Poco X4 Pro 5G: 67W ಫಾಸ್ಟ್ ಚಾರ್ಜರ್​​, ಕಡಿಮೆ ಬೆಲೆ: ಪೋಕೋ X4 ಪ್ರೊ 5G ಸ್ಮಾರ್ಟ್‌ಫೋನ್‌ ಈಗ ಖರೀದಿಗೆ ಲಭ್ಯ

Poco X4 Pro 5G: 67W ಫಾಸ್ಟ್ ಚಾರ್ಜರ್​​, ಕಡಿಮೆ ಬೆಲೆ: ಪೋಕೋ X4 ಪ್ರೊ 5G ಸ್ಮಾರ್ಟ್‌ಫೋನ್‌ ಈಗ ಖರೀದಿಗೆ ಲಭ್ಯ
Poco X4 Pro 5G

ಫ್ಲಿಪ್​ಕಾರ್ಟ್​ನಲ್ಲಿ ಇಂದು ಮಧ್ಯಾಹ್ನ 12 ಗಂಟೆಯಿಂದ ಪೋಕೋ X4 ಪ್ರೊ 5G ಸೇಲ್ ಆರಂಭವಾಗಿದೆ. ಬಜೆಟ್ ಬೆಲೆಗೆ ಲಭ್ಯವಿರುವ ಈ ಫೋನನ್ನು ಮೊದಲ ಸೇಲ್ ಪ್ರಯುಕ್ತ ಬಂಪರ್ ಆಫರ್​ನಲ್ಲಿ ನಿಮ್ಮದಾಗಿಸಬಹುದು.

TV9kannada Web Team

| Edited By: Vinay Bhat

Apr 05, 2022 | 2:09 PM

ಭಾರತೀಯ ಸ್ಮಾರ್ಟ್​​ಫೋನ್ ಮಾರುಕಟ್ಟೆಯಲ್ಲಿ ಇತ್ತೀಚೆಗಷ್ಟೆ ಬಿಡುಗಡೆ ಆಗಿ ಸಾಕಷ್ಟು ಸದ್ದು ಮಾಡುತ್ತಿರುವ ಪೋಕೋ (Poco) ಸಂಸ್ಥೆಯ ಹೊಸ ಪೋಕೋ ಎಕ್ಸ್​4 ಪ್ರೊ 5G (Poco X4 Pro 5G) ಫೋನ್ ಇಂದಿನಿಂದ ಖರೀದಿಗೆ ಸಿಗುತ್ತಿದೆ. ಈ ವರ್ಷದ ಆರಂಭದಲ್ಲಿ ನಡೆದಿದ್ದ ಮೊಬೈಲ್ ವರ್ಲ್ಡ್ ಕಾಂಗ್ರೆಸ್ (MWC 2022) ನಲ್ಲಿ ಈ ಫೋನ್ ಜಾಗತೀಕವಾಗಿ ಬಿಡುಗಡೆಗೊಳಿಸಲಾಗಿತ್ತು. ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ ಪ್ರೊಸೆಸರ್‌, 5,000mAh ಸಾಮರ್ಥ್ಯದ ಬ್ಯಾಟರಿ, 67W ಅತ್ಯಂತ ವೇಗವಾಗಿ ಚಾರ್ಜ್ ಆಗಲಿದ್ದು ಆಕರ್ಷಕ ಕ್ಯಾಮೆರಾದಿಂದ ಈ ಫೋನ್ ಕೂಡಿದೆ. ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್​ನಲ್ಲಿ ಇಂದು ಮಧ್ಯಾಹ್ನ 12 ಗಂಟೆಯಿಂದ ಪೋಕೋ X4 ಪ್ರೊ 5G ಸೇಲ್ ಆರಂಭವಾಗಿದೆ. ಬಜೆಟ್ ಬೆಲೆಗೆ ಲಭ್ಯವಿರುವ ಈ ಫೋನನ್ನು ಮೊದಲ ಸೇಲ್ ಪ್ರಯುಕ್ತ ಬಂಪರ್ ಆಫರ್​ನಲ್ಲಿ ನಿಮ್ಮದಾಗಿಸಬಹುದು.

ಬೆಲೆ-ಆಫರ್ ಏನು?:

ಭಾರತದಲ್ಲಿ ಪೋಕೋ X4 ಪ್ರೊ 5G ಸ್ಮಾರ್ಟ್‌ಫೋನ್‌ ಒಟ್ಟು ಮೂರು ಸ್ಟೋರೆಜ್ ಆಯ್ಕೆಯಲ್ಲಿ ಖರೀದಿಗೆ ಸಿಗುತ್ತಿದೆ. ಇದರ 6GB RAM ಮತ್ತು 64GB ಸ್ಟೋರೇಜ್ ರೂಪಾಂತರದ ಆಯ್ಕೆಗೆ 18,999 ರೂ. ನಿಗದಿ ಮಾಡಲಾಗಿದೆ. 6GB RAM ಮತ್ತು 128GB ಸ್ಟೋರೇಜ್ ರೂಪಾಂತರದ ಬೆಲೆ 19,999 ರೂ. ಹಾಗೆಯೇ 8GB RAM ಮತ್ತು 128GB ಸ್ಟೋರೇಜ್ ರೂಪಾಂತರವು 21,999 ರೂಪಾಯಿಗೆ ಖರೀದಿಗೆ ಸಿಗಲಿದೆ. ಇದು ಫ್ಲಿಪ್‌ಕಾರ್ಟ್‌ ಮೂಲಕ ಏಪ್ರಿಲ್ 5, 2022 ರಿಂದ ಮಾರಾಟ ಕಾಣಲಿದೆ. ಆ ದಿನ HDFC ಬ್ಯಾಂಕ್ ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್‌ಗಳ ಮೂಲಕ ಖರೀದಿ ಮಾಡಿದರೆ 1,000 ರೂಪಾಯಿ ರಿಯಾಯಿತಿ ದೊರೆಯಲಿದೆ. ನಿಮ್ಮ ಬಳಿ ಹಳೆಯ ಪೋಕೋ ಫೋನ್​ಗಳಿದ್ದರೆ ಅದಕ್ಕೆ 3,000 ರೂ. ವರೆಗೆ ಎಕ್ಸ್​ಚೇಂಜ್ ಆಫರ್ ಘೋಷಿಸಲಾಗಿದೆ.

ಏನು ವಿಶೇಷತೆ?:

ಪೋಕೋ X4 ಪ್ರೊ 5G ಸ್ಮಾರ್ಟ್‌ಫೋನ್‌ 2400 x 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67 ಇಂಚಿನ ಫುಲ್‌ HD+ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್​ನಿಂದ ಕೂಡಿದೆ. ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 695 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

ಈ ಸ್ಮಾರ್ಟ್‌ಫೋನ್ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಕ್ಯಾಮೆರಾ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ನೀಡಲಾಗಿದೆ.

ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 67W ವೇಗದ ಚಾರ್ಜಿಂಗ್‌ಗೆ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G, 5G, ಬ್ಲೂಟೂತ್ 5.1, ವೈಫೈ< ಹಾಟ್‌ಸ್ಪಾಟ್‌, ಡ್ಯುಯಲ್ ಸ್ಪೀಕರ್‌, 3.5mm ಹೆಡ್‌ಫೋನ್ ಜ್ಯಾಕ್ ಹಾಗೂ ಹೈ-ರೆಸ್ ಆಡಿಯೋ ಪ್ರಮಾಣೀಕರಣವನ್ನು ಹೊಂದಿದೆ. ಈ ಫೋನ್ ಬಜೆಟ್ ಬೆಲೆಗೆ ಲಭ್ಯವಿರುವ ಕೆಲವೇ ಕೆಲವು 5G ಫೋನ್​ಗಳ ಸಾಲಿಗೆ ಸೇರಿದೆ.

Flipkart: ಫ್ಲಿಪ್​ಕಾರ್ಟ್​ನಲ್ಲಿ 15,000 ರೂ. ಒಳಗೆ ಲಭ್ಯವಿರುವ ಬೆಸ್ಟ್ ಸ್ಮಾರ್ಟ್​​ಫೋನ್​ಗಳು ಇದುವೇ ನೋಡಿ

OnePlus 10 Pro: ಅರ್ಧ ಗಂಟೆಯಲ್ಲಿ ಫುಲ್ ಚಾರ್ಜ್ ಆಗುವ ಒನ್​ಪ್ಲಸ್ 10 ಪ್ರೊ ಇಂದಿನಿಂದ ಖರೀದಿಗೆ ಲಭ್ಯ

Follow us on

Related Stories

Most Read Stories

Click on your DTH Provider to Add TV9 Kannada