AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Realme 10 Pro+: 108MP ಕ್ಯಾಮೆರಾದ ರಿಯಲ್ ಮಿ 10 ಪ್ರೊ+ 5G ಸ್ಮಾರ್ಟ್‌ಫೋನ್‌ ಈಗ ಖರೀದಿಗೆ ಲಭ್ಯ: ಬೆಲೆ ಎಷ್ಟು?

ರಿಯಲ್‌ ಮಿ 10 ಪ್ರೊ+ 5G ಸ್ಮಾರ್ಟ್‌ಫೋನ್‌ ಮೊದಲ ಸೇಲ್ ಕಾಣುತ್ತಿದೆ. ಜನಪ್ರಿಯ ಇ ಕಾಮರ್ಸ್‌ ತಾಣವಾದ ಫ್ಲಿಪ್‌ಕಾರ್ಟ್‌ ಪ್ಲಾಟ್‌ಫಾರ್ಮ್ ಮೂಲಕ ಖರೀದಿಸಿಬಹುದು. ಈ ಫೋನಿನ ಬೆಲೆ, ಫೀಚರ್ಸ್ ಕುರಿತ ಪೂರ್ಣ ಮಾಹಿತಿ ಇಲ್ಲಿದೆ.

Realme 10 Pro+: 108MP ಕ್ಯಾಮೆರಾದ ರಿಯಲ್ ಮಿ 10 ಪ್ರೊ+ 5G ಸ್ಮಾರ್ಟ್‌ಫೋನ್‌ ಈಗ ಖರೀದಿಗೆ ಲಭ್ಯ: ಬೆಲೆ ಎಷ್ಟು?
Realme 10 Pro Plus
TV9 Web
| Updated By: Vinay Bhat|

Updated on:Dec 15, 2022 | 2:13 PM

Share

ಪ್ರಸಿದ್ಧ ರಿಯಲ್ ಮಿ (Realme) ಕಂಪನಿಯ ಸ್ಮಾರ್ಟ್​ಫೋನ್​ಗಳು ಬಿಡುಗಡೆ ಆಗುತ್ತಿರುವ ಸಂಖ್ಯೆ ಈಗ ಕಡಿಮೆ ಆಗಿದೆ. ಹಲವು ದಿನಗಳ ಬಳಿಕ ಮೊನ್ನೆಯಷ್ಟೆ ಭಾರತದಲ್ಲಿ ರಿಯಲ್‌ಮಿ 10 ಪ್ರೊ ಸರಣಿಯ (Realme 10 5G) ಸ್ಮಾರ್ಟ್‌ಫೋನ್​ಗಳನ್ನು ಅನಾವರಣ ಮಾಡಿತ್ತು. ಈ ಸರಣಿಯಲ್ಲಿ ರಿಯಲ್‌ ಮಿ 10 ಪ್ರೊ 5G (Realme 10 Pro) ಮತ್ತು ರಿಯಲ್‌ ಮಿ 10 ಪ್ರೊ + 5G ಎಂಬ ಎರಡು ಮೊಬೈಲ್ ಇದೆ. ಈ ಎರಡೂ ಸ್ಮಾರ್ಟ್​ಫೋನ್​ಗಳಲ್ಲಿ ಅತ್ಯಂತ ಬಲಿಷ್ಠವದ ಪ್ರೊಸೆಸರ್, ಆಕರ್ಷಕ ಕ್ಯಾಮೆರಾ ನೀಡಲಾಗಿದೆ. ಈ ಸರಣಿಯಲ್ಲಿನ ರಿಯಲ್‌ ಮಿ 10 ಪ್ರೊ+ 5G ಸ್ಮಾರ್ಟ್‌ಫೋನ್‌ ಮೊದಲ ಸೇಲ್ ಕಾಣುತ್ತಿದೆ. ಜನಪ್ರಿಯ ಇ ಕಾಮರ್ಸ್‌ ತಾಣವಾದ ಫ್ಲಿಪ್‌ಕಾರ್ಟ್‌ ಪ್ಲಾಟ್‌ಫಾರ್ಮ್ ಮೂಲಕ ಖರೀದಿಸಿಬಹುದು. ಈ ಫೋನಿನ ಬೆಲೆ, ಫೀಚರ್ಸ್ ಕುರಿತ ಪೂರ್ಣ ಮಾಹಿತಿ ಇಲ್ಲಿದೆ.

ಬೆಲೆ ಎಷ್ಟು?:

ರಿಯಲ್‌ ಮಿ 10 ಪ್ರೊ+ 5G ಸ್ಮಾರ್ಟ್‌ಫೋನ್‌ 6GB RAM + 128GB ಸ್ಟೋರೇಜ್ ಆಯ್ಕೆಯ ಬೆಲೆ 24,999ರೂ., 8GB RAM + 128GB ಸ್ಟೋರೇಜ್ ಮಾದರಿಗೆ 25,999ರೂ. ಇದೆ. 8GB RAM + 256GB ಸ್ಟೋರೇಜ್ ಮಾಡೆಲ್ ಆಯ್ಕೆಯ ಬೆಲೆ 27,999ರೂ. ಆಗಿದೆ. ಇದರ ಜೊತೆ ಬಿಡುಗಡೆ ಆದ ರಿಯಲ್‌ ಮಿ 10ಪ್ರೊ 5G ಸ್ಮಾರ್ಟ್‌ಫೋನ್‌ ಕೂಡ ಎರಡು ಆಯ್ಕೆಯಲ್ಲಿದೆ. ಇದರ 6GB RAM + 128GB ಸ್ಟೋರೇಜ್ ಮಾದರಿಯ ಬೆಲೆ 18,999ರೂ. ಆಗಿದೆ. 8GB RAM + 128GB ಸ್ಟೋರೇಜ್ ರೂಪಾಂತರಕ್ಕೆ 19,999ರೂ. ನಿಗದಿ ಮಾಡಲಾಗಿದೆ.

ಇದನ್ನೂ ಓದಿ
Image
Year Ender 2022: 2022ರ ನಂಬರ್ 1 ಸ್ಮಾರ್ಟ್​ಫೋನ್ ಯಾವುದು ಗೊತ್ತೇ?: ಇಲ್ಲಿದೆ ನೋಡಿ
Image
Paytm: ಪೇಟಿಎಂನಿಂದ ಧಮಾಕ ಆಫರ್: ವಿದ್ಯುತ್ ಬಿಲ್ ಪಾವತಿಸಿದರೆ ಅಷ್ಟೂ ಹಣ ವಾಪಸ್
Image
Twitter Gold Checkmark: ಟ್ವಿಟರ್​ನಲ್ಲಿ ಬ್ಲೂ ಜತೆಗೆ ಗ್ರೇ, ಗೋಲ್ಡ್ ಟಿಕ್; ಏನಿದರ ಒಳಮರ್ಮ? ಇಲ್ಲಿದೆ ನೋಡಿ
Image
ಓಲಾ, ಉಬರ್ ದರ ಹೆಚ್ಚಳದಿಂದ ಬೇಸತ್ತಿದ್ದೀರಾ? ದಿಢೀರ್ ದರ ಹೆಚ್ಚಳ ತಪ್ಪಿಸಲು ಇಲ್ಲಿದೆ ಟಿಪ್ಸ್

ರಿಯಲ್‌ ಮಿ 10ಪ್ರೊ + 5G:

ರಿಯಲ್‌ ಮಿ 10ಪ್ರೊ + 5G ಸ್ಮಾರ್ಟ್‌ಫೋನ್‌ 6.7 ಇಂಚಿನ ಕರ್ವ್ಡ್‌ ಅಮೋಲೆಡ್‌ ಡಿಸ್‌ ಪ್ಲೇ ಹೊಂದಿದೆ. ಇದು 120Hz ರಿಫ್ರೆಶ್ ರೇಟ್​ನಿಂದ ಕೂಡಿದೆ. ಆಕ್ಟಾ-ಕೋರ್ 6nm ಮೀಡಿಯಾ ಟೆಕ್ ಡೈಮೆನ್ಸಿಟಿ 1080 5G SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ G68 GPU ಸಪೋರ್ಟ್‌ ಪಡೆದಿದೆ. ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಕೂಡ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ HM6 ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 67W SuperVOOC ಚಾರ್ಜಿಂಗ್ ಬೆಂಬಲಿಸಲಿದೆ. ಇದರಿಂದ 47 ನಿಮಿಷಗಳಲ್ಲಿ 100% ಚಾರ್ಜ್‌ ಮಾಡಬಹುದಾಗಿದೆ.

Online Fraud Awareness: ಆನ್​ಲೈನ್ ಶಾಪಿಂಗ್ ವೇಳೆ ವಂಚನೆಗಳಿಂದ ರಕ್ಷಣೆಗೆ ಈ ವಿಧಾನಗಳನ್ನು ಅನುಸರಿಸಿ

ರಿಯಲ್‌ ಮಿ 10 ಪ್ರೊ 5G:

ರಿಯಲ್‌ ಮಿ 10 ಪ್ರೊ 5G ಸ್ಮಾರ್ಟ್‌ಫೋನ್‌ 1,080x 2,400ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.72 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಇದರಲ್ಲಿ 120Hz ರಿಫ್ರೆಶ್ ರೇಟ್, 240Hz ಟಚ್ ಸ್ಯಾಂಪ್ಲಿಂಗ್ ರೇಟ್ ನೀಡಲಾಗಿದ್ದು, ಸ್ನಾಪ್‌ಡ್ರಾಗನ್ 695 5G SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ HM6 ಸೆನ್ಸಾರ್‌ ನೀಡಲಾಗಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಪೋರ್ಟ್ರೇಟ್ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W SuperVOOC ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇದು ಕೇವಲ 20 ನಿಮಿಷಗಳಲ್ಲಿ 50% ಚಾರ್ಜ್‌ ಮಾಡಬಹುದು ಎಂದು ಕಂಪನಿ ಹೇಳಿಕೊಂಡಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:13 pm, Thu, 15 December 22

‘ಪವಿತ್ರಾ ಗೌಡ ಶ್ರೀಮಂತೆ ಅಲ್ಲ, ತುಂಬ ಕಷ್ಟ ಇದೆ’: ಲಾಯರ್ ಅಚ್ಚರಿಯ ಹೇಳಿಕೆ
‘ಪವಿತ್ರಾ ಗೌಡ ಶ್ರೀಮಂತೆ ಅಲ್ಲ, ತುಂಬ ಕಷ್ಟ ಇದೆ’: ಲಾಯರ್ ಅಚ್ಚರಿಯ ಹೇಳಿಕೆ
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾದ ಸಚಿವ ಎಸ್. ಜೈಶಂಕರ್
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾದ ಸಚಿವ ಎಸ್. ಜೈಶಂಕರ್
ನಮಸ್ತೇ ಸದಾ ವತ್ಸಲೇ: ವಿಧಾನಸಭೆಯಲ್ಲಿ RSS ಗೀತೆ ಹಾಡಿದ ಡಿಕೆ ಶಿವಕುಮಾರ್
ನಮಸ್ತೇ ಸದಾ ವತ್ಸಲೇ: ವಿಧಾನಸಭೆಯಲ್ಲಿ RSS ಗೀತೆ ಹಾಡಿದ ಡಿಕೆ ಶಿವಕುಮಾರ್
ತಿಮರೋಡಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ: ಪೂಜಾರ್, ವಕೀಲ
ತಿಮರೋಡಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ: ಪೂಜಾರ್, ವಕೀಲ
ಎನ್​ಡಿಆರ್​ಎಫ್ ನಿಯಮ ಉಲ್ಲಂಘಿಸಿ ವಯನಾಡ್​ಗೆ ನೆರವು ನೀಡಲಾಗಿದೆ: ಅಶೋಕ
ಎನ್​ಡಿಆರ್​ಎಫ್ ನಿಯಮ ಉಲ್ಲಂಘಿಸಿ ವಯನಾಡ್​ಗೆ ನೆರವು ನೀಡಲಾಗಿದೆ: ಅಶೋಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ