Poco F4: ಪೋಕೋ F4 5G ಸ್ಮಾರ್ಟ್‌ಫೋನ್‌ ಬಿಡುಗಡೆ: ಇದರಲ್ಲಿರುವ ಫೀಚರ್ಸ್​ ಕೇಳಿದ್ರೆ ಶಾಕ್ ಆಗ್ತೀರಾ

ಹೆಚ್ಚಾಗಿ ಬಜೆಟ್ ಬೆಲೆಗೆ ಹೊಸ ಸ್ಮಾರ್ಟ್​ಫೋನ್​ಗಳನ್ನು (Smartphone) ಅನಾವರಣ ಮಾಡುವ ಪೋಕೋ ಇದೀಗ ಮಧ್ಯಮ ಬೆಲೆಗೆ ಪೋಕೋ ಎಫ್4 5ಜಿ (POCO F4 5G) ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ.

Poco F4: ಪೋಕೋ F4 5G ಸ್ಮಾರ್ಟ್‌ಫೋನ್‌ ಬಿಡುಗಡೆ: ಇದರಲ್ಲಿರುವ ಫೀಚರ್ಸ್​ ಕೇಳಿದ್ರೆ ಶಾಕ್ ಆಗ್ತೀರಾ
Poco F4 5G
Follow us
TV9 Web
| Updated By: Vinay Bhat

Updated on:Jun 24, 2022 | 1:29 PM

ಭಾರತದಲ್ಲಿ ವಾರಕ್ಕೆ ಕಡಿಮೆ ಎಂದರು ಮೂರರಿಂದ ನಾಲ್ಕು ಫೋನ್​​ಗಳು ಬಿಡುಗಡೆ ಆಗುತ್ತವೆ. ರಿಯಲ್ ಮಿ, ಒಪ್ಪೋ, ವಿವೋ, ಶವೋಮಿ (Xiaomi) ಕಂಪನಿ ಪ್ರತಿ ತಿಂಗಳು ದೇಶದಲ್ಲಿ ಒಂದಲ್ಲಾ ಒಂದು ಹೊಸ ಸ್ಮಾರ್ಟ್​ಫೋನ್​ಗಳನ್ನು ಪರಿಚಯಿಸುತ್ತವೆ. ಇನ್ನುಳಿದ ಕೆಲವು ಕಂಪನಿಗಳು ಅಪರೂಪಕ್ಕೆ ಆಕರ್ಷಕ ಮೊಬೈಲ್​ಗಳನ್ನು ರಿಲೀಸ್ ಮಾಡಿ ಸದ್ದು ಮಾಡುತ್ತವೆ. ಇದೇ ಸಾಲಿನಲ್ಲಿ ಪೋಕೋ ಸಂಸ್ಥೆ ಕೂಡ ಒಂದು. ಹೆಚ್ಚಾಗಿ ಬಜೆಟ್ ಬೆಲೆಗೆ ಹೊಸ ಸ್ಮಾರ್ಟ್​ಫೋನ್​ಗಳನ್ನು (Smartphone) ಅನಾವರಣ ಮಾಡುವ ಪೋಕೋ ಇದೀಗ ಮಧ್ಯಮ ಬೆಲೆಗೆ ಪೋಕೋ ಎಫ್4 5ಜಿ (POCO F4 5G) ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಸಾಕಷ್ಟು ವಿಶೇಷತೆಗಳಿಂದ ಕೂಡಿರುವ ಈ ಸ್ಮಾರ್ಟ್​​ಫೋನ್ ಅಮೆಜಾನ್‌ ಪ್ರೈಮ್‌ ವೀಡಿಯೊದಲ್ಲಿ HDR10 ಪ್ಲಸ್‌ ಹಾಗೂ ನೆಟ್‌ಫ್ಲಿಕ್ಸ್‌ನಲ್ಲಿ ಡಾಲ್ಬಿ ವಿಷನ್‌ ಅನ್ನು ಬೆಂಬಲಿಸಲಿದೆ. ಬಲಿಷ್ಠ ಬ್ಯಾಟರಿ ಜೊತೆಗೆ ವೇಗದ ಚಾರ್ಜಿಂಗ್ ಬೆಂಬಲ ಕೂಡ ನೀಡಲಾಗಿದೆ. ಈ ಫೋನಿನ ಕುರಿತ ಎಲ್ಲ ಮಾಹಿತಿ ಇಲ್ಲಿದೆ ನೋಡಿ.

  1. ಭಾರತದಲ್ಲಿ ಪೋಕೋ F4 5G ಸ್ಮಾರ್ಟ್‌ಫೋನ್‌ ಮೂರು ಮಾದರಿಯಲ್ಲಿ ಅನಾವರಣಗೊಂಡಿದೆ. ಇದರ 6GB RAM + 128GB ಸ್ಟೋರೇಜ್ ರೂಪಾಂತರದ ಬೆಲೆ 27,999 ರೂ. ಆಗಿದೆ. 8GB + 128GB ಮಾದರಿಗೆ 29,999 ರೂ. ನಿಗದಿ ಮಾಡಲಾಗಿದೆ ಹಾಗೆಯೆ 12GB + 256GB ಆಯ್ಕೆಯ ಬೆಲೆ 33,999 ರೂ. ಇದೆ.
  2. ಈ ಸ್ಮಾರ್ಟ್‌ಫೋನ್‌ ನೆಬ್ಯುಲಾ ಗ್ರೀನ್ ಮತ್ತು ನೈಟ್ ಬ್ಲಾಕ್ ಕಲರ್‌ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಪೋಕೋ F4 5G ಸ್ಮಾರ್ಟ್‌ಫೋನ್‌ ಇದೇ ಜೂನ್ 27 ರಿಂದ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್‌ಕಾರ್ಟ್ ಮೂಲಕ ಮಾರಾಟವಾಗಲಿದೆ.
  3. ಲಾಂಚ್‌ ಆಫರ್‌ನಲ್ಲಿ ನೀವು 1,000ರೂ.ವರೆಗಿನ ರಿಯಾಯಿತಿ ಪಡೆದುಕೊಳ್ಳಬಹುದು. ಅಲ್ಲದೆ ಹೆಚ್ಚುವರಿಯಾಗಿ ಎಸ್‌ಬಿಐ ಬ್ಯಾಂಕ್‌ ಕಾರ್ಡ್‌ ಹೊಂದಿರುವ ಗ್ರಾಹಕರು 3,000ರೂ.ಗಳ ವರೆಗಿನ ರಿಯಾಯಿತಿ ಘೋಷಿಸಲಾಗಿದೆ.
  4. ಪೋಕೋ F4 5G ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ HD+ E4 ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1,080×2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಿಂದ ಕೂಡಿದೆ.
  5. ಇದನ್ನೂ ಓದಿ
    Image
    Google Pixel 6a: ಭಾರತದಲ್ಲಿ ಗೂಗಲ್‌ ಪಿಕ್ಸೆಲ್‌ 6a ಬಿಡುಗಡೆಗೆ ದಿನಾಂಕ ನಿಗದಿ: ಬೆಲೆ ಎಷ್ಟು?
    Image
    Galaxy F13: 6000mAh ಬ್ಯಾಟರಿ, 50MP ಕ್ಯಾಮೆರಾ: ಕೇವಲ 11,499 ರೂ. ಗೆ ಸ್ಯಾಮ್​ಸಂಗ್ ಗ್ಯಾಲಕ್ಸಿ F13 ಬಿಡುಗಡೆ
    Image
    Realme 9 Pro Plus 5G: ರಿಯಲ್ ಮಿ 9 ಪ್ರೋ ಪ್ಲಸ್ ಖರೀದಿಗೆ ಕ್ಯೂ ನಿಂತ ಜನರು: ಕೇವಲ 7,000 ರೂ. ಗೆ ನಿಮ್ಮದಾಗಿಸಿ
    Image
    POCO F4: ಕ್ಯಾಮೆರಾ ಪ್ರಿಯರೇ ಗಮನಿಸಿ: ಜಾಗತೀಕ ಮಾರುಕಟ್ಟೆಯಲ್ಲಿ ಇಂದು ರಿಲೀಸ್ ಆಗಲಿದೆ ಪೋಕೋ F4
  6. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 870 SoC ಪ್ರೊಸೆಸರ್‌ ಅನ್ನು ಹೊಂದಿದೆ. ಆಂಡ್ರಾಯ್ಡ್ 12 ಬೆಂಬಲದೊಂದಿಗೆ MIUI 13 ನಲ್ಲಿ ಕಾರ್ಯನಿರ್ವಹಿಸಲಿದೆ. ಜೊತೆಗೆ ಮಾಲಿ-G610 MC6 GPU ಸಪೋರ್ಟ್‌ ಅನ್ನು ಪಡೆದಿದೆ.
  7. ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದು ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಹೊಂದಿರುವ f/1.8 ಲೆನ್ಸ್‌ನೊಂದಿಗೆ ಬರುತ್ತದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಅನ್ನು ಒಳಗೊಂಡಿದೆ.
  8. ಇದಲ್ಲದೆ 20 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ನಲ್ಲಿರುವ ಕ್ಯಾಮೆರಾಗಳು ನೈಟ್ ಮೋಡ್, AI ಸ್ಕೈಸ್ಕೇಪಿಂಗ್ 4.0 ಮತ್ತು AI ಎರೇಸ್ 2.0 ನಂತಹ ಫೀಚರ್ಸ್‌ಗಳನ್ನು ಒಳಗೊಂಡಿವೆ. ಜೊತೆಗೆ ಎಲ್ಇಡಿ ಫ್ಲ್ಯಾಷ್, ಹೆಚ್‌ಡಿಆರ್, ಪನೋರಮಾ ಫೀಚರ್ಸ್‌ ಕೂಡ ಸೇರಿದೆ.
  9. ಪೊಕೊ F4 5G ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 67W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಈ ಬ್ಯಾಟರಿ ಕೇವಲ 38 ನಿಮಿಷಗಳಲ್ಲಿ 0% to 100% ಚಾರ್ಜ್‌ ಮಾಡಲಿದೆ ಎಂದು ಕಂಪನಿ ಹೇಳಿದೆ.

Budget Laptop: ಕೇವಲ 20,000 ರೂ. ಒಳಗೆ ಸಿಗುತ್ತಿರುವ ಬೆಸ್ಟ್​ ಲ್ಯಾಪ್​ಟಾಪ್​ಗಳು ಇಲ್ಲಿದೆ ನೋಡಿ

Published On - 1:27 pm, Fri, 24 June 22

ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ