Realme 9i: ಭರ್ಜರಿ ಕ್ಯಾಮೆರಾ, ಬಲಿಷ್ಠ ಪ್ರೊಸೆಸರ್​ನ ರಿಯಲ್‌ ಮಿ 9i ಸ್ಮಾರ್ಟ್​ಫೋನ್ ಬಿಡುಗಡೆ: ಬೆಲೆ ಎಷ್ಟು?

ಸದ್ಯಕ್ಕೆ ವಿಯೆಟ್ನಾಂ ಮಾರುಕಟ್ಟೆಯಲ್ಲಿ ರಿಯಲ್‌ ಮಿ 9i ಫೋನ್ ಬಿಡುಗಡೆ ಆಗಿದ್ದು, ತಿಂಗಳ ಅಂತ್ಯದಲ್ಲಿ ಇದು ಭಾರತಕ್ಕೂ ಕಾಲಿಡಲಿದೆ. ಇದೊಂದು ಮಧ್ಯಮ ಬೆಲೆಯ ಫೋನ್ ಆಗಿದೆ.

Realme 9i: ಭರ್ಜರಿ ಕ್ಯಾಮೆರಾ, ಬಲಿಷ್ಠ ಪ್ರೊಸೆಸರ್​ನ ರಿಯಲ್‌ ಮಿ 9i ಸ್ಮಾರ್ಟ್​ಫೋನ್ ಬಿಡುಗಡೆ: ಬೆಲೆ ಎಷ್ಟು?
Realme 9i

ಸ್ಮಾರ್ಟ್‌ಫೋನ್‌ (Smartphone) ಮಾರುಕಟ್ಟೆಯಲ್ಲಿ ಬಜೆಟ್ ಬೆಲೆಯಿಂದ ಹಿಡಿದು ಹೈರೇಂಜ್ ವರೆಗೆ ಫೋನ್​ಗಳನ್ನು ಬಿಡುಗಡೆ ಮಾಡಿ ಯಶಸ್ವಿಯಾಗಿರುವ ಪ್ರಸಿದ್ಧ ರಿಯಲ್‌ ಮಿ (Realme) ಕಂಪನಿ ಇದೀಗ ಹೊಸ ರಿಯಲ್‌ ಮಿ 9ಐ (Realme 9i) ಸ್ಮಾರ್ಟ್‌ಫೋನ್‌ ಅನ್ನು ಲಾಂಚ್‌ ಮಾಡಿದೆ. ಈ ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್‌ ಸಾಮರ್ಥ್ಯ ಪಡೆದಿದ್ದು, ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ. ಸದ್ಯಕ್ಕೆ ವಿಯೆಟ್ನಾಂ ಮಾರುಕಟ್ಟೆಯಲ್ಲಿ ರಿಯಲ್‌ ಮಿ 9i ಫೋನ್ ಬಿಡುಗಡೆ ಆಗಿದ್ದು, ತಿಂಗಳ ಅಂತ್ಯದಲ್ಲಿ ಇದು ಭಾರತಕ್ಕೂ ಕಾಲಿಡಲಿದೆ. ಇದೊಂದು ಮಧ್ಯಮ ಬೆಲೆಯ ಫೋನ್ ಆಗಿದೆ.

ರಿಯಲ್‌ಮಿ 9i ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.6 ಇಂಚಿನ ಪುಲ್‌ ಹೆಚ್‌ಡಿ + IPS LCD ಡಿಸ್‌ಪ್ಲೇ ಹೊಂದಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್‌ ಸಾಮರ್ಥ್ಯ ಪಡೆದಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಭಾರತದಲ್ಲಿ ಇದು ಎರಡು ವೇರಿಯೆಂಟ್‌ ಆಯ್ಕೆಗಳಲ್ಲಿ ಬಿಡುಗಡೆ ಆಗಲಿದೆ ಎನ್ನಲಾಗಿದೆ.

ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಪೋರ್ಟ್ರೇಟ್ ಕ್ಯಾಮೆರಾವನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ.

ಇನ್ನು ಈ ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೇಗದ ಚಾರ್ಜಿಂಗ್ ಅನ್ನು ಮಾತ್ರ ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ USB-C ಪೋರ್ಟ್, ವೈಫೈ, ಬ್ಲೂಟೂತ್‌, GPS ಮತ್ತು 3.5mm ಹೆಡ್‌ಫೋನ್ ಜ್ಯಾಕ್‌ ಅನ್ನು ಬೆಂಬಲಿಸಲಿದೆ. ವಿಯೆಟ್ನಾಂನಲ್ಲಿ ಈ ಫೋನಿನ ಬೆಲೆ VND 6,290,000, ಅಂದರೆ ಭಾರತದಲ್ಲಿ ಇದರ ಬೆಲೆ ಅಂದಾಜು 20,500 ರೂ. ಎನ್ನಬಹುದು. ಆದರೆ, ಭಾರತದಲ್ಲಿ ಇದಕ್ಕಿಂತಲು ಕಡಿಮೆ ಬೆಲೆಯಲ್ಲಿ ಲಭ್ಯವಾಗುವ ಸಾದ್ಯತೆ ಇದೆ ಎಂದು ಹೇಳಲಾಗಿದೆ.

Galaxy S21 FE 5G: ಭಾರತದಲ್ಲಿ ಬಹುನಿರೀಕ್ಷಿತ ಗ್ಯಾಲಕ್ಸಿ S21 FE ಫೋನ್ ಬಿಡುಗಡೆ: ಏನು ವಿಶೇಷತೆ?, ಬೆಲೆ ಎಷ್ಟು?

Moto G71 5G: ಬಜೆಟ್ ಬೆಲೆಗೆ ಆಕರ್ಷಕ ಫೀಚರ್: ಭಾರತದಲ್ಲಿ ಮೋಟೋ G71 5G ಸ್ಮಾರ್ಟ್‌ಫೋನ್‌ ಬಿಡುಗಡೆ

Published On - 12:46 pm, Tue, 11 January 22

Click on your DTH Provider to Add TV9 Kannada