AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Poco M4 Pro 4G: ಭಾರತದಲ್ಲಿ ಪೋಕೋ M4 ಪ್ರೊ ಭರ್ಜರಿ ಸೇಲ್: ಫೆ. 28ಕ್ಕೆ 4G ಸಾಮರ್ಥ್ಯದಲ್ಲಿ ಮತ್ತೊಮ್ಮೆ ರಿಲೀಸ್

ಮೊನ್ನೆಯಷ್ಟೆ ಪೋಕೋ ದೇಶದಲ್ಲಿ ತನ್ನ ಹೊಸ ಪೋಕೋ ಎಮ್​4 ಪ್ರೊ 5G (Poco M4 Pro 5G) ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿ ಸೇಲ್ ಆರಂಭಿಸಿತ್ತು. ದೇಶದಲ್ಲಿ ಇದಕ್ಕೆ ಉತ್ತಮ ಪ್ರತಿಕ್ರಿಯೆ ಕೇಳಿಬಂದಿದೆ. ಇದೀಗ 4G ಸಾಮರ್ಥ್ಯದ ಪೋಕೋ M4 ಪ್ರೊ 4G (Poco M4 Pro 4G) ಸ್ಮಾರ್ಟ್‌ಫೋನ್ ಆಗಮನವನ್ನು ಖಚಿತಪಡಿಸಿದೆ.

Poco M4 Pro 4G: ಭಾರತದಲ್ಲಿ ಪೋಕೋ M4 ಪ್ರೊ ಭರ್ಜರಿ ಸೇಲ್: ಫೆ. 28ಕ್ಕೆ 4G ಸಾಮರ್ಥ್ಯದಲ್ಲಿ ಮತ್ತೊಮ್ಮೆ ರಿಲೀಸ್
Poco M4 Pro 4G
TV9 Web
| Updated By: Vinay Bhat|

Updated on: Feb 24, 2022 | 12:11 PM

Share

ಭಾರತದಲ್ಲಿ ಪೋಕೋ ಸಂಸ್ಥೆ ದೊಡ್ಡ ಮಟ್ಟದ ಮಾರುಕಟ್ಟೆಯನ್ನು ಹೊಂದಿಲ್ಲವಾದರೂ ಆಗಾಗ ಕಡಿಮೆ ಬೆಲೆಗೆ ಅತ್ಯುತ್ತಮ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡುತ್ತವೆ. ಇದೇರೀತಿ ಮೊನ್ನೆಯಷ್ಟೆ ಪೋಕೋ ದೇಶದಲ್ಲಿ ತನ್ನ ಹೊಸ ಪೋಕೋ ಎಮ್​4 ಪ್ರೊ 5G (Poco M4 Pro 5G) ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿ ಸೇಲ್ ಆರಂಭಿಸಿತ್ತು. ದೇಶದಲ್ಲಿ ಇದಕ್ಕೆ ಉತ್ತಮ ಪ್ರತಿಕ್ರಿಯೆ ಕೇಳಿಬಂದಿದೆ. ಕಡಿಮೆ ಬೆಲೆಯ ಈ 5G ಫೋನ್ ಭರ್ಜರಿ ಸೇಲ್ ಆಗುತ್ತಿದೆ. ಹೀಗಿರುವಾಗ ಪೋಕೋ ಸಂಸ್ಥೆ ಇದೀಗ ಮತ್ತೊಂದು ಸಾಹಸಕ್ಕೆ ಕೈ ಹಾಕಿದೆ. ಮೊನ್ನೆಯಷ್ಟೆ 5G ಸಾಮರ್ಥ್ಯದ ಪೋಕೋ M4 ಪ್ರೊ ಸ್ಮಾರ್ಟ್‌ಫೋನನ್ನು (Smartphone) ಬಿಡುಗಡೆ ಮಾಡಿರುವ ಕಂಪನಿಯು ಇದೀಗ 4G ಸಾಮರ್ಥ್ಯದ ಪೋಕೋ M4 ಪ್ರೊ 4G (Poco M4 Pro 4G) ಸ್ಮಾರ್ಟ್‌ಫೋನ್ ಆಗಮನವನ್ನು ಖಚಿತಪಡಿಸಿದೆ. ನೂತನ ಪೋಕೋ M4 ಪ್ರೊ 4G ಸ್ಮಾರ್ಟ್‌ಫೋನನ್ನು ಇದೇ ಫೆಬ್ರವರಿ 28 ರಂದು ಭಾರತದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಕಂಪನಿಯು ತಿಳಿಸಿದೆ.

ಏನು ವಿಶೇಷತೆ?:

ಪೋಕೋ M4 ಪ್ರೊ 4G ಸ್ಮಾರ್ಟ್‌ಫೋನ್‌ 6.4 ಇಂಚಿನ ಫುಲ್‌ HD+ ಡಾಟ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್​ನೊಂದಿಗೆ ಬರಲಿದೆ ಎನ್ನಲಾಗಿದೆ. ಇದು ಮೀಡಿಯಾ ಟೆಕ್ ಹೀಲಿಯೊ G96 CPU ಪ್ರೊಸೆಸರ್‌ ಹೊಂದಿದೆ. ಇದು ಆಂಡ್ರಾಯ್ಡ್‌ 11 ಅನ್ನು ಆಧರಿಸಿದ MIUI 12.5 ನಲ್ಲಿ ಕಾರ್ಯನಿರ್ವಹಿಸುತ್ತದೆ. ಅಲ್ಲದೆ ಮುಂದಿನ ಕೆಲವು ವಾರಗಳಲ್ಲಿ MIUI 13 ಅನ್ನು ಸ್ವೀಕರಿಸುವ ಭರವಸೆ ಇದೆ. ಮೆಮೊರಿ ಕಾರ್ಡ್‌ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ

ಈ ಸ್ಮಾರ್ಟ್‌ಫೋನ್‌ ತ್ರಿಪಲ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ f/1.8 ಲೆನ್ಸ್‌ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಲೆನ್ಸ್‌ ಅನ್ನು ಒಳಗೊಂಡಿದೆ. 2 ಮೆಗಾಫಿಕ್ಸೆಲ್ ಮ್ಯಾಕ್ರೊ ಸೆನ್ಸಾರ್​ನ ಮೂರನೇ ಕ್ಯಾಮೆರಾ ಕೂಡ ಇದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದ್ದು, ಇದು f/2.45 ಲೆನ್ಸ್‌ ಅನ್ನು ಪಡೆದಿದೆ.

ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ಪ್ರೊ ವೇಗದ ಚಾರ್ಜಿಂಗ್ ಬೆಂಬಲಿಸುತ್ತದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi, ಬ್ಲೂಟೂತ್ v5.1, GPS/ A-GPS, ಇನ್ಫ್ರಾರೆಡ್ (IR) ಬ್ಲಾಸ್ಟರ್, USB ಟೈಪ್-C, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಬೆಂಬಲಿಸಲಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಒಳಗೊಂಡಿದೆ. Poco M4 Pro 5G ಫೋನ್ ಬೆಲೆ 15 ಸಾವಿರಗಳಿಂದ ಆರಂಭವಾಗಿರುವುದರಿಂದ ಈ ಪೋನಿನ ಬೆಲೆಯಲ್ಲಿ ಮತ್ತಷ್ಟು ಕಡಿಮೆ ಬೆಲೆಯಲ್ಲಿ ನಿರೀಕ್ಷಿಸಬಹುದು.

Moto Edge 30 Pro: 60MP ಸೆಲ್ಫೀ ಕ್ಯಾಮೆರಾ: ಇಂದು ಬಹುನಿರೀಕ್ಷಿತ ಮೋಟೋ ಎಡ್ಜ್ 30 ಪ್ರೊ ಸ್ಮಾರ್ಟ್‌ಫೋನ್‌ ಬಿಡುಗಡೆ

iQOO 9 Series: ಬಿಡುಗಡೆ ಆದ ದಿನವೇ ಭಾರತದಲ್ಲಿ ಸಖತ್ ಸದ್ದು ಮಾಡುತ್ತಿದೆ ಐಕ್ಯೂ 9 ಸರಣಿ ಸ್ಮಾರ್ಟ್​ಫೋನ್​

ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ