ಅಪರೂಪಕ್ಕೆ ಆಕರ್ಷಕ ಸ್ಮಾರ್ಟ್ಫೋನ್ಗಳನ್ನು (Smartphone) ಬಿಡುಗಡೆ ಮಾಡುವ ಪ್ರಸಿದ್ಧ ಪೋಕೋ (POCO) ಸಂಸ್ಥೆ ಇದೀಗ ತನ್ನ X ಸರಣಿ ಫೋನ್ನೊಂದಿಗೆ ಮತ್ತೆ ಬಂದಿದೆ. ಭಾರತೀಯ ಮಾರುಕಟ್ಟೆಯಲ್ಲಿ ಇಂದು ಪೋಕೋ ಕಂಪನಿ ಹೊಸ ಪೋಕೋ ಎಕ್ಸ್ 5 (POCO X5) ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, 48 ಮೆಗಾಫಿಕ್ಸೆಲ್ನ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಇದೆ. ಜೊತೆಗೆ ದೊಡ್ಡ ಬ್ಯಾಟರಿಗೆ ತಕ್ಕಂತೆ 33W ವೇಗದ ಚಾರ್ಜಿಂಗ್ನೊಂದಿಗೆ ಅನಾವರಣಗೊಂಡಿದೆ. ವಿಶೇಷವಾಗಿ ಈ ಫೋನಿನ ಬೆಲೆ ಕಡಿಮೆ ಆಗಿದ್ದರೂ 5G ಸಪೋರ್ಟ್ ಮಾಡುತ್ತದೆ. ಹಾಗಾದರೆ ಈ ಫೋನಿನ ಬೆಲೆ ಎಷ್ಟು?, ಏನೆಲ್ಲ ಫೀಚರ್ಸ್ ಇದೆ ಎಂಬ ಸಂಪೂರ್ಣ ಮಾಹಿತಿ ನೋಡೋಣ.
ಬೆಲೆ ಎಷ್ಟು?:
ಪೋಕೋ X5 5G ಸ್ಮಾರ್ಟ್‌ಫೋನ್ ಭಾರತದಲ್ಲಿ ಎರಡು ರೂಪಾಂತರಗಳಲ್ಲಿ ಬಿಡುಗಡೆ ಮಾಡಲಾಗಿದೆ. ಇದರ 6GB RAM +128GB ಸ್ಟೋರೇಜ್ ರೂಪಾಂತರಕ್ಕೆ 18,999 ರೂ. ನಿಗದಿ ಮಾಡಲಾಗಿದೆ. ಅಂತೆಯೆ 8GB RAM + 256GB ಸ್ಟೋರೇಜ್ ಆಯ್ಕೆಗೆ 20,999 ರೂ. ಇದೆ. ಈ ಫೋನ್ ಸೂಪರ್ನೋವಾ ಗ್ರೀನ್, ವೈಲ್ಡ್ಕ್ಯಾಟ್ ಬ್ಲೂ ಮತ್ತು ಜಾಗ್ವಾರ್ ಬ್ಲಾಕ್ ಎಂಬ ಮೂರು ಬಣ್ಣದ ಆಯ್ಕೆಗಳಲ್ಲಿ ಲಭ್ಯವಿರುತ್ತದೆ.
ಈ ಸ್ಮಾರ್ಟ್‌ಫೋನ್ ಇದೇ ಮಾರ್ಚ್ 21 ರಿಂದ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್ಕಾರ್ಟ್ ಜೊತೆಗೆ ಪೋಕೋ ಅಧಿಕೃತ ವೆಬ್ಸೈಟ್ನಲ್ಲಿ ಮಾರಾಟವಾಗಲಿದೆ. ಮೊದಲ ಸೇಲ್ ಪ್ರಯುಕ್ತ ICICI ಬ್ಯಾಂಕ್ ಕಾರ್ಡ್‌ಗಳನ್ನು ಬಳಸುವ ಗ್ರಾಹಕರಿಗೆ 2,000 ರೂ. ಗಳ ರಿಯಾಯಿತಿಯನ್ನು ಘೋಷಿಸಲಾಗಿದೆ. 2000 ರೂಪಾಯಿಗಳ ಎಕ್ಸ್ಚೇಂಜ್ ರಿಯಾಯಿತಿಯನ್ನು ಕೂಡ ನೀಡುತ್ತಿದೆ.
ಫೀಚರ್ಸ್ ಏನು?:
ಪೋಕೋ X5 5G ಸ್ಮಾರ್ಟ್‌ಫೋನ್ 1080*2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.67 ಇಂಚಿನ ಫುಲ್‌ಹೆಚ್‌ಡಿ ಪ್ಲಸ್ ಸೂಪರ್ ಅಮೊಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. 120Hz ಅಡಾಪ್ಟಿವ್ ರಿಫ್ರೆಶ್ ರೇಟ್ ಪಡೆದುಕೊಂಡಿದೆ. ಕಾರ್ನಿಂಗ್ ಗೋರಿಲ್ಲ ಗ್ಲಾಸ್ 5 ಪ್ರೊಟೆಕ್ಷನ್ ಕೂಡ ನೀಡಲಾಗಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695G SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇದು ಆಂಡ್ರಾಯ್ಡ್ 13ನಲ್ಲಿ ರನ್ ಆಗುತ್ತದೆ. ಇಷ್ಟು ಕಡಿಮೆ ಬೆಲೆಗೆ ಈ ಫೀಚರ್ಸ್ ಇರುವ ಕೆಲವೇ ಕೆಲವು ಮೊಬೈಲ್ಗಳಲ್ಲಿ ಇದುಕೂಡ ಒಂದಾಗಿದೆ.
ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರ ಮುಖ್ಯ ಕ್ಯಾಮೆರಾ 48 ಮೆಗಾಫಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಹಾಗೆಯೆ ಎರಡನೇ ಕ್ಯಾಮೆರಾ 8MP ಅಲ್ಟ್ರಾ-ವೈಡ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2MP ಮ್ಯಾಕ್ರೋ ಲೆನ್ಸ್ ಅನ್ನು ಒಳಗೊಂಡಿರಲಿದೆ. ಇದರಲ್ಲಿ ಹೆಚ್ಡಿಆರ್, ನೈಟ್ ಮೋಡ್ ಆಯ್ಕೆ ನೀಡಲಗಿದೆ. ಇದಲ್ಲದೆ ಮುಂಭಾಗ 13 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ.
ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ನೀಡಲಾಗಿದ್ದು, ಇದಕ್ಕೆ ತಕ್ಕಂತೆ 33W ವೇಗದ ಚಾರ್ಜಿಂಗ್ ಬೆಂಬಲ ಪಡೆದುಕೊಂಡಿದೆ. ಈ ಚಾರ್ಜರ್ ಬಾಕ್ಸ್ನಲ್ಲೇ ನೀಡಲಾಗಿದೆ. ಈ 33W ಫಾಸ್ಟ್ ಚಾರ್ಜರ್ ಮೂಲಕ ಕೇವಲ 22 ನಿಮಿಷಗಳಲ್ಲಿ 0-100 ಫುಲ್ ಚಾರ್ಜ್ ಮಾಡಬಹುದು ಎಂದು ಕಂಪನಿ ಹೇಳಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5ಜಿ ಬೆಂಬಲ ಪಡೆದುಕೊಂಡಿದ್ದು, 4G LTE, ಡ್ಯುಯಲ್ ಬ್ಯಾಂಡ್ Wi-Fi, ಬ್ಲೂಟೂತ್ 5.0, GPS ಮತ್ತು USB ಟೈಪ್-C ಪೋರ್ಟ್ ಅನ್ನು ಹೊಂದಿದೆ.
ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:14 pm, Tue, 14 March 23