Realme 8s: ಅತಿ ಕಡಿಮೆ ಬೆಲೆಗೆ ಲಭ್ಯವಿರುವ ರಿಯಲ್‌ಮಿ 8s 5G ಫಸ್ಟ್ ಸೇಲ್: ಬಂಪರ್ ಆಫರ್ನಲ್ಲಿ ಖರೀದಿಸಿ
ರಿಯಲ್‌ಮಿ 8s 5G ಸ್ಮಾರ್ಟ್‌ಫೋನ್ ಒಟ್ಟು ಎರಡು ಮಾದರಿಯಲ್ಲಿ ಖರೀದಿಗೆ ಲಭ್ಯವಾಗುತ್ತಿದೆ. 6GB RAM ಮತ್ತು 128GB ಸ್ಟೋರೇಜ್ ರೂಪಾಂತರಕ್ಕೆ 17,999 ರೂ. ನಿಗದಿ ಮಾಡಲಾಗಿದೆ.
ಕಳೆದ ವಾರವಷ್ಟೆ ಭಾರತೀಯ ಮಾರುಕಟ್ಟೆಯಲ್ಲಿ ರಿಯಲ್ ಮಿ ಕಂಪೆನಿ ತನ್ನ ವರ್ಚುವಲ್ ಕಾರ್ಯಕ್ರಮದ ಮೂಲಕ ರಿಯಲ್‌ಮಿ 8i ಮತ್ತು ರಿಯಲ್‌ಮಿ 8s 5G (Realme 8s, Realme 8i) ಸ್ಮಾರ್ಟ್‌ಫೋನ್‌ಗಳನ್ನು ಅತಿ ಕಡಿಮೆ ಬೆಲೆಗೆ ಅನಾವರಣ ಮಾಡಿತ್ತು. ಸದ್ಯ ಇದರಲ್ಲಿ ರಿಯಲ್‌ಮಿ 8s 5G ಸ್ಮಾರ್ಟ್‌ಫೋನ್ ತನ್ನ ಫಸ್ಟ್ ಸೇಲ್ ಆರಂಭಿಸಲಿದೆ. ತನ್ನ ಅಧಿಕೃತ ವೆಬ್‌ಸೈಟ್ ರಿಯಲ್‌ಮಿ.ಕಾಮ್ ಮತ್ತು ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್‌ಕಾರ್ಟ್ (Flipkart) ತಾಣದಲ್ಲಿ ಮೊದಲ ಸೇಲ್ ಶುರುವಾಗಿದೆ. ಆಕರ್ಷಕ ಕ್ಯಾಮೆರಾ, ಅದ್ಭುತ ಬ್ಯಾಟರಿ ಜೊತೆಗೆ ಅತ್ಯುತ್ತಮ ಪ್ರೊಸೆಸರ್ ಹೊಂದಿರುವ ಈ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಅತಿ ಕಡಿಮೆ ಬೆಲೆಗೆ ಲಭ್ಯವಿರುವ 5G ಫೋನುಗಳ ಸಾಲಿಗೆ ಸೇರಿದೆ. ಹಾಗಾದ್ರೆ ಈ ಫೋನಿನ ಬೆಲೆ ಎಷ್ಟು?, ಏನು ಆಫರ್ ಎಂಬುದನ್ನು ನೋಡುವುದಾದರೆ…
ಬೆಲೆ ಮತ್ತು ಆಫರ್:
ರಿಯಲ್‌ಮಿ 8s 5G ಸ್ಮಾರ್ಟ್‌ಫೋನ್ ಒಟ್ಟು ಎರಡು ಮಾದರಿಯಲ್ಲಿ ಖರೀದಿಗೆ ಲಭ್ಯವಾಗುತ್ತಿದೆ. 6GB RAM ಮತ್ತು 128GB ಸ್ಟೋರೇಜ್ ರೂಪಾಂತರಕ್ಕೆ 17,999 ರೂ. ನಿಗದಿ ಮಾಡಲಾಗಿದೆ. ಅಂತೆಯೆ 8GB RAM ಮತ್ತು 128GB ಮಾದರಿಯ ಆಯ್ಕೆಗೆ 19,999 ರೂ. ಬೆಲೆ ಹೊಂದಿದೆ.
ಇನ್ನೂ ಈ ಸ್ಮಾರ್ಟ್‌ಫೋನ್ ಯೂನಿವರ್ಸ್ ಬ್ಲೂ ಮತ್ತು ಯೂನಿವರ್ಸ್ ಪರ್ಪಲ್ ಶೇಡ್ ಕಲರ್ ಆಯ್ಕೆಯಲ್ಲಿ ಖರೀದಿಗೆ ಸಿಗುತ್ತಿದೆ. ಹೆಚ್‌ಡಿಎಫ್‌ಸಿ ಬ್ಯಾಂಕ್ ಕ್ರೆಡಿಟ್, ಡೆಬಿಟ್ ಕಾರ್ಡ್‌ಗಳು ಅಥವಾ ಈಸಿ ಇಎಂಐ ವಹಿವಾಟು ಅಥವಾ ಐಸಿಐಸಿಐ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ಗಳು ಅಥವಾ ಕ್ರೆಡಿಟ್ ಇಎಂಐ ವಹಿವಾಟುಗಳನ್ನು ಬಳಸಿಕೊಂಡು ಖರೀದಿಸಿದರೆ 1,500.ರೂ ಗಳ ರಿಯಾಯಿತಿ ರಿಯಲ್ ಮಿ 8ಎಸ್ ದೊರೆಯಲಿದೆ.
ಏನು ವಿಶೇಷತೆ?:
ರಿಯಲ್‌ಮಿ 8s 5G ಸ್ಮಾರ್ಟ್‌ಫೋನ್ 1,080×2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5-ಇಂಚಿನ ಫುಲ್ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಕಳೆದ ತಿಂಗಳು ಲಾಂಚ್ ಆದ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 810 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 11 ನಲ್ಲಿ ರಿಯಲ್‌ಮಿ ಯುಐ 2.0 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ.
ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2-ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2-ಮೆಗಾಪಿಕ್ಸೆಲ್ ಸೆನ್ಸರ್ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ.
ಇನ್ನೂ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ಡಾರ್ಟ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G, ವೈಫೈ, ಬ್ಲೂಟೂತ್ v5.1 ಮತ್ತು USB Type-C ಪೋರ್ಟ್ ಸೇರಿದಂತೆ ಪ್ರಮುಖ ಆಯ್ಕೆಗಳಿವೆ.
WhatsApp Tricks: ಇದೀಗ ಟೈಪ್ ಮಾಡದೇ ವಾಟ್ಸ್ಆ್ಯಪ್ನಲ್ಲಿ ಟೆಕ್ಸ್ಟ್ ಮೆಸೇಜ್ ಕಳುಹಿಸಿ: ಇಲ್ಲಿದೆ ಟ್ರಿಕ್
Apple iPhone: ಐಫೋನ್ ಬಳಸುತ್ತಿರುವವರಿಗೆ ಶಾಕಿಂಗ್ ನ್ಯೂಸ್: ಹೀಗೆ ಮಾಡಿದ್ರೆ ನಿಮ್ಮ ಕ್ಯಾಮೆರಾ ಹಾಳಾಗುತ್ತೆ
(Realme 8s to go on first sale today via Flipkart and company website with big bank discount)