Poco M4 5G: ಪೋಕೋದಿಂದ ಬಜೆಟ್ ಬೆಲೆಗೆ ಆಕರ್ಷಕ ಹೊಸ ಸ್ಮಾರ್ಟ್‌ಫೋನ್ ಬಿಡುಗಡೆ: ಇಲ್ಲಿದೆ ನೋಡಿ
ಪೋಕೋ ಇದೀಗ ಭಾರತದಲ್ಲಿ ತನ್ನ ಹೊಸ ಪೋಕೋ ಎಮ್4 5G (Poco M4 5G) ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಸಾಕಷ್ಟು ವಿಶೇಷತೆಗಳಿಂದ ಕೂಡಿರುವ ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ.
ಭಾರತದಲ್ಲಿ ವಾರಕ್ಕೆ ಕಡಿಮೆ ಎಂದರು ಮೂರರಿಂದ ನಾಲ್ಕು ಫೋನ್ಗಳು ಬಿಡುಗಡೆ ಆಗುತ್ತವೆ. ರಿಯಲ್ ಮಿ, ಒಪ್ಪೋ, ವಿವೋ, ಶವೋಮಿ (Xiaomi) ಕಂಪನಿ ಪ್ರತಿ ತಿಂಗಳು ದೇಶದಲ್ಲಿ ಒಂದಲ್ಲಾ ಒಂದು ಹೊಸ ಸ್ಮಾರ್ಟ್ಫೋನ್ಗಳನ್ನು ಪರಿಚಯಿಸುತ್ತವೆ. ಇನ್ನುಳಿದ ಕೆಲವು ಕಂಪನಿಗಳು ಅಪರೂಪಕ್ಕೆ ಆಕರ್ಷಕ ಮೊಬೈಲ್ಗಳನ್ನು ರಿಲೀಸ್ ಮಾಡಿ ಸದ್ದು ಮಾಡುತ್ತವೆ. ಇದೇ ಸಾಲಿನಲ್ಲಿ ಪೋಕೋ ಸಂಸ್ಥೆ ಕೂಡ ಕಾಣಿಸುತ್ತದೆ. ಹೆಚ್ಚಾಗಿ 20,000 ರೂ. ಆಸುಪಾಸಿನಲ್ಲಿ ಹೊಸ ಸ್ಮಾರ್ಟ್ಫೋನ್ಗಳನ್ನು (Smartphone) ಅನಾವರಣ ಮಾಡಿ ಸೈ ಎನಿಸಿಕೊಂಡಿರುವ ಪೋಕೋ ಇದೀಗ ಭಾರತದಲ್ಲಿ ತನ್ನ ಹೊಸ ಪೋಕೋ ಎಮ್4 5G (Poco M4 5G) ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಸಾಕಷ್ಟು ವಿಶೇಷತೆಗಳಿಂದ ಕೂಡಿರುವ ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಹಾಗಾದ್ರೆ ಈ ಫೋನಿನ ಇತರೆ ವಿಶೇಷ ಏನು?, ಇದರ ಬೆಲೆ ಎಷ್ಟು? ಎಂಬುದನ್ನು ನೋಡೋಣ.
ಬೆಲೆ ಎಷ್ಟು?:
ಭಾರತದಲ್ಲಿ ಪೋಕೋ M4 5G ಸ್ಮಾರ್ಟ್‌ಫೋನ್ ಒಟ್ಟು ಎರಡು ಮಾದರಿಯಲ್ಲಿ ಅನಾವರಣಗೊಂಡಿದೆ. ಇದರ ಬೇಸ್ ಮಾಡೆಲ್ 4GB RAM + 64GB ಸ್ಟೋರೇಜ್ ರೂಪಾಂತರದ ಆಯ್ಕೆಗೆ 12,999 ರೂ. ನಿಗದಿ ಮಾಡಲಾಗಿದೆ. ಅಂತೆಯೆ 6GB RAM ಮತ್ತು 128GB ಸಂಗ್ರಹಣೆಯ ಆಯ್ಕೆಗೆ 14,999 ರೂ. ಬೆಲೆ ಹೊಂದಿದೆ. ಈ ಸ್ಮಾರ್ಟ್‌ಫೋನ್ ಮೇ 5 ರಂದು ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್‌ಕಾರ್ಟ್‌ನಲ್ಲಿ ಮೊದಲ ಸೇಲ್ ಕಾಣಲಿದೆ. ಇದು ಕೂಲ್ ಬ್ಲೂ, ಪವರ್ ಬ್ಲಾಕ್ ಮತ್ತು ಹಳದಿ ಬಣ್ಣದ ಆಯ್ಕೆಗಳಲ್ಲಿ ಮಾರಾಟವಾಗಲಿದೆ. ಮೊದಲ ಸೇಲ್ ಪ್ರಯುಕ್ತ SBI ಕಾರ್ಡ್ ಮೂಲಕ ಖರೀದಿಸಿದರೆ 2,000 ರೂ.ಗಳ ತ್ವರಿತ ರಿಯಾಯಿತಿ ಘೋಷಿಸಲಾಗಿದೆ.
ಏನು ವಿಶೇಷತೆ?:
ಪೋಕೋ M4 5G ಸ್ಮಾರ್ಟ್‌ಫೋನ್ 6.58 ಇಂಚಿನ ಫುಲ್ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇದು 1,080×2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಒಳಗೊಂಡಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಹೊಂದಿದ್ದು, ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ಬಲವನ್ನು ಪಡೆದಿದೆ. MIUI 13 ಸ್ಕಿನ್‌ನೊಂದಿಗೆ ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.
ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಇದರಲ್ಲಿದೆ. ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ f/1.8 ಅಪರ್ಚರ್ ಲೆನ್ಸ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಪೋಟ್ರೇಟ್ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ.
ಇನ್ನು ಈ ಸ್ಮಾರ್ಟ್‌ಫೋನ್ ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ವಿಶೇಷವಾಗಿ ಈ ಫೋನಿನ ಹಿಂಭಾಗದಲ್ಲಿ ಹಿಪ್ನೋಟಿಕ್ ಸ್ವಿರ್ಲ್ ಡಿಸೈನ್ ಅನ್ನು ನೀಡಲಾಗಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5ಜಿ, ವೈ-ಫೈ, ಮತ್ತು ಬ್ಲೂಟೂತ್ 5.1 ಮತ್ತು USB ಟೈಪ್-ಸಿ ಪೋರ್ಟ್ ಅನ್ನು ಸೇರಿಸಲಾಗಿದೆ.
OnePlus 10R 5G: ಭಾರತದಲ್ಲಿ ಬರೋಬ್ಬರಿ 150W ಫಾಸ್ಟ್ ಚಾರ್ಜರ್ನ ಒನ್‌ಪ್ಲಸ್ 10R ಫೋನ್ ರಿಲೀಸ್: ಬೆಲೆ ಎಷ್ಟು?