Realme C35: ರಿಯಲ್ ಮಿ ಕಂಪನಿಯಿಂದ ಬೆಸ್ಟ್ ಬಜೆಟ್ ಸ್ಮಾರ್ಟ್​ಫೋನ್ ರಿಯಲ್‌ ಮಿ C35 ಬಿಡುಗಡೆ: ಬೆಲೆ ಎಷ್ಟು?

ಹೊಸ ರಿಯಲ್‌ ಮಿ ಸಿ35 (Realme C35) ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಯೂನಿಸೋಕ್‌ T616 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಜೊತೆಗೆ 5,000mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿದ್ದು, 18W ಫಾಸ್ಟ್ ಚಾರ್ಜಿಂಗ್‌ ಬೆಂಬಲದಿಂದ ಕೂಡಿದೆ.

Realme C35: ರಿಯಲ್ ಮಿ ಕಂಪನಿಯಿಂದ ಬೆಸ್ಟ್ ಬಜೆಟ್ ಸ್ಮಾರ್ಟ್​ಫೋನ್ ರಿಯಲ್‌ ಮಿ C35 ಬಿಡುಗಡೆ: ಬೆಲೆ ಎಷ್ಟು?
Realme C35
Follow us
TV9 Web
| Updated By: Vinay Bhat

Updated on:Feb 11, 2022 | 1:45 PM

ಸ್ಮಾರ್ಟ್‌ಫೋನ್‌ (Smartphone) ಮಾರುಕಟ್ಟೆಯಲ್ಲಿ ಬಜೆಟ್ ಬೆಲೆಯಿಂದ ಹಿಡಿದು ಹೈರೇಂಜ್ ವರೆಗೆ ಫೋನ್​ಗಳನ್ನು ಬಿಡುಗಡೆ ಮಾಡಿ ಯಶಸ್ವಿಯಾಗಿರುವ ಪ್ರಸಿದ್ಧ ರಿಯಲ್‌ ಮಿ ಕಂಪನಿ ಇದೀಗ ಹೊಸ ರಿಯಲ್‌ ಮಿ ಸಿ35 (Realme C35) ಸ್ಮಾರ್ಟ್‌ಫೋನ್‌ ಅನ್ನು ಅನಾವರಣ ಮಾಡಿದೆ. ಸಾಕಷ್ಟು ವಿಶೇಷಗಳಿಂದ ಕೂಡಿರುವ ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಯೂನಿಸೋಕ್‌ T616 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಜೊತೆಗೆ 5,000mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿದ್ದು, 18W ಫಾಸ್ಟ್ ಚಾರ್ಜಿಂಗ್‌ ಬೆಂಬಲದಿಂದ ಕೂಡಿದೆ. ಇಳಿದಂತೆ ಈ ಫೋನಿನ ಬೆಲೆ ಎಷ್ಟು?, ಏನು ವಿಶೇಷತೆ ಎಂಬುದನ್ನು ನೋಡೋಣ.

ರಿಯಲ್‌ಮಿ C35 ಸ್ಮಾರ್ಟ್‌ಫೋನ್‌ 1,080×2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.6 ಇಂಚಿನ ಫುಲ್‌ HD+ ಡಿಸ್‌ಪ್ಲೇಯನ್ನು ಹೊಂದಿದೆ. ಆಕ್ಟಾ-ಕೋರ್ ಯೂನಿಸೋಕ್‌ T616 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್‌ 11 ಆಧಾರಿತ ರಿಯಲ್‌ಮಿ UI R ಆವೃತ್ತಿಯಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM + 64GB ಹಾಗೂ 4GB + 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್‌ ಮೂಲಕ 1TB ವರೆಗೆ ವಿಸ್ತರಿಸಬಹುದಾಗಿದೆ.

ಇದು ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿರುವ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ 5P ಲೆನ್ಸ್‌ ಹೊಂದಿದೆ. ಮ್ಯಾಕ್ರೋ ಕ್ಯಾಮೆರಾ ಮತ್ತು ವೈಟ್‌-ಬ್ಲಾಕ್‌ ಪೋರ್ಟ್ರೇಟ್ ಕ್ಯಾಮೆರಾ ಕೂಡ ಇದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಬ್ಯಾಂಡ್ ವೈ-ಫೈ, ಬ್ಲೂಟೂತ್ v5.0, 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಬೆಂಬಲಿಸುತ್ತದೆ.

ಒಟ್ಟು ಎರಡು ಮಾದರಿಯಲ್ಲಿ ರಿಯಲ್‌ಮಿ C35 ಸ್ಮಾರ್ಟ್‌ಫೋನ್‌ ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ. ಇದರ ಬೇಸ್‌ ಮಾಡೆಲ್‌ 4GB RAM ಮತ್ತು 64GB ಸ್ಟೋರೇಜ್ ರೂಪಾಂತರಕ್ಕೆ THB 5,799, ಅಂದರೆ ಭಾರತದಲ್ಲಿ ಇದರ ಬೆಲೆ ಅಂದಾಜು 13,350 ರೂ. ಹಾಗೆಯೇ 4GB + 128GB ಇಂಟರ್‌ ಸ್ಟೋರೇಜ್‌ ಆಯ್ಕೆಗೆ THB 6,299 (ಅಂದಾಜು 14,500ರೂ.) ಆಗಿದೆ. ಈ ಸ್ಮಾರ್ಟ್‌ಫೋನ್ ಸದ್ಯಕ್ಕೆ ಥೈಲ್ಯಾಂಡ್‌ನಲ್ಲಷ್ಟೆ ರಿಲೀಸ್ ಆಗಿದೆ. ಸದ್ಯದಲ್ಲೇ ಭಾರತಕ್ಕೂ ಈ ಸ್ಮಾರ್ಟ್​ಫೋನ್ ಕಾಲಿಡಲಿದೆ.

Airtel Down: ದೇಶದ ಅನೇಕ ಕಡೆಗಳಲ್ಲಿ ಏರ್ಟೆಲ್ ನೆಟ್​​ವರ್ಕ್ ಡೌನ್: ಇಂಟರ್ನೆಟ್ ಕೂಡ ವರ್ಕ್ ಆಗ್ತಿಲ್ಲ

Tips and Tricks: 68GB, 128GB ಸ್ಟೊರೇಜ್ ಸಾಕಾಗ್ತಿಲ್ವಾ?: ಹಾಗಾದ್ರೆ ಈ ಟ್ರಿಕ್ ಫಾಲೋ ಮಾಡಿ ಮೆಮೋರಿ ಹೆಚ್ಚಿಸಿ

Published On - 1:43 pm, Fri, 11 February 22

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ