Realme C31: ಕೇವಲ 8,999 ರೂ.: ಇಂದು ಮೊದಲ ಸೇಲ್ ಕಾಣುತ್ತಿದೆ ರಿಯಲ್ ಮಿ C31 ಸ್ಮಾರ್ಟ್‌ಫೋನ್
Realme C31 First Sale: ಸಾಕಷ್ಟು ವಿಶೇಷತೆಗಳಿಂದ ಕೂಡಿರುವ ರಿಯಲ್ ಮಿ ಸಿ31 ಫೋನ್ ಇಂದು ಮಧ್ಯಾಹ್ನ 12 ಗಂಟೆಯಿಂದ ರಿಯಲ್ ಮಿ ಕಂಪನಿಯ ಆನ್‌ಲೈನ್ ಸ್ಟೋರ್, ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್‌ಕಾರ್ಟ್ (Flipkart) ಮೂಲಕ ಮೊದಲ ಸೇಲ್ ಕಾಣುತ್ತಿದೆ.
ಯುಗಾದಿ ಹಬ್ಬ ಕಳೆದಿದ್ದರೂ ಪ್ರೀತಿ ಪಾತ್ರರಿಗೆ ಉಡುಗೊರೆ ಕೊಡುವ ಪ್ಲಾನ್ನಲ್ಲಿ ನೀವಿದ್ದರೆ, ಅಥವಾ ನೀವು ಅತೀ ಕಡಿಮೆ ಬೆಲೆಗೆ ಆಕರ್ಷಕ ಸ್ಮಾರ್ಟ್‌ಫೋನ್ (Smartphone) ಖರೀದಿಸುವ ಯೋಜನೆಯಲ್ಲಿದ್ದರೆ ಇಲ್ಲೊಂದು ಅತ್ಯುತ್ತಮ ಮೊಬೈಲ್ ಇದೆ. ರಿಯಲ್ ಮಿ ಕಂಪನಿ ಕಳೆದ ವಾರವಷ್ಟೆ ಬಿಡುಗಡೆ ಮಾಡಿರುವ ಹೊಸ ರಿಯಲ್ ಮಿ ಸಿ31 (Realme C31) ಸ್ಮಾರ್ಟ್‌ಫೋನ್ ಇಂದಿನಿಂದ ಖರೀದಿಗೆ ಸಿಗುತ್ತಿದೆ. ಈ ಸ್ಮಾರ್ಟ್‌ಫೋನ್ ಮೊದಲು ಇಂಡೋನೇಷ್ಯಾದಲ್ಲಿ ಬಿಡುಗಡೆ ಆಗಿ ಬಹುದೊಡ್ಡ ಯಶಸ್ಸು ಕಂಡಿತ್ತು. ಇದೇ ಕಾರಣಕ್ಕೆ ಭಾರತದಲ್ಲಿ ಬಜೆಟ್ ಬೆಲೆಯಿಂದ ಗಮನ ಸೆಳೆದಿರುವ ರಿಯಲ್ ಮಿ C31 ಅನ್ನು ರಿಯಲ್ ಮಿ ಇತ್ತೀಚೆಗಷ್ಟೆ ಬಿಡುಗಡೆ ಮಾಡಿತ್ತು. ಸಾಕಷ್ಟು ವಿಶೇಷತೆಗಳಿಂದ ಕೂಡಿರುವ ಈ ಫೋನ್ ಇಂದು ಮಧ್ಯಾಹ್ನ 12 ಗಂಟೆಯಿಂದ ರಿಯಲ್ ಮಿ ಕಂಪನಿಯ ಆನ್‌ಲೈನ್ ಸ್ಟೋರ್, ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್‌ಕಾರ್ಟ್ (Flipkart) ಮೂಲಕ ಮೊದಲ ಸೇಲ್ ಕಾಣುತ್ತಿದೆ.
ಭಾರತದಲ್ಲಿ ರಿಯಲ್ ಮಿ C31 ಸ್ಮಾರ್ಟ್‌ಫೋನ್ ಒಟ್ಟು ಎರಡು ಸ್ಟೋರೆಜ್ ಆಯ್ಕೆಯಲ್ಲಿ ಖರೀದಿಗೆ ಸಿಗಲಿದೆ. ಇದರ 3GB RAM ಮತ್ತು 32GB ಸ್ಟೋರೆಜ್ ಮಾದರಿಗೆ 8,999 ರೂ. ಬೆಲೆ ನಿಗದಿ ಮಾಡಲಾಗಿದೆ. ಅಂತೆಯೆ 4GB RAM ಮತ್ತು 64GB ರೂಪಾಂತರದ ಬೆಲೆ 9,999 ರೂ.ಆಗಿದೆ. ಈ ಫೋನ್ ಡಾರ್ಕ್ ಗ್ರೀನ್ ಮತ್ತು ಲೈಟ್ ಸಿಲ್ವರ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿದೆ.
ರಿಯಲ್ ಮಿ C31 ಸ್ಮಾರ್ಟ್‌ಫೋನ್ 720×1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ HD+ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 88.7% ಸ್ಕ್ರೀನ್ ಟು ಬಾಡಿ ಅನುಪಾತದಿಂದ ಕೂಡಿದೆ. ಆಕ್ಟಾ-ಕೋರ್ ಯೂನಿಸೋಕ್ T612 ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದು 12nm ಪ್ರಕ್ರಿಯೆಯನ್ನು ಆಧರಿಸಿದೆ. ಈ ಪ್ರೊಸೆಸರ್ ಲೊ-ಲೇವೆಲ್ ಆಗಿದೆ, ಅಂದರೆ ಹಗುರವಾದ ಕಾರ್ಯಗಳಿಗೆ ಸೂಕ್ತವಾಗಿದೆ.
ಇನ್ನು ರಿಯಲ್ ಮಿ C31 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಕಪ್ಪು-ಬಿಳುಪು ಕ್ಯಾಮೆರಾವನ್ನು ಹೊಂದಿದೆ. ಇದಲ್ಲದೆ ವಾಟರ್‌ಡ್ರಾಪ್ ಶೈಲಿಯ ನಾಚ್‌ನೊಳಗೆ 5 ಮೆಗಾಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾ ಕೂಡ ನೀಡಲಾಗಿದೆ.
ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಅಳವಡಿಸಲಾಗಿದೆ. ಇದು ಸ್ಟ್ಯಾಂಡ್‌ಬೈನಲ್ಲಿ 45 ದಿನಗಳ ಬ್ಯಾಟರಿ ಅವಧಿಯನ್ನು ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi (2.4 GHz), ಬ್ಲೂಟೂತ್ v5, 3.5mm ಹೆಡ್‌ಫೋನ್ ಜ್ಯಾಕ್ ಮತ್ತು USB ಟೈಪ್-C ಪೋರ್ಟ್ ಬೆಂಬಲಿಸಲಿದೆ. ಇವೆಲ್ಲದರ ಜೊತೆಗೆ ಲೈಟ್ ಸೆನ್ಸಾರ್, ಮ್ಯಾಗ್ನೆಟಿಕ್ ಇಂಡಕ್ಷನ್ ಸೆನ್ಸಾರ್, ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಸೇರಿದಂತೆ ಇತ್ತೀಚೆಗಿನ ಎಲ್ಲ ಆಯ್ಕೆಗಳನ್ನು ಒಳಗೊಂಡಿದೆ.
Realme 9 4G: ಎರಡೇ ದಿನ ಬಾಕಿ: ಭಾರತಕ್ಕೆ ಅಪ್ಪಳಿಸಲಿದೆ 108MP ಕ್ಯಾಮೆರಾದ ಹೊಸ ಸ್ಮಾರ್ಟ್‌ಫೋನ್
Poco X4 Pro 5G: 67W ಫಾಸ್ಟ್ ಚಾರ್ಜರ್, ಕಡಿಮೆ ಬೆಲೆ: ಪೋಕೋ X4 ಪ್ರೊ 5G ಸ್ಮಾರ್ಟ್‌ಫೋನ್ ಈಗ ಖರೀದಿಗೆ ಲಭ್ಯ