Poco F5 5G: ಭಾರತದಲ್ಲಿ ಬಹುನಿರೀಕ್ಷಿತ ಪೋಕೋ F5 5G ಸ್ಮಾರ್ಟ್​ಫೋನ್ ಬಿಡುಗಡೆ: ಏನು ವಿಶೇಷತೆ?, ಬೆಲೆ ಎಷ್ಟು?

|

Updated on: May 10, 2023 | 12:21 PM

ಪೋಕೋ ಸಂಸ್ಥೆಯು ತನ್ನ ಬಹುನಿರೀಕ್ಷಿತ ಪೋಕೋ ಎಫ್5 5ಜಿ (Poco F5 5G) ಫೋನನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಮಧ್ಯಮ ಬೆಲೆ ಹೊಂದಿರುವ ಈ ಸ್ಮಾರ್ಟ್​ಫೋನ್ ಸಾಕಷ್ಟು ಬಲಿಷ್ಠವಾಗಿದ್ದು, ಆರ್ಷಕ ಕ್ಯಾಮೆರಾ, ಬ್ಯಾಟರಿ, ಪ್ರೊಸೆಸರ್ ನೀಡಲಾಗಿದೆ.

Poco F5 5G: ಭಾರತದಲ್ಲಿ ಬಹುನಿರೀಕ್ಷಿತ ಪೋಕೋ F5 5G ಸ್ಮಾರ್ಟ್​ಫೋನ್ ಬಿಡುಗಡೆ: ಏನು ವಿಶೇಷತೆ?, ಬೆಲೆ ಎಷ್ಟು?
poco f5 5g
Follow us on

ಭಾರತದಲ್ಲಿ ಪೋಕೋ (Poco) ಸಂಸ್ಥೆಯ ಸ್ಮಾರ್ಟ್​ಫೋನ್​ಗಳು ಅಪರೂಪಕ್ಕೆ ಬಿಡುಗಡೆ ಆಗುತ್ತಿದೆ. ಇದೀಗ ಕೆಲ ತಿಂಗಳುಗಳ ಕಾಲ ಕಾದು ಆಕರ್ಷಕವಾದ ಹೊಸ ಸ್ಮಾರ್ಟ್​​ಫೋನೊಂದನ್ನು (Smartphone) ಸಂಸ್ಥೆ ದೇಶದಲ್ಲಿ ಅನಾವರಣ ಮಾಡಿದೆ. ಪೋಕೋ ಸಂಸ್ಥೆಯು ತನ್ನ ಬಹುನಿರೀಕ್ಷಿತ ಪೋಕೋ ಎಫ್5 5ಜಿ (Poco F5 5G) ಫೋನನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಮಧ್ಯಮ ಬೆಲೆ ಹೊಂದಿರುವ ಈ ಸ್ಮಾರ್ಟ್​ಫೋನ್ ಸಾಕಷ್ಟು ಬಲಿಷ್ಠವಾಗಿದ್ದು, ಆರ್ಷಕ ಕ್ಯಾಮೆರಾ, ಬ್ಯಾಟರಿ, ಪ್ರೊಸೆಸರ್ ನೀಡಲಾಗಿದೆ. ಹಾಗಾದರೆ ಪೋಕೋ F5 5G ಯ ಬೆಲೆ ಎಷ್ಟು?, ಫೀಚರ್ಸ್ ಏನಿದೆ?. ಇಲ್ಲಿದೆ ಮಾಹಿತಿ.

ಬೆಲೆ ಎಷ್ಟು?:

ಪೋಕೋ F5 5G ಸ್ಮಾರ್ಟ್​ಫೋನ್ ಭಾರತದಲ್ಲಿ ಎರಡು ರೂಪಾಂತರಗಳಲ್ಲಿ ಬಿಡುಗಡೆ ಮಾಡಲಾಗಿದೆ. ಇದರ 8GB RAM + 256GB ಸ್ಟೋರೇಜ್ ರೂಪಾಂತರಕ್ಕೆ 28,999 ರೂ. ನಿಗದಿ ಮಾಡಲಾಗಿದೆ. ಅಂತೆಯೆ 12GB RAM + 256GB ಸ್ಟೋರೇಜ್ ಆಯ್ಕೆಗೆ 33,999 ರೂ. ಇದೆ. ಈ ಕಾರ್ಬಲ್ ಬ್ಲಾಕ್, ಸ್ನೋ ಸ್ಟಾರ್ಮ್ ವೈಟ್ ಮತ್ತು ಎಲೆಕ್ಟ್ರಿಕ್ ಬ್ಲೂ ಎಂಬ ಮೂರು ಬಣ್ಣದ ಆಯ್ಕೆಗಳಲ್ಲಿ ಲಭ್ಯವಿರುತ್ತದೆ. ಮೇ 16 ರಿಂದ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್ ಮೂಲಕ ಖರೀದಿಗೆ ಸಿಗಲಿದೆ. ಮೊದಲ ಸೇಲ್ ದಿನ ಆಫರ್ ಘೋಷಣೆ ಮಾಡಲಾಗಿದ್ದು, ಐಸಿಐಸಿಐ ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್ ಮೂಲಕ ಪಡೆದುಕೊಂಡರೆ 3,000 ರೂ. ಗಳ ರಿಯಾಯಿತಿ ನೀಡಲಾಗಿದೆ.

ಇದನ್ನೂ ಓದಿ
Google I/O 2023: ಇಂದು ಗೂಗಲ್ ವಾರ್ಷಿಕ ಸಮ್ಮೇಳನ: ಪಿಕ್ಸೆಲ್ 7a, ಪಿಕ್ಸೆಲ್ ಫೋಲ್ಡ್ ಬಿಡುಗಡೆ ಸಾಧ್ಯತೆ: ಲೈವ್ ವೀಕ್ಷಿಸುವುದು ಹೇಗೆ?
Google Pixel 7a: ಗೂಗಲ್‌ ಪಿಕ್ಸೆಲ್‌ 7a ಸ್ಮಾರ್ಟ್​ಫೋನ್​ನ ಬೆಲೆ ಆನ್​ಲೈನ್​ನಲ್ಲಿ ಸೋರಿಕೆ
Flipkart Big Saving Days sale: ಇಂದು ಮೇ. 10 ಕೊನೇ ದಿನ: ಫ್ಲಿಪ್​ಕಾರ್ಟ್ ಬಿಗ್‌ ಸೇವಿಂಗ್‌ ಡೇಸ್‌ ಆಫರ್ ಮಿಸ್ ಮಾಡ್ಬೇಡಿ
Tech Tips: ಸೋಲಾರ್ ಚಾರ್ಜರ್​ನಿಂದ ನಿಮ್ಮ ಮೊಬೈಲ್ ಬ್ಯಾಟರಿ ಫುಲ್ ಮಾಡಬಹುದು: ಹೇಗೆ ಗೊತ್ತೇ?

National Technology Day 2023: ರಾಷ್ಟ್ರೀಯ ತಂತ್ರಜ್ಞಾನ ದಿನದ ಇತಿಹಾಸ, ದಿನಾಂಕ ಹಾಗೂ ಮಹತ್ವದ ಕುರಿತು ಮಾಹಿತಿ ಇಲ್ಲಿದೆ

ಏನಿದೆ ಫೀಚರ್ಸ್?:

ಪೋಕೋ F5 5G ಸ್ಮಾರ್ಟ್‌ಫೋನ್‌ 2400*108 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67 ಇಂಚಿನ ಫುಲ್‌ಹೆಚ್‌ಡಿ ಪ್ಲಸ್‌ ಅಮುಲೋಡ್ ಡಿಸ್‌ಪ್ಲೇಯನ್ನು ಹೊಂದಿದೆ. 120Hz ಅಡಾಪ್ಟಿವ್ ರಿಫ್ರೆಶ್ ರೇಟ್‌, ಡಾಲ್ಬಿ ವರ್ಷನ್, HDR10+ ಬೆಂಬಲ ಪಡೆದುಕೊಂಡಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7+ Gen 2 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, ಇದು ಆಂಡ್ರಾಯ್ಡ್‌ 13ನಲ್ಲಿ ರನ್‌ ಆಗಲಿದೆ.

ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರ ಮುಖ್ಯ ಕ್ಯಾಮೆರಾ 64 ಮೆಗಾಫಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಇದು ಅತ್ಯುತ್ತಮ ಫೋಟೋವನ್ನು ಸೆರೆಹಿಡುತ್ತಿದೆ. ಫೋಟೋಗ್ರಫಿಗೆ ಹೇಳಿ ಮಾಡಿಸಿದ್ದಾಗಿದೆ. ಹಾಗೆಯೆ ಎರಡನೇ ಕ್ಯಾಮೆರಾ 8MP ಅಲ್ಟ್ರಾ-ವೈಡ್ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2MP ಮ್ಯಾಕ್ರೋ ಲೆನ್ಸ್‌ ಅನ್ನು ಒಳಗೊಂಡಿದೆ. ಇದಲ್ಲದೆ ಮುಂಭಾಗ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ನೀಡಲಾಗಿದೆ. ಇದರಲ್ಲಿ 4K ಕ್ವಾಲಿಟಿಯ ವಿಡಿಯೋ ರೆಕಾರ್ಡ್ ಮಾಡಬಹುದು.

ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ನೀಡಲಾಗಿದ್ದು, ಇದಕ್ಕೆ ತಕ್ಕಂತೆ 67W ವೇಗದ ಚಾರ್ಜಿಂಗ್ ಬೆಂಬಲ ಕೂಡ ಪಡೆದುಕೊಂಡಿದೆ. ಕಂಪನಿ ಹೇಳಿರುವ ಪ್ರಕಾರ 0-100 % ಚಾರ್ಜ್ ಆಗಲು ಕೇವಲ 45 ನಿಮಿಷ ಸಾಕಂತೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5ಜಿ ಬೆಂಬಲ ಪಡೆದುಕೊಂಡಿದೆ. ಹಾಟ್‌ಸ್ಪಾಟ್‌, ವೈಫೈ, ಬ್ಲೂಟೂತ್‌, ಹೆಡ್‌ಫೋನ್‌ ಜ್ಯಾಕ್‌ ಇರಲಿದೆ. ಅಂಡರ್ ಡಿಸ್ ಪ್ಲೇ ಫಿಂಗರ್​ಪ್ರಿಂಟ್ ಸ್ಕ್ಯಾನರ್ ಅಳವಡಿಸಲಾಗಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ