Poco M4 Pro: ಹೊಸ ಫೋನ್ ಖರೀದಿಸುವವರು ಇಲ್ಲಿ ನೋಡಿ: ಕೇವಲ 13,999 ರೂ. ಗೆ ಸೇಲ್ ಕಾಣುತ್ತಿದೆ ಪೋಕೋ M4 ಪ್ರೊ

Poco M4 Pro Sale: ಮೊನ್ನೆಯಷ್ಟೆ ಪೋಕೋ ದೇಶದಲ್ಲಿ ತನ್ನ ಹೊಸ ಪೋಕೋ M4 ಪ್ರೊ 4G (Poco M4 Pro 4G) ಸ್ಮಾರ್ಟ್‌ಫೋನ್ ಅನ್ನು ಅನಾವರಣ ಮಾಡಿತ್ತು. ಇದೀಗ ಇಂದಿನಿಂದ ಖರೀದಿಗೆ ಲಭ್ಯವಾಗುತ್ತಿದೆ.

Poco M4 Pro: ಹೊಸ ಫೋನ್ ಖರೀದಿಸುವವರು ಇಲ್ಲಿ ನೋಡಿ: ಕೇವಲ 13,999 ರೂ. ಗೆ ಸೇಲ್ ಕಾಣುತ್ತಿದೆ ಪೋಕೋ M4 ಪ್ರೊ
Poco M4 Pro 4G
Follow us
| Updated By: Vinay Bhat

Updated on: Mar 07, 2022 | 2:20 PM

ಭಾರತದಲ್ಲಿ ಪೋಕೋ ಸಂಸ್ಥೆ ದೊಡ್ಡ ಮಟ್ಟದ ಮಾರುಕಟ್ಟೆಯನ್ನು ಹೊಂದಿಲ್ಲವಾದರೂ ಆಗಾಗ ಕಡಿಮೆ ಬೆಲೆಗೆ ಅತ್ಯುತ್ತಮ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡುತ್ತವೆ. ಇದೇರೀತಿ ಮೊನ್ನೆಯಷ್ಟೆ ಪೋಕೋ ದೇಶದಲ್ಲಿ ತನ್ನ ಹೊಸ ಪೋಕೋ M4 ಪ್ರೊ 4G (Poco M4 Pro 4G) ಸ್ಮಾರ್ಟ್‌ಫೋನ್ ಅನ್ನು ಅನಾವರಣ ಮಾಡಿತ್ತು. ಇದೀಗ ಇಂದಿನಿಂದ ಖರೀದಿಗೆ ಲಭ್ಯವಾಗುತ್ತಿದೆ. ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್​ನಲ್ಲಿ (Flipkart) ಈ ಫೋನ್ ಸೇಲ್ ಕಾಣುತ್ತಿದೆ. ಪೋಕೋ M4 ಪ್ರೊ 4G ಸ್ಮಾರ್ಟ್​ಫೋನ್ ಕಳೆದ ತಿಂಗಳು ಬಿಡುಗಡೆ ಆದ ಪೋಕೋ ಎಮ್​4 ಪ್ರೊ 5G (Poco M4 Pro 5G) ಫೋನಿನ ಲೋ ವರ್ಷನ್ ಆವೃತ್ತಿಯಾಗಿದೆ. ಸಾಕಷ್ಟು ವಿಶೇಷತೆಗಳಿಂದ ಕೂಡಿರುವ ಪೋಕೋ M4 ಪ್ರೊ ಬಲಿಷ್ಠ ಬ್ಯಾಟರಿ, ಅತ್ಯುತ್ತಮ ಕ್ಯಾಮೆರಾ ಅಳವಡಿಸಲಾಗಿದೆ. ಹಾಗಾದ್ರೆ ಈ ಫೋನಿನ ಬೆಲೆ ಎಷ್ಟು?, ಆಫರ್ ಏನು ಎಂಬುದನ್ನು ನೋಡೋಣ.

ಬೆಲೆ-ಆಫರ್ ಏನು?

ಪೋಕೋ M4 ಪ್ರೊ ಸ್ಮಾರ್ಟ್‌ಫೋನ್‌ ಬೇಸ್‌ ಮಾಡೆಲ್‌ 6GB RAM ಮತ್ತು 64GB ಸ್ಟೋರೇಜ್ ರೂಪಾಂತರದ ಬೆಲೆ ಕೇವಲ 14,999 ರೂ.ಆಗಿದೆ. ಆದರೆ 6GB RAM + 128GB ಸ್ಟೋರೇಜ್ ರೂಪಾಂತರದ ಬೆಲೆ 16,499 ರೂ.  ಇದಲ್ಲದೆ 8GB RAM + 256GB ಸ್ಟೋರೇಜ್ ಮಾದರಿಯ ಬೆಲೆ 17,999 ರೂ. ನಿಗದಿ ಮಾಡಲಾಗಿದೆ. ಈ ಸ್ಮಾರ್ಟ್‌ಫೋನ್‌ ಕೂಲ್ ಬ್ಲೂ, ಪೊಕೊ ಹಳದಿ ಮತ್ತು ಪವರ್ ಬ್ಲಾಕ್ ಬಣ್ಣದ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿದೆ. ಇನ್ನು ಇಂದನ ಸೇಲ್‌ ಆಫರ್‌ನಲ್ಲಿ HDFC ಬ್ಯಾಂಕ್ ಕಾರ್ಡ್ ಹೊಂದಿರುವವರಿಗೆ 1,000 ರಿಯಾಯಿತಿ ಪಡೆದುಕೊಳ್ಳಬಹುದು. ಜೊತೆಗೆ ಫ್ಲಿಪ್‌ಕಾರ್ಟ್‌ ಆರು ತಿಂಗಳ ಗಾನಾ ಪ್ಲಸ್‌ ಅನ್ನು ಉಚಿತವಾಗಿ ನೀಡುತ್ತಿದೆ.

ಏನು ವಿಶೇಷತೆ?:

ಪೋಕೋ M4 ಪ್ರೊ ಸ್ಮಾರ್ಟ್‌ಫೋನ್‌ 1,080×2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.43 ಇಂಚಿನ ಫುಲ್‌ HD+ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಅನ್ನು ಒಳಗೊಂಡಿದೆ. ಮೀಡಿಯಾಟೆಕ್‌ ಹಿಲಿಯೋ G96 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 11 ನಲ್ಲಿ MIUI 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದಲ್ಲದೆ 11GB ವರೆಗೆ ಲಭ್ಯವಿರುವ ಮೆಮೊರಿಯನ್ನು “ವಿಸ್ತರಿಸಲು” ಉಚಿತ ಸಂಗ್ರಹಣೆಯನ್ನು ಬಳಸಿಕೊಳ್ಳಲು ಡೈನಾಮಿಕ್ RAM ವಿಸ್ತರಣೆಯನ್ನು ಸಹ ಹೊಂದಿದೆ.

ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಕ್ಯಾಮೆರಾ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾವನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಇನ್ನು ಪೋಕೋ M4 ಪ್ರೊ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi 802.11 a/b/g/n, ಬ್ಲೂಟೂತ್ v5, 3.5mm ಹೆಡ್‌ಫೋನ್ ಜ್ಯಾಕ್ ಮತ್ತು IR ಬ್ಲಾಸ್ಟರ್ ಬೆಂಬಲಿಸಲಿದೆ. ಇದಲ್ಲದೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್, ಫೇಸ್‌ ಡಿಟೆಕ್ಷನ್‌, ಅಕ್ಸಿಲೆರೊಮೀಟರ್ ಮತ್ತು ಗೈರೊಸ್ಕೋಪ್ ಆಂಬಿಯೆಂಟ್‌ ಲೈಟ್‌ ಸೆನ್ಸಾರ್‌ ಅನ್ನು ಸಹ ಹೊಂದಿದೆ.

Wi-Fi Tricks: ನೀವು ಬಳಸುತ್ತಿರುವ ವೈ-ಫೈ ಸೂಪರ್ ಸ್ಪೀಡ್ ಆಗಬೇಕಾ?: ಹಾಗಿದ್ರೆ ಈ ಟ್ರಿಕ್ ಫಾಲೋ ಮಾಡಿ

LAVA Z21: ಈ ಸ್ಮಾರ್ಟ್​ಫೋನ್ ಬೆಲೆ ಕೇವಲ 5 ಸಾವಿರ ರೂ.: ಇದರಲ್ಲಿ ಫೀಚರ್ಸ್ ಮಾತ್ರ ವಾವ್…

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ