Galaxy F23 5G: ಬೆಲೆ ಇಳಿಕೆ: ಸ್ಯಾಮ್​ಸಂಗ್ ಗ್ಯಾಲಕ್ಸಿ F23 5G ಫೋನ್ ಈಗ ಅತಿ ಕಡಿಮೆ ಬೆಲೆಗೆ ಲಭ್ಯ

| Updated By: Vinay Bhat

Updated on: Jul 31, 2022 | 1:43 PM

Samsung Galaxy F23 5G Price Cut: ಅಚ್ಚರಿ ಎಂಬಂತೆ ಯಾವುದೇ ಫೋನ್ ರಿಲೀಸ್ ಇಲ್ಲದಿದ್ದರೂ ಕಳೆದ ಮಾರ್ಚ್​ನಲ್ಲಿ ರಿಲೀಸ್ ಆದ ಗ್ಯಾಲಕ್ಸಿ ಎಫ್​23 5ಜಿ ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ದಿಢೀರ್ ಇಳಿಕೆ ಮಾಡಿದೆ. ಈ ಫೋನ್ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಒಳಗೊಂಡಿದೆ.

Galaxy F23 5G: ಬೆಲೆ ಇಳಿಕೆ: ಸ್ಯಾಮ್​ಸಂಗ್ ಗ್ಯಾಲಕ್ಸಿ F23 5G ಫೋನ್ ಈಗ ಅತಿ ಕಡಿಮೆ ಬೆಲೆಗೆ ಲಭ್ಯ
Samsung Galaxy F23
Follow us on

ಸ್ಮಾರ್ಟ್‌ಫೋನ್‌ ದೈತ್ಯ ಸ್ಯಾಮ್‌ಸಂಗ್‌ (Samsung) ಕಂಪನಿ ತನ್ನ ಹೊಸ ಫೋನನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿದೆ ಎಂಬೊತ್ತಿಗೆ ತನ್ನ ಹಳೆಯ ಫೋನಿನ ದರವನ್ನು ಕಡಿಮೆ ಮಾಡುತ್ತದೆ. ಇದು ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಆದರೆ, ಈ ಬಾರಿ ಅಚ್ಚರಿ ಎಂಬಂತೆ ಯಾವುದೇ ಫೋನ್ ರಿಲೀಸ್ ಇಲ್ಲದಿದ್ದರೂ ಕಳೆದ ಮಾರ್ಚ್​ನಲ್ಲಿ ರಿಲೀಸ್ ಆದ ಗ್ಯಾಲಕ್ಸಿ ಎಫ್​23 5ಜಿ (Galaxy F23 5G) ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ದಿಢೀರ್ ಇಳಿಕೆ ಮಾಡಿದೆ. ಈ ಫೋನ್ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಒಳಗೊಂಡಿದೆ. ಆಕ್ಟಾಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 750G SoC ಪ್ರೊಸೆಸರ್‌ ಬಲವನ್ನು ಪಡೆದುಕೊಂರುವ ಈ ಫೋನ್ ಮೇಲೆ 1,500 ರೂ. ಗಳ ಡಿಸ್ಕೌಂಟ್ ಘೋಷಿಸಲಾಗಿದೆ.

  1. ಸ್ಯಾಮ್‌ಸಂಗ್‌ ಕಂಪನಿ ಭಾರತದಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ F23 5G ಫೋನ್‌ ಒಟ್ಟು ಎರಡು ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ. ಇದರ 4GB RAM + 128GB ಮಾದರಿಗೆ 17,499 ರೂ. ಮತ್ತು 6GB RAM + 128GB ಆಯ್ಕೆಗೆ 18,499 ರೂ. ಬೆಲೆ ನಿಗದಿ ಮಾಡಲಾಗಿದೆ.
  2. ಆದರೀಗ ಈ ಫೋನಿನ ಬೆಲೆಯಲ್ಲಿ 1,500 ರೂ. ಗಳನ್ನು ಕಡಿಮೆ ಮಾಡಲಾಗಿದೆ. ಹೀಗಾಗಿ 4GB RAM ಆಯ್ಕೆ 15,999 ರೂ. ಮತ್ತು 6GB RAM ಆಯ್ಕೆ 16,999 ರೂ. ಗೆ ಸೇಲ್ ಕಾಣುತ್ತಿದೆ. ಅಲ್ಲದೆ ICICI ಬ್ಯಾಂಕ್ ಕಾರ್ಡ್‌ಗಳನ್ನು ಬಳಸುವ ಗ್ರಾಹಕರಿಗೆ 1,000 ತ್ವರಿತ ಕ್ಯಾಶ್‌ಬ್ಯಾಕ್ ಸಿಗಲಿದೆ. ಫ್ಲಿಪ್​ಕಾರ್ಟ್​ನಲ್ಲಿ ಖರೀದಿಸಬಹುದು.
  3. ಸ್ಯಾಮ್‌ಸಂಗ್‌ ಗ್ಯಾಲಕ್ಸಿ F23 5G ಸ್ಮಾರ್ಟ್‌ಫೋನ್‌ 6.6 ಇಂಚಿನ ಫುಲ್‌ ಹೆಚ್‌ಡಿ + ಇನ್ಫಿನಿಟಿಯು ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಮತ್ತು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್‌ ಅನ್ನು ಒಳಗೊಂಡಿದೆ.
  4. ಈ ಸ್ಮಾರ್ಟ್‌ಫೋನ್‌ ಆಕ್ಟಾಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 750G SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 12 ನಲ್ಲಿ ಒಂದು UI 4.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.
  5. ಇದನ್ನೂ ಓದಿ
    Moto G32: ಮೋಟೋ ಕಂಪನಿಯ ಈ ಹೊಸ ಬಜೆಟ್ ಫೋನ್​ನಲ್ಲಿದೆ ಅಚ್ಚರಿಗೊಳ್ಳುವ ಫೀಚರ್ಸ್​
    Best Smart Tv: ಬಜೆಟ್ ಬೆಲೆಗೆ ಹೊಸ ಟಿವಿ ಖರೀದಿಸಬೇಕೇ?: ಇಲ್ಲಿದೆ ನೋಡಿ 5 ಬೆಸ್ಟ್​​ ಸ್ಮಾರ್ಟ್​​ ಟಿವಿ
    Redmi K50S Pro: 108MP ಕ್ಯಾಮೆರಾ ಮರೆತು ಬಿಡಿ: ಶವೋಮಿ ತರುತ್ತಿದೆ 200MP ಕ್ಯಾಮೆರಾ ಸ್ಮಾರ್ಟ್​​ಫೋನ್
    BGMI: ಬ್ಯಾಟಲ್​ಗ್ರೌಂಡ್ಸ್​ ಮೊಬೈಲ್ ಇಂಡಿಯಾ ಭಾರತದಲ್ಲಿ ಬ್ಯಾನ್ ಆಗಿದೆಯೇ?: ಅನೇಕರ ಪ್ರಶ್ನೆಗೆ ಇಲ್ಲಿದೆ ಉತ್ತರ
  6. ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌ನೊಂದಿಗೆ ಬರುತ್ತದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ISOCELL JN1 ಸೆನ್ಸಾರ್‌ ಹೊಂದಿದೆ.
  7. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾವೈಡ್ ಶೂಟರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಅನ್ನು ಸಹ ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.
  8. ಬಲಿಷ್ಠವಾದ5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 25W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಜೊತೆಗೆ ಬ್ಯಾಟರಿ ದಕ್ಷತೆಯನ್ನು ಹೆಚ್ಚಿಸಲು ಹೇಳಲಾದ ಅಡಾಪ್ಟಿವ್ ಪವರ್ ಸೇವಿಂಗ್ ತಂತ್ರಜ್ಞಾನವನ್ನು ಫೋನ್ ಒಳಗೊಂಡಿದೆ.
  9. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi, ಬ್ಲೂಟೂತ್‌, GPS/ A-GPS, NFC, USB Type-C, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ. ಇದಲ್ಲದೆ NFC ಯಲ್ಲಿ ಸ್ಯಾಮ್‌ಸಂಗ್‌ ಪೇ ಬೆಂಬಲವನ್ನು ಕೂಡ ಒಳಗೊಂಡಿದೆ.