AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Realme 11 Pro+: ಜೂನ್ 8ಕ್ಕೆ ಭಾರತಕ್ಕೆ ಅಪ್ಪಳಿಸಲಿದೆ ಬರೋಬ್ಬರಿ 200MP ಕ್ಯಾಮೆರಾದ ಹೊಸ ರಿಯಲ್ ಮಿ ಸ್ಮಾರ್ಟ್​ಫೋನ್

ಪ್ರಸಿದ್ಧ ರಿಯಲ್ ಮಿ ಕಂಪನಿ ತನ್ನ ಮೊಟ್ಟ ಮೊದಲ 200 ಮೆಗಾ ಪಿಕ್ಸೆಲ್ ಕ್ಯಾಮೆರಾದ ಹೊಸ ಫೋನೊಂದನ್ನು ರಿಲೀಸ್ ಮಾಡಲು ಸಜ್ಜಾಗಿದೆ. ಇದರ ಹೆಸರು ರಿಯಲ್ ಮಿ 11 ಪ್ರೊ+ 5G.  ಈ ಫೋನ್ ಜೂನ್ 8 ಕ್ಕೆ ಭಾರತದ ಮಾರುಕಟ್ಟೆಗೆ ಅಪ್ಪಳಿಸಲಿದೆ.

Realme 11 Pro+: ಜೂನ್ 8ಕ್ಕೆ ಭಾರತಕ್ಕೆ ಅಪ್ಪಳಿಸಲಿದೆ ಬರೋಬ್ಬರಿ 200MP ಕ್ಯಾಮೆರಾದ ಹೊಸ ರಿಯಲ್ ಮಿ ಸ್ಮಾರ್ಟ್​ಫೋನ್
Realme 11 Pro+
Vinay Bhat
|

Updated on: May 27, 2023 | 12:44 PM

Share

ಮುಖ್ಯಾಂಶಗಳು

  • ಬರೋಬ್ಬರಿ 200MP ಕ್ಯಾಮೆರಾದ ಸ್ಮಾರ್ಟ್​ಫೋನ್
  • ಮೇ 16ಕ್ಕೆ ಭಾರತದಲ್ಲಿ ರಿಯಲ್ ಮಿ 11 ಪ್ರೊ ಬಿಡುಗಡೆ
  • ಮೀಡಿಯಾಟೆಕ್ ಡೈಮನ್ಸಿಟಿ 7050 ಪ್ರೊಸೆಸರ್‌

ಇಂದು 108 ಮೆಗಾ ಪಿಕ್ಸೆಲ್ ಕ್ಯಾಮೆರಾಗಳಿರುವ ಸ್ಮಾರ್ಟ್​ಫೋನ್​ಗಳು ಮಾರುಕಟ್ಟೆಯಲ್ಲಿ ಒಂದರ ಹಿಂದೆ ಒಂದರಂತೆ ಬಿಡುಗಡೆ ಆಗುತ್ತಿದೆ. ಇದಕ್ಕೆ ಭರ್ಜರಿ ಬೇಡಿಕೆ ಕೂಡ ಇದೆ. ಇದರ ನಡುವೆ ಈ ವರ್ಷದ ಆರಂಭದಲ್ಲಿ ಮೋಟೋರೊಲಾ ಕಂಪನಿ ಒಂದು ಹೆಜ್ಜೆ ಮುಂದೆಯಿಟ್ಟು 200 ಮೆಗಾ ಪಿಕ್ಸೆಲ್ ಕ್ಯಾಮೆರಾದ ಫೋನನ್ನು (200MP Camera Phone) ಭಾರತದಲ್ಲಿ ಲಾಂಚ್ ಮಾಡಿತ್ತು. ಈ ಫೋನ್ ದೊಡ್ಡ ಮಟ್ಟದಲ್ಲಿ ಸದ್ದು ಮಾಡಲಿಲ್ಲ. ಆದರೀಗ ಪ್ರಸಿದ್ಧ ರಿಯಲ್ ಮಿ ಕಂಪನಿ ತನ್ನ ಮೊಟ್ಟ ಮೊದಲ 200 ಮೆಗಾ ಪಿಕ್ಸೆಲ್ ಕ್ಯಾಮೆರಾದ ಹೊಸ ಫೋನೊಂದನ್ನು ರಿಲೀಸ್ ಮಾಡಲು ಸಜ್ಜಾಗಿದೆ. ಇದರ ಹೆಸರು ರಿಯಲ್ ಮಿ 11 ಪ್ರೊ+ 5G.  ಈ ಫೋನ್ ಜೂನ್ 8 ಕ್ಕೆ ಭಾರತದ ಮಾರುಕಟ್ಟೆಗೆ ಅಪ್ಪಳಿಸಲಿದೆ.

ಇದು ರಿಯಲ್ ಮಿ 11 ಸರಣಿಯ ಭಾಗವಾಗಿದ್ದು, ರಿಯಲ್ ಮಿ 11 ಪ್ರೊ 5G ಮತ್ತು ರಿಯಲ್ ಮಿ 11 ಪ್ರೊ+ 5G ಎಂಬ ಎರಡು ಫೋನ್​ ಇರಲಿವೆ. ಇದರ ಜೊತೆಗೆ ಜೂನ್ 8ಕ್ಕೆ ರಿಯಲ್ ಮಿ ಬಡ್ಸ್ ಏರ್ 5 ಪ್ರೊ ಕೂಡ ಅನಾವರಣಗೊಳ್ಳಲಿದೆ. 200 ಮೆಗಾ ಪಿಕ್ಸೆಲ್ ಕ್ಯಾಮೆರಾದ ರಿಯಲ್ ಮಿ 11 ಪ್ರೊ+ 5G ನಿಖರ ಬೆಲೆ ಬಹಿರಂಗಗೊಂಡಿಲ್ಲ. ಮೂಲಗಳ ಪ್ರಕಾರ 28,000-29,000 ರೂ. ಇರಬಹುದು ಎನ್ನಲಾಗಿದೆ.

HTC U23 Pro: ಗ್ಯಾಜೆಟ್ ಮಾರುಕಟ್ಟೆಗೆ ಬಂತು ಹೊಸ ಎಚ್​ಟಿಸಿ ಸ್ಮಾರ್ಟ್​ಫೋನ್

ರಿಯಲ್ ಮಿ 11 ಪ್ರೊ+ 5G ಪ್ರೊ ಸ್ಮಾರ್ಟ್‌ಫೋನ್‌ 1,440*3,216 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7 ಇಂಚಿನ ಫುಲ್ ಹೆಚ್​ಡಿ+ ಅಮೋಲೆಡ್‌ ಡಿಸ್‌ಪ್ಲೇ ಹೊಂದಿರುವ ಸಾಧ್ಯತೆ ಇದೆ. ಈ ಡಿಸ್‌ಪ್ಲೇ 120Hz ಅಡಾಪ್ಟಿವ್ ರಿಫ್ರೆಶ್ ರೇಟ್​ನಿಂದ ಕೂಡಿದೆ. ಮೀಡಿಯಾಟೆಕ್ ಡೈಮನ್ಸಿಟಿ 7050 ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು ಇದು ಆಂಡ್ರಾಯ್ಡ್‌ 13 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ.

ಇದರ ಪ್ರಮುಖ ಹೈಲೇಟ್ ಕ್ಯಾಮೆರಾ. ಆಕರ್ಷಕವಾದ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿರುವ ಮುಖ್ಯ ಕ್ಯಾಮೆರಾ ಬರೋಬ್ಬರಿ 200 ಮೆಗಾ ಪಿಕ್ಸೆಲ್​ನ ಸ್ಯಾಮ್​ಸಂಗ್ ISOCELL HP3 ಸೆನ್ಸಾರ್​ನಿಂದ ಕೂಡಿದೆ. ಇದರಿಂದ ದೂರದ ವರೆಗೆ ಸುಲಭವಾಗಿ ಝೂಮ್ ಮಾಡಬಹುದಂತೆ. ಇದು ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಟೆಕ್ನಾಲಜಿಯನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಆಲ್ಟ್ರಾ ವೈಡ್ ಲೆನ್ಸ್‌ ಅನ್ನು ಹೊಂದಿದೆ. ಜೊತೆಗೆ 2 ಮೆಗಾಪಿಕ್ಸೆಲ್​ನ ಮ್ಯಾಕ್ರೊ ಸೆನ್ಸಾರ್‌ ಇದೆ. ಮುಂಭಾಗ ಸೆಲ್ಫೀ ಮತ್ತು ವಿಡಿಯೋ ಕರೆಗಳಿಗಾಗಿ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಅಳವಡಿಸಲಾಗಿದೆ. ಇದು 65W ಸೂಪರ್‌ಡಾರ್ಟ್ ಚಾರ್ಜ್ ವರ್ಧಿತ ವೇಗದ ಚಾರ್ಜಿಂಗ್‌ ಅನ್ನು ಒಳಗೊಂಡಿರುವ ಸಾಧ್ಯತೆ ಇದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2 ಮತ್ತು USB ಟೈಪ್-C ಪೋರ್ಟ್ ಬೆಂಬಲಿಸಲಿದೆ. ಇದರಲ್ಲಿ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಸೇರಿದಂತೆ ಇತ್ತೀಚೆಗಿನ ಎಲ್ಲ ಆಯ್ಕೆಗಳನ್ನು ಅಳವಡಿಸಲಾಗಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
‘ಪ್ರೇಮದ ಊರಲಿ’ ಒಟಿಟಿ ರಿಲೀಸ್ ಇನ್ನೂ ಆಗಿಲ್ಲ ಯಾಕೆ? ಉತ್ತರಿಸಿದ ನಿರ್ದೇಶಕ
‘ಪ್ರೇಮದ ಊರಲಿ’ ಒಟಿಟಿ ರಿಲೀಸ್ ಇನ್ನೂ ಆಗಿಲ್ಲ ಯಾಕೆ? ಉತ್ತರಿಸಿದ ನಿರ್ದೇಶಕ
ನಮಗೆ ತಮಿಳುನಾಡು ಅನುಮತಿ ಬೇಡ, ಸಹಕಾರ ಬೇಕಷ್ಟೇ: ವಿಜಯ್​ಗೆ ಡಿಕೆಶಿ ಕೌಂಟರ್
ನಮಗೆ ತಮಿಳುನಾಡು ಅನುಮತಿ ಬೇಡ, ಸಹಕಾರ ಬೇಕಷ್ಟೇ: ವಿಜಯ್​ಗೆ ಡಿಕೆಶಿ ಕೌಂಟರ್
ಹೆಚ್​​ಡಿಕೆ ಆರೋಪಕ್ಕೆ ಡಿಸಿ ತಿರುಗೇಟು! ತನಿಖೆ ಮಾಡಿಸ್ತೇನೆ ಎಂದ ಅಧಿಕಾರಿ
ಹೆಚ್​​ಡಿಕೆ ಆರೋಪಕ್ಕೆ ಡಿಸಿ ತಿರುಗೇಟು! ತನಿಖೆ ಮಾಡಿಸ್ತೇನೆ ಎಂದ ಅಧಿಕಾರಿ
ಪಿತೃಕಾರ್ಯದಲ್ಲಿ ಭಾಗವಹಿಸಲು ಪ್ರದೋಷ್​ಗೆ ಸೀಮಿತ ಅನುಮತಿ ನೀಡಿದ ಕೋರ್ಟ್
ಪಿತೃಕಾರ್ಯದಲ್ಲಿ ಭಾಗವಹಿಸಲು ಪ್ರದೋಷ್​ಗೆ ಸೀಮಿತ ಅನುಮತಿ ನೀಡಿದ ಕೋರ್ಟ್
ಎಥೆನಾಲ್​ ಉತ್ಪಾದಿಸಲು ಹೇಳಿ, ಇದೀಗ ಖರೀದಿಸ್ತಿಲ್ಲ: ಸಚಿವ ಎಂಬಿ ಪಾಟೀಲ್​
ಎಥೆನಾಲ್​ ಉತ್ಪಾದಿಸಲು ಹೇಳಿ, ಇದೀಗ ಖರೀದಿಸ್ತಿಲ್ಲ: ಸಚಿವ ಎಂಬಿ ಪಾಟೀಲ್​
ದೇವಿರಮ್ಮ ದರ್ಶನಕ್ಕೆ ಭಕ್ತಸಾಗರ! ಬೆಟ್ಟದ ತುದಿಯಲ್ಲಿ ಕಂಬಿ ಮುರಿದು ದುರಂತ
ದೇವಿರಮ್ಮ ದರ್ಶನಕ್ಕೆ ಭಕ್ತಸಾಗರ! ಬೆಟ್ಟದ ತುದಿಯಲ್ಲಿ ಕಂಬಿ ಮುರಿದು ದುರಂತ
ಕಿಚ್ಚ ಸುದೀಪ್ ಆಡಿಸಿದ ಆಟಕ್ಕೆ ಬಿಗ್ ಬಾಸ್ ಸ್ಪರ್ಧಿಗಳ ತಲೆ ಗಿರಗಿರ
ಕಿಚ್ಚ ಸುದೀಪ್ ಆಡಿಸಿದ ಆಟಕ್ಕೆ ಬಿಗ್ ಬಾಸ್ ಸ್ಪರ್ಧಿಗಳ ತಲೆ ಗಿರಗಿರ
ಹಾಸನಾಂಬೆ ದರ್ಶನ ಪಡೆದ ಹೆಚ್​ಡಿಕೆ ದಂಪತಿ
ಹಾಸನಾಂಬೆ ದರ್ಶನ ಪಡೆದ ಹೆಚ್​ಡಿಕೆ ದಂಪತಿ
ಕುಟುಂಬ ಸಮೇತ ಹಾಸನಾಂಬೆ ದೇಗುಲಕ್ಕೆ ಭೇಟಿ ನೀಡಿದ ಡಿಕೆ ಶಿವಕುಮಾರ್
ಕುಟುಂಬ ಸಮೇತ ಹಾಸನಾಂಬೆ ದೇಗುಲಕ್ಕೆ ಭೇಟಿ ನೀಡಿದ ಡಿಕೆ ಶಿವಕುಮಾರ್
ಬೆಂಗಳೂರಲ್ಲಿ ವಿಮಾನ ಕ್ಯಾನ್ಸಲ್‌ಗೆ ಪ್ರಯಾಣಿಕರು ಗರಂ, ಸಿಬ್ಬಂದಿಗೆ ತರಾಟೆ
ಬೆಂಗಳೂರಲ್ಲಿ ವಿಮಾನ ಕ್ಯಾನ್ಸಲ್‌ಗೆ ಪ್ರಯಾಣಿಕರು ಗರಂ, ಸಿಬ್ಬಂದಿಗೆ ತರಾಟೆ