AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Realme 11 Pro+ 5G: 60,000 ಮೊಬೈಲ್​ಗಳು ಸೇಲ್: ಮೊದಲ ದಿನವೇ ದಾಖಲೆ ಬರೆದ 200MP ಕ್ಯಾಮೆರಾದ ರಿಯಲ್ ಮಿ 11 ಪ್ರೊ+ ಸ್ಮಾರ್ಟ್​ಫೋನ್

ರಿಯಲ್ ಮಿ 11 ಪ್ರೊ+ 5G ಮೊದಲ ದಿನವೇ ಭಾರತದಲ್ಲಿ 60,000 ಯೂನಿಟ್‌ಗಳನ್ನು ಮಾರಾಟ ಮಾಡಿದೆ ಎಂದು ಕಂಪನಿ ಹೇಳಿದೆ. 25,000 ರೂ. ಗಿಂತ ಅಧಿಕ ಬೆಲೆ ಹೊಂದಿರುವ ಯಾವುದೇ ರಿಯಲ್ ಮಿಯ ಮೊಬೈಲ್ ಇಷ್ಟೊಂದು ಸೇಲ್ ಕಂಡಿಲ್ಲ.

Realme 11 Pro+ 5G: 60,000 ಮೊಬೈಲ್​ಗಳು ಸೇಲ್: ಮೊದಲ ದಿನವೇ ದಾಖಲೆ ಬರೆದ 200MP ಕ್ಯಾಮೆರಾದ ರಿಯಲ್ ಮಿ 11 ಪ್ರೊ+ ಸ್ಮಾರ್ಟ್​ಫೋನ್
Realme 11 Pro+ 5G
Vinay Bhat
|

Updated on:Jun 17, 2023 | 2:24 PM

Share

ಮುಖ್ಯಾಂಶಗಳು

  • ಮೊದಲ ದಿನವೇ ಬರೋಬ್ಬರಿ 60,000 ಮೊಬೈಲ್​ಗಳು ಸೇಲ್
  • ದಾಖಲೆ ಬರೆದ 200MP ಕ್ಯಾಮೆರಾದ ಸ್ಮಾರ್ಟ್​ಫೋನ್
  • ರಿಯಲ್ ಮಿ 11 ಪ್ರೊ+ ಫೋನ್​ಗೆ ಭರ್ಜರಿ ಬೇಡಿಕೆ

ಕಳೆದ ವಾರ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಆಗಿ ಇದೀಗ ಸೇಲ್ ಕಾಣುತ್ತಿರುವ 200 ಮೆಗಾ ಪಿಕ್ಸೆಲ್ ಕ್ಯಾಮೆರಾದ ಹೊಸ ಸ್ಮಾರ್ಟ್​ಫೋನ್ ರಿಯಲ್ ಮಿ 11 ಪ್ರೊ+ 5G (Realme 11 Pro+ 5G) ನೂತನ ದಾಖಲೆ ಬರೆದಿದೆ. ಈ ಸ್ಮಾರ್ಟ್​ಫೋನ್ ಮೊದಲ ದಿನವೇ ಭಾರತದಲ್ಲಿ 60,000 ಕ್ಕೂ ಅಧಿಕ ಯೂನಿಟ್‌ಗಳನ್ನು ಮಾರಾಟ ಮಾಡಿದೆ ಎಂದು ಕಂಪನಿ ಹೇಳಿದೆ. 25,000 ರೂ. ಗಿಂತ ಅಧಿಕ ಬೆಲೆ ಹೊಂದಿರುವ ಯಾವುದೇ ರಿಯಲ್ ಮಿಯ ಮೊಬೈಲ್ ಇಷ್ಟೊಂದು ಸೇಲ್ ಕಂಡಿಲ್ಲ. ಇದರ ಜೊತೆಗೆ ರಿಯಲ್ ಮಿ 11 ಪ್ರೊ 5G ಸ್ಮಾರ್ಟ್​ಫೋನ್ ಕೂಡ ಲಾಂಚ್ ಆಗಿತ್ತು. ಈ ಎರಡೂ ಮೊಬೈಲ್​ಗಳು ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್ ಮೂಲಕ ಖರೀದಿಗೆ ಸಿಗುತ್ತಿದೆ. ಈ ಫೋನಿನ ಬೆಲೆ, ಫೀಚರ್ಸ್ ಕುರಿತ ಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ಬೆಲೆ ಎಷ್ಟು?:

ಇದನ್ನೂ ಓದಿ
Image
Galaxy M34 5G: ಬಿಡುಗಡೆಗೆ ಸಿದ್ದವಾದ ಸ್ಯಾಮ್​ಸಂಗ್​ನ 6,000mAh ಬ್ಯಾಟರಿಯ ಹೊಸ ಸ್ಮಾರ್ಟ್​ಫೋನ್
Image
Nothing Phone 2: ಸ್ಮಾರ್ಟ್​ಫೋನ್ ಮಾರುಕಟ್ಟೆಯಲ್ಲಿ ಇತಿಹಾಸ ಸೃಷ್ಟಿಸಲು ಬರುತ್ತಿದೆ ನಥಿಂಗ್‌ ಫೋನ್‌ (2)
Image
Oppo Reno 9A: ರೆನೋ ಸರಣಿಯಲ್ಲಿ ಬಂತು ಮತ್ತೊಂದು ಸೂಪರ್ ಫೋನ್

ರಿಯಲ್ ಮಿ 11 ಪ್ರೊ 5G ಫೋನ್ ಒಟ್ಟು ಮೂರು ಸ್ಟೋರೇಜ್ ಆಯ್ಕೆಯಲ್ಲಿ ಖರೀದಿಗೆ ಸಿಗುತ್ತಿದೆ. ಇದರ 8GB RAM ಮತ್ತು 128GB ಸ್ಟೋರೇಜ್ ವೇರಿಯಂಟ್ ದರವು 23,999 ರೂ., 8GB RAM + 256GB ಮತ್ತು 12GB RAM + 256GB ಸ್ಟೋರೇಜ್ ಆಯ್ಕೆಗೆ ಕ್ರಮವಾಗಿ 24,999 ರೂ. ಹಾಗೂ 27,999 ರೂ. ನಿಗದಿ ಮಾಡಲಾಗಿದೆ.

ಇನ್ನು ರಿಯಲ್ ಮಿ 11 ಪ್ರೊ+ 5G ಫೋನ್ ಎರಡು ಸ್ಟೋರೇಜ್ ಆಯ್ಕೆಯಲ್ಲಿ ಖರೀದಿಗೆ ಸಿಗಲಿದೆ. ಇದರ 8GB RAM ಮತ್ತು 256GB ಸ್ಟೋರೇಜ್ ವೇರಿಯಂಟ್ ದರವು 27,999 ರೂ. ಆಗಿದೆ. ಅಂತೆಯೆ 12GB RAM + 256GB ಸ್ಟೋರೇಜ್ ಆಯ್ಕೆಗೆ 29,999 ರೂ. ಇದೆ. ಈ ಎರಡೂ ಫೋನ್​ಗಳು ಈಗಾಗಲೇ ಫ್ಲಿಪ್​ಕಾರ್ಟ್ ಮತ್ತು ರಿಯಲ್ ಮಿ.ಕಾಮ್​ನಲ್ಲಿ ಮಾರಾಟ ಕಾಣುತ್ತಿದೆ.

Infinix Note 30 5G: ಕ್ರೇಜಿ ಫೀಚರ್ಸ್ ಸಹಿತ ಮಾರುಕಟ್ಟೆಗೆ ಬಂತು ಮತ್ತೊಂದು ಇನ್ಫಿನಿಕ್ಸ್ ಫೋನ್

ಫೀಚರ್ಸ್ ಏನಿದೆ?:

ರಿಯಲ್ ಮಿ 11 ಪ್ರೊ 5G ಮತ್ತು ರಿಯಲ್ ಮಿ 11 ಪ್ರೊ+ 5G ಪ್ರೊ ಸ್ಮಾರ್ಟ್‌ಫೋನ್‌ 1,080*2,412 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7 ಇಂಚಿನ ಫುಲ್ ಹೆಚ್​ಡಿ+ ಕರ್ವಡ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 120Hz ಅಡಾಪ್ಟಿವ್ ರಿಫ್ರೆಶ್ ರೇಟ್​ನಿಂದ ಕೂಡಿದೆ. ಇದು ಆಕ್ಟಾ-ಕೋರ್ 6nm ಮೀಡಿಯಾಟೆಕ್ ಡೈಮನ್ಸಿಟಿ 7050 ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್‌ 13 ನಲ್ಲಿ ಕಾರ್ಯನಿರ್ವಹಿಸುತ್ತದೆ.

ಈ ಎರಡೂ ಫೋನಿನ ಪ್ರಮುಖ ಹೈಲೈಟ್ ಕ್ಯಾಮೆರಾ. ರಿಯಲ್ ಮಿ 11 ಪ್ರೊ 5G ಫೋನ್​ನಲ್ಲಿ ಡ್ಯುಯೆಲ್ ರಿಯರ್ ಕ್ಯಾಮೆರಾ ಆಯ್ಕೆ ನೀಡಲಾಗಿದೆ. 100 ಮೆಗಾ ಪಿಕ್ಸೆಲ್​ನ ಪ್ರೈಮರಿ ಸೆನ್ಸಾರ್ ನೀಡಲಾಗಿದ್ದು, ಇದು ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಟೆಕ್ನಾಲಜಿಯನ್ನು ಹೊಂದಿದೆ. 2 ಮೆಗಾ ಪಿಕ್ಸೆಲ್​ನ ಸೆಕೆಂಡರಿ ಕ್ಯಾಮೆರಾ ನೀಡಲಾಗಿದೆ. ಮುಂಭಾಗ ಸೆಲ್ಫೀ ಮತ್ತು ವಿಡಿಯೋ ಕರೆಗಳಿಗಾಗಿ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಕ್ಯಾಮೆರಾವನ್ನು ಅಳವಡಿಸಲಾಗಿದೆ.

ಇತ್ತ ರಿಯಲ್ ಮಿ 11 ಪ್ರೊ+ 5G ಫೋನ್​ನಲ್ಲಿ ಆಕರ್ಷಕವಾದ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಇದೆ. ಇದರಲ್ಲಿರುವ ಮುಖ್ಯ ಕ್ಯಾಮೆರಾ ಬರೋಬ್ಬರಿ 200 ಮೆಗಾ ಪಿಕ್ಸೆಲ್​ನ ಸ್ಯಾಮ್​ಸಂಗ್ ISOCELL HP3 ಸೆನ್ಸಾರ್​ನಿಂದ ಕೂಡಿದೆ. ಇದರಿಂದ ದೂರದ ವರೆಗೆ ಸುಲಭವಾಗಿ ಝೂಮ್ ಮಾಡಬಹುದಂತೆ. ಇದು ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಟೆಕ್ನಾಲಜಿಯನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಆಲ್ಟ್ರಾ ವೈಡ್ ಲೆನ್ಸ್‌ ಅನ್ನು ಹೊಂದಿದೆ. ಜೊತೆಗೆ 2 ಮೆಗಾಪಿಕ್ಸೆಲ್​ನ ಮ್ಯಾಕ್ರೊ ಸೆನ್ಸಾರ್‌ ಇದೆ. ಮುಂಭಾಗ ಸೆಲ್ಫೀ ಮತ್ತು ವಿಡಿಯೋ ಕರೆಗಳಿಗಾಗಿ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ಈ ಎರಡೂ ಫೋನ್​ಗೆ ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಅಳವಡಿಸಲಾಗಿದೆ. ಇದರಲ್ಲಿ ರಿಯಲ್ ಮಿ 11 ಪ್ರೊ+ 100W ಸೂಪರ್‌ವೂಕ್ ಚಾರ್ಜ್ ವೇಗದ ಚಾರ್ಜಿಂಗ್‌ ಅನ್ನು ಒಳಗೊಂಡಿದ್ದರೆ, ರಿಯಲ್ ಮಿ 11 ಪ್ರೊ 67W ಸೂಪರ್‌ವೂಕ್ ಚಾರ್ಜ್ ವೇಗದ ಚಾರ್ಜಿಂಗ್‌ ಸಪೋರ್ಟ್ ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2 ಮತ್ತು USB ಟೈಪ್-C ಪೋರ್ಟ್ ಬೆಂಬಲಿಸಲಿದೆ. ಇದರಲ್ಲಿ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಸೇರಿದಂತೆ ಇತ್ತೀಚೆಗಿನ ಎಲ್ಲ ಆಯ್ಕೆಗಳನ್ನು ಅಳವಡಿಸಲಾಗಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:23 pm, Sat, 17 June 23

Follow Us
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!