ಭಾರತದಲ್ಲಿ ಪೋಕೋ (Poco) ಸಂಸ್ಥೆ ಕಳೆದ ವಾರ ಕೆಲ ತಿಂಗಳುಗಳ ಕಾಲ ಕಾದು ಆಕರ್ಷಕವಾದ ಹೊಸ ಸ್ಮಾರ್ಟ್ಫೋನೊಂದನ್ನು (Smartphone) ಅನಾವರಣ ಮಾಡಿತ್ತು. ತನ್ನ ಬಹುನಿರೀಕ್ಷಿತ ಪೋಕೋ ಎಫ್5 5ಜಿ (Poco F5 5G) ಫೋನನ್ನು ಮಾರುಕಟ್ಟೆಗೆ ಪರಿಚಯಿಸಿತ್ತು. ಮಧ್ಯಮ ಬೆಲೆ ಹೊಂದಿರುವ ಈ ಸ್ಮಾರ್ಟ್‌ಫೋನ್ ಸಾಕಷ್ಟು ಬಲಿಷ್ಠವಾಗಿದ್ದು, ಆರ್ಷಕ ಕ್ಯಾಮೆರಾ, ಬ್ಯಾಟರಿ, ಪ್ರೊಸೆಸರ್ ನೀಡಲಾಗಿದೆ. ಸದ್ಯ ಪೋಕೋ F5 5G ಫೋನ್ ಖರೀದಿಗೆ ಸಿಗುತ್ತಿದೆ.
ಬೆಲೆ ಎಷ್ಟು?:
ಪೋಕೋ F5 5G ಸ್ಮಾರ್ಟ್‌ಫೋನ್ ಭಾರತದಲ್ಲಿ ಎರಡು ರೂಪಾಂತರಗಳಲ್ಲಿ ಬಿಡುಗಡೆ ಮಾಡಲಾಗಿತ್ತು. ಇದರ 8GB RAM + 256GB ಸ್ಟೋರೇಜ್ ರೂಪಾಂತರಕ್ಕೆ 28,999 ರೂ. ನಿಗದಿ ಮಾಡಲಾಗಿದೆ. ಅಂತೆಯೆ 12GB RAM + 256GB ಸ್ಟೋರೇಜ್ ಆಯ್ಕೆಗೆ 33,999 ರೂ. ಇದೆ. ಈ ಕಾರ್ಬಲ್ ಬ್ಲಾಕ್, ಸ್ನೋ ಸ್ಟಾರ್ಮ್ ವೈಟ್ ಮತ್ತು ಎಲೆಕ್ಟ್ರಿಕ್ ಬ್ಲೂ ಎಂಬ ಮೂರು ಬಣ್ಣದ ಆಯ್ಕೆಗಳಲ್ಲಿ ಲಭ್ಯವಿರುತ್ತದೆ. ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್ಕಾರ್ಟ್ ಮೂಲಕ ಖರೀದಿಗೆ ಸಿಗುತ್ತಿದೆ. ಐಸಿಐಸಿಐ ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್ ಮೂಲಕ ಪಡೆದುಕೊಂಡರೆ 3,000 ರೂ. ಗಳ ರಿಯಾಯಿತಿ ನೀಡಲಾಗಿದೆ.
Sanchar Saathi Portal: ಕಳೆದುಹೋದ ಮೊಬೈಲ್ ಹುಡುಕುವುದು ಇನ್ಮುಂದೆ ಸುಲಭ, ವಿಧಾನ ಇಲ್ಲಿದೆ
ಏನಿದೆ ಫೀಚರ್ಸ್?:
ಪೋಕೋ F5 5G ಸ್ಮಾರ್ಟ್‌ಫೋನ್ 2400*108 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.67 ಇಂಚಿನ ಫುಲ್‌ಹೆಚ್‌ಡಿ ಪ್ಲಸ್ ಅಮುಲೋಡ್ ಡಿಸ್‌ಪ್ಲೇಯನ್ನು ಹೊಂದಿದೆ. 120Hz ಅಡಾಪ್ಟಿವ್ ರಿಫ್ರೆಶ್ ರೇಟ್, ಡಾಲ್ಬಿ ವರ್ಷನ್, HDR10+ ಬೆಂಬಲ ಪಡೆದುಕೊಂಡಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7+ Gen 2 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, ಇದು ಆಂಡ್ರಾಯ್ಡ್ 13ನಲ್ಲಿ ರನ್ ಆಗಲಿದೆ.
ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರ ಮುಖ್ಯ ಕ್ಯಾಮೆರಾ 64 ಮೆಗಾಫಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಇದು ಅತ್ಯುತ್ತಮ ಫೋಟೋವನ್ನು ಸೆರೆಹಿಡುತ್ತಿದೆ. ಫೋಟೋಗ್ರಫಿಗೆ ಹೇಳಿ ಮಾಡಿಸಿದ್ದಾಗಿದೆ. ಹಾಗೆಯೆ ಎರಡನೇ ಕ್ಯಾಮೆರಾ 8MP ಅಲ್ಟ್ರಾ-ವೈಡ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2MP ಮ್ಯಾಕ್ರೋ ಲೆನ್ಸ್ ಅನ್ನು ಒಳಗೊಂಡಿದೆ. ಇದಲ್ಲದೆ ಮುಂಭಾಗ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ನೀಡಲಾಗಿದೆ. ಇದರಲ್ಲಿ 4K ಕ್ವಾಲಿಟಿಯ ವಿಡಿಯೋ ರೆಕಾರ್ಡ್ ಮಾಡಬಹುದು.
ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ನೀಡಲಾಗಿದ್ದು, ಇದಕ್ಕೆ ತಕ್ಕಂತೆ 67W ವೇಗದ ಚಾರ್ಜಿಂಗ್ ಬೆಂಬಲ ಕೂಡ ಪಡೆದುಕೊಂಡಿದೆ. ಕಂಪನಿ ಹೇಳಿರುವ ಪ್ರಕಾರ 0-100 % ಚಾರ್ಜ್ ಆಗಲು ಕೇವಲ 45 ನಿಮಿಷ ಸಾಕಂತೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5ಜಿ ಬೆಂಬಲ ಪಡೆದುಕೊಂಡಿದೆ. ಹಾಟ್‌ಸ್ಪಾಟ್, ವೈಫೈ, ಬ್ಲೂಟೂತ್, ಹೆಡ್‌ಫೋನ್ ಜ್ಯಾಕ್ ಇರಲಿದೆ. ಅಂಡರ್ ಡಿಸ್ ಪ್ಲೇ ಫಿಂಗರ್ಪ್ರಿಂಟ್ ಸ್ಕ್ಯಾನರ್ ಅಳವಡಿಸಲಾಗಿದೆ.
ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ