Realme C21Y: ರಿಯಲ್ ಮಿ C21Y ಈಗ ಖರೀದಿಗೆ ಲಭ್ಯ: ಕಡಿಮೆ ಬೆಲೆಯ ಫೊನನ್ನು ಬಂಪರ್ ಆಫರ್​ನಲ್ಲಿ ನಿಮ್ಮದಾಗಿಸಿ

Realme C21Y ಮೊದಲ ಸೇಲ್ ಪ್ರಯುಕ್ತ 4GB RAM ಮತ್ತು 64GB ಸ್ಟೋರೆಜ್ ಆಯ್ಕೆಗೆ 500 ರೂ. ಡಿಸ್ಕೌಂಟ್ ನೀಡಲಾಗಿದೆ. ಫ್ಲಿಪ್​ಕಾರ್ಟ್​ನಲ್ಲಿ ಎಕ್ಸ್​ಚೇಂಜ್ ಆಫರ್ ಸೇರಿದಂತೆ ಕ್ಯಾಶ್​ಬ್ಯಾಕ್ ಆಫರ್ ಇದೆ.

Realme C21Y: ರಿಯಲ್ ಮಿ C21Y ಈಗ ಖರೀದಿಗೆ ಲಭ್ಯ: ಕಡಿಮೆ ಬೆಲೆಯ ಫೊನನ್ನು ಬಂಪರ್ ಆಫರ್​ನಲ್ಲಿ ನಿಮ್ಮದಾಗಿಸಿ
Realme C21Y
Follow us
TV9 Web
| Updated By: Vinay Bhat

Updated on: Aug 30, 2021 | 1:31 PM

ಭಾರತೀಯ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಆಕರ್ಷಕ ಸ್ಮಾರ್ಟ್​ಫೊನ್​ಗಳನ್ನು ಪರಿಚಯಿಸಿ ಸೈ ಎನಿಸಸಿಕೊಂಡಿರುವ ರಿಯಲ್ ಮಿ ಕಂಪೆನಿ ಕಳೆದ ವಾರ ಭಾರತದಲ್ಲಿ ಹೊಸ ರಿಯಲ್ ಮಿ ಸಿ21ವೈ (Realme C21Y) ಫೋನನ್ನು ಅನಾವರಣ ಮಾಡಿತ್ತು. ಬಲಿಷ್ಠ 5000mAh ಬ್ಯಾಟರಿ ಸಾಮರ್ಥ್ಯ, ತ್ರಿವಳಿ ಕ್ಯಾಮೆರಾ ಸೇರಿದಂತೆ ಅತ್ಯುತ್ತಮ ಫೀಚರ್​ಗಳನ್ನು ಹೊಂದಿರುವ ಈ ಸ್ಮಾರ್ಟ್​ಫೋನ್ ಇಂದಿನಿಂದ ಖರೀದಿಗೆ ಲಭ್ಯವಾಗುತ್ತಿದೆ.

ಒಟ್ಟು ಎರಡು ಆಯ್ಕೆಯಲ್ಲಿ ರಿಯಲ್ ಮಿ C21Y ಸ್ಮಾರ್ಟ್‌ಫೋನ್ ಖರೀದಿಗೆ ಸಿಗುತ್ತಿದೆ. 3GB RAM ಮತ್ತು 32GB ಸ್ಟೋರೆಜ್ ಆಯ್ಕೆಯ ಫೋನಿಗೆ ಕೇವಲ 8,999 ರೂ. ನಿಗದಿ ಮಾಡಲಾಗಿದೆ. 4GB RAM ಮತ್ತು 64GB ಸ್ಟೋರೆಜ್ ಆಯ್ಕೆಗೆ 9,999 ರೂ. ಇದೆ. ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್ ಸೇರಿದಂತೆ ರಿಯಲ್ ಮಿಯ ಅಧಿಕೃತ ವೆಬ್​ಸೈಟ್ ಮತ್ತು ಆಯ್ದ ಆಫ್​ಲೈನ್ ಸ್ಟೋರ್​ಗಳಲ್ಲಿ ಮಾರಾಟವಾಗುತ್ತಿದೆ. ಮೊದಲ ಸೇಲ್ ಪ್ರಯುಕ್ತ 4GB RAM ಮತ್ತು 64GB ಸ್ಟೋರೆಜ್ ಆಯ್ಕೆಗೆ 500 ರೂ. ಡಿಸ್ಕೌಂಟ್ ನೀಡಲಾಗಿದೆ. ಫ್ಲಿಪ್​ಕಾರ್ಟ್​ನಲ್ಲಿ ಎಕ್ಸ್​ಚೇಂಜ್ ಆಫರ್ ಸೇರಿದಂತೆ ಕ್ಯಾಶ್​ಬ್ಯಾಕ್ ಆಫರ್ ಇದೆ.

ಏನು ವಿಶೇಷತೆ?:

Realme C21Y ಸ್ಮಾರ್ಟ್‌ಫೋನ್ 1600×720 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಆಕ್ಟಾಕೋರ್ ಯುನಿಸೆಕ್ T610 SoC ಪ್ರೊಸೆಸರ್ ಬಲದಲ್ಲಿ ಕಾರ್ಯನಿರ್ವಹಿಸಲಿದ್ದು, ಆಂಡ್ರಾಯ್ಡ್ 11 ಬೆಂಬಲ ಪಡೆದುಕೊಂಡಿದೆ.

ಇನ್ನೂ ಈ ಫೋನ್ ಹಿಂಭಾಗದಲ್ಲಿ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ. ಮುಖ್ಯ ಕ್ಯಾಮೆರಾವು 13 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ. ಎರಡನೇ ಮತ್ತು ಮೂರನೇ ಕ್ಯಾಮೆರಾಗಳು ಕ್ರಮವಾಗಿ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯವನ್ನು ಹೊಂದಿವೆ. ಇನ್ನು ಮುಂಭಾಗದಲ್ಲಿ ಸೆಲ್ಫಿಗಾಗಿ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಕ್ಯಾಮೆರಾ ಅಳವಡಿಸಲಾಗಿದೆ. ವಿಶೇಷವಾಗಿ ಕ್ಯಾಮೆರಾದಲ್ಲಿ ಸ್ಲೋ ಮೋಷನ್, ಸೂಪರ್ ನೈಟ್ ಮೋಡ್, ಕ್ರೋಮ್ ಬೂಸ್ಟ್ ಸೇರಿದಂತೆ 1080p ವಿಡಿಯೋ ರೆಕಾರ್ಡಿಂಗ್ ಆಯ್ಕೆ ನೀಡಲಾಗಿದೆ.

5,000mAh ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿದೆ. ಇದರೊಂದಿಗೆ 4G LTE, ಡ್ಯುಯಲ್-ಬ್ಯಾಂಡ್ ವೈ-ಫೈ, ಬ್ಲೂಟೂತ್ 5.0 ಮತ್ತು 256GB ವರೆಗಿನ ಮೈಕ್ರೊ ಎಸ್​ಡಿ ಕಾರ್ಡ್ ಅಳವಡಿಸಬಹುದಾಗಿದೆ.

ಮುಂದುವರೆದ ದರ ಸಮರ: ಭರ್ಜರಿ ರಿಚಾರ್ಜ್​ ಆಫರ್ ನೀಡಿದ ಮೂರು ಕಂಪೆನಿಗಳು

Smartphone Tips 4: ನಿಮ್ಮ ಸ್ಮಾರ್ಟ್​ಫೋನ್ ಹ್ಯಾಕ್ ಆಗದಂತೆ ಎಚ್ಚರ ವಹಿಸಿ

(Realme C21Y Goes on Sale in India via Flipkart check Price and Offers)

‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು