Best Camera Phone: 20 ಸಾವಿರ ರೂ. ಒಳಗಡೆ ಬೊಂಬಾಟ್ ಕ್ಯಾಮೆರಾದ ಫೋನ್ ಹುಡುಕುತ್ತಿದ್ದರೆ ಇದುವೇ ಬೆಸ್ಟ್ ಆಯ್ಕೆ
Best 108MP Camera Phone: ರಿಯಲ್ ಮಿ 10 ಪ್ರೊ 5G ಸ್ಮಾರ್ಟ್‌ಫೋನ್ ಎರಡು ದಿನಗಳ ಹಿಂದೆಯಷ್ಟೇ ಭಾರತದಲ್ಲಿ ಬಿಡುಗಡೆ ಆಗಿದೆ. ಇದು ಡಿಸೆಂಬರ್ 16 ರಿಂದ ಖರೀದಿಗೆ ಸಿಗುತ್ತದೆ. ಇದರ 6GB RAM + 128GB ಸ್ಟೋರೇಜ್ ಮಾದರಿಯ ಬೆಲೆ 18,999 ರೂ.
ಭಾರತೀಯ ಸ್ಮಾರ್ಟ್‌ಫೋನ್ (Smartphone) ಮಾರುಕಟ್ಟೆಯಲ್ಲಿ ಈಗೀಗ ಮೊಬೈಲ್ಗಳ ಬಿಡುಗಡೆ ಸಂಖ್ಯೆ ಏರಿಕೆಯಾಗುತ್ತಿದೆ. ಅದರಲ್ಲೂ ಬಜೆಟ್ ಬೆಲೆಯ ಫೋನ್ಗಳಿಗೆ ಎಲ್ಲಿಲ್ಲದ ಬೇಡಿಕೆ ಇದೆ. ಮುಖ್ಯವಾಗಿ ಆಕರ್ಷಕ ಕ್ಯಾಮೆರಾ (Camera), ಉತ್ತಮ ಬ್ಯಾಟರಿ ಇರುವ ಫೋನ್ ಕಡಿಮೆ ಬೆಲೆಗೆ ಬಿಡುಗಡೆ ಆಯಿತೆಂದರೆ ಜನರು ಖರೀದಿಸಲು ಮುಗಿಬೀಳುತ್ತಾರೆ. ಈಗ ಭಾರತದ ಮಾರ್ಕೆಟ್ನಲ್ಲಿ 108 ಮೆಗಾಫಿಕ್ಸೆಲ್ ಸ್ಮಾರ್ಟ್ಫೋನ್ಗೆ (108MP Camera Phone) ಭರ್ಜರಿ ಬೇಡಿಕೆ ಇದೆ. ಇದೇ ಕಾರಣಕ್ಕೆ ಕೆಲ ಕಂಪನಿಗಳು ದೇಶದಲ್ಲಿ ಬಜೆಟ್ ಬೆಲೆಗೆ 108MP ಸಾಮರ್ಥ್ಯದ ಸೆನ್ಸಾರ್ನಲ್ಲಿ ಫೋನ್ ರಿಲೀಸ್ ಮಾಡುತ್ತಿದೆ. ಹಾಗಾದ್ರೆ ನೀವು 20,000 ರೂ. ಒಳಗಡೆ ಖರೀದಿಸಬಹುದಾದ ಉತ್ತಮ ಕ್ಯಾಮೆರಾದ, 108 ಮೆಗಾಫಿಕ್ಸೆಲ್ನ ಅತ್ಯುತ್ತಮ ಸ್ಮಾರ್ಟ್ಫೋನ್ಗಳು ಯಾವುವು ಎಂಬುದನ್ನು ನೋಡೋಣ.
ರಿಯಲ್ ಮಿ 10 ಪ್ರೊ 5G:
ರಿಯಲ್ ಮಿ 10 ಪ್ರೊ 5G ಸ್ಮಾರ್ಟ್‌ಫೋನ್ ಎರಡು ದಿನಗಳ ಹಿಂದೆಯಷ್ಟೇ ಭಾರತದಲ್ಲಿ ಬಿಡುಗಡೆ ಆಗಿದೆ. ಇದು ಡಿಸೆಂಬರ್ 16 ರಿಂದ ಖರೀದಿಗೆ ಸಿಗುತ್ತದೆ. ಇದರ 6GB RAM + 128GB ಸ್ಟೋರೇಜ್ ಮಾದರಿಯ ಬೆಲೆ 18,999 ರೂ. ಆಗಿದೆ. ಈ ಫೋನ್ 6.72 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಸ್ನಾಪ್‌ಡ್ರಾಗನ್ 695 5G SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ HM6 ಸೆನ್ಸಾರ್ ನೀಡಲಾಗಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಪೋರ್ಟ್ರೇಟ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. 5,000mAh ಸಾಮರ್ಥ್ಯದ ಬ್ಯಾಟರಿ33W SuperVOOC ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.
ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್:
ಈ ಸ್ಮಾರ್ಟ್‌ಫೋನ್ ಕೂಡ 6.67 ಇಂಚಿನ FHD+ ಅಮೊಲೊಡ್ ಡಿಸ್‌ಪ್ಲೇ ಹೊಂದಿದೆ. ಆಕ್ಟಾಕೋರ್ ಸ್ನಾಪ್‌ಡ್ರಾಗನ್ 732G 8nm ಪ್ರೊಸೆಸರ್ ಅಳವಡಿಸಲಾಗಿದೆ. ಆಂಡ್ರಾಯ್ಡ್ 11 ಮೂಲಕ ಇದು ಕಾರ್ಯನಿರ್ವಹಿಸುತ್ತಿದ್ದು, 5020mAh ಸಾಮರ್ಥ್ಯದ ಬಿಗ್ ಬ್ಯಾಟರಿ ನೀಡಲಾಗಿದೆ. 108 ಮೆಗಾಫಿಕ್ಸೆಲ್ನ ಕ್ಯಾಮೆರಾ ನೀಡಲಾಗಿದೆ. ಇದರ ಜೊತೆಗೆ 8 ಮೆಗಾಫಿಕ್ಸೆಲ್ ಮತ್ತು 2+5 ಮೆಗಾಫಿಕ್ಸೆಲ್ನ ಕ್ಯಾಮೆರಾ ಕೂಡ ಇದೆ. ಸೆಲ್ಫೀಗಾಗಿ 16 ಮೆಗಾಫಿಕ್ಸೆಲ್ ಕ್ಯಾಮೆರಾ ನೀಡಲಾಗಿದೆ. ಇದರ ಬೆಲೆ 19,999 ರೂ.
Tech Tips: ಗೂಗಲ್ ಫೋಟೋಸ್ನಲ್ಲಿ ಡಿಲೀಟ್ ಆದ ಫೋಟೋ, ವಿಡಿಯೋವನ್ನು ಮರಳಿ ಪಡೆಯುವುದು ಹೇಗೆ?
ಮೋಟೋ ಎಡ್ಜ್ 20 ಫ್ಯೂಶನ್:
ಈ ಸ್ಮಾರ್ಟ್‌ಫೋನ್ 6.67 ಇಂಚಿನ FHD+ ಅಮೊಲೊಡ್ ಡಿಸ್‌ಪ್ಲೇ ಹೊಂದಿದೆ. ಆಕ್ಟಾಕೋರ್ ಮೀಡಿಯಾ ಟೆಕ್ ಡೈಮನ್ಸಿಟಿ 800U ಪ್ರೊಸೆಸರ್ ಅಳವಡಿಸಲಾಗಿದೆ. ಆಂಡ್ರಾಯ್ಡ್ 11 ಮೂಲಕ ಇದು ಕಾರ್ಯನಿರ್ವಹಿಸುತ್ತಿದ್ದು, 5000mAh ಸಾಮರ್ಥ್ಯದ ಬಿಗ್ ಬ್ಯಾಟರಿ ನೀಡಲಾಗಿದೆ. ಮುಖ್ಯವಾಗಿ 108 ಮೆಗಾಫಿಕ್ಸೆಲ್ನ ಕ್ಯಾಮೆರಾ ನೀಡಲಾಗಿದೆ. ಇದರ ಜೊತೆಗೆ 8 ಮೆಗಾಫಿಕ್ಸೆಲ್ ಮತ್ತು 2 ಮೆಗಾಫಿಕ್ಸೆಲ್ ಕ್ಯಾಮೆರಾ ಕೂಡ ಇದೆ. ಸೆಲ್ಫೀಗಾಗಿ 32 ಮೆಗಾಫಿಕ್ಸೆಲ್ ಕ್ಯಾಮೆರಾ ನೀಡಲಾಗಿದೆ. ಇದರ ಬೆಲೆ 18,999 ರೂ.
ರೆಡ್ಮಿ ನೋಟ್ 11 ಪ್ರೊ ಪ್ಲಸ್:
ಈ ಸ್ಮಾರ್ಟ್‌ಫೋನ್ ಕೂಡ 6.67 ಇಂಚಿನ FHD+ ಅಮೊಲೊಡ್ ಡಿಸ್‌ಪ್ಲೇ ಹೊಂದಿದೆ. ಆಕ್ಟಾಕೋರ್ ಸ್ನಾಪ್‌ಡ್ರಾಗನ್ 695 8nm ಪ್ರೊಸೆಸರ್ ಅಳವಡಿಸಲಾಗಿದೆ. ಆಂಡ್ರಾಯ್ಡ್ 11 ಮೂಲಕ ಇದು ಕಾರ್ಯನಿರ್ವಹಿಸುತ್ತಿದ್ದು, 5000mAh ಸಾಮರ್ಥ್ಯದ ಬಿಗ್ ಬ್ಯಾಟರಿ ನೀಡಲಾಗಿದೆ. 108 ಮೆಗಾಫಿಕ್ಸೆಲ್ನ ಕ್ಯಾಮೆರಾ ನೀಡಲಾಗಿದೆ. ಇದರ ಜೊತೆಗೆ 8 ಮೆಗಾಫಿಕ್ಸೆಲ್ ಮತ್ತು 2 ಮೆಗಾಫಿಕ್ಸೆಲ್ನ ಕ್ಯಾಮೆರಾ ಕೂಡ ಇದೆ. ಸೆಲ್ಫೀಗಾಗಿ 16 ಮೆಗಾಫಿಕ್ಸೆಲ್ ಕ್ಯಾಮೆರಾ ನೀಡಲಾಗಿದೆ. ಇದರ ಬೆಲೆ 19,999 ರೂ.
ರಿಯಲ್ ಮಿ 9:
ಈ ಸ್ಮಾರ್ಟ್‌ಫೋನ್ 6.4 ಇಂಚಿನ FHD+ ಅಮೊಲೊಡ್ ಡಿಸ್‌ಪ್ಲೇ ಹೊಂದಿದೆ. ಆಕ್ಟಾಕೋರ್ ಸ್ನಾಪ್‌ಡ್ರಾಗನ್ 680 6nm ಪ್ರೊಸೆಸರ್ ಅಳವಡಿಸಲಾಗಿದೆ. ಆಂಡ್ರಾಯ್ಡ್ 12 ಮೂಲಕ ಇದು ಕಾರ್ಯನಿರ್ವಹಿಸುತ್ತಿದ್ದು, 5000mAh ಸಾಮರ್ಥ್ಯದ ಬಿಗ್ ಬ್ಯಾಟರಿ ನೀಡಲಾಗಿದೆ. 108 ಮೆಗಾಫಿಕ್ಸೆಲ್ನ ಕ್ಯಾಮೆರಾ ನೀಡಲಾಗಿದೆ. ಇದರ ಜೊತೆಗೆ 8 ಮೆಗಾಫಿಕ್ಸೆಲ್ ಮತ್ತು 2+2 ಮೆಗಾಫಿಕ್ಸೆಲ್ನ ಕ್ಯಾಮೆರಾ ಕೂಡ ಇದೆ. ಸೆಲ್ಫೀಗಾಗಿ 16 ಮೆಗಾಫಿಕ್ಸೆಲ್ ಕ್ಯಾಮೆರಾ ನೀಡಲಾಗಿದೆ. ಇದರ ಬೆಲೆ 18,999 ರೂ.
ರೆಡ್ಮಿ ನೋಟ್ 11 ಪ್ರೊ:
ಈ ಸ್ಮಾರ್ಟ್‌ಫೋನ್ ಕೂಡ 6.67 ಇಂಚಿನ FHD+ ಅಮೊಲೊಡ್ ಡಿಸ್‌ಪ್ಲೇ ಹೊಂದಿದೆ. ಆಕ್ಟಾಕೋರ್ ಮೀಡಿಯಾ ಟೆಕ್ ಹೀಲಿಯೊ G96 ಪ್ರೊಸೆಸರ್ ಅಳವಡಿಸಲಾಗಿದೆ. ಆಂಡ್ರಾಯ್ಡ್ 11 ಮೂಲಕ ಇದು ಕಾರ್ಯನಿರ್ವಹಿಸುತ್ತಿದ್ದು, 5000mAh ಸಾಮರ್ಥ್ಯದ ಬಿಗ್ ಬ್ಯಾಟರಿ ನೀಡಲಾಗಿದೆ. ಮುಖ್ಯವಾಗಿ 108 ಮೆಗಾಫಿಕ್ಸೆಲ್ನ ಕ್ಯಾಮೆರಾ ನೀಡಲಾಗಿದೆ. ಇದರ ಜೊತೆಗೆ 8 ಮೆಗಾಫಿಕ್ಸೆಲ್, 2 ಮೆಗಾಫಿಕ್ಸೆಲ್ನ 2 ಕ್ಯಾಮೆರಾ ಕೂಡ ಇದೆ. ಸೆಲ್ಫೀಗಾಗಿ 16 ಮೆಗಾಫಿಕ್ಸೆಲ್ ಕ್ಯಾಮೆರಾ ನೀಡಲಾಗಿದೆ. ಇದರ ಬೆಲೆ 17,999 ರೂ.
ಮೋಟೋ G60:
ಈ ಸ್ಮಾರ್ಟ್‌ಫೋನ್ 6.8 ಇಂಚಿನ FHD+ ಅಮೊಲೊಡ್ ಡಿಸ್‌ಪ್ಲೇ ಹೊಂದಿದೆ. ಆಕ್ಟಾಕೋರ್ ಸ್ನಾಪ್‌ಡ್ರಾಗನ್ 732G ಪ್ರೊಸೆಸರ್ ಅಳವಡಿಸಲಾಗಿದೆ. ಆಂಡ್ರಾಯ್ಡ್ 11 ಮೂಲಕ ಇದು ಕಾರ್ಯನಿರ್ವಹಿಸುತ್ತಿದ್ದು, 6000mAh ಸಾಮರ್ಥ್ಯದ ಬಿಗ್ ಬ್ಯಾಟರಿ ನೀಡಲಾಗಿದೆ. 108 ಮೆಗಾಫಿಕ್ಸೆಲ್ನ ಕ್ಯಾಮೆರಾ ನೀಡಲಾಗಿದೆ. ಇದರ ಜೊತೆಗೆ 8 ಮೆಗಾಫಿಕ್ಸೆಲ್ ಮತ್ತು 2 ಮೆಗಾಫಿಕ್ಸೆಲ್ನ ಕ್ಯಾಮೆರಾ ಕೂಡ ಇದೆ. ಸೆಲ್ಫೀಗಾಗಿ 32 ಮೆಗಾಫಿಕ್ಸೆಲ್ ಕ್ಯಾಮೆರಾ ನೀಡಲಾಗಿದೆ. ಇದರ ಬೆಲೆ 15,689 ರೂ.
ರೆಡ್ಮಿ ನೋಟ್ 10S:
ಈ ಸ್ಮಾರ್ಟ್‌ಫೋನ್ 6.43 ಇಂಚಿನ FHD+ ಅಮೊಲೊಡ್ ಡಿಸ್‌ಪ್ಲೇ ಹೊಂದಿದೆ. ಆಕ್ಟಾಕೋರ್ ಮೀಡಿಯಾ ಟೆಕ್ ಹೀಲಿಯೊ G96 12nm ಪ್ರೊಸೆಸರ್ ಅಳವಡಿಸಲಾಗಿದೆ. ಆಂಡ್ರಾಯ್ಡ್ 11 ಮೂಲಕ ಇದು ಕಾರ್ಯನಿರ್ವಹಿಸುತ್ತಿದ್ದು, 5000mAh ಸಾಮರ್ಥ್ಯದ ಬಿಗ್ ಬ್ಯಾಟರಿ ನೀಡಲಾಗಿದೆ. 108 ಮೆಗಾಫಿಕ್ಸೆಲ್ನ ಕ್ಯಾಮೆರಾ ನೀಡಲಾಗಿದೆ. ಇದರ ಜೊತೆಗೆ 8 ಮೆಗಾಫಿಕ್ಸೆಲ್ ಮತ್ತು 2+2 ಮೆಗಾಫಿಕ್ಸೆಲ್ನ ಕ್ಯಾಮೆರಾ ಕೂಡ ಇದೆ. ಸೆಲ್ಫೀಗಾಗಿ 16 ಮೆಗಾಫಿಕ್ಸೆಲ್ ಕ್ಯಾಮೆರಾ ನೀಡಲಾಗಿದೆ. ಇದರ ಬೆಲೆ 17,499 ರೂ.
ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ