ಇಂದು 108 ಮೆಗಾ ಪಿಕ್ಸೆಲ್ ಕ್ಯಾಮೆರಾಗಳಿರುವ ಸ್ಮಾರ್ಟ್ಫೋನ್ಗಳು ಮಾರುಕಟ್ಟೆಯಲ್ಲಿ ಒಂದರ ಹಿಂದೆ ಒಂದರಂತೆ ಬಿಡುಗಡೆ ಆಗುತ್ತಿದೆ. ಇದಕ್ಕೆ ಭರ್ಜರಿ ಬೇಡಿಕೆ ಕೂಡ ಇದೆ. ಇದರ ನಡುವೆ ಈ ವರ್ಷದ ಆರಂಭದಲ್ಲಿ ಮೋಟೋರೊಲಾ ಕಂಪನಿ ಒಂದು ಹೆಜ್ಜೆ ಮುಂದೆಯಿಟ್ಟು 200 ಮೆಗಾ ಪಿಕ್ಸೆಲ್ ಕ್ಯಾಮೆರಾದ ಫೋನನ್ನು (200MP Camera Phone) ಭಾರತದಲ್ಲಿ ಲಾಂಚ್ ಮಾಡಿತ್ತು. ಈ ಫೋನ್ ದೊಡ್ಡ ಮಟ್ಟದಲ್ಲಿ ಸದ್ದು ಮಾಡಲಿಲ್ಲ. ಆದರೀಗ ಪ್ರಸಿದ್ಧ ರಿಯಲ್ ಮಿ ಕಂಪನಿ ತನ್ನ ಮೊಟ್ಟ ಮೊದಲ 200 ಮೆಗಾ ಪಿಕ್ಸೆಲ್ ಕ್ಯಾಮೆರಾದ ಹೊಸ ಫೋನೊಂದನ್ನು ರಿಲೀಸ್ ಮಾಡಲು ಸಜ್ಜಾಗಿದೆ. ಇದರ ಹೆಸರು ರಿಯಲ್ ಮಿ 11 ಪ್ರೊ+ 5G. ಈ ಫೋನ್ ಜೂನ್ 8 ಕ್ಕೆ ಭಾರತದ ಮಾರುಕಟ್ಟೆಗೆ ಅಪ್ಪಳಿಸಲಿದೆ.
ಇದು ರಿಯಲ್ ಮಿ 11 ಸರಣಿಯ ಭಾಗವಾಗಿದ್ದು, ರಿಯಲ್ ಮಿ 11 ಪ್ರೊ 5G ಮತ್ತು ರಿಯಲ್ ಮಿ 11 ಪ್ರೊ+ 5G ಎಂಬ ಎರಡು ಫೋನ್ ಇರಲಿವೆ. ಇದರ ಜೊತೆಗೆ ಜೂನ್ 8ಕ್ಕೆ ರಿಯಲ್ ಮಿ ಬಡ್ಸ್ ಏರ್ 5 ಪ್ರೊ ಕೂಡ ಅನಾವರಣಗೊಳ್ಳಲಿದೆ. 200 ಮೆಗಾ ಪಿಕ್ಸೆಲ್ ಕ್ಯಾಮೆರಾದ ರಿಯಲ್ ಮಿ 11 ಪ್ರೊ+ 5G ನಿಖರ ಬೆಲೆ ಬಹಿರಂಗಗೊಂಡಿಲ್ಲ. ಮೂಲಗಳ ಪ್ರಕಾರ 28,000-29,000 ರೂ. ಇರಬಹುದು ಎನ್ನಲಾಗಿದೆ.
HTC U23 Pro: ಗ್ಯಾಜೆಟ್ ಮಾರುಕಟ್ಟೆಗೆ ಬಂತು ಹೊಸ ಎಚ್ಟಿಸಿ ಸ್ಮಾರ್ಟ್‌ಫೋನ್
ರಿಯಲ್ ಮಿ 11 ಪ್ರೊ+ 5G ಪ್ರೊ ಸ್ಮಾರ್ಟ್‌ಫೋನ್ 1,440*3,216 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.7 ಇಂಚಿನ ಫುಲ್ ಹೆಚ್ಡಿ+ ಅಮೋಲೆಡ್ ಡಿಸ್‌ಪ್ಲೇ ಹೊಂದಿರುವ ಸಾಧ್ಯತೆ ಇದೆ. ಈ ಡಿಸ್‌ಪ್ಲೇ 120Hz ಅಡಾಪ್ಟಿವ್ ರಿಫ್ರೆಶ್ ರೇಟ್ನಿಂದ ಕೂಡಿದೆ. ಮೀಡಿಯಾಟೆಕ್ ಡೈಮನ್ಸಿಟಿ 7050 ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು ಇದು ಆಂಡ್ರಾಯ್ಡ್ 13 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 12GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ.
ಇದರ ಪ್ರಮುಖ ಹೈಲೇಟ್ ಕ್ಯಾಮೆರಾ. ಆಕರ್ಷಕವಾದ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿರುವ ಮುಖ್ಯ ಕ್ಯಾಮೆರಾ ಬರೋಬ್ಬರಿ 200 ಮೆಗಾ ಪಿಕ್ಸೆಲ್ನ ಸ್ಯಾಮ್ಸಂಗ್ ISOCELL HP3 ಸೆನ್ಸಾರ್ನಿಂದ ಕೂಡಿದೆ. ಇದರಿಂದ ದೂರದ ವರೆಗೆ ಸುಲಭವಾಗಿ ಝೂಮ್ ಮಾಡಬಹುದಂತೆ. ಇದು ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಟೆಕ್ನಾಲಜಿಯನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಆಲ್ಟ್ರಾ ವೈಡ್ ಲೆನ್ಸ್ ಅನ್ನು ಹೊಂದಿದೆ. ಜೊತೆಗೆ 2 ಮೆಗಾಪಿಕ್ಸೆಲ್ನ ಮ್ಯಾಕ್ರೊ ಸೆನ್ಸಾರ್ ಇದೆ. ಮುಂಭಾಗ ಸೆಲ್ಫೀ ಮತ್ತು ವಿಡಿಯೋ ಕರೆಗಳಿಗಾಗಿ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಕ್ಯಾಮೆರಾವನ್ನು ಸಹ ನೀಡಲಾಗಿದೆ.
ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಅಳವಡಿಸಲಾಗಿದೆ. ಇದು 65W ಸೂಪರ್‌ಡಾರ್ಟ್ ಚಾರ್ಜ್ ವರ್ಧಿತ ವೇಗದ ಚಾರ್ಜಿಂಗ್ ಅನ್ನು ಒಳಗೊಂಡಿರುವ ಸಾಧ್ಯತೆ ಇದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2 ಮತ್ತು USB ಟೈಪ್-C ಪೋರ್ಟ್ ಬೆಂಬಲಿಸಲಿದೆ. ಇದರಲ್ಲಿ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಸೇರಿದಂತೆ ಇತ್ತೀಚೆಗಿನ ಎಲ್ಲ ಆಯ್ಕೆಗಳನ್ನು ಅಳವಡಿಸಲಾಗಿದೆ.
ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ