ಪ್ರಸಿದ್ಧ ರಿಯಲ್ ಮಿ ಕಂಪನಿ ಈ ವರ್ಷ ಬಜೆಟ್ ಬೆಲೆಗೆ ಅನೇಕ ಆಕರ್ಷಕ ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡಿದೆ. ಈಗ ಈ ಸಾಲಿಗೆ ಮತ್ತೊಂದು ಫೋನ್ ಸೇರ್ಪಡೆ ಆಗಿದೆ. ಇಂದು ಭಾರತೀಯ ಮಾರುಕಟ್ಟೆಯಲ್ಲಿ ಹೊಸ ರಿಯಲ್ ಮಿ C67 5G (Realme C67 5G ) ಸ್ಮಾರ್ಟ್‌ಫೋನ್ ರಿಲೀಸ್ ಆಗಿದೆ. ವಿಶೇಷ ಎಂದರೆ ಇದು ರಿಯಲ್ ಮಿ C ಸರಣಿಯಲ್ಲಿ ಬಂದ ಮೊದಲ 5G-ಬೆಂಬಲಿತ ಸ್ಮಾರ್ಟ್‌ಫೋನ್ ಆಗಿದೆ. ಸಾಕಷ್ಟು ಬಲಿಷ್ಠವಾಗಿರುವ ಈ ಫೋನ್ನಲ್ಲಿ 33W ವೈರ್ಡ್ ಫಾಸ್ಟ್ ಚಾರ್ಜಿಂಗ್ ಬೆಂಬಲ, ಮೀಡಿಯಾ ಟೆಕ್ ಚಿಪ್‌ಸೆಟ್, AI ಬೆಂಬಲಿತ ಕ್ಯಾಮೆರಾ ಸೇರಿದಂತೆ ಅನೇಕ ಫೀಚರ್ಗಳಿಂದ ಆವೃತ್ತವಾಗಿದೆ. ಈ ಫೋನಿನ ಬೆಲೆ, ವಿಶೇಷತೆ ಕುರಿತ ಮಾಹಿತಿ ಇಲ್ಲಿದೆ.
ಡಾರ್ಕ್ ಪರ್ಪಲ್ ಮತ್ತು ಸನ್ನಿ ಓಯಸಿಸ್ ಬಣ್ಣಗಳಲ್ಲಿ ಬಿಡುಗಡೆ ಆಗಿರುವ ಈ ಫೋನ್ ಒಟ್ಟು ಎರಡು ಸ್ಟೋರೇಜ್ ಆಯ್ಕೆಯಲ್ಲಿ ಲಭ್ಯವಿದೆ. ಇದರ 4GB + 128GB ರೂಪಾಂತರಕ್ಕೆ 13,999 ರೂ. ಇದೆ. 6GB + 128GB ಆಯ್ಕೆಗೆ ರೂ. 14,999 ನಿಗದಿ ಮಾಡಲಾಗಿದೆ. ಡಿಸೆಂಬರ್ 16 ರಿಂದ ದೇಶಾದ್ಯಂತ ಚಿಲ್ಲರೆ ಅಂಗಡಿಗಳಲ್ಲಿ ಈ ಫೋನ್ ಖರೀದಿಗೆ ಲಭ್ಯವಿರುತ್ತದೆ. ಇದು ಅಧಿಕೃತ ರಿಯಲ್ ಮಿ ವೆಬ್‌ಸೈಟ್ ಮತ್ತು ಫ್ಲಿಪ್‌ಕಾರ್ಟ್‌ನಲ್ಲಿ ಅದೇ ದಿನ ಮಧ್ಯಾಹ್ನ 12 ಗಂಟೆಗೆ ಮೊದಲ ಮಾರಾಟ ಶುರುವಾಗಲಿದೆ.
WhatsApp Data Backup: ವಾಟ್ಸ್ಆ್ಯಪ್ನಿಂದ ಶಾಕಿಂಗ್ ನಿರ್ಧಾರ: ಇನ್ನುಂದೆ ಹಣ ಪಾವತಿಸಬೇಕು
ರಿಯಲ್ ಮಿ C67 5G ಸ್ಮಾರ್ಟ್‌ಫೋನ್ 6.72-ಇಂಚಿನ ಪೂರ್ಣ-HD+ ಡಿಸ್ಪ್ಲೇ, 120Hz ರಿಫ್ರೆಶ್ ದರ ಹೊಂದಿದೆ. ಈ ಫೋನ್‌ಗೆ ಮಿನಿ ಕ್ಯಾಪ್ಸುಲ್ 2.0 ವೈಶಿಷ್ಟ್ಯವನ್ನು ಅಳವಡಿಸಲಾಗಿದೆ. 6nm ಮೀಡಿಯಾ ಟೆಕ್ ಡೈಮೆನ್ಸಿಟಿ 6100+ SoC ನಿಂದ ನಡೆಸಲ್ಪಡುತ್ತಿದೆ, 6GB RAM ಮತ್ತು 128GB ಯ ಆನ್‌ಬೋರ್ಡ್ ಸಂಗ್ರಹಣೆಯೊಂದಿಗೆ ಬರುತ್ತದೆ. RAM ಅನ್ನು ಹೆಚ್ಚುವರಿ 6GB ವರೆಗೆ ವಿಸ್ತರಿಸಬಹುದು. ಮೈಕ್ರೋ SD ಕಾರ್ಡ್ ಮೂಲಕ 2TB ವರೆಗೆ ಸಂಗ್ರಹಣೆಯನ್ನು ವಿಸ್ತರಿಸಬಹುದು.
ಈ ಫೋನ್ನಲ್ಲಿ 50-ಮೆಗಾಪಿಕ್ಸೆಲ್ ಮುಖ್ಯ ಸಂವೇದಕ ಮತ್ತು 2-ಮೆಗಾಪಿಕ್ಸೆಲ್ ಪೋರ್ಟ್ರೇಟ್ ಶೂಟರ್ ಅನ್ನು ಒಳಗೊಂಡಿರುವ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಇದೆ. ಯುಎಸ್‌ಬಿ ಟೈಪ್-ಸಿ ಪೋರ್ಟ್ ಮೂಲಕ 33W ವೈರ್ಡ್ ಫಾಸ್ಟ್ ಚಾರ್ಜಿಂಗ್ ಬೆಂಬಲದೊಂದಿಗೆ 5,000mAh ಬ್ಯಾಟರಿಯನ್ನು ಪ್ಯಾಕ್ ಮಾಡುತ್ತದೆ. ಇದು 29 ನಿಮಿಷಗಳಲ್ಲಿ ಶೂನ್ಯದಿಂದ 50 ಪ್ರತಿಶತದವರೆಗೆ ಫೋನ್ ಅನ್ನು ಚಾರ್ಜ್ ಮಾಡುತ್ತದೆ. ಇದು ಧೂಳು ಮತ್ತು ಸ್ಪ್ಲಾಶ್ ಪ್ರತಿರೋಧಕ್ಕಾಗಿ IP54 ರೇಟಿಂಗ್‌ನೊಂದಿಗೆ ಬರುತ್ತದೆ. ಭದ್ರತೆಗಾಗಿ, ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸಂವೇದಕವನ್ನು ಹೊಂದಿದೆ.
ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ