Realme 9 Series: ರಿಯಲ್ ಮಿಯಿಂದ ಮುಂದಿನ ವಾರ ಭಾರತದಲ್ಲಿ ಬರೋಬ್ಬರಿ 4 ಸ್ಮಾರ್ಟ್​ಫೋನ್ ಬಿಡುಗಡೆ: ಯಾವುದೆಲ್ಲ?

Realme C35: ರಿಯಲ್‌ ಮಿ ಸಿ35 (Realme C35) ಫೋನ್‌ ಬಿಡುಗಡೆ ಮಾಡಲು ದಿನಾಂಕವನ್ನು ಬಹಿರಂಗಪಡಿಸಿದೆ. ಹೆಚ್ಚೇನು ದಿನಗಳಿರದೆ ಈ ಸ್ಮಾರ್ಟ್‌ಫೋನ್‌ ಇದೇ ಮಾರ್ಚ್ 7 ಸೋಮವಾರದಂದು ಭಾರತದಲ್ಲಿ ಲಾಂಚ್‌ ಆಗಲಿದೆ.

Realme 9 Series: ರಿಯಲ್ ಮಿಯಿಂದ ಮುಂದಿನ ವಾರ ಭಾರತದಲ್ಲಿ ಬರೋಬ್ಬರಿ 4 ಸ್ಮಾರ್ಟ್​ಫೋನ್ ಬಿಡುಗಡೆ: ಯಾವುದೆಲ್ಲ?
Realme 9 Series and Realme C35
Follow us
| Updated By: Vinay Bhat

Updated on: Mar 05, 2022 | 2:36 PM

ವಿಶ್ವದ ಮೊಬೈಲ್ ಮಾರುಕಟ್ಟೆಯಲ್ಲಿ ವಿಭಿನ್ನ ಸ್ಮಾರ್ಟ್​ಫೋನ್​ಗಳನ್ನು (Smartphone) ಪರಿಚಯಿಸಿ ವಿಶೇಷ ಸ್ಥಾನ ಸಂಪಾದಿಸಿರುವ ರಿಯಲ್ ಮಿ ಕಂಪನಿ ಮೊನ್ನೆಯಷ್ಟೆ ಭಾರತದಲ್ಲಿ ರಿಯಲ್‌ ಮಿ ವಿ25 (Realme V25) ಎಂಬ ಸ್ಮಾರ್ಟ್‌ಫೋನ್‌ ಅನ್ನು ಅನಾವರಣ ಮಾಡಿತ್ತು. ಇದರ ಬೆನ್ನಲ್ಲೇ ಇದೀಗ ಮತ್ತೊಂದು ರಿಯಲ್‌ ಮಿ ಸಿ35 (Realme C35) ಫೋನ್‌ ಬಿಡುಗಡೆ ಮಾಡಲು ದಿನಾಂಕವನ್ನು ಬಹಿರಂಗಪಡಿಸಿದೆ. ಹೆಚ್ಚೇನು ದಿನಗಳಿರದೆ ಈ ಸ್ಮಾರ್ಟ್‌ಫೋನ್‌ ಇದೇ ಮಾರ್ಚ್ 7 ಸೋಮವಾರದಂದು ಭಾರತದಲ್ಲಿ ಲಾಂಚ್‌ ಆಗಲಿದೆ. ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್, ಸೂಪರ್ ಪವರ್ ಸೇವಿಂಗ್ ಮೋಡ್ ಅನ್ನು ಕೂಡ ಹೊಂದಿದ್ದು, 5,000mAh ಬ್ಯಾಟರಿ ಸೇರಿದಂತೆ ಆಕರ್ಷಕ ಫೀಚರ್​ಗಳಿಂದ ಕೂಡಿರುವ ರಿಯಲ್‌ ಮಿ C35 ಸ್ಮಾರ್ಟ್‌ಫೋನ್‌ ಅತಿ ಕಡಿಮೆ ಬೆಲೆಗೆ ಖರೀದಿಸಲು ಸಿಗಲಿದೆ ಎಂದು ಹೇಳಲಾಗಿದೆ.

ಇದರ ವಿಶೇಷತೆ ಬಗ್ಗೆ ಗಮನಿಸುವುದಾದರೆ, ರಿಯಲ್‌ ಮಿ C35 ಸ್ಮಾರ್ಟ್‌ಫೋನ್‌ 1,080×2,408 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.6 ಇಂಚಿನ ಫುಲ್‌ ಹೆಚ್‌ಡಿ ಡಿಸ್‌ಪ್ಲೇ ಹೊಂದಿರಲಿದೆ. ಈ ಡಿಸ್‌ಪ್ಲೇ 90.7% ಸ್ಕ್ರೀನ್-ಟು-ಬಾಡಿ ಅನುಪಾತದಿಂದ ಕೂಡಿದೆ. ಆಕ್ಟಾ-ಕೋರ್ ಯೂನಿಸೋಕ್‌ T616 SoC ಪ್ರೊಸೆಸರ್‌ ಪಡೆಯುವ ಸಾಧ್ಯತೆ ಇದೆ ಎಂಬ ಮಾತುಕೂಡ ಇದೆ. 11 ಆಧಾರಿತ ರಿಯಲ್‌ಮಿ UI R ಆವೃತ್ತಿಯಲ್ಲಿ ರನ್ ಮಾಡುವ ನಿರೀಕ್ಷೆಯಿದೆ. ಹಾಗೆಯೇ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿರಲಿದೆ.

ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿರಬಹುದು ಎಂದು ನಿರೀಕ್ಷಿಸಲಾಗಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ f/1.8 ಅಪರ್ಚರ್ 5P ಲೆನ್ಸ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಮ್ಯಾಕ್ರೋ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿರುವ ಸಾಧ್ಯತೆಯಿದೆ.

ರಿಯಲ್‌ ಮಿ C35 ಸ್ಮಾರ್ಟ್‌ಫೋನ್‌ ದೀರ್ಘ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ಫಾಸ್ಟ್‌ ಚಾರ್ಜಿಂಗ್ ಬೆಂಬಲವನ್ನು ನೀಡುತ್ತದೆ. ಇದು ಸೂಪರ್ ಪವರ್ ಸೇವಿಂಗ್ ಮೋಡ್ ಅನ್ನು ಕೂಡ ಹೊಂದಿರುವುದು ವಿಶಶೇಷ. ಜೊತೆಗೆ ಈ ಸ್ಮಾರ್ಟ್‌ಫೋನ್ ಪವರ್ ಬಟನ್‌ನಲ್ಲಿ ಎಂಬೆಡ್ ಮಾಡಲಾದ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಹೊಂದಿರಲಿದೆ.

ಈ ಸ್ಮಾರ್ಟ್‌ಫೋನ್‌ ಭಾರತದಲ್ಲಿ ಬಜೆಟ್ ಬೆಲೆಗೆ ಲಭ್ಯವಾಗಲಿದೆ ಎಂಬ ಮಾಹಿತಿಯಷ್ಟೆ ಹೊರಬಿದ್ದಿದೆ. ಇದರ ನಿಖರ ಬೆಲೆ ಇನ್ನಷ್ಟೆ ತಿಳಿದುಬರಬೇಕಿದೆ. ಆದರೆ ಥೈಲ್ಯಾಂಡ್‌ನಲ್ಲಿ ಇದರ ಬೆಲೆ THB 5,799 ಅಂದರೆ ಭಾರತದಲ್ಲಿ ಸುಮಾರು 13,350 ರೂ. ಎನ್ನಬಹುದು. ಭಾರತದಲ್ಲಿ ಈ ಸ್ಮಾರ್ಟ್‌ಫೋನ್‌ ಮಾರ್ಚ್ 7 ರಂದು ಮಧ್ಯಾಹ್ನ 12.30ಕ್ಕೆ ಬಿಡುಗಡೆಯಾಗಲಿದೆ. ಇದರ ಬೆನ್ನಲ್ಲೇ ಮಾರ್ಚ್ 10 ರಂದು ರಿಯಲ್ ಮಿ 9 ಸರಣಿಯ ಅಡಿಯಲ್ಲಿ ರಿಯಲ್ ಮಿ 9 4G, ರಿಯಲ್ ಮಿ 9 5G ಮತ್ತು ರಿಯಲ್ ಮಿ 9SE ಸ್ಮಾರ್ಟ್​ಫೋನ್ ದೇಶದಲ್ಲಿ ಅನಾವರಣಗೊಳ್ಳಲಿದೆ.

Lava X2: ಕೇವಲ 6,599 ರೂ: ಊಹಿಸಲಾಗದಷ್ಟು ಕಡಿಮೆ ಬೆಲೆಗೆ ಬಿಡುಗಡೆ ಆಯಿತು ಹೊಸ ಸ್ಮಾರ್ಟ್​ಫೋನ್