Poco X5 5G: 22 ನಿಮಿಷಗಳಲ್ಲಿ ಫುಲ್ ಚಾರ್ಜ್ ಆಗುವ ಪೋಕೋ X5 5G ಫೋನ್ ಇಂದಿನಿಂದ ಖರೀದಿಗೆ ಲಭ್ಯ

ಕ್ವಾಲ್ಕಾಮ್ ಸ್ನಾಪ್​ಡ್ರಾಗನ್ 695 ಪ್ರೊಸೆಸರ್ ಬಲವನ್ನು ಪಡೆದುಕೊಂಡು, 48 ಮೆಗಾಫಿಕ್ಸೆಲ್​ನ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿರುವ ಪೋಕೋ X5 5G ಫೋನ್ ಇಂದಿನಿಂದ ಖರೀದಿಗೆ ಸಿಗುತ್ತಿದೆ.

Poco X5 5G: 22 ನಿಮಿಷಗಳಲ್ಲಿ ಫುಲ್ ಚಾರ್ಜ್ ಆಗುವ ಪೋಕೋ X5 5G ಫೋನ್ ಇಂದಿನಿಂದ ಖರೀದಿಗೆ ಲಭ್ಯ
Poco X5 5G
Follow us
Vinay Bhat
|

Updated on: Mar 21, 2023 | 6:58 AM

ಅಪರೂಪಕ್ಕೆ ಆಕರ್ಷಕ ಸ್ಮಾರ್ಟ್​ಫೋನ್​ಗಳನ್ನು (Smartphone) ಬಿಡುಗಡೆ ಮಾಡುವ ಪ್ರಸಿದ್ಧ ಪೋಕೋ (POCO) ಸಂಸ್ಥೆ ಕಳೆದ ವಾರ ತನ್ನ X ಸರಣಿಯಲ್ಲಿ ಹೊಸ ಮೊಬೈಲ್ ಅನ್ನು ಲಾಂಚ್ ಮಾಡಿತ್ತು. ಭಾರತೀಯ ಮಾರುಕಟ್ಟೆಯಲ್ಲಿ ಕಳೆದ ಮಂಗಳವಾರ ಪೋಕೋ ಕಂಪನಿ ಹೊಸ ಪೋಕೋ ಎಕ್ಸ್ 5 (POCO X5) ಸ್ಮಾರ್ಟ್​ಫೋನ್ ಅನ್ನು ಬಿಡುಗಡೆ ಮಾಡಿತ್ತು. ಕ್ವಾಲ್ಕಾಮ್ ಸ್ನಾಪ್​ಡ್ರಾಗನ್ 695 ಪ್ರೊಸೆಸರ್ ಬಲವನ್ನು ಪಡೆದುಕೊಂಡು, 48 ಮೆಗಾಫಿಕ್ಸೆಲ್​ನ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿರುವ ಈ ಫೋನ್ ಇಂದಿನಿಂದ ಖರೀದಿಗೆ ಸಿಗುತ್ತಿದೆ. ವಿಶೇಷವಾಗಿ ಈ ಫೋನಿನ ಬೆಲೆ ಕಡಿಮೆ ಆಗಿದ್ದರೂ 5G ಸಪೋರ್ಟ್ ಮಾಡುತ್ತದೆ. ಹಾಗಾದರೆ ಈ ಫೋನಿನ ಬೆಲೆ ಎಷ್ಟು?, ಏನೆಲ್ಲ ಫೀಚರ್ಸ್, ಆಫರ್​ಗಳಿವೆ ಎಂಬುದನ್ನು ನೋಡೋಣ.

ಬೆಲೆ-ಆಫರ್:

ಪೋಕೋ X5 5G ಸ್ಮಾರ್ಟ್​ಫೋನ್ ಭಾರತದಲ್ಲಿ ಎರಡು ರೂಪಾಂತರಗಳಲ್ಲಿ ಬಿಡುಗಡೆ ಮಾಡಲಾಗಿದೆ. ಇದರ 6GB RAM +128GB ಸ್ಟೋರೇಜ್ ರೂಪಾಂತರಕ್ಕೆ 18,999 ರೂ. ನಿಗದಿ ಮಾಡಲಾಗಿದೆ. ಅಂತೆಯೆ 8GB RAM + 256GB ಸ್ಟೋರೇಜ್ ಆಯ್ಕೆಗೆ 20,999 ರೂ. ಇದೆ. ಈ ಫೋನ್ ಸೂಪರ್ನೋವಾ ಗ್ರೀನ್, ವೈಲ್ಡ್ಕ್ಯಾಟ್ ಬ್ಲೂ ಮತ್ತು ಜಾಗ್ವಾರ್ ಬ್ಲಾಕ್ ಎಂಬ ಮೂರು ಬಣ್ಣದ ಆಯ್ಕೆಗಳಲ್ಲಿ ಲಭ್ಯವಿರುತ್ತದೆ.

ಇದನ್ನೂ ಓದಿ
Image
Cyber Crime: ಎಸ್​ಬಿಐ, ಹೆಚ್​ಡಿಎಫ್​ಸಿ ಬ್ಯಾಂಕ್ ಬಳಕೆದಾರರಿಗೆ ಬರುತ್ತಿದೆ ಫೇಕ್ ಮೆಸೇಜ್: ತಪ್ಪಿಯೂ ಹೀಗೆ ಮಾಡಬೇಡಿ
Image
Tech Tips: ಪಿಡಿಫ್ ಫೈಲ್​ಗಳ ಪಾಸ್‌ವರ್ಡ್ ರಿಮೂವ್ ಮಾಡುವುದು ಹೇಗೆ?: ಇಲ್ಲಿದೆ ನೋಡಿ ಟ್ರಿಕ್
Image
Tecno Spark 8 Pro: ಅತ್ಯುತ್ತಮ ಕ್ಯಾಮೆರಾ, ಭರ್ಜರಿ ಬ್ಯಾಟರಿಯ ಸ್ಮಾರ್ಟ್​ಫೋನ್ ಬೇಕೇ?: ಕೇವಲ 8,399 ರೂ. ಗೆ ಈ ಫೋನನ್ನು ಖರೀದಿಸಿ
Image
Tech Tips: ನಿಮ್ಮ ಜಿಮೇಲ್​ನಲ್ಲಿ ಸ್ಟೋರೇಜ್​ ಫುಲ್ ಆಗಿದ್ದರೆ ಟೆನ್ಶನ್ ಬೇಡ: ಈ ಟ್ರಿಕ್ ಫಾಲೋ ಮಾಡಿ

ಈ ಸ್ಮಾರ್ಟ್​ಫೋನ್ ಇಂದಿನಿಂದ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್ ಜೊತೆಗೆ ಪೋಕೋ ಅಧಿಕೃತ ವೆಬ್​ಸೈಟ್​ನಲ್ಲಿ ಮಾರಾಟವಾಗಲಿದೆ. ಮೊದಲ ಸೇಲ್ ಪ್ರಯುಕ್ತ ICICI ಬ್ಯಾಂಕ್ ಕಾರ್ಡ್‌ಗಳನ್ನು ಬಳಸುವ ಗ್ರಾಹಕರಿಗೆ 2,000 ರೂ. ಗಳ ರಿಯಾಯಿತಿಯನ್ನು ಘೋಷಿಸಲಾಗಿದೆ. 2000 ರೂಪಾಯಿಗಳ ಎಕ್ಸ್​ಚೇಂಜ್ ರಿಯಾಯಿತಿಯನ್ನು ಕೂಡ ನೀಡುತ್ತಿದೆ.

Instagram Blue Tick: ಇನ್​ಸ್ಟಾಗ್ರಾಮ್, ಫೇಸ್​ಬುಕ್​ನಲ್ಲಿ ಬಂದೇ ಬಿಡ್ತು ಹಣ ಕೊಟ್ಟು ಬ್ಲೂ ಟಿಕ್ ಪಡೆಯುವ ಆಯ್ಕೆ: ಬೆಲೆ ಎಷ್ಟು?

ಫೀಚರ್ಸ್ ಏನು?:

ಪೋಕೋ X5 5G ಸ್ಮಾರ್ಟ್‌ಫೋನ್‌ 1080*2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67 ಇಂಚಿನ ಫುಲ್‌ಹೆಚ್‌ಡಿ ಪ್ಲಸ್‌ ಸೂಪರ್ ಅಮೊಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. 120Hz ಅಡಾಪ್ಟಿವ್ ರಿಫ್ರೆಶ್ ರೇಟ್‌ ಪಡೆದುಕೊಂಡಿದೆ. ಕಾರ್ನಿಂಗ್ ಗೋರಿಲ್ಲ ಗ್ಲಾಸ್ 5 ಪ್ರೊಟೆಕ್ಷನ್ ಕೂಡ ನೀಡಲಾಗಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695G SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇದು ಆಂಡ್ರಾಯ್ಡ್‌ 13ನಲ್ಲಿ ರನ್‌ ಆಗುತ್ತದೆ. ಇಷ್ಟು ಕಡಿಮೆ ಬೆಲೆಗೆ ಈ ಫೀಚರ್ಸ್ ಇರುವ ಕೆಲವೇ ಕೆಲವು ಮೊಬೈಲ್​ಗಳಲ್ಲಿ ಇದುಕೂಡ ಒಂದಾಗಿದೆ.

ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರ ಮುಖ್ಯ ಕ್ಯಾಮೆರಾ 48 ಮೆಗಾಫಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಹಾಗೆಯೆ ಎರಡನೇ ಕ್ಯಾಮೆರಾ 8MP ಅಲ್ಟ್ರಾ-ವೈಡ್ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2MP ಮ್ಯಾಕ್ರೋ ಲೆನ್ಸ್‌ ಅನ್ನು ಒಳಗೊಂಡಿರಲಿದೆ. ಇದರಲ್ಲಿ ಹೆಚ್​ಡಿಆರ್, ನೈಟ್ ಮೋಡ್ ಆಯ್ಕೆ ನೀಡಲಗಿದೆ. ಇದಲ್ಲದೆ ಮುಂಭಾಗ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ.

ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ನೀಡಲಾಗಿದ್ದು, ಇದಕ್ಕೆ ತಕ್ಕಂತೆ 33W ವೇಗದ ಚಾರ್ಜಿಂಗ್ ಬೆಂಬಲ ಪಡೆದುಕೊಂಡಿದೆ. ಈ ಚಾರ್ಜರ್ ಬಾಕ್ಸ್​ನಲ್ಲೇ ನೀಡಲಾಗಿದೆ. ಈ 33W ಫಾಸ್ಟ್ ಚಾರ್ಜರ್ ಮೂಲಕ ಕೇವಲ 22 ನಿಮಿಷಗಳಲ್ಲಿ 0-100 ಫುಲ್ ಚಾರ್ಜ್ ಮಾಡಬಹುದು ಎಂದು ಕಂಪನಿ ಹೇಳಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5ಜಿ ಬೆಂಬಲ ಪಡೆದುಕೊಂಡಿದ್ದು, 4G LTE, ಡ್ಯುಯಲ್ ಬ್ಯಾಂಡ್ Wi-Fi, ಬ್ಲೂಟೂತ್ 5.0, GPS ಮತ್ತು USB ಟೈಪ್-C ಪೋರ್ಟ್ ಅನ್ನು ಹೊಂದಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ