Realme C33: ಬೆಲೆ ಕೇವಲ 8,999 ರೂ.: ಭಾರತದಲ್ಲಿ ರಿಯಲ್ ಮಿ C33 ಸ್ಮಾರ್ಟ್‌ಫೋನ್‌ ಖರೀದಿಗೆ ಲಭ್ಯ

ರಿಯಲ್ ಮಿ C33 ಸ್ಮಾರ್ಟ್‌ಫೋನ್‌ ಭಾರತದಲ್ಲಿ ಎರಡು ಸ್ಟೋರೇಜ್ ಆಯ್ಕೆಯಲ್ಲಿ ಅನಾವರಣಗೊಂಡಿತ್ತು. ಇದರ 3GB RAM + 32GB ಸ್ಟೋರೇಜ್​ಗೆ 8,999 ರೂ. ನಿಗದಿ ಮಾಡಲಾಗಿದೆ.

Realme C33: ಬೆಲೆ ಕೇವಲ 8,999 ರೂ.: ಭಾರತದಲ್ಲಿ ರಿಯಲ್ ಮಿ C33 ಸ್ಮಾರ್ಟ್‌ಫೋನ್‌ ಖರೀದಿಗೆ ಲಭ್ಯ
Realme C33
Follow us
TV9 Web
| Updated By: Vinay Bhat

Updated on: Sep 13, 2022 | 6:45 AM

ಭಾರತದಲ್ಲಿ ಈ ವರ್ಷ ಅತಿ ಹೆಚ್ಚು ಬಜೆಟ್ ಬೆಲೆಯ ಫೋನ್​ಗಳು ಬಿಡುಗಡೆ ಆಗಿವೆ ಎಂದರೆ ತಪ್ಪಾಗಲಾರದು. ಕಡಿಮೆ ಎಂದರೂ ತಿಂಗಳಿಗೆ ಮೂರರಿಂದ ನಾಲ್ಕು ಮೊಬೈಲ್​ಗಳು ರಿಲೀಸ್ ಆಗುತ್ತಿದ್ದು ಇದರಲ್ಲಿ ಬಹುತೇಕ ಫೋನುಗಳು ಕೈಗೆಟಕುವ ಬೆಲೆಯಲ್ಲೇ ಇರುತ್ತದೆ. ಅದರಲ್ಲೂ ಭಾರತದಲ್ಲಿ ರಿಯಲ್ ಮಿ (Realme) ಕಂಪನಿಯ ಬಜೆಟ್ ಫೋನ್​ಗಳಿಗೆ ಭರ್ಜರಿ ಬೇಡಿಕೆ ಇದೆ. ಇದಕ್ಕಾಗಿಯೆ ಕಂಪನಿ ಹೆಚ್ಚಾಗಿ 20,000 ರೂ. ಒಳಗೆ ಆಕರ್ಷಕ ಫೀಚರ್​ಗಳ ಸ್ಮಾರ್ಟ್​ಫೋನ್​ಗಳನ್ನು (Smartphones) ಲಾಂಚ್ ಮಾಡುತ್ತದೆ. ಈ ಸಾಲಿಗೆ ಇತ್ತೀಚೆಗಷ್ಟೆ ರಿಯಲ್ ಮಿ ಸಿ33 (Realme C33) ಫೋನ್ ಕೂಡ ಸೇರಿತ್ತು. ಈ ಮೊಬೈಲ್ ಇದೀಗ ಖರೀದಿಗೆ ಸಿಗುತ್ತಿದೆ. ಈ ಫೋನ್ 10,000 ರೂ. ಒಳಗಡೆ ಬಿಡುಗಡೆ ಆಗಿದೆ. ಆದರೂ ಬರೋಬ್ಬರಿ 50 ಮೆಗಾಫಿಕ್ಸೆಲ್ ಕ್ಯಾಮೆರಾ, ಅತ್ಯುತ್ತಮ ಬ್ಯಾಟರಿ ನೀಡಲಾಗಿದೆ. ಈ ಫೋನಿನ ಕುರಿತ ಪೂರ್ಣ ಮಾಹಿತಿ ಇಲ್ಲಿದೆ.

ರಿಯಲ್ ಮಿ C33 ಸ್ಮಾರ್ಟ್‌ಫೋನ್‌ ಭಾರತದಲ್ಲಿ ಎರಡು ಸ್ಟೋರೇಜ್ ಆಯ್ಕೆಯಲ್ಲಿ ಅನಾವರಣಗೊಂಡಿತ್ತು. ಇದರ 3GB RAM + 32GB ಸ್ಟೋರೇಜ್​ಗೆ 8,999 ರೂ. ನಿಗದಿ ಮಾಡಲಾಗಿದೆ. 4GB RAM + 64GB ಸ್ಟೋರೇಜ್ ರೂಪಾಂತರಕ್ಕೆ 9,999 ರೂ. ಇದೆ. ಈ ಫೋನ್ ಅಕ್ವಾ ಬ್ಲೂ, ಸ್ಯಾಂಡಿ ಗೋಲ್ಡ್ ಹಾಗೂ ನೈಟ್ ಸಿಯಾ ಕಲರ್​ನಲ್ಲಿ ಖರೀದಿಗೆ ಸಿಗುತ್ತದೆ. ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್ ಮತ್ತು ರಿಯಲ್ ಮಿ ಅಧಿಕೃತ ವೆಬ್​ಸೈಟ್​ನಲ್ಲಿ ಈ ಫೋನ್ ಇದೀಗ ಮಾರಾಟ ಕಾಣುತ್ತಿದೆ.

ಈ ಸ್ಮಾರ್ಟ್‌ಫೋನ್​ನ ಫೀಚರ್ಸ್ ಬಗ್ಗೆ ನೋಡುವುದಾದರೆ, ಇದು 6.5 ಇಂಚಿನ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. 400 ನಿಟ್ಸ್ ಬ್ರೈಟ್​ನೆಸ್ ಸಾಮರ್ಥ್ಯ ಪಡೆದುಕೊಂಡಿದೆ. Unisoc T612 ಪ್ರೊಸೆಸರ್ ಅಳವಡಿಸಲಾಗಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ನ ರಿಯಲ್ ಮಿ UI S ಬೆಂಬಲವನ್ನು ಪಡೆದುಕೊಂಡಿದೆ.

ಇದನ್ನೂ ಓದಿ
Image
Galaxy A32: ಸ್ಯಾಮ್​ಸಂಗ್ ಗ್ಯಾಲಕ್ಸಿಯ ಈ ಸ್ಮಾರ್ಟ್​​ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ: ಆಫರ್ ಮಿಸ್ ಮಾಡ್ಬೇಡಿ
Image
Oppo F21s Pro: ಪವರ್​ಫುಲ್ ಮೈಕ್ರೊ ಲೆನ್ಸ್ ಕ್ಯಾಮೆರಾ: ರೋಚಕತೆ ಸೃಷ್ಟಿಸಿದ ಒಪ್ಪೋ F21s ಪ್ರೊ ಸರಣಿ
Image
WhatsApp: ವಾಟ್ಸ್​ಆ್ಯಪ್ ಖಾತೆಯನ್ನು ಸುಲಭವಾಗಿ ಡಿಲೀಟ್ ಮಾಡುವುದು ಹೇಗೆ?: ಇಲ್ಲಿದೆ ಟಿಪ್ಸ್
Image
iPhone Mobiles: iPhone 14 ಬಿಡುಗಡೆಯಾಗಿದ್ದರೂ ಕಡಿತ ಬೆಲೆಯೊಂದಿಗೆ ಲಭ್ಯವಾಗಲಿದೆ iPhone 13

ಈ ಸ್ಮಾರ್ಟ್‌ಫೋನ್​ನಲ್ಲಿ ಡ್ಯುಯೆಲ್ ಕ್ಯಾಮೆರಾ ಸೆಟ್‌ಅಪ್‌ ಇದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ನೀಡಲಾಗಿದೆ. ಜೊತೆಗೆ LED ಫ್ಲ್ಯಾಸ್ ಕೂಡ ಇದೆ. ಎರಡನೇ ಕ್ಯಾಮೆರಾ 0.3 ಮೆಗಾಪಿಕ್ಸೆಲ್. ಇದರಲ್ಲಿರುವ ಮುಖ್ಯ ಕ್ಯಾಮೆರಾ ಹೆಚ್​ಡಿಆರ್ ಮೋಡ್, ಪಾನೊರಮಿಕ್, ಪೋರ್ಟ್​ಟ್ರೈಟ್ ಮೋಡ್, ಟೈಮ್ ಲಾಪ್ಸ್ ಸೇರಿದಂತೆ ಅನೇಕ ಫೀಚರ್​ಗಳಿಂದ ಆವೃತ್ತವಾಗಿದೆ. ಮುಂಭಾಗ ಕೂಡ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ.

ದೀರ್ಘ ಸಮಯ ಬಾಳಿಕೆ ಬರುವ 5000mAh ಸಾಮರ್ಥ್ಯದ ಬ್ಯಾಟರಿಯನ್ನು ನೀಡಲಾಗಿದ್ದು, 10W ಸಾಮಾನ್ಯ ವೇಗದ ಚಾರ್ಜರ್​ನೊಂದಿಗೆ ಬರುತ್ತದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G, ಡ್ಯುಯಲ್ ಬ್ಯಾಂಡ್ Wi-Fi, ಬ್ಲೂಟೂತ್, GPS ಮತ್ತು USB ಟೈಪ್-C ಪೋರ್ಟ್ ಅನ್ನು ಹೊಂದಿದೆ.

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್