AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Realme 9i: ಭಾರತದಲ್ಲಿ ರಿಯಲ್‌ಮಿ 9i ಸ್ಮಾರ್ಟ್​ಫೋನ್ ಬಿಡುಗಡ: ಬಜೆಟ್ ಪ್ರಿಯರು ಫುಲ್ ಫಿದಾ

ರಿಯಲ್‌ಮಿ 9i ಸ್ಮಾರ್ಟ್‌ಫೋನ್‌ ಭಾರತದಲ್ಲಿ ಒಟ್ಟು ಎರಡು ಆಯ್ಕೆಯಲ್ಲಿ ಖರೀದಿಗೆ ಸಿಗುತ್ತಿದೆ. ಇದರ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯಕ್ಕೆ 13,999 ರೂ. ನಿಗದಿ ಮಾಡಲಾಗಿದೆ. ಅಂತೆಯೆ 6GB RAM ಮತ್ತು 128GB ಇಂಟರ್‌ ಸ್ಟೋರೇಜ್​ಗೆ 15,999 ರೂ. ಇದೆ.

Realme 9i: ಭಾರತದಲ್ಲಿ ರಿಯಲ್‌ಮಿ 9i ಸ್ಮಾರ್ಟ್​ಫೋನ್ ಬಿಡುಗಡ: ಬಜೆಟ್ ಪ್ರಿಯರು ಫುಲ್ ಫಿದಾ
Realme 9i Smartphone
TV9 Web
| Edited By: |

Updated on:Jan 18, 2022 | 2:24 PM

Share

ಸ್ಮಾರ್ಟ್‌ಫೋನ್‌ (Smartphone) ಮಾರುಕಟ್ಟೆಯಲ್ಲಿ ಬಜೆಟ್ ಬೆಲೆಯಿಂದ ಹಿಡಿದು ಹೈರೇಂಜ್ ವರೆಗೆ ಫೋನ್​ಗಳನ್ನು ಬಿಡುಗಡೆ ಮಾಡಿ ಯಶಸ್ವಿಯಾಗಿರುವ ಪ್ರಸಿದ್ಧ ರಿಯಲ್‌ ಮಿ (Realme) ಕಂಪನಿ ಇದೀಗ ಭಾರತದಲ್ಲಿ ಹೊಸ ರಿಯಲ್‌ ಮಿ 9ಐ (Realme 9i) ಸ್ಮಾರ್ಟ್‌ಫೋನ್‌ ಅನ್ನು ಲಾಂಚ್‌ ಮಾಡಿದೆ. ಈ ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್‌ ಸಾಮರ್ಥ್ಯ ಪಡೆದಿದ್ದು, ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದೊಂದು ಮಧ್ಯಮ ಬೆಲೆಯ ಫೋನ್ ಆಗಿದ್ದು, ಬಜೆಟ್ ಪ್ರಿಯರು ಫಿದಾ ಆಗೋದು ಗ್ಯಾರಂಟಿ. ಜೊತೆಗೆ ಇದರ ಡಿಸೈನ್ ಕೂಡ ಅತ್ಯುತ್ತಮವಾಗಿದೆ.

ಬೆಲೆ ಎಷ್ಟು?:

ರಿಯಲ್‌ಮಿ 9i ಸ್ಮಾರ್ಟ್‌ಫೋನ್‌ ಭಾರತದಲ್ಲಿ ಒಟ್ಟು ಎರಡು ಆಯ್ಕೆಯಲ್ಲಿ ಖರೀದಿಗೆ ಸಿಗುತ್ತಿದೆ. ಇದರ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯಕ್ಕೆ 13,999 ರೂ. ನಿಗದಿ ಮಾಡಲಾಗಿದೆ. ಅಂತೆಯೆ 6GB RAM ಮತ್ತು 128GB ಇಂಟರ್‌ ಸ್ಟೋರೇಜ್​ಗೆ 15,999 ರೂ. ಇದೆ. ಇದು ನೀಲಿ ಮತ್ತು ಕಪ್ಪು ಬಣ್ಣಗಳಲ್ಲಿ ಮಾರಾಟ ಆಗುತ್ತಿದೆ. ಈ ಫೋನಿನ ಮೊದಲ ಸೇಲ್ ಜನವರಿ 25 ರಿಂದ ಶುರುವಾಗಲಿದ್ದು, ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್​, ರಿಯಲ್ ಮಿ ಆನ್​ಲೈನ್ ಸ್ಟೋರ್ ಮತ್ತು ಆಫ್​ ಲೈನ್ ಸ್ಟೋರ್​ಗಳಲ್ಲಿ ಮಾರಾಟ ಕಾಣಲಿದೆ.

ಏನು ವಿಶೇಷತೆ?:

ರಿಯಲ್‌ಮಿ 9i ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.6 ಇಂಚಿನ ಪುಲ್‌ ಹೆಚ್‌ಡಿ + IPS LCD ಡಿಸ್‌ಪ್ಲೇ ಹೊಂದಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್‌ ಸಾಮರ್ಥ್ಯ ಪಡೆದಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಭಾರತದಲ್ಲಿ ಇದು ಎರಡು ವೇರಿಯೆಂಟ್‌ ಆಯ್ಕೆಗಳಲ್ಲಿ ಬಿಡುಗಡೆ ಆಗಲಿದೆ ಎನ್ನಲಾಗಿದೆ.

ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಪೋರ್ಟ್ರೇಟ್ ಕ್ಯಾಮೆರಾವನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ.

ಇನ್ನು ಈ ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೇಗದ ಚಾರ್ಜಿಂಗ್ ಅನ್ನು ಮಾತ್ರ ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ USB-C ಪೋರ್ಟ್, ವೈಫೈ, ಬ್ಲೂಟೂತ್‌, GPS ಮತ್ತು 3.5mm ಹೆಡ್‌ಫೋನ್ ಜ್ಯಾಕ್‌ ಅನ್ನು ಬೆಂಬಲಿಸಲಿದೆ. ಇತ್ತೀಚೆಗಷ್ಟೆ ಈ ಫೋನ್ ವಿಯೆಟ್ನಾಂನಲ್ಲಿ ರಿಲೀಸ್ ಆಗಿತ್ತು. ಇಲ್ಲಿ ಈ ಫೋನಿನ ಬೆಲೆ VND 6,290,000 ಆಗಿದೆ.

OnePlus 9RT: 50MP ಕ್ಯಾಮೆರಾ, 65W ಫಾಸ್ಟ್ ಚಾರ್ಜಿಂಗ್: ಭಾರತದಲ್ಲಿ ಒನ್‌ಪ್ಲಸ್‌ 9RT ಸ್ಮಾರ್ಟ್‌ಫೋನ್​ ಸೇಲ್ ಆರಂಭ

Published On - 2:23 pm, Tue, 18 January 22

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ