Realme 10 Pro Coca-Cola: ಭಾರತದಲ್ಲಿ ಕೋಕಾ-ಕೋಲಾ ಸಂಸ್ಥೆಯ ಚೊಚ್ಚಲ ಸ್ಮಾರ್ಟ್​ಫೋನ್ ಬಿಡುಗಡೆ: ಬೆಲೆ ಎಷ್ಟು?

|

Updated on: Feb 10, 2023 | 2:31 PM

ಪಾನೀಯ ಸಂಸ್ಥೆ ಕೋಕಾ-ಕೋಲಾ ತನ್ನ ಚೊಚ್ಚಲ ಮೊಬೈಲ್ ಅನ್ನು ಪರಿಚಯಿಸಿದೆ. ರಿಯಲ್ ಮಿ ಜೊತೆ ಕೈಜೋಡಿಸಿರುವ ಕೋಲಾ ಇಂದು ರಿಯಲ್ ಮಿ 10 ಪ್ರೊ 5ಜಿ ಕೋಕಾ-ಕೋಲಾ ಎಡಿಷನ್ (Realme 10 Pro Coca-Cola Edition) ಅನ್ನು ಬಿಡುಗಡೆ ಮಾಡಿದೆ.

Realme 10 Pro Coca-Cola: ಭಾರತದಲ್ಲಿ ಕೋಕಾ-ಕೋಲಾ ಸಂಸ್ಥೆಯ ಚೊಚ್ಚಲ ಸ್ಮಾರ್ಟ್​ಫೋನ್ ಬಿಡುಗಡೆ: ಬೆಲೆ ಎಷ್ಟು?
Realme 10 Pro Coca-Cola Edition
Follow us on

ಪ್ರಪಂಚದಲ್ಲಿ ಇಂದು ಸ್ಮಾರ್ಟ್​ಫೋನ್ ಮಾರುಕಟ್ಟೆ ವಿಶಾಲವಾಗಿ ಬೆಳೆದು ನಿಂತಿದೆ. ವಾರಕ್ಕೆ ಕನಿಷ್ಠ ಎಂದರೂ ಮೂರರಿಂದ- ನಾಲ್ಕು ಸ್ಮಾರ್ಟ್​ಫೋನ್​ಗಳು ಮಾರುಕಟ್ಟೆಯಲ್ಲಿ ಬಿಡುಗಡೆ ಆಗುತ್ತದೆ. ಇದರ ಜೊತೆಗೆ ಹೊಸ ಹೊಸ ಕಂಪನಿಗಳು ಕೂಡ ಹುಟ್ಟಿಗೊಳ್ಳುತ್ತಿದೆ. ಕಳೆದ ವರ್ಷ ನಥಿಂಗ್ ಎಂಬ ಕಂಪನಿ ತನ್ನ ಮೊಟ್ಟ ಮೊದಲ ನಥಿಂಗ್ ಫೋನ್ 1 (Nothing Phone 1) ಸ್ಮಾರ್ಟ್​ಫೋನ್ ಪರಿಚಯಿಸಿ ಮೋಡಿ ಮಾಡಿತ್ತು. ಇದೀಗ ಪ್ರಸಿದ್ಧ ಪಾನೀಯ ಸಂಸ್ಥೆ ಕೋಕಾ-ಕೋಲಾ (Coca-Cola) ತನ್ನ ಚೊಚ್ಚಲ ಮೊಬೈಲ್ ಅನ್ನು ಭಾರತೀಯ ಮಾರುಕಟ್ಟೆಗೆ ಪರಿಚಯಿಸಿದೆ. ಸ್ಮಾರ್ಟ್‌ಫೋನ್‌ ತಯಾರಿಕಾ ಸಂಸ್ಥೆ ರಿಯಲ್ ಮಿ ಜೊತೆ ಕೈಜೋಡಿಸಿರುವ ಕೋಲಾ ಇಂದು ರಿಯಲ್ ಮಿ 10 ಪ್ರೊ 5ಜಿ ಕೋಕಾ-ಕೋಲಾ ಎಡಿಷನ್ (Realme 10 Pro Coca-Cola Edition) ಅನ್ನು ಬಿಡುಗಡೆ ಮಾಡಿದೆ. ಈ ಫೋನಿನ ಬೆಲೆ, ಫೀಚರ್ಸ್, ಲಭ್ಯತೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಬೆಲೆ ಎಷ್ಟು?:

ಇದನ್ನೂ ಓದಿ
Realme GT Neo 5: 240W ಫಾಸ್ಟ್ ಚಾರ್ಜಿಂಗ್‌: ಸ್ಮಾರ್ಟ್​ಫೋನ್ ಮಾರುಕಟ್ಟೆಯನ್ನು ದಂಗಾಗಿಸಿದ ರಿಯಲ್ GT ನಿಯೋ 5
Tech Tips: ಮೊಬೈಲ್​ನಲ್ಲಿ ನಂಬರ್ ಸೇವ್ ಮಾಡದೆ ವಾಟ್ಸ್​ಆ್ಯಪ್​ನಲ್ಲಿ ಮೆಸೇಜ್ ಕಳುಹಿಸುವುದು ಹೇಗೆ?: ಇಲ್ಲಿದೆ ಟ್ರಿಕ್
Oppo Reno 8T 5G: ಇಂದಿನಿಂದ 108MP ಕ್ಯಾಮೆರಾದ ಒಪ್ಪೋ ರೆನೋ 8T 5G ಸ್ಮಾರ್ಟ್​ಫೋನ್ ಮಾರಾಟ ಆರಂಭ: ಬೆಲೆ ಎಷ್ಟು?
Flipkart Valentines Day Sale: ಫ್ಲಿಪ್​ಕಾರ್ಟ್​ನಲ್ಲಿ ವಾಲೆಂಟೈನ್ಸ್​ ಡೇ ಸೇಲ್: ಈ ಸ್ಮಾರ್ಟ್​ಫೋನ್​ಗಳಿಗೆ ಬಂಪರ್ ಡಿಸ್ಕೌಂಟ್

ರಿಯಲ್ ಮಿ 10 ಪ್ರೊ 5G ಕೋಕಾ-ಕೋಲಾ ಎಡಿಷನ್ ಸ್ಮಾರ್ಟ್​ಫೋನ್ ಸದ್ಯಕ್ಕೆ ಭಾರತದಲ್ಲಿ ಒಂದು ಮಾದರಿಯಲ್ಲಷ್ಟೆ ಅನಾವರಣಗೊಂಡಿದೆ. ಇದರ 8GB RAM + 128GB ಸ್ಟೋರೇಜ್ ಸಾಮರ್ಥ್ಯಕ್ಕೆ 20,999 ರೂ. ನಿಗದಿ ಮಾಡಲಾಗಿದೆ. ಕಪ್ಪು ಬಣ್ಣದಲ್ಲಿ ರಿಲೀಸ್ ಆಗಿರುವ ಈ ಸ್ಮಾರ್ಟ್​ಫೋನ್​ನ ಹಿಂಭಾಗ ಕೋಕಾ-ಕೋಲಾದ ಲೋಗೋ ಅಳವಡಿಸಲಾಗಿದೆ. ಈ ಫೋನ್ ಇದೇ ಫೆಬ್ರವರಿ 14 ರಿಂದ ಪ್ರಸಿದ್ಧ ಇ ಕಾಮರ್ಸ್ ತಾಣ ಫ್ಲಿಪ್​ಕಾರ್ಟ್ ಮೂಲಕ ಖರೀದಿಗೆ ಸಿಗಲಿದೆ.

 

OnePlus 11 5G: 2023ರ ಮೊದಲ ಸ್ಮಾರ್ಟ್​ಫೋನ್ ಪರಿಚಯಿಸಿದ ಒನ್​ಪ್ಲಸ್: ಇದರ ಬೆಲೆ 61,999 ರೂ.: ಏನಿದೆ ಫೀಚರ್ಸ್?

ಫೀಚರ್ಸ್ ಏನು?:

ರಿಯಲ್ ಮಿ 10 ಪ್ರೊ ಕೋಕಾ-ಕೋಲಾ ಎಡಿಷನ್ ಸ್ಮಾರ್ಟ್​ಫೋನ್ 1080*2400 ಪಿಕ್ಸೆಲ್ ರೆಸಲೋಷನ್ ಸಾಮರ್ಥ್ಯದ 6.72 ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಹಾಗೆಯೇ ಇದು 120Hz ರಿಫ್ರೆಶ್ ರೇಟ್‌ ನೀಡಲಿದ್ದು, ಕ್ವಾಲ್‌ಕಾಮ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಕೋಕಾ-ಕೋಲಾ ಥೀಮ್ ಹೊಂದಿರುವ ಆಂಡ್ರಾಯ್ಡ್ 13 OS ಮೂಲಕ ರನ್ ಆಗುತ್ತದೆ.

ಹಾಗೆಯೇ ಡ್ಯುಯಲ್ ರಿಯರ್‌ ಕ್ಯಾಮೆರಾ ರಚನೆ ಪಡೆದುಕೊಂಡಿದ್ದು, 108 ಮೆಗಾಪಿಕ್ಸೆಲ್ ಸ್ಯಾಮ್​ಸಂಗ್ HM6 ಪ್ರೈಮರಿ ಸೆನ್ಸಾರ್​ನ ಮುಖ್ಯ ಕ್ಯಾಮೆರಾ ಅಳವಡಿಸಲಾಗಿದೆ. 2 ಮೆಗಾಪಿಕ್ಸೆಲ್ ಸಾಮರ್ಥ್ಯದ ಮ್ಯಾಕ್ರೋ ಸೆನ್ಸರ್‌ ಆಯ್ಕೆ ಇದೆ. ಮುಂಭಾಗ ಸೆಲ್ಫೀಗಾಗಿ 16 ಮೆಗಾಪಿಕ್ಸೆಲ್ ಕ್ಯಾಮೆರಾ ನೀಡಲಾಗಿದೆ. ಇದರಲ್ಲಿರುವ ಕ್ಯಾಮೆರಾ ಅದ್ಭುತವಾಗಿದ್ದು ಉತ್ತಮ ಕ್ವಾಲಿಟಿಯಲ್ಲಿ ಫೋಟೋಗಳನ್ನು ಸೆರೆ ಹಿಡಿಯುತ್ತದೆ.

ರಿಯಲ್ ಮಿ 10 ಪ್ರೊ ಕೋಕಾ-ಕೋಲಾ ಎಡಿಷನ್ ಸ್ಮಾರ್ಟ್​ಫೋನಿನ ಬ್ಯಾಟರಿ ವಿಚಾರಕ್ಕೆ ಬರುವುದಾದರೆ 5000mAh ಸಾಮರ್ಥ್ಯದ ಬ್ಯಾಟರಿ ಇದರಲ್ಲಿದ್ದು, ಇದು 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಸೈಡ್ ಮೌಂಟೆಡ್ ಫಿಂಗರ್​ಪ್ರಿಂಟ್ ನೀಡಲಾಗಿದೆ. ಮೈಕ್ರೊ ಎಸ್​ಡಿ ಕಾರ್ಡ್ ಮೂಲಕ 1TB ವರೆಗೆ ವಿಸ್ತರಿಸಬಹುದು ಎಂದು ಕಂಪನಿ ಹೇಳಿದೆ. ಕನೆಕ್ಟಿವಿಟಿ ಆಯ್ಕೆಯಲ್ಲಿ 5G ಬೆಂಬಲ ಪಡೆದುಕೊಂಡಿದೆ. ಉಳಿದಂತೆ 4G, Wi-Fi 6, ಬ್ಲೂಟೂತ್ 5.2, GPS ಮತ್ತು USB ಟೈಪ್-ಸಿ ಸೇರಿದಂತೆ ಇತ್ತೀಚೆಗಿನ ಎಲ್ಲ ಆಯ್ಕೆ ನೀಡಲಾಗಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:26 pm, Fri, 10 February 23