ಪ್ರಸಿದ್ಧ ರಿಯಲ್ ಮಿ (Realme) ಕಂಪನಿಯ ಸ್ಮಾರ್ಟ್ಫೋನ್ಗಳು ಬಿಡುಗಡೆ ಆಗುತ್ತಿರುವ ಸಂಖ್ಯೆ ಈಗ ಕಡಿಮೆ ಆಗಿದೆ. ಹಲವು ದಿನಗಳ ಬಳಿಕ ಮೊನ್ನೆಯಷ್ಟೆ ಭಾರತದಲ್ಲಿ ರಿಯಲ್‌ಮಿ 10 ಪ್ರೊ ಸರಣಿಯ (Realme 10 5G) ಸ್ಮಾರ್ಟ್ಫೋನ್ಗಳನ್ನು ಅನಾವರಣ ಮಾಡಿತ್ತು. ಈ ಸರಣಿಯಲ್ಲಿ ರಿಯಲ್ ಮಿ 10 ಪ್ರೊ 5G (Realme 10 Pro) ಮತ್ತು ರಿಯಲ್ ಮಿ 10 ಪ್ರೊ + 5G ಎಂಬ ಎರಡು ಮೊಬೈಲ್ ಇದೆ. ಈ ಎರಡೂ ಸ್ಮಾರ್ಟ್ಫೋನ್ಗಳಲ್ಲಿ ಅತ್ಯಂತ ಬಲಿಷ್ಠವದ ಪ್ರೊಸೆಸರ್, ಆಕರ್ಷಕ ಕ್ಯಾಮೆರಾ ನೀಡಲಾಗಿದೆ. ಈ ಸರಣಿಯಲ್ಲಿನ ರಿಯಲ್ ಮಿ 10 ಪ್ರೊ 5G ಸ್ಮಾರ್ಟ್‌ಫೋನ್ ಮೊದಲ ಸೇಲ್ ಕಾಣುತ್ತಿದೆ. ಜನಪ್ರಿಯ ಇ ಕಾಮರ್ಸ್ ತಾಣವಾದ ಫ್ಲಿಪ್‌ಕಾರ್ಟ್ ಪ್ಲಾಟ್‌ಫಾರ್ಮ್ ಮೂಲಕ ಖರೀದಿಸಿಬಹುದು. ಈ ಫೋನಿನ ಬೆಲೆ, ಫೀಚರ್ಸ್ ಕುರಿತ ಪೂರ್ಣ ಮಾಹಿತಿ ಇಲ್ಲಿದೆ.
ಬೆಲೆ ಎಷ್ಟು?:
ರಿಯಲ್ ಮಿ 10 ಪ್ರೊ 5G ಸ್ಮಾರ್ಟ್‌ಫೋನ್ ಕೂಡ ಎರಡು ಆಯ್ಕೆಯಲ್ಲಿದೆ. ಇದರ 6GB RAM + 128GB ಸ್ಟೋರೇಜ್ ಮಾದರಿಯ ಬೆಲೆ 18,999ರೂ. ಆಗಿದೆ. 8GB RAM + 128GB ಸ್ಟೋರೇಜ್ ರೂಪಾಂತರಕ್ಕೆ 19,999ರೂ. ನಿಗದಿ ಮಾಡಲಾಗಿದೆ. ಫಸ್ಟ್ ಸೇಲ್ ಆಫರ್ ಪ್ರಯುಕ್ತ SBI ಮತ್ತು HDFC ಬ್ಯಾಂಕ್ ಕಾರ್ಡ್ ಮೂಲಕ ಖರೀದಿಸಿದರೆ 1,000 ರೂ. ರಿಯಾಯಿತಿ ಪಡೆದುಕೊಳ್ಳಬಹುದಾಗಿದೆ. ಅಲ್ಲದೆ EMI ವಹಿವಾಟು ಹಾಗೂ SBI ಕ್ರೆಡಿಟ್ ಕಾರ್ಡ್ ಹೊಂದಿರುವವರು 750 ರೂಪಾಯಿಗಳವರೆಗೆ ಡಿಸ್ಕೌಂಟ್ ಪಡೆದುಕೊಳ್ಳಬಹುದು.
Year Ender 2022: 2022ರ ನಂಬರ್ 1 ಸ್ಮಾರ್ಟ್‌ಫೋನ್ ಯಾವುದು ಗೊತ್ತೇ?: ಇಲ್ಲಿದೆ ನೋಡಿ
ರಿಯಲ್ ಮಿ 10 ಪ್ರೊ 5G:
ರಿಯಲ್ ಮಿ 10 ಪ್ರೊ 5G ಸ್ಮಾರ್ಟ್‌ಫೋನ್ 1,080x 2,400ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.72 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಇದರಲ್ಲಿ 120Hz ರಿಫ್ರೆಶ್ ರೇಟ್, 240Hz ಟಚ್ ಸ್ಯಾಂಪ್ಲಿಂಗ್ ರೇಟ್ ನೀಡಲಾಗಿದ್ದು, ಸ್ನಾಪ್‌ಡ್ರಾಗನ್ 695 5G SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ HM6 ಸೆನ್ಸಾರ್ ನೀಡಲಾಗಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಪೋರ್ಟ್ರೇಟ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W SuperVOOC ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇದು ಕೇವಲ 20 ನಿಮಿಷಗಳಲ್ಲಿ 50% ಚಾರ್ಜ್ ಮಾಡಬಹುದು ಎಂದು ಕಂಪನಿ ಹೇಳಿಕೊಂಡಿದೆ.
ರಿಯಲ್ ಮಿ 10ಪ್ರೊ + 5G:
ರಿಯಲ್ ಮಿ 10ಪ್ರೊ + 5G ಸ್ಮಾರ್ಟ್‌ಫೋನ್ 6.7 ಇಂಚಿನ ಕರ್ವ್ಡ್ ಅಮೋಲೆಡ್ ಡಿಸ್ ಪ್ಲೇ ಹೊಂದಿದೆ. ಇದು 120Hz ರಿಫ್ರೆಶ್ ರೇಟ್ನಿಂದ ಕೂಡಿದೆ. ಆಕ್ಟಾ-ಕೋರ್ 6nm ಮೀಡಿಯಾ ಟೆಕ್ ಡೈಮೆನ್ಸಿಟಿ 1080 5G SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ G68 GPU ಸಪೋರ್ಟ್ ಪಡೆದಿದೆ. ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಕೂಡ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ HM6 ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 67W SuperVOOC ಚಾರ್ಜಿಂಗ್ ಬೆಂಬಲಿಸಲಿದೆ. ಇದರಿಂದ 47 ನಿಮಿಷಗಳಲ್ಲಿ 100% ಚಾರ್ಜ್ ಮಾಡಬಹುದಾಗಿದೆ.
ಈ ಸ್ಮಾರ್ಟ್‌ಫೋನ್ 6GB RAM + 128GB ಸ್ಟೋರೇಜ್ ಆಯ್ಕೆಯ ಬೆಲೆ 24,999ರೂ., 8GB RAM + 128GB ಸ್ಟೋರೇಜ್ ಮಾದರಿಗೆ 25,999ರೂ. ಇದೆ. 8GB RAM + 256GB ಸ್ಟೋರೇಜ್ ಮಾಡೆಲ್ ಆಯ್ಕೆಯ ಬೆಲೆ 27,999ರೂ. ಆಗಿದೆ.
ಮತ್ತಷ್ಟು ತಂತ್ರಜ್ಞಾನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ