10,999 ರೂ. ಇದೆ. ಈ ಫೋನ್ ನೀಲಿ, ಹಸಿರು ಮತ್ತು ಕಪ್ಪು ಬಣ್ಣಗಳಲ್ಲಿ ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ. ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್ ಮೂಲಕ ಫೆಬ್ರವರಿ 28 ರಿಂದ ಖರೀದಿಗೆ ಲಭ್ಯವಿದೆ. ಮೊದಲ ಸೇಲ್ ದಿನ 1,000 ರೂ. ಗಳ ಡಿಸ್ಕೌಂಟ್ ಸಿಗಲಿದೆ.

 

Tech Tips: 68GB, 128GB ಸ್ಟೊರೇಜ್ ಸಾಮರ್ಥ್ಯವೂ ಸಾಕಾಗ್ತಿಲ್ವಾ?: ಈ ಟ್ರಿಕ್ ಫಾಲೋ ಮಾಡಿ ಮೆಮೋರಿ ಹೆಚ್ಚಿಸಿ

ಏನು ಫೀಚರ್ಸ್?:

ಈ ಸ್ಮಾರ್ಟ್​ಫೋನ್ 720*1650 ಪಿಕ್ಸೆಲ್ಸ್ ರೆಸಲೂಷನ್ ಸಾಮರ್ಥ್ಯದ 6.71 ಇಂಚಿನ ಹೆಚ್‌ಡಿ ಪ್ಲಸ್‌ ರೆಸಲೂಷನ್​ನ ಎಲ್​ಸಿಡಿ ಡಿಸ್‌ ಪ್ಲೇ ಹೊಂದಿದೆ. ಇದು 60Hz ರಿಫ್ರೆಶ್ ರೇಟ್ ಅನ್ನು ಹೊಂದಿದೆ. ಈ ಫೋನಿನ ಡಿಸೈನ್ ಅದ್ಭುತವಾಗಿದ್ದು ಗ್ರಾಹಕರು ಫಿದಾ ಆಗುವುದು ಗ್ಯಾರೆಂಟಿ. ಅಂತೆಯೆ ಮೀಡಿಯಾಟೆಕ್ ಹೀಲಿಯೊ G85 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು ಆಂಡ್ರಾಯ್ಡ್‌ 12 ನ MIUI 13 ನಲ್ಲಿ ಕಾರ್ಯನಿರ್ವಹಿಸಲಿದೆ. ಮೈಕ್ರೋ ಎಸ್‌ಡಿ ಕಾರ್ಡ್‌ ಮೂಲಕವೂ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದು.

ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ ಪೋಕೋ C55 ಸ್ಮಾರ್ಟ್​ಫೋನ್ ಡ್ಯುಯೆಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ f/1.8 ಅಪಾರ್ಚರ್ ಲೆನ್ಸ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ. ಈ ಕ್ಯಾಮೆರಾ ಪೊರ್ಟ್ರೈಟ್ ಮೋಡ್, ನೈಡ್ ಮೋಡ್, ಹೆಚ್​ಡಿಆರ್ ಸಪೋರ್ಟ್ ಪಡೆದಿದೆ.

ಈ ಸ್ಮಾರ್ಟ್‌ಫೋನ್‌ ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 10W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಬಹುದು. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G ಬೆಂಬಲ ಪಡೆದುಕೊಂಡಿರುವುದು ಅನುಮಾನ. 4G LTE, Wi-Fi, ಬ್ಲೂಟೂತ್ v5.1, GPS/ A-GPS, ಇನ್‌ಫ್ರಾರೆಡ್ (IR) ಬ್ಲಾಸ್ಟರ್, USB ಟೈಪ್-C, ಮತ್ತು ಫಿಂಗರ್​ಪ್ರಿಂಟ್ ಸ್ಕ್ಯಾನರ್ ಇದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ