Poco M4 Pro 5G: ಪೋಕೋ M4 ಪ್ರೊ 5G ಸ್ಮಾರ್ಟ್ಫೋನ್ ನ. 9ಕ್ಕೆ ಬಿಡುಗಡೆ: ಇದರ ವಿಶೇಷತೆಗೆ ಟೆಕ್ ಪ್ರಿಯರು ಫಿದಾ
ಪೋಕೋ M4 ಪ್ರೊ 5G ಸ್ಮಾರ್ಟ್ಫೋನ್ ಬಗೆಗಿನ ವಿಶೇಷತೆ ಬಗ್ಗೆ ಕಂಪನಿ ಯಾವುದೇ ಖಚಿತ ಮಾಹಿತಿ ಹೊರಹಾಕಿಲ್ಲ. ಆದರೆ, ಮೂಲಗಳ ಪ್ರಕಾರ ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 810 SoC ಅಥವಾ ಡೈಮೆನ್ಸಿಟಿ 700 SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿರುವ ಸಾಧ್ಯತೆ ಇದೆ.
ಭಾರತದ ಸ್ಮಾರ್ಟ್ಫೋನ್ (Smartphone) ಮಾರುಕಟ್ಟೆಯಲ್ಲಿ ಸದ್ದಿಲ್ಲದೆ ತನ್ನ ಸ್ಥಾನವನ್ನು ಭದ್ರಪಡಿಸಿಕೊಳ್ಳುತ್ತಿರುವ ಪೋಕೋ ಕಂಪನಿ ಈಗಾಗಲೇ ಆಕರ್ಷಕ ಫೋನ್ಗಳನ್ನು ಅನಾವರಣ ಮಾಡಿ ಯಶಸ್ಸು ಕಂಡಿದೆ. ಇದೇ ಸಾಲಿಗೆ ಈಗ ಮತ್ತೊಂದು ಸ್ಮಾರ್ಟ್ಫೋನ್ ಸೇರ್ಪಡೆಯಾಗುವ ಎಲ್ಲ ಲಕ್ಷಣಗಳು ಗೋಚರಿಸುತ್ತಿವೆ. ಹೌದು ಪೋಕೋ (Poco) ಸಂಸ್ಥೆ ತನ್ನ ಹೊಸ ಪೋಕೋ ಎಮ್4 ಪ್ರೊ 5ಜಿ (POCO M4 5G) ಸ್ಮಾರ್ಟ್ಫೋನ್ ಬಿಡುಗಡೆ ಮಾಡಲು ಸಿದ್ಧತೆ ನಡೆಸುತ್ತಿದೆ. ಅಲ್ಟ್ರಾ-ಫಾಸ್ಟ್ ಪ್ರೊಸೆಸರ್, ವೇಗದ ಚಾರ್ಜಿಂಗ್ ಸಾಮರ್ಥ್ಯ ಜೊತೆಗೆ ಅತ್ಯುತ್ತಮ ಕ್ಯಾಮೆರಾ, ಬ್ಯಾಟರಿ ಇದೆ ಎನ್ನಲಾಗುತ್ತಿರುವ ಪೋಕೋ M4 ಪ್ರೊ 5G ಸ್ಮಾರ್ಟ್ಫೋನ್ ಇದೇ ನವೆಂಬರ್ 9ರಂದು ಜಾಗತಿಕವಾಗಿ ಬಿಡುಗಡೆಯಾಗಲಿದೆ.
ಈ ಪೋಕೋ M4 ಪ್ರೊ 5G ಸ್ಮಾರ್ಟ್ಫೋನ್ ಬಗೆಗಿನ ವಿಶೇಷತೆ ಬಗ್ಗೆ ಕಂಪನಿ ಯಾವುದೇ ಖಚಿತ ಮಾಹಿತಿ ಹೊರಹಾಕಿಲ್ಲ. ಆದರೆ, ಮೂಲಗಳ ಪ್ರಕಾರ ಇದು 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.6 ಇಂಚಿನ ಐಪಿಎಸ್ ಎಲ್ಸಿಡಿ ಡಿಸ್ಪ್ಲೇ ಹೊಂದಿರಲಿದೆ ಎನ್ನಲಾಗಿದೆ. ಮೀಡಿಯಾ ಟೆಕ್ ಡೈಮೆನ್ಸಿಟಿ 810 SoC ಅಥವಾ ಡೈಮೆನ್ಸಿಟಿ 700 SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿರುವ ಸಾಧ್ಯತೆ ಇದೆ. ಇದು ಆಂಡ್ರಾಯ್ಡ್ 11 ಸಾಫ್ಟ್ವೇರ್ ಔಟ್-ಆಫ್-ಬಾಕ್ಸ್ನಲ್ಲಿ ಕಾರ್ಯನಿರ್ವಹಿಸಲಿದೆ ಎಂದು ಬಹಿರಂಗಪಡಿಸಿದೆ.
ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿರಲಿದೆಯಂತೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ f/1.79 ವೈಡ್ ಆಂಗಲ್ ಲೆನ್ಸ್ ಹೊಂದಿರುವ ಸಾಧ್ಯತೆ ಇದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿರಲಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿರುವ ಸಾಧ್ಯತೆ ಇದೆ. ಇನ್ನು ಕ್ಯಾಮೆರಾ ಫೀಚರ್ಸ್ಗಳಲ್ಲಿ ಡಿಜಿಟಲ್ ಜೂಮ್, ಆಟೋ ಫ್ಲ್ಯಾಶ್, ಫೇಸ್ ಡಿಟೆಕ್ಷನ್, ಟಚ್ ಟು ಫೋಕಸ್ ಅನ್ನು ಒಳಗೊಂಡಿರಲಿದೆ.
ಅಧಿಕೃತ ಟೀಸರ್ ಮೂಲಕ 5000mAh ಸಾಮರ್ಥ್ಯದ ಬ್ಯಾಟರಿ ಹೊಂದಿರುವ ಸಾಧ್ಯತೆ ಇದೆ. ಇದು 33W ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ ಬರಲಿದೆ ಎಂದು ಬಹಿರಂಗಪಡಿಸಿದ್ದಾರೆ. ಇನ್ನು ಕನೆಕ್ಟಿವಿಟಿ ಆಯ್ಕೆಯಲ್ಲಿ ಹಾಟ್ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್ಬಿ ಟೈಪ್ ಸಿ, ಜಿಪಿಎಸ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಎಕ್ಸೆಲೋಮೀಟರ್, ಏಂಬಿಯಂಟ್ ಲೈಟ್ ಸೆನ್ಸಾರ್, ಗೈರೋಸ್ಕೋಪ್ ಮತ್ತು ಪ್ರಾಕ್ಸಿಮಿಟಿ ಸೆನ್ಸರ್ ಗಳನ್ನು ಒಳಗೊಂಡಿರುತ್ತದೆ.
ಪೋಕೋ M4 ಪ್ರೊ ಸ್ಮಾರ್ಟ್ಫೋನ್ ಮುಂದಿನ ವಾರ ನವೆಂಬರ್ 9 ರಂದು ಜಾಗತಿಕ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲಿದೆ. ವದಂತಿಗಳ ಪ್ರಕಾರ ಇದು ಈ ತಿಂಗಳ ಕೊನೆಯಲ್ಲಿ ಇದು ಭಾರತದಲ್ಲಿ ಲಾಂಚ್ ಆಗುವ ಸಾದ್ಯತೆ ಇದೆ. ಜೊತೆಗೆ ಈ ಸ್ಮಾರ್ಟ್ಫೋನ್ 4GB RAM ಮತ್ತು 128GB, 6GB RAM ಮತ್ತು 128GB ಹಾಗೂ 8GB RAM ಮತ್ತು 128GB ಆಯ್ಕೆಯಲ್ಲಿ ಬರಲಿದೆ ಎನ್ನಲಾಗಿದೆ. ಇದರ ಬೆಲೆ ಎಷ್ಟಿರಬಹುದು ಎಂಬುದುಕೂಡ ಇನ್ನೂ ಬಹಿರಂಗವಾಗಿಲ್ಲ.
ಫೇಸ್ ರೆಕಗ್ನೇಷನ್ ವ್ಯವಸ್ಥೆ ರದ್ದುಗೊಳಿಸಿದ ಫೇಸ್ ಬುಕ್; ಶತಕೋಟಿ ಜನರ ಡೇಟಾಗಳು ಡಿಲೀಟ್!
Nokia T20: ಭಾರತದಲ್ಲಿ ನೋಕಿಯಾ ಸ್ಮಾರ್ಟ್ಫೋನ್ಗಿಲ್ಲ ಕಿಮ್ಮತ್ತು: ಇದೀಗ ಬಿಡುಗಡೆ ಮಾಡಿದೆ ಹೊಸ ಟ್ಯಾಬ್ಲೆಟ್
(Poco M4 Pro 5G will launch on November 9 teased to come with a 33-watt charging)