Poco M5: ಬಜೆಟ್ ಫೋನಂದ್ರೆ ಇದು: ಭಾರತದಲ್ಲಿ ಅತಿ ಕಡಿಮೆ ಬೆಲೆಗೆ ಪೋಕೋ M5 ಸ್ಮಾರ್ಟ್​ಫೋನ್ ರಿಲೀಸ್

ಪೋಕೋ ಸಂಸ್ಥೆ ಕೆಲ ತಿಂಗಳುಗಳ ಕಾಲ ಕಾದು ಇದೀಗ ಭಾರತದಲ್ಲಿ ಹೊಸ ಸ್ಮಾರ್ಟ್​​ಫೋನೊಂದನ್ನು (Smartphone) ಅನಾವರಣ ಮಾಡಿದೆ. ಅದುವೇ ಪೋಕೋ ಎಮ್​5 (POCO M5).

Poco M5: ಬಜೆಟ್ ಫೋನಂದ್ರೆ ಇದು: ಭಾರತದಲ್ಲಿ ಅತಿ ಕಡಿಮೆ ಬೆಲೆಗೆ ಪೋಕೋ M5 ಸ್ಮಾರ್ಟ್​ಫೋನ್ ರಿಲೀಸ್
POCO M5
Follow us
TV9 Web
| Updated By: Vinay Bhat

Updated on: Sep 06, 2022 | 7:19 AM

ಭಾರತದಲ್ಲಿ ಪೋಕೋ (Poco) ಸಂಸ್ಥೆಯ ಸ್ಮಾರ್ಟ್​ಫೋನ್​ಗಳು ಬಿಡುಗಡೆ ಆಗುತ್ತಿರುವುದು ಕಡಿಮೆ ಆಗುತ್ತಿದೆ. ಇಂದು ಮಾರುಕಟ್ಟೆಯಲ್ಲಿ ಅನೇಕ ಮೊಬೈಲ್ ಬ್ರ್ಯಾಂಡ್​ಗಳು ಹುಟ್ಟುಕೊಂಡಿರುವ ಕಾರಣ ಸಾಮಾನ್ಯ ಫೀಚರ್​ಗಳಿರುವ ಫೋನ್​ಗಳಿಗೆ ಬೇಡಿಕೆ ಇಲ್ಲ. ಇದೇ ಕಾರಣ ಪೋಕೋ ಸಂಸ್ಥೆ ಕೆಲ ತಿಂಗಳುಗಳ ಕಾಲ ಕಾದು ಇದೀಗ ಭಾರತದಲ್ಲಿ ಹೊಸ ಸ್ಮಾರ್ಟ್​​ಫೋನೊಂದನ್ನು (Smartphone) ಅನಾವರಣ ಮಾಡಿದೆ. ಅದುವೇ ಪೋಕೋ ಎಮ್​5 (POCO M5). ಇದೊಂದು ಬಜೆಟ್ ಬೆಲೆಯ ಫೋನಾಗಿದ್ದರೂ ಆಕರ್ಷಕ ಫೀಚರ್​ಗಳ ಮೂಲಕ ಗ್ರಾಹಕರ ಗಮನ ಸೆಳೆಯುತ್ತಿದೆ. ಹಾಗಾದ್ರೆ ಪೋಕೋ M5 ಫೋನಿನ ಬೆಲೆ ಎಷ್ಟು?, ಏನೆಲ್ಲ ವಿಶೇಷತೆ ಇದೆ ಎಂಬುದನ್ನು ನೋಡೋಣ.

  1. ಪೋಕೋ M5 ಸ್ಮಾರ್ಟ್‌ಫೋನ್‌ ಭಾರತದಲ್ಲಿ ಎರಡು ಸ್ಟೋರೇಜ್ ಆಯ್ಕೆಯಲ್ಲಿ ರಿಲೀಸ್ ಆಗಿದೆ. ಇದರ 4GB RAM + 64GB ಸ್ಟೋರೇಜ್ ರೂಪಾಂತರದ ಆಯ್ಕೆಗೆ 12,499ರೂ. ಮತ್ತು 6GB RAM + 128GB ಸ್ಟೋರೇಜ್ ಮಾದರಿಯ ಆಯ್ಕೆಗೆ 14,499 ರೂ. ನಿಗದಿ ಮಾಡಲಾಗಿದೆ.
  2. ಇದು ಐಸಿ ಬ್ಲೂ, ಪೊಕೊ ಹಳದಿ ಮತ್ತು ಪವರ್ ಬ್ಲ್ಯಾಕ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಪೋಕೋ M5 ಇದೇ ಸೆಪ್ಟೆಂಬರ್ 13 ರಿಂದ ಇ ಕಾಮರ್ಸ್ ತಾಣವಾದ ಫ್ಲಿಪ್‌ಕಾರ್ಟ್‌ ಮೂಲಕ ಮಾರಾಟವಾಗಲಿದೆ
  3. ಈ ಫೋನಿನ ಫೀಚರ್ಸ್ ಬಗ್ಗೆ ನೋಡುವುದಾದರೆ ಇದು 1080*2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.58 ಇಂಚಿನ ಫುಲ್ ಹೆಚ್‌ಡಿ ಪ್ಲಸ್‌ ಡಿಸ್‌ ಪ್ಲೇ ಹೊಂದಿದೆ. ಈ ಫೋನಿ ಡಿಸೈನ್ ಅದ್ಭುತವಾಗಿದ್ದು ಗ್ರಾಹಕರು ಫಿದಾ ಆಗುವುದು ಗ್ಯಾರೆಂಟಿ.
  4. ಮೀಡಿಯಾಟೆಕ್ ಹೀಲಿಯೊ G99 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು ಆಂಡ್ರಾಯ್ಡ್‌ 12 ನಲ್ಲಿ ಕಾರ್ಯನಿರ್ವಹಿಸಲಿದೆ. ಮೈಕ್ರೋ ಎಸ್‌ಡಿ ಕಾರ್ಡ್‌ ಮೂಲಕವೂ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದು.
  5. ಇದನ್ನೂ ಓದಿ
    Image
    Airtel: ಏರ್ಟಲ್​ನಿಂದ ಹಾಟ್​ಸ್ಟಾರ್, ಅಮೆಜಾನ್ ಪ್ರೈಮ್ ಉಚಿತ ಚಂದಾದಾರಿಕೆ: ಈ ಆಫರ್ ಮಿಸ್ ಮಾಡ್ಬೇಡಿ
    Image
    Amazon: ಬೆಂಗಳೂರಿನಲ್ಲಿ ಅಮೆಜಾನ್​ನಿಂದ ಆಹಾರ ಮೇಳ: ಭರ್ಜರಿ ಆಫರ್ ಜೊತೆಗೆ ಶೇ.60ರಷ್ಟು ಡಿಸ್ಕೌಂಟ್
    Image
    Tech Tips: ಲ್ಯಾಪ್​ಟಾಪ್ ಸ್ಲೋ ಆಗಿದೆಯೆ?: ಹಾಗಿದ್ರೆ ಈ ಟ್ರಿಕ್ ಉಪಯೋಗಿಸಿ ಸೂಪರ್ ಫಾಸ್ಟ್ ಮಾಡಿ
    Image
    Realme C33: ಒಂದೇ ದಿನ ಬಾಕಿ: ಭಾರತಕ್ಕೆ ಅಪ್ಪಳಿಸುತ್ತಿದೆ ಭರ್ಜರಿ ಬ್ಯಾಟರಿ, ಕ್ಯಾಮೆರಾದ ಹೊಸ ರಿಯಲ್ ಮಿ ಸ್ಮಾರ್ಟ್​ಫೋನ್
  6. ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ
  7. ಪೋಕೋ M5ಸ್ಮಾರ್ಟ್‌ಫೋನ್‌ ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.
  8. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi, ಬ್ಲೂಟೂತ್ v5, GPS/ A-GPS, ಇನ್‌ಫ್ರಾರೆಡ್ (IR) ಬ್ಲಾಸ್ಟರ್, USB ಟೈಪ್-C, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಹೊಂದಿದೆ.

Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ