Realme 9 Pro Plus 5G: ರಿಯಲ್ ಮಿ 9 ಪ್ರೋ ಪ್ಲಸ್ ಖರೀದಿಗೆ ಕ್ಯೂ ನಿಂತ ಜನರು: ಕೇವಲ 7,000 ರೂ. ಗೆ ನಿಮ್ಮದಾಗಿಸಿ
Flipkart Electronics Sale: ರಿಯಲ್ ಮಿ 9 ಪ್ರೊ ಪ್ಲಸ್ ಸ್ಮಾರ್ಟ್‌ಫೋನ್ ಖರೀದಿಗೆ ಜನರು ಮುಗಿಬೀಳುತ್ತಿದ್ದಾರೆ. ಫ್ಲಿಪ್ಕಾರ್ಟ್ನಲ್ಲಿ ಎಲೆಕ್ಟ್ರಾನಿಕ್ಸ್ ಸೇಲ್ ಇಂದಿನಿಂದ ಆರಂಭವಾಗಿದ್ದು ಇದರಲ್ಲಿ ಭರ್ಜರಿ ರಿಯಾಯಿತಿಗೆ ಈ ಸ್ಮಾರ್ಟ್‌ಫೋನ್ ಮಾರಾಟ ಆಗುತ್ತಿದೆ.
ಪ್ರಸಿದ್ಧ ರಿಯಲ್ ಮಿ (Realme) ಕಂಪನಿ ಈ ವರ್ಷದ ಆರಂಭದಲ್ಲಿ ಪರಿಚಯಿಸಿದ ಆಕರ್ಷಕ ಕ್ಯಾಮೆರಾ ಸೆನ್ಸಾರ್ ಹೊಂದಿರುವ ರಿಯಲ್ ಮಿ 9 ಪ್ರೊ ಪ್ಲಸ್ ಸ್ಮಾರ್ಟ್‌ಫೋನ್ ಖರೀದಿಗೆ ಜನರು ಮುಗಿಬೀಳುತ್ತಿದ್ದಾರೆ. ಇದಕ್ಕೆ ಕಾರಣ ಬಂಪರ್ ಆಫರ್. ಹೌದು, ಇ ಕಾಮರ್ಸ್ ತಾಣವಾದ ಫ್ಲಿಪ್ಕಾರ್ಟ್ನಲ್ಲಿ (Flipkart) ಎಲೆಕ್ಟ್ರಾನಿಕ್ಸ್ ಸೇಲ್ ಇಂದಿನಿಂದ ಆರಂಭವಾಗಿದ್ದು ಇದೇ ಜೂನ್ 26 ರವರೆಗೆ ನಡೆಯಲಿದೆ. ಇದರಲ್ಲಿ ಭರ್ಜರಿ ರಿಯಾಯಿತಿಗೆ ರಿಯಲ್ ಮಿ 9 ಪ್ರೊ ಪ್ಲಸ್ (Realme 9 Pro +) ಸ್ಮಾರ್ಟ್‌ಫೋನ್ ಮಾರಾಟ ಆಗುತ್ತಿದೆ. ಇದಕ್ಕಾಗಿ ನೀವು ಕೆಲವೊಂದು ಟ್ರಿಕ್ ಉಪಯೋಗಿಸಬೇಕಷ್ಟೆ. ಹಾಗಾದ್ರೆ ಭರ್ಜರಿ ಬ್ಯಾಟರಿ ಜೊತೆಗೆ ಸೋನಿ IMX355 ಸೆನ್ಸಾರ್ ಸಾಮರ್ಥ್ಯ ಹೊಂದಿರುವ ರಿಯಲ್ ಮಿ 9 ಪ್ರೊ ಪ್ಲಸ್ ಫೋನನ್ನು ರಿಯಾಯಿತಿ ದರದಲ್ಲಿ ಖರೀದಿಸುವುದು ಹೇಗೆ ಎಂಬುದನ್ನು ನೋಡೋಣ.
ರಿಯಲ್ ಮಿ 9 ಪ್ರೊ ಪ್ಲಸ್ 5G ಸ್ಮಾರ್ಟ್‌ಫೋನ್ 8 GB RAM ಮತ್ತು 128 GB ಸ್ಟೋರೇಜ್‌ನ ಬೆಲೆ 24,999 ರೂ. ಆಗಿದೆ. ಆದರೆ ಈ ಫೋನ್ ಖರೀದಿ ಮೇಲೆ ಹಲವಾರು ಬ್ಯಾಂಕ್ ಆಫರ್ ಗಳು ಮತ್ತು ಮತ್ತು ವಿನಿಮಯ ಕೊಡುಗೆಗಳನ್ನು ನೀಡಲಾಗಿದೆ. ನೀವು ಡೆಬಿಟ್ ಅಥವಾ ಕ್ರೆಡಿಟ್ ಕಾರ್ಡ್ ಬಳಸಿದರೆ 6,000 ರೂ. ವರೆಗೂ ರಿಯಾಯಿತಿ ಸಿಗುತ್ತದೆ. ಇದರ ಹೊರತಾಗಿ, ಎಸ್‌ಬಿಐನ ಕ್ರೆಡಿಟ್ ಕಾರ್ಡ್ ಮೂಲಕ ಪಾವತಿಸಿದರೆ, 1,000 ರೂ. ಗಳ ರಿಯಾಯಿತಿ ಪಡೆಯಬಹುದು.
POCO F4: ಕ್ಯಾಮೆರಾ ಪ್ರಿಯರೇ ಗಮನಿಸಿ: ಜಾಗತೀಕ ಮಾರುಕಟ್ಟೆಯಲ್ಲಿ ಇಂದು ರಿಲೀಸ್ ಆಗಲಿದೆ ಪೋಕೋ F4
ಇದರ ಜೊತೆಗೆ 12,500 ರೂಪಾಯಿಗಳ ಎಕ್ಸ್ಚೇಂಜ್ ಆಫರ್ ಇದೆ. ಹಳೆಯ ಸ್ಮಾರ್ಟ್‌ಫೋನ್ ಅನ್ನು ವಿನಿಮಯ ಮಾಡಿಕೊಂಡರೆ, ಹೊಸ ಫೋನ್ ಖರೀದಿ ಮೇಲೆ ತುಂಬಾ ರಿಯಾಯಿತಿ ಪಡೆಯಬಹುದು. ಈ ಮೂಲಕ ಕೇವಲ 7,499 ರೂ. ಗೆ ರಿಯಲ್ ಮಿ 9 ಪ್ರೊ ಪ್ಲಸ್ ಅನ್ನು ನಿಮ್ಮದಾಗಿಸಬಹುದು.
ರಿಯಲ್ ಮಿ 9 ಪ್ರೊ+ 5G ಸ್ಮಾರ್ಟ್‌ಫೋನ್ 6.4 ಇಂಚಿನ ಫುಲ್ HD+ ಡಿಸ್‌ಪ್ಲೇ ಹೊಂದಿದೆ. ಇದು 1,080×2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಪಡೆದಿದೆ. ಆಕ್ಟಾ-ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 920 SoC ಪ್ರೊಸೆಸರ್ ಬಲವನ್ನು ಪಡೆಉಕೊಂಡಿದ್ದು, ಆಂಡ್ರಾಯ್ಡ್ 12 ಆಧಾರಿತ ರಿಯಲ್‌ಮಿ UI 3.0 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.
ಈ ಫೋನಿನ ಮತ್ತೊಂದು ಪ್ರಮುಖ ಹೈಲೇಟ್ ಕ್ಯಾಮೆರಾ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX766 ಸೆನ್ಸಾರ್ ಹೊಂದಿದ್ದು ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ ಬೆಂಬಲಿಸಲಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೋನಿ IMX355 ಸೆನ್ಸಾರ್ f/2.2 ಅಲ್ಟ್ರಾ-ವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಅನ್ನು ಒಳಗೊಂಡಿದೆ. ಇದಲ್ಲದೆ 16-ಮೆಗಾಪಿಕ್ಸೆಲ್ ಸೋನಿ IMX471 ಸೆಲ್ಫಿ ಕ್ಯಾಮೆರಾ ಹೊಂದಿದೆ.
ಇಷ್ಟೇ ಅಲ್ಲದೆ ಈ ಸ್ಮಾರ್ಟ್‌ಫೋನಿನ ಪ್ರೈಮೆರಿ ಕ್ಯಾಮೆರಾ ಪ್ರೊಲೈಟ್ ಇಮೇಜಿಂಗ್ ಟೆಕ್ನಾಲಜಿಯನ್ನು ಹೊಂದಿದೆ. ಇದು ಉತ್ತಮ ಬೆಳಕಿನ ಸೇವನೆಯನ್ನು ಒದಗಿಸಲು ಸಹಾಯ ಮಾಡುತ್ತದೆ ಎಂದು ಹೇಳಲಾಗುತ್ತದೆ. ಜೊತೆಗೆ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 60W ಫಾಸ್ಟ್ ಚಾರ್ಜರ್ ನೀಡಲಾಗಿದೆ.
ತಂತ್ರಜ್ಞಾನ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ