Poco F5 Pro 5G: ಭಾರತದಲ್ಲಿಂದು ಬಹುನಿರೀಕ್ಷಿತ ಪೋಕೋ F5 ಪ್ರೊ 5G ಸ್ಮಾರ್ಟ್‌ಫೋನ್‌ ಬಿಡುಗಡೆ: ಏನಿದೆ ಫೀಚರ್ಸ್?

|

Updated on: May 09, 2023 | 6:55 AM

ಪೋಕೋ ಸಂಸ್ಥೆಯು ತನ್ನ ಬಹುನಿರೀಕ್ಷಿತ ಪೋಕೋ ಎಫ್5 ಪ್ರೊ 5ಜಿ (Poco F5 Pro 5G) ಫೋನನ್ನು ಇಂದು ಭಾರತೀಯ ಮಾರುಕಟ್ಟೆಯಲ್ಲಿ ರಿಲೀಸ್ ಮಾಡುತ್ತಿದೆ.

Poco F5 Pro 5G: ಭಾರತದಲ್ಲಿಂದು ಬಹುನಿರೀಕ್ಷಿತ ಪೋಕೋ F5 ಪ್ರೊ 5G ಸ್ಮಾರ್ಟ್‌ಫೋನ್‌ ಬಿಡುಗಡೆ: ಏನಿದೆ ಫೀಚರ್ಸ್?
Poco F5 Pro 5G
Follow us on

ಭಾರತದಲ್ಲಿ ಪೋಕೋ (Poco) ಸಂಸ್ಥೆಯ ಸ್ಮಾರ್ಟ್​ಫೋನ್​ಗಳು ಅಪರೂಕ್ಕೆ ಬಿಡುಗಡೆ ಆಗುತ್ತಿದೆ. ಇದೀಗ ಕೆಲ ತಿಂಗಳುಗಳ ಕಾಲ ಕಾದು ಆಕರ್ಷಕವಾದ ಹೊಸ ಸ್ಮಾರ್ಟ್​​ಫೋನೊಂದನ್ನು (Smartphone) ಅನಾವರಣ ಮಾಡಲು ಕಂಪನಿ ಮುಂದಾಗಿದೆ. ಪೋಕೋ ಸಂಸ್ಥೆಯು ತನ್ನ ಬಹುನಿರೀಕ್ಷಿತ ಪೋಕೋ ಎಫ್5 ಪ್ರೊ 5ಜಿ (Poco F5 Pro 5G) ಫೋನನ್ನು ಇಂದು ಭಾರತೀಯ ಮಾರುಕಟ್ಟೆಯಲ್ಲಿ ರಿಲೀಸ್ ಮಾಡುತ್ತಿದೆ. ಆದರೆ, ಪೋಕೋ ಸಂಸ್ಥೆ ಈ ಫೋನಿನ ಫೀಚರ್ಸ್ ಬಗ್ಗೆ ಅಧಿಕೃತವಾಗಿ ಯಾವುದೇ ಮಾಹಿತಿ ಹೊರಹಾಕಿಲ್ಲ. ಮೂಲಗಳ ಪ್ರಕಾರ ಕೆಲ ವಿಚಾರಗಳು ಸೋರಿಕೆಯಾಗಿದೆ.

ಲೀಕ್ ಆಗಿರುವ ಮಾಹಿತಿಯ ಪ್ರಕಾರ, ಪೋಕೋ F5 ಪ್ರೊ 5G ಸ್ಮಾರ್ಟ್‌ಫೋನ್‌ 3200*1400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67 ಇಂಚಿನ ಫುಲ್‌ಹೆಚ್‌ಡಿ ಪ್ಲಸ್‌ ಅಮುಲೋಡ್ ಡಿಸ್‌ಪ್ಲೇಯನ್ನು ಹೊಂದಿರಲಿದೆಯಂತೆ. 120Hz ಅಡಾಪ್ಟಿವ್ ರಿಫ್ರೆಶ್ ರೇಟ್‌, HDR10+ ಬೆಂಬಲ ಪಡೆದುಕೊಂಡಿರುವ ಸಾಧ್ಯತೆ ಇದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8+ Gen 1 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, ಇದು ಆಂಡ್ರಾಯ್ಡ್‌ 13ನಲ್ಲಿ ರನ್‌ ಆಗಲಿದೆ ಎಂದು ಹೇಳಲಾಗಿದೆ.

Motorola Edge 40: ಬೊಂಬಾಟ್ ಕ್ಯಾಮೆರಾ, ಬಲಿಷ್ಠ ಪ್ರೊಸೆಸರ್: ಮಾರುಕಟ್ಟೆಗೆ ಎಂಟ್ರಿಕೊಟ್ಟ ಮೋಟೋ ಎಡ್ಜ್‌ 40 ಸ್ಮಾರ್ಟ್‌ಫೋನ್‌

ಇದನ್ನೂ ಓದಿ
WhatsApp New Feature: ವಾಟ್ಸ್​ಆ್ಯಪ್ ಗ್ರೂಪ್ ಅಡ್ಮಿನ್​ಗಳಿಗೆ ಶುಭ ಸುದ್ದಿ: ನಿಮಗೆ ಸಿಗಲಿದೆ ವಿಶೇಷ ಪವರ್
Google Pixel 7a: ಬಹುನಿರೀಕ್ಷಿತ ಗೂಗಲ್ ಪಿಕ್ಸೆಲ್ 7a ಬಿಡುಗಡೆಗೆ ದಿನಗಣನೆ: ಭಾರತದಲ್ಲಿ ಬೆಲೆ ಎಷ್ಟು ಗೊತ್ತೇ?
Amazon Great Summer Sale: ಅಮೆಜಾನ್ ಗ್ರೇಟ್ ಸಮ್ಮರ್ ಡೇಸ್ ಸೇಲ್: ಇಂದು ಕೊನೇ ದಿನ: ಆಫರ್ ಮಿಸ್ ಮಾಡ್ಬೇಡಿ
Fake App: ಪ್ಲೇ ಸ್ಟೋರ್​ನಲ್ಲಿ 11 ಅಪಾಯಕಾರಿ ಆ್ಯಪ್ ಪತ್ತೆ: ಇನ್​ಸ್ಟಾಲ್ ಮಾಡಿದ್ರೆ ತಕ್ಷಣ ಡಿಲೀಟ್ ಮಾಡಿ

ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿರಲಿದೆ. ಇದರ ಮುಖ್ಯ ಕ್ಯಾಮೆರಾ 64 ಮೆಗಾಫಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇರಲಿದೆ. ಇದು ಅತ್ಯುತ್ತಮ ಫೋಟೋವನ್ನು ಸೆರೆಹಿಡುತ್ತಿದೆ. ಫೋಟೋಗ್ರಫಿಗೆ ಹೇಳಿ ಮಾಡಿಸಿದ್ದಾಗಿದೆ. ಹಾಗೆಯೆ ಎರಡನೇ ಕ್ಯಾಮೆರಾ 8MP ಅಲ್ಟ್ರಾ-ವೈಡ್ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2MP ಮ್ಯಾಕ್ರೋ ಲೆನ್ಸ್‌ ಅನ್ನು ಒಳಗೊಂಡಿರಲಿದೆ. ಇದಲ್ಲದೆ ಮುಂಭಾಗ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ನೀಡಲಾಗಿದೆ.

ದೀರ್ಘ ಸಮಯ ಬಾಳಿಕೆ ಬರುವ 5,160 mAh ಸಾಮರ್ಥ್ಯದ ಬ್ಯಾಟರಿಯನ್ನು ನೀಡಲಾಗಿದ್ದು, ಇದಕ್ಕೆ ತಕ್ಕಂತೆ 67W ವೇಗದ ಚಾರ್ಜಿಂಗ್ ಬೆಂಬಲ ಕೂಡ ಪಡೆದಿರಲಿದೆ ಎನ್ನಲಾಗಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5ಜಿ ಬೆಂಬಲ ಪಡೆದುಕೊಂಡಿದೆ. ಹಾಟ್‌ಸ್ಪಾಟ್‌, ವೈಫೈ, ಬ್ಲೂಟೂತ್‌, ಹೆಡ್‌ಫೋನ್‌ ಜ್ಯಾಕ್‌ ಇರಲಿದೆ. ಅಂಡರ್ ಡಿಸ್ ಪ್ಲೇ ಫಿಂಗರ್​ಪ್ರಿಂಟ್ ಸ್ಕ್ಯಾನರ್ ಅಳವಡಿಸಲಾಗಿದೆ. ಈ ಸ್ಮಾರ್ಟ್‌ಫೋನ್‌ ಬೆಲೆ ಎಷ್ಟಿರಲಿದೆ ಎಂಬುದು ಇನ್ನು ಬಹಿರಂಗವಾಗಿಲ್ಲ. ಮೂಲಗಳ ಪ್ರಕಾರ 25,000 ರೂ. ಇರಬಹುದು.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ