ಭಾರತೀಯ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಪೋಕೋ (Poco) ಸಂಸ್ಥೆ ನಿಧಾನವಾಗಿ ತನ್ನ ಸ್ಥಾನವನ್ನು ಭದ್ರ ಪಡಿಸಿಕೊಳ್ಳುತ್ತಿದೆ. ಕಳೆದ ವರ್ಷ ಆಗಮ್ಮೊ ಈಗಮ್ಮೊ ದೇಶದಲ್ಲಿ ಮೊಬೈಲ್ ಅನ್ನು ಬಿಡುಗಡೆ ಮಾಡುತ್ತಿದ್ದ ಪೋಕೋ ಈ ವರ್ಷ ಸಾಲು ಸಾಲಾಗಿ ಕಡಿಮೆ ಬೆಲೆಗೆ ಆಕರ್ಷಕ ಸ್ಮಾರ್ಟ್ಫೋನನ್ನು ಪರಿಚಯಿಸುತ್ತಿದೆ. ಕಳೆದ ತಿಂಗಳು ಭಾರತದಲ್ಲಿ ಪೋಕೋ ಎಮ್4 ಪ್ರೊ 5G (Poco M4 Pro 5G) ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿತ್ತು. ಇದು ದೊಡ್ಡ ಮಟ್ಟದಲ್ಲಿ ಯಶಸ್ವಿಯಾಗಿ, ನಂತರ ಇದೇ ಆವೃತ್ತಿಯಲ್ಲಿ 4G ಫೋನನ್ನು ಕೂಡ ಅನಾವರಣ ಮಾಡಿತ್ತು. ಇದೀಗ ಮುಂದುವರೆ ಭಾಗ ಎಂಬಂತೆ ಭಾರತದಲ್ಲಿ ತನ್ನ ಹೊಸ ಪೋಕೋ ಎಕ್ಸ್4 ಪ್ರೊ 5G (Poco X4 Pro 5G) ಫೋನನ್ನು ರಿಲೀಸ್ ಮಾಡಿದೆ. ಈ ವರ್ಷದ ಆರಂಭದಲ್ಲಿ ನಡೆದಿದ್ದ ಮೊಬೈಲ್ ವರ್ಲ್ಡ್ ಕಾಂಗ್ರೆಸ್ (MWC 2022) ನಲ್ಲಿ ಈ ಫೋನ್ ಬಿಡುಗಡೆಗೊಳಿಸಲಾಗಿತ್ತು. ಇದೀಗ ಅಚ್ಚರಿ ಎಂಬಂತೆ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ ಪ್ರೊಸೆಸರ್, 5,000mAh ಸಾಮರ್ಥ್ಯದ ಬ್ಯಾಟರಿ, ಆಕರ್ಷಕ ಕ್ಯಾಮೆರಾದೊಂದಿಗೆ ಭಾರತದಲ್ಲಿ ಬಿಡುಗಡೆಗೊಂಡಿದೆ.
ಬೆಲೆ ಎಷ್ಟು?:
ಭಾರತದಲ್ಲಿ ಪೋಕೋ X4 ಪ್ರೊ 5G ಸ್ಮಾರ್ಟ್‌ಫೋನ್ ಒಟ್ಟು ಮೂರು ಸ್ಟೋರೆಜ್ ಆಯ್ಕೆಯಲ್ಲಿ ಅನಾವರಣಗೊಂಡಿದೆ. ಇದರ 6GB RAM ಮತ್ತು 64GB ಸ್ಟೋರೇಜ್ ರೂಪಾಂತರದ ಆಯ್ಕೆಗೆ 18,999 ರೂ. ನಿಗದಿ ಮಾಡಲಾಗಿದೆ. 6GB RAM ಮತ್ತು 128GB ಸ್ಟೋರೇಜ್ ರೂಪಾಂತರದ ಬೆಲೆ 19,999 ರೂ. ಹಾಗೆಯೇ 8GB RAM ಮತ್ತು 128GB ಸ್ಟೋರೇಜ್ ರೂಪಾಂತರವು 21,999 ರೂಪಾಯಿಗೆ ಖರೀದಿಗೆ ಸಿಗಲಿದೆ. ಇದು ಫ್ಲಿಪ್‌ಕಾರ್ಟ್ ಮೂಲಕ ಏಪ್ರಿಲ್ 5, 2022 ರಿಂದ ಮಾರಾಟ ಕಾಣಲಿದೆ. ಆ ದಿನ HDFC ಬ್ಯಾಂಕ್ ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್‌ಗಳ ಮೂಲಕ ಖರೀದಿ ಮಾಡಿದರೆ 1,000 ರೂಪಾಯಿ ರಿಯಾಯಿತಿ ದೊರೆಯಲಿದೆ.
ಏನು ವಿಶೇಷತೆ?:
ಪೋಕೋ X4 ಪ್ರೊ 5G ಸ್ಮಾರ್ಟ್‌ಫೋನ್ 2400 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.67 ಇಂಚಿನ ಫುಲ್ HD+ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ನಿಂದ ಕೂಡಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.
ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಕ್ಯಾಮೆರಾ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ನೀಡಲಾಗಿದೆ.
ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 67W ವೇಗದ ಚಾರ್ಜಿಂಗ್‌ಗೆ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G, 5G, ಬ್ಲೂಟೂತ್ 5.1, ವೈಫೈ< ಹಾಟ್‌ಸ್ಪಾಟ್, ಡ್ಯುಯಲ್ ಸ್ಪೀಕರ್, 3.5mm ಹೆಡ್‌ಫೋನ್ ಜ್ಯಾಕ್ ಹಾಗೂ ಹೈ-ರೆಸ್ ಆಡಿಯೋ ಪ್ರಮಾಣೀಕರಣವನ್ನು ಹೊಂದಿದೆ. ಈ ಫೋನ್ ಬಜೆಟ್ ಬೆಲೆಗೆ ಲಭ್ಯವಿರುವ ಕೆಲವೇ ಕೆಲವು 5G ಫೋನ್ಗಳ ಸಾಲಿಗೆ ಸೇರಿದೆ.
WhatsApp: ಇನ್ನುಂದೆ ವಾಟ್ಸ್ಆ್ಯಪ್ನಲ್ಲಿ ಶೇರ್ ಮಾಡಬಹುದು 100MB ಗಿಂತ ಅಧಿಕ ಫೈಲ್: ಇಲ್ಲಿದೆ ಮಾಹಿತಿ
WhatsApp: ತಕ್ಷಣವೇ ಹೀಗೆ ಮಾಡಿ: ಇಲ್ಲಾಂದ್ರೆ ವಾಟ್ಸ್ಆ್ಯಪ್ನಲ್ಲಿ ನೀವು ಏನೆಲ್ಲ ಮಾಡ್ತೀರಿ ಎಲ್ಲ ಲೀಕ್ ಆಗುತ್ತೆ
Published On - 2:53 pm, Mon, 28 March 22